Homeರಾಷ್ಟ್ರೀಯಅಕ್ರಮ ದನಸಾಗಾಟ ಆರೋಪದಲ್ಲಿ ಬಂಧಸಿದ್ದ ಆರೋಪಿಗಳನ್ನು ಹತ್ಯೆ ಮಾಡಿದ ಅಪರಿಚಿತರು!

ಅಕ್ರಮ ದನಸಾಗಾಟ ಆರೋಪದಲ್ಲಿ ಬಂಧಸಿದ್ದ ಆರೋಪಿಗಳನ್ನು ಹತ್ಯೆ ಮಾಡಿದ ಅಪರಿಚಿತರು!

- Advertisement -
- Advertisement -

ಜಾನುವಾರುಗಳನ್ನು ಕಳ್ಳಸಾಗಾಣಿಕೆ ಮಾಡುತ್ತಿದ್ದರು ಎಂಬ ಆರೋಪದ ಮೇಲೆ ಕಳೆದ ವಾರ ಉತ್ತರ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿತ್ತು. ಆದರೆ ಇಬ್ಬರು ಆರೋಪಿಗಳನ್ನು ತನಿಖೆಯಾಗಿ ಅಸ್ಸಾಂಗೆ ಕರೆದೊಯ್ಯುತ್ತಿದ್ದಾಗ ಅಪರಿಚಿತರು ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಗಳನ್ನು ಜಾನುವಾರು ಸಾಗಾಣಿಕೆ ಮಾಡುತ್ತಿದ್ದ ಮಾರ್ಗಗಳನ್ನು ಪತ್ತೆಹಚ್ಚಲು ಮಂಗಳವಾರದಂದು ಅಸ್ಸಾಂನ ಕೊಕ್ರಜಾರ್ ಜಿಲ್ಲೆಯಲ್ಲಿ ಕರೆದೊಯ್ಯುತ್ತಿದ್ದಾಗ ಅಪರಿಚಿತ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯಲ್ಲಿ ನಾಲ್ವರು ಪೊಲೀಸ್ ಸಿಬ್ಬಂದಿಗೂ ಗಾಯಗಳಾಗಿದ್ದು, ಪೊಲೀಸ್ ವಾಹನಕ್ಕೆ ಹಾನಿಯಾಗಿದೆ ಎಂದು ವರದಿಯಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಂಕೋಶ್ ನದಿಯುದ್ದಕ್ಕೂ ಸಾಗಾಣಿಕೆ ಮಾರ್ಗಗಳನ್ನು ಗುರುತಿಸಲು ಆರೋಪಿಗಳನ್ನು ಕೊಕ್ರಜಾರ್‌ ಜಿಲ್ಲೆಯ ಜಮ್ದುವಾರ್‌ ಪ್ರದೇಶಕ್ಕೆ ಕರೆದೊಯ್ಯುತ್ತಿದ್ದಾಗ ಮಧ್ಯರಾತ್ರಿ 1:15 ರ ಸುಮಾರಿಗೆ ದಾಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಯುಪಿ: ಆದಿತ್ಯನಾಥ್‌‌ ವಿರುದ್ದ ಹೇಳಿಕೆ ನೀಡಿದ್ದಾರೆಂದು ಪ್ರಕರಣ ದಾಖಲಾದ ಕೆಲವೇ ದಿನಗಳಲ್ಲಿ ಎಸ್‌ಪಿ ಶಾಸಕರ ಪೆಟ್ರೋಲ್ ಪಂಪ್ ಕೆಡವಿದ ಅಧಿಕಾರಿಗಳು

“ಇಬ್ಬರನ್ನು ಕರೆದೊಯ್ಯತ್ತಿದ್ದ ವಾಹನವು ಜಮ್ದುವಾರ್ ಬಳಿ ‘ಉಗ್ರರ ಹೊಂಚುದಾಳಿಗೆ ಒಳಗಾಯಿತು’. ಹೀಗಾಗಿ ಪೊಲೀಸ್‌ ಸಿಬ್ಬಂದಿ ‘ಉಗ್ರರ’ ಮೇಲೆ ಪ್ರತಿದಾಳಿ ನಡೆಸಲು ಸುರಕ್ಷಿತ ಸ್ಥಳಕ್ಕಾಗಿ ಕಾರಿನಿಂದ ಜಿಗಿದಿದ್ದಾರೆ. ಆದರೆ, ಬಂಧಿತ ಆರೋಪಿಗಳು ಕಾರಿನಿಂದ ಹೊರಬರಲು ವಿಫಲರಾಗಿದ್ದು, ಅವರ ಮೇಲೆ ಗುಂಡಿನ ದಾಳಿಯಾಗಿದೆ” ಎಂದು ಪೋಲೀಸರು ಹೇಳಿದ್ದಾರೆ.

ಘಟನಾ ಸ್ಥಳದಲ್ಲಿ ಮರಗಳನ್ನು ಕಡಿದು ರಸ್ತೆ ತಡೆ ಮಾಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ರಕ್ಷಣೆ ಪಡೆದ ನಂತರ, ಪೊಲೀಸ್ ಸಿಬ್ಬಂದಿ ಪ್ರತಿದಾಳಿ ನಡೆಸಿದರು ಮತ್ತು ಎರಡು ಕಡೆಯವರ ನಡುವೆ 10-12 ನಿಮಿಷಗಳ ಕಾಲ ಗುಂಡಿನ ಚಕಮಕಿ ನಡೆಯಿತು ಎಂದು ಅವರು ಹೇಳಿದ್ದಾರೆ.

ಮೃತರಾದ ಅಕ್ಬರ್ ಬಂಜಾರಾ ಮತ್ತು ಸಲ್ಮಾನ್ ಅವರನ್ನು ಮೀರತ್ ಪೊಲೀಸರು ಏಪ್ರಿಲ್ 13 ರಂದು ಬಂಧಿಸಿ ಅಸ್ಸಾಂ ಪೊಲೀಸರಿಗೆ ಹಸ್ತಾಂತರಿಸಿದ್ದರು. ಆರೋಪಿಗಳಿಬ್ಬರು ಮೀರತ್‌ನ ಫಲವಾಡ ಪ್ರದೇಶದ ನಿವಾಸಿಗಳಾಗಿದ್ದು, ಅವರ ವಿರುದ್ದ ಮೀರತ್ ಮತ್ತು ಕೊಕ್ರಜಾರ್ ಜಿಲ್ಲೆಗಳಲ್ಲಿ ಜಾನುವಾರು ಕಳ್ಳಸಾಗಣೆ ಪ್ರಕರಣಗಳನ್ನು ದಾಖಲಾಗಿತ್ತು. ಅಸ್ಸಾಂ ಪೊಲೀಸರ ತುಕಡಿ ಮೀರತ್‌ಗೆ ಬಂದು ವಾರಂಟ್ ಸಲ್ಲಿಸಿದ ನಂತರ ಅವರನ್ನು ಕಸ್ಟಡಿಗೆ ತೆಗೆದುಕೊಂಡಿತ್ತು.

ಇದನ್ನೂ ಓದಿ: ಯುಪಿ: ಮುಸ್ಲಿಂ ಹೆಂಗಸರನ್ನು ರೇಪ್‌ ಮಾಡಿ ಎಂದ ಸ್ವಾಮೀಜಿ; ‘ಜೈ ಶ್ರೀರಾಮ್‌’ ಕೂಗಿದ ಪುಂಡರು

ಅಕ್ಬರ್ ಬಂಧನಕ್ಕೆ ಅಸ್ಸಾಂ ಪೊಲೀಸರು 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದರು. ಬಹುಮಾನದ ಹಣವನ್ನು ಮೀರತ್ ಪೊಲೀಸರಿಗೆ ಅವರ ಅಸ್ಸಾಂ ಸಹವರ್ತಿಗಳಿಂದ ಹಸ್ತಾಂತರಿಸಲಾಗಿದೆ ಎಂದು ಯುಪಿ ಪೊಲೀಸರು ಏಪ್ರಿಲ್ 15 ರಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

“ಕೊಕ್ರಜಾರ್ ಜಿಲ್ಲೆಯ ಗೊಸ್ಸೈಗಾಂವ್ ಪ್ರದೇಶದಲ್ಲಿ ನಿನ್ನೆ ರಾತ್ರಿ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಜಾನುವಾರು ಕಳ್ಳಸಾಗಣೆದಾರರು ಸಾವನ್ನಪ್ಪಿದ್ದಾರೆ. ನಾಲ್ವರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ನಾವು ಸ್ಥಳದಿಂದ ಒಂದು ಎಕೆ ಸಿರೀಸ್ ರೈಫಲ್ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದೇವೆ. ಶೋಧ ಕಾರ್ಯಾಚರಣೆ ನಡೆಯುತ್ತಿದೆ” ಎಂದು ಕೊಕ್ರಜಾರ್‌ ಎಸ್ಪಿ ತುಬೆ ಪ್ರತೀಕ್ ವಿಜಯ್ಕುಮಾರ್ ತಿಳಿಸಿದ್ದಾರೆ.

“ಯಾವುದೇ ಅಪಾಯವಿಲ್ಲ ಎಂದು ಗ್ರಹಿಸಿದ ನಂತರ, ಪೊಲೀಸರು ಗಾಯಗೊಂಡ ಆರೋಪಿಗಳನ್ನು ವಾಹನದಿಂದ ಹೊರತೆಗೆದು ಮತ್ತೊಂದು ವಾಹನದಲ್ಲಿ ಸರೈಬಿಲ್ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ಕಳುಹಿಸಿದ್ದಾರೆ” ಎಂದು ಪೊಲೀಸರು ತಿಳಿಸಿದ್ದಾರೆ. ಇಬ್ಬರು ಆರೋಪಿಗಳು ಸಾವಿಗೀಡಾಗಿದ್ದಾರೆ ಎಂದು ಅಲ್ಲಿ ಕರ್ತವ್ಯದಲ್ಲಿದ್ದ ವೈದ್ಯರು ಘೋಷಿಸಿದ್ದಾರೆ.

ಇದನ್ನೂ ಓದಿ: ಗ್ಯಾಂಗ್‌ಸ್ಟರ್‌ಗಳ ಪ್ರಯಾಣಕ್ಕೆ ಆಂಬುಲೆನ್ಸ್ ಬಳಕೆ: ಯುಪಿ ಬಿಜೆಪಿ ನಾಯಕಿಯ ಬಂಧನ

ಸ್ಥಳದಿಂದ ಒಂದು ಎಕೆ-47 ರೈಫಲ್, ಎರಡು ಮ್ಯಾಗಜೀನ್‌ಗಳು, 35 ಸುತ್ತಿನ ಜೀವಂತ ಮದ್ದುಗುಂಡುಗಳು ಮತ್ತು 28 ಸುತ್ತುಗಳ ಖಾಲಿ ಬುಲೆಟ್ ಶೆಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. Yes. It looks like a fake encounter and framed a story. Any unrighteous act will not go unpunished. For that need to observe that person or his family for some time, you can see how they are punished by God. Most of the people do not observe this truth. 🙄

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...