Homeರಾಜಕೀಯಮೋದಿಗೆ ಸತ್ಯವನ್ನು ಬಂಧಿಸಲು ಸಾಧ್ಯವಿಲ್ಲ, ಮೇವಾನಿ ಬಂಧನ ಪ್ರಜಾಪ್ರಭುತ್ವ ವಿರೋಧಿ: ರಾಹುಲ್ ಗಾಂಧಿ ಆಕ್ರೋಶ

ಮೋದಿಗೆ ಸತ್ಯವನ್ನು ಬಂಧಿಸಲು ಸಾಧ್ಯವಿಲ್ಲ, ಮೇವಾನಿ ಬಂಧನ ಪ್ರಜಾಪ್ರಭುತ್ವ ವಿರೋಧಿ: ರಾಹುಲ್ ಗಾಂಧಿ ಆಕ್ರೋಶ

- Advertisement -
- Advertisement -

ಗುಜರಾತ್‌ ಶಾಸಕ ಜಿಗ್ನೇಶ್ ಮೇವಾನಿ ಬಂಧನವನ್ನು “ಪ್ರಜಾಪ್ರಭುತ್ವ ವಿರೋಧಿ ಮತ್ತು ಅಸಂವಿಧಾನಿಕ” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗುರುವಾರ ಬಣ್ಣಿಸಿದ್ದಾರೆ. ಭಿನ್ನಾಭಿಪ್ರಾಯವನ್ನು ಒಡೆದು ಹಾಕಲು ಪ್ರಯತ್ನಿಸುವ ಮೂಲಕ ಸತ್ಯವನ್ನು ಬಂಧಿಸಲು ಪ್ರಧಾನಿ ಮೋದಿಗೆ ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಬುಧವಾರ ರಾತ್ರಿ ಗುಜರಾತ್‌ನ ಪಾಲನ್‌ಪುರ ಪಟ್ಟಣದಿಂದ ಮೇವಾನಿ ಅವರನ್ನು ಅಸ್ಸಾಂ ಪೊಲೀಸರು, ಟ್ವೀಟ್‌ ವಿಚಾರವಾಗಿ ಬಂಧಿಸಿ ಮುಂಜಾನೆ ವಿಮಾನದ ಮೂಲಕ ಅಸ್ಸಾಂಗೆ ಕರೆದೊಯ್ದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮೇವಾನಿ ಬಂಧನವನ್ನು ಖಂಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಇದು ಅವರನ್ನು ಜನಪ್ರತಿನಿಧಿಯಾಗಿ ಆಯ್ಕೆ ಮಾಡಿದ ಜನರಿಗೆ ಮಾಡಿದ ಅವಮಾನ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರಧಾನಿ ಮೋದಿ ಮತ್ತು ಗೋಡ್ಸೆ ಬಗ್ಗೆ ಟ್ವೀಟ್‌ ಮಾಡಿದ್ದಕ್ಕಾಗಿ ಗುಜರಾತ್‌ ಶಾಸಕ, ಹೋರಾಟಗಾರ ಜಿಗ್ನೇಶ್‌ ಮೇವಾನಿಯ ಬಂಧನ

“ಮೋದಿ ಅವರೇ, ನೀವು ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಭಿನ್ನಾಭಿಪ್ರಾಯವನ್ನು ಹತ್ತಿಕ್ಕಲು ಪ್ರಯತ್ನಿಸಬಹುದು. ಆದರೆ ನಿಮಗೆ ಎಂದಿಗೂ ಸತ್ಯವನ್ನು ಬಂಧಿಸಲು ಸಾಧ್ಯವಿಲ್ಲ” ಎಂದು ರಾಹುಲ್ ಗಾಂಧಿ ಟ್ವಿಟರ್‌ನಲ್ಲಿ ‘#DaroMat’ (ಹೆದರಬೇಡಿ) ಮತ್ತು ‘#SatyamevaJayate’(ಸತ್ಯವೇ ಗೆಲ್ಲುತ್ತದೆ) ಎಂಬ ಹ್ಯಾಶ್ಟ್ಯಾಗ್ ಬಳಸಿ ಬರೆದಿದ್ದಾರೆ.

ಪ್ರಧಾನಿ ಮೋದಿ ಕುರಿತು ಟ್ವೀಟ್ ಮಾಡಿದ್ದ ಮೇವಾನಿ ಅವರನ್ನು ಅಸ್ಸಾಂ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂಬ ಪತ್ರಿಕಾ ವರದಿಯ ಚಿತ್ರವನ್ನು ಅವರು ತನ್ನ ಟ್ವೀಟ್‌ನಲ್ಲಿ ಬಳಿಸಿಕೊಂಡಿದ್ದಾರೆ.

“ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ಅಸ್ಸಾಂ ಪೊಲೀಸರು ಬಂಧಿಸಿರುವುದು ಅಪ್ರಜಾಸತ್ತಾತ್ಮಕ ವಿಧಾನವಾಗಿದ್ದು, ಸಂವಿಧಾನ ವಿರೋಧಿ ಕ್ರಮವಾಗಿದೆ. ಇದು ಅವರನ್ನು ಸಾರ್ವಜನಿಕ ಪ್ರತಿನಿಧಿಯಾಗಿ ಆಯ್ಕೆ ಮಾಡಿದ ಜನರಿಗೆ ಅವಮಾನವಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ದಬ್ಬಾಳಿಕೆ ವಿರುದ್ಧ ಧ್ವನಿ ಎತ್ತಲಿದ್ದಾರೆ” ಎಂದು ಕಾಂಗ್ರೆಸ್ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ತನ್ನ ಹಳ್ಳಿಗೆ ಉತ್ತಮ ರಸ್ತೆ ಕೇಳಿದ ಯುವಕನ ಮೇಲೆ ಹಲ್ಲೆ ನಡೆಸಿದ ಪಾವಗಡ ಕಾಂಗ್ರೆಸ್‌ ಶಾಸಕ ವೆಂಕಟರಮಣಪ್ಪ

ಅಸ್ಸಾಂ ಪೊಲೀಸ್ ಅಧಿಕಾರಿಗಳು ಹಂಚಿಕೊಂಡ ದಾಖಲೆಯ ಪ್ರಕಾರ, ಕೆಲವು ದಿನಗಳ ಹಿಂದೆ ಮೇವಾನಿ ನಾಥೂರಾಂ ಗೋಡ್ಸೆಯ ಬಗ್ಗೆ ಮಾಡಿದ ಟ್ವೀಟ್ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಆದರೆ, ಟ್ವೀಟ್ ಅನ್ನು ಟ್ವಿಟರ್ ಇಗ ತಡೆಹಿಡಿದಿದೆ. ಮೇವಾನಿ ಗುಜರಾತ್‌ನ ಬನಸ್ಕಾಂತದ ವಡ್ಗಾಮ್ ಕ್ಷೇತ್ರದಿಂದ ಸ್ವತಂತ್ರ ಶಾಸಕರಾಗಿದ್ದು, ಇತ್ತೀಚೆಗೆ ಕಾಂಗ್ರೆಸ್ ಸೇರಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...