Homeರಾಷ್ಟ್ರೀಯಹಿಂದೂ ರಾಷ್ಟ್ರಕ್ಕಾಗಿ ಕೊಲೆ ಮಾಡಲು ಪ್ರಚೋದಿಸಿದ್ದು ದ್ವೇಷ ಭಾಷಣವಲ್ಲ ಎಂದ ದೆಹಲಿ ಪೊಲೀಸರು; ಸುಪ್ರೀಂ ಆಕ್ಷೇಪ

ಹಿಂದೂ ರಾಷ್ಟ್ರಕ್ಕಾಗಿ ಕೊಲೆ ಮಾಡಲು ಪ್ರಚೋದಿಸಿದ್ದು ದ್ವೇಷ ಭಾಷಣವಲ್ಲ ಎಂದ ದೆಹಲಿ ಪೊಲೀಸರು; ಸುಪ್ರೀಂ ಆಕ್ಷೇಪ

- Advertisement -
- Advertisement -

ದೆಹಲಿಯಲ್ಲಿ ಹಿಂದೂ ಯುವ ವಾಹಿನಿ ಸಂಘಟನೆಯು ಕಳೆದ ಡಿಸೆಂಬರ್‌ನಲ್ಲಿ ಕಾರ್ಯಕ್ರಮವೊಂದನ್ನು ಸಂಘಟಿಸಿ, ‘ಹಿಂದೂ ರಾಷ್ಟ್ರ ಕೊಲೆ ಮಾಡುವುದ’ಕ್ಕಾಗಿ ಕರೆ ನೀಡಿತ್ತು. ಆದರೆ ದೆಹಲಿ ಪೊಲೀಸರು ಈ ಕರೆ ‘ದ್ವೇಷ ಭಾಷಣವಲ್ಲ’ ಎಂದು ಕಳೆದ ವಾರ ಸುಪ್ರೀಂಕೋರ್ಟ್‌ಗೆ ತಿಳಿಸಿದ್ದರು. ದೆಹಲಿ ಪೊಲೀಸರ ಈ ಹೇಳಿಕೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ಅತೃಪ್ತಿ ವ್ಯಕ್ತಪಡಿಸಿದ್ದು, ‘ಉತ್ತಮ ಅಫಿಡವಿಟ್’ ಸಲ್ಲಿಸುವಂತೆ ಹೇಳಿದೆ.

ಡಿಸೆಂಬರ್ 19 ರಂದು ದೇಶದ ರಾಜಧಾನಿಯಲ್ಲಿ ನಡೆದ ‘ಧರ್ಮ ಸಂಸದ್’ನಲ್ಲಿ ಯಾವುದೇ ದ್ವೇಷದ ಭಾಷಣ ಮಾಡಲಾಗಿಲ್ಲ ಎಂದು ಹೇಳುವ ತನ್ನ ಅಫಿಡವಿಟ್ ಅನ್ನು ಮರುಪರಿಶೀಲಿಸುವ ಅಗತ್ಯವಿದೆ ಎಂದು ದೆಹಲಿ ಪೊಲೀಸರು ಸುಪ್ರೀಂ ಕೋರ್ಟ್‌ ಮುಂದೆ ಇಂದು ಒಪ್ಪಿಕೊಂಡಿದ್ದು, ಉತ್ತಮವಾದ ಅಫಿಡವಿಟ್‌‌‌ ಸಲ್ಲಿಸುವುದಾಗಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕಾರ್ಯಕ್ರಮದಲ್ಲಿ ಸುದರ್ಶನ ಸುದ್ದಿ ಟಿವಿ ಮುಖ್ಯ ಸಂಪಾದಕ ಸುರೇಶ್ ಚವ್ಹಾಂಕೆ, “ಈ ದೇಶವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ನಾವೆಲ್ಲರೂ ಪ್ರತಿಜ್ಞೆ ಮಾಡುತ್ತೇವೆ. ಅದಕ್ಕಾಗಿ ನಾವು ಹೋರಾಡುತ್ತೇವೆ. ಅದಕ್ಕಾಗಿ ಸಾಯುತ್ತೇವೆ ಮತ್ತು ಅಗತ್ಯವಿದ್ದರೆ ಕೊಲ್ಲುತ್ತೇವೆ” ಎಂದು ಜನರಿಗೆ ಪ್ರತಿಜ್ಞೆ ಮಾಡಿಸಿದ್ದರು.

ಇದನ್ನೂ ಓದಿ: Exclusive: ಮಸೀದಿ ಸುತ್ತಲಿನ ಹಿಂದೂ ವ್ಯಾಪಾರಿಗಳ ಮನದ ಮಾತು

ಈ ಕಾರ್ಯಕ್ರಮವನ್ನು ಬಲಪಂಥೀಯ ಗುಂಪು ಹಿಂದೂ ಯುವ ವಾಹಿನಿ ಆಯೋಜಿಸಿತ್ತು.

“ಪ್ರತಿಜ್ಞೆ ಸ್ವೀಕರಿಸಿದವರ ಉದ್ದೇಶವು ಸಮುದಾಯದ ನೈತಿಕತೆಯನ್ನು ಉಳಿಸುವುದಾಗಿತ್ತು” ಎಂಬ ದೆಹಲಿ ಪೊಲೀಸರ ಅಫಿಡವಿಟ್‌ ಅನ್ನು ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಇಂದು ಉಲ್ಲೇಖಿಸಿದ್ದು, ಇದರ ಅರ್ಥವೇನು ಎಂದು ಸಿಬಲ್ ಪ್ರಶ್ನಿಸಿದ್ದಾರೆ.

“ಅಫಿಡವಿಟ್ ಅನ್ನು ಡೆಪ್ಯುಟಿ ಕಮಿಷನರ್ ಆಫ್ ಪೋಲಿಸ್ ಸಲ್ಲಿಸಿದ್ದಾರೆ. ಅವರು ಈ ನಿಲುವನ್ನು ಅನುಮೋದಿಸುತ್ತಾರೆಯೇ? ಅಥವಾ ಅವರು ಸಬ್ ಇನ್ಸ್‌ಪೆಕ್ಟರ್ ಮಟ್ಟದ ತನಿಖಾ ವರದಿಯನ್ನು ಮತ್ತೆ ತಯಾರಿಸುತ್ತಾರೆಯೆ” ಎಂದು ನ್ಯಾಯಮೂರ್ತಿ ಎ.ಎಮ್. ಖಾನ್ವಿಲ್ಕರ್ ಕೇಳಿದ್ದಾರೆ.

ಮೇ 4 ರೊಳಗೆ ದೆಹಲಿ ಪೊಲೀಸರ ಹೊಸ ಅಫಿಡವಿಟ್ ಸಲ್ಲಿಸಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

“ಜನಾಂಗೀಯ ಹತ್ಯೆಗೆ ಮುಕ್ತವಾಗಿ ಕರೆ ನೀಡಲಾಗುತ್ತಿದೆ ಎಂದು ಅರ್ಥೈಸುವ ಅಥವಾ ಅರ್ಥೈಸಬಹುದಾದ ಯಾವುದೇ ಪದಗಳ ಬಳಕೆ ಇದರಲ್ಲಿ ಇಲ್ಲ ಎಂದು ಕಂಡುಕೊಂಡಿದ್ದೇವೆ” ಎಂದು ಕಳೆದ ವಾರ ನಡೆದ ಆಪಾದಿತ ದ್ವೇಷ ಭಾಷಣದ ವೀಡಿಯೊ ಪ್ರಕರಣದ ವಿಚಾರಣೆಯಲ್ಲಿ ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದರು.

ಇದನ್ನೂ ಓದಿ: ಮಂಗಳೂರು: ಮಳಲಿಪೇಟೆಯ ಪ್ರಾಚೀನ ಮಸೀದಿಯನ್ನು ದೇವಸ್ಥಾನ ಎಂದು ಸುಳ್ಳು ಹಬ್ಬಿಸಿದ ಕನ್ನಡ ಮಾಧ್ಯಮಗಳು

ಪೊಲೀಸರು ತಮ್ಮ ಹೇಳಿಕೆಯಲ್ಲಿ, “ವೀಡಿಯೊ ಮತ್ತು ಇತರ ವಿಷಯಗಳ ಬಗ್ಗೆ ನಡೆದ ತೀವ್ರ ತನಿಖೆಯಲ್ಲಿ ಯಾವುದೇ ಸಮುದಾಯದ ವಿರುದ್ಧ ಯಾವುದೇ ದ್ವೇಷ ಭಾಷಣವನ್ನು ನೀಡಿಲ್ಲ ಎಂದು ಕಂಡುಬಂದಿದೆ. ಆದ್ದರಿಂದ, ಉದ್ದೇಶಿತ ವೀಡಿಯೊದ ತನಿಖೆ ಮತ್ತು ಮೌಲ್ಯಮಾಪನದ ನಂತರ, ಆಪಾದಿತ ಭಾಷಣವು ನಿರ್ದಿಷ್ಟ ಸಮುದಾಯದ ವಿರುದ್ಧ ಯಾವುದೇ ದ್ವೇಷದ ಭಾಷಣವನ್ನು ಹೊಂದಿಲ್ಲ ಎಂದು ತೀರ್ಮಾನಿಸಲಾಗಿದೆ” ಎಂದು ತಿಳಿಸಿದ್ದರು.

ಹರಿದ್ವಾರ ಮತ್ತು ದೆಹಲಿಯಲ್ಲಿ ನಡೆದ ಧರ್ಮ ಸಂಸದ್‌ಗಳಲ್ಲಿ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ನಡೆದ ದ್ವೇಷ ಭಾಷಣಗಳ ಬಗ್ಗೆ ಸ್ವತಂತ್ರ ತನಿಖೆಗೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸುತ್ತಿದೆ.

ಹೈಕೋರ್ಟ್‌ನ ಮಾಜಿ ನ್ಯಾಯಾಧೀಶೆ ಮತ್ತು ಹಿರಿಯ ವಕೀಲೆ ಅಂಜನಾ ಪ್ರಕಾಶ್ ಮತ್ತು ಪತ್ರಕರ್ತ ಕುರ್ಬಾನ್ ಅಲಿ ಈ ಅರ್ಜಿಯನ್ನು ಸಲ್ಲಿಸಿದ್ದರು.

ಇದನ್ನೂ ಓದಿ: ರೈತರ ಕುರಿತ ಚರ್ಚೆಯಲ್ಲಿ ಮಂದಿರ v/s ಮಸೀದಿ ಚಿತ್ರ ಪ್ರಸಾರ ಮಾಡಿದ ಇಂಡಿಯಾ ಟಿ.ವಿ: ರಾಕೇಶ್ ಟಿಕಾಯತ್ ಆಕ್ರೋಶ

ಡಿಸೆಂಬರ್ 17 ಮತ್ತು 19 ರ ನಡುವೆ, ದೆಹಲಿಯಲ್ಲಿ (ಹಿಂದೂ ಯುವ ವಾಹಿನಿಯಿಂದ) ಮತ್ತು ಹರಿದ್ವಾರದಲ್ಲಿ (ಯತಿ ನರಸಿಂಹಾನಂದರಿಂದ) ಆಯೋಜಿಸಲಾದ ಎರಡು ಕಾರ್ಯಕ್ರಮಗಳಲ್ಲಿ ಮುಸ್ಲಿಮರ ವಿರುದ್ಧ ಹಿಂಸಾಚಾರಕ್ಕಾಗಿ ಬಹಿರಂಗ ಕರೆಗಳನ್ನು ಒಳಗೊಂಡಂತೆ ದ್ವೇಷದ ಭಾಷಣಗಳನ್ನು ಮಾಡಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...