Homeರಾಷ್ಟ್ರೀಯಶಾಲೆಗಳಲ್ಲಿ ಹಿಜಾಬ್‌‌‌‌ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್

ಶಾಲೆಗಳಲ್ಲಿ ಹಿಜಾಬ್‌‌‌‌ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಮನವಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್

- Advertisement -
- Advertisement -

ತರಗತಿಗಳಿಗೆ ಹಾಜರಾಗುವ ವೇಳೆ ವಿದ್ಯಾರ್ಥಿಗಳು ತಮ್ಮ ಧರ್ಮವನ್ನು ಪ್ರದರ್ಶಿಸುವ ಉಡುಪುಗಳನ್ನು ಧರಿಸುವುದನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಲಾದ ಮನವಿಯನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಎಂ. ದುರೈಸ್ವಾಮಿ ಮತ್ತು ಟಿ.ವಿ. ತಮಿಳ್‌ ಸೆಲ್ವಿ ಅವರ ವಿಭಾಗೀಯ ಪೀಠವು ಹಿಂದೂ ಮುನ್ನೇತ್ರ ಕಳಗಂ ಅಧ್ಯಕ್ಷ ಕೆ. ಗೋಪಿನಾಥ್ ಅವರ ಮನವಿಯನ್ನು ವಜಾಗೊಳಿಸಿದೆ.

ತರಗತಿಯೊಳಗೆ ಹಿಜಾಬ್‌ನ ಮೇಲಿನ ನಿಷೇಧವನ್ನು ಎತ್ತಿಹಿಡಿಯುವ ಕರ್ನಾಟಕ ಹೈಕೋರ್ಟ್ ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಿ ಹಲವಾರು ಮನವಿಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇದೆ ಎಂದು ಮದ್ರಾಸ್‌ ಹೈಕೋರ್ಟ್‌‌ ಪೀಠವು ಅರ್ಜಿದಾರರಿಗೆ ತಿಳಿಸಿದಾಗ ಅರ್ಜಿದಾರರ ವಕೀಲರು ಅರ್ಜಿಯನ್ನು ಹಿಂಪಡೆಯುವುದಾಗಿ ಕೋರಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಮಕ್ಕಳು ಶಾಲೆಗೆ ಹೋಗುವಾಗ ಏಕರೂಪದ ಡ್ರೆಸ್ ಕೋಡ್ ಅನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ತಮಿಳುನಾಡು ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಗೋಪಿನಾಥ್ ಅವರ ಸಾರ್ವಜನಿಕೆ ಹಿತಾಸಕ್ತಿ ಅರ್ಜಿಯು ಬಯಸಿತ್ತು.

ಇದನ್ನೂ ಓದಿ: ಹಿಜಾಬ್: ಸಮತೋಲನವನ್ನು ಸಾಧಿಸದ, ಸಹಾನುಭೂತಿ ತೋರದ ತೀರ್ಪು

ಅರ್ಜಿದಾರರ ಪ್ರಕಾರ, ಧರ್ಮವನ್ನು ಪ್ರತಿಪಾದಿಸುವ ಮೂಲಭೂತ ಹಕ್ಕು ಸಮಂಜಸವಾದ ನಿರ್ಬಂಧಗಳಿಗೆ ಒಳಪಟ್ಟಿರುತ್ತದೆ.

“1960 ರ ದಶಕದಲ್ಲಿ, ರಾಜ್ಯದ ಶಾಲೆಗಳು ಸಮಾನತೆಯನ್ನು ಖಾತ್ರಿಪಡಿಸುವ ಸಲುವಾಗಿ ಆಯಾ ಸಂಸ್ಥೆಗಳಲ್ಲಿ ಎಲ್ಲಾ ಮಕ್ಕಳಿಗೆ ಏಕರೂಪದ ಡ್ರೆಸ್ ಕೋಡ್ ಅನ್ನು ಒತ್ತಾಯಿಸುತ್ತಿದ್ದವು. ಆದಾಗ್ಯೂ, ಅನೇಕ ಶಾಲೆಗಳಲ್ಲಿ, ವಿದ್ಯಾರ್ಥಿಗಳು ಡ್ರೆಸ್ ಕೋಡ್ ಅನ್ನು ಕಟ್ಟುನಿಟ್ಟಾಗಿ ಪಾಲಿಸುವುದಿಲ್ಲ ಮತ್ತು ಸಮವಸ್ತ್ರದ ಮೇಲೆ ಹಿಜಾಬ್ ಮತ್ತು ಇತರ ಧಾರ್ಮಿಕ ಉಡುಪುಗಳಂತಹ ಉಡುಪುಗಳನ್ನು ಧರಿಸುತ್ತಾರೆ” ಎಂದು ಅವರು ಹೇಳಿದರು.

ಇಂತಹ ಉಡುಗೆ ತೊಡುಗೆಗಳಿಂದ ಕಲಿಕಾ ವಾತಾವರಣದ ಸಭ್ಯತೆಗೆ ಧಕ್ಕೆಯಾಗುತ್ತದೆ ಎಂದಿರುವ ಅರ್ಜಿದಾರರು, ನಮ್ಮದು ಸುಸಂಸ್ಕೃತ ಸಮಾಜವಾಗಿರುವುದರಿಂದ ಧರ್ಮ, ಸಂಸ್ಕೃತಿಯ ಹೆಸರಿನಲ್ಲಿ ಯಾವುದೇ ವ್ಯಕ್ತಿಗಳು ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವ ಯಾವುದೇ ಕೃತ್ಯಕ್ಕೆ ಅವಕಾಶ ನೀಡುವುದು ಸರಿಯಲ್ಲ ಎಂದಿದ್ದಾರೆ.

ಇದನ್ನೂ ಓದಿ: ಹಿಜಾಬ್ ವಿಚಾರದಲ್ಲಿ ಹುಡುಗಿಯರನ್ನು ಟಾರ್ಗೆಟ್ ಮಾಡಲಾಗುತ್ತಿದೆ: ‘ಮಿಸ್‌ ಯುನಿವರ್ಸ್’ ಹರ್ನಾಜ್ ಸಂಧು

“ಪ್ರಾಥಮಿಕ ಮತ್ತು ನರ್ಸರಿ ಶಾಲೆಗಳಲ್ಲಿ ಸಮವಸ್ತ್ರದ ಸಂಹಿತೆಯ ಅಧ್ಯಾಯ 1V, ನಿಯಮ 14 (iii) ದಲ್ಲಿ ವಿದ್ಯಾರ್ಥಿಗಳು ಆಯಾ ಶಾಲಾ ಆಡಳಿತ ಮಂಡಳಿಯು ಸೂಚಿಸಿದ ಸಮವಸ್ತ್ರವನ್ನು ಧರಿಸಬೇಕೆಂದು ಷರತ್ತು ವಿಧಿಸಿದೆ. ಆದರೆ ಉದ್ದೇಶಪೂರ್ವಕವಾಗಿ ಈ ನಿಬಂಧನೆಯನ್ನು ಉಲ್ಲಂಘಿಸಲು ಪ್ರಯತ್ನಿಸಲಾಗುತ್ತಿದೆ” ಅರ್ಜಿದಾರರು ಮನವಿಯಲ್ಲಿ ವಾದಿಸಿದ್ದರು.

ಇದಲ್ಲದೆ, ದೇಶದಲ್ಲಿ ವಿಶೇಷವಾಗಿ ಶಾಲಾ ವಿದ್ಯಾರ್ಥಿಗಳಲ್ಲಿ ಧಾರ್ಮಿಕ ಗಲಭೆಗಳು ವಿಜೃಂಭಿಸಲು ಬಿಡಬಾರದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಇದಕ್ಕಾಗಿ ಯಾವುದೇ ವ್ಯಕ್ತಿ ಧರ್ಮ, ಸಂಸ್ಕೃತಿಯ ಹೆಸರಿನಲ್ಲಿ ಸಾರ್ವಜನಿಕ ಶಾಂತಿ ಮತ್ತು ನೆಮ್ಮದಿಗೆ ಭಂಗ ತರುವ ಯಾವುದೇ ಕೃತ್ಯಕ್ಕೆ ಅವಕಾಶ ನೀಡಬಾರದು ಎಂದು ಅವರು ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ೋಕದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಸಿಖ್ ಸಮುದಾಯದ ವಿದ್ಯಾರ್ಥಿಗಳು ತಲೆಗೆ ಪೇಟ ಮತ್ತು ಸಿಖ್ ವಿದ್ಯಾರ್ಥಿನಿಯರು ವೇಲ್ ಧರಿಸಿ ತರಗತಿಗೆ ಹಾಜರಾಗುವುದನ್ನು ಅನುಮತಿಸಲಾಗಿದೆ.
    ಬಿಜೆಪಿಗಳು ಈ ಬಗ್ಗೆ ಏನು ಹೇಳುತ್ತಾರೆ.

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿ ಭದ್ರಕೋಟೆ ಮಥುರಾದಲ್ಲಿ ಮುಸ್ಲಿಮರಿಗೆ ಮತದಾನ ನಿರಾಕರಣೆ?

0
ಲೋಕಸಭೆ ಚುನಾವಣೆ ಹಿನ್ನೆಲೆ ಈಗಾಗಲೇ ಎರಡು ಹಂತಗಳಲ್ಲಿ ಮತದಾನ ನಡೆದಿದೆ. ಕೆಲ ಕ್ಷೇತ್ರಗಳ ಬೂತ್‌ಗಳಲ್ಲಿ ಮತದಾನದ ದಿನ ಮತಗಟ್ಟೆಗೆ ತೆರಳಿದ್ದ ನಾಗರಿಕರಿಗೆ ತಮ್ಮ ಹೆಸರು ಪಟ್ಟಿಯಿಂದ ನಾಪತ್ತೆಯಾಗಿರುವುದು, ತಪ್ಪಾಗಿ ನಮೂದಿಸಿರುವುದು ಕಂಡುಬಂದಿದೆ. ಮಥುರಾ...