Homeರಾಷ್ಟ್ರೀಯ‘ದೇಶದ್ರೋಹ’ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಆಲಿಸಲಿರುವ ಸುಪ್ರೀಂಕೋರ್ಟ್

‘ದೇಶದ್ರೋಹ’ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ಆಲಿಸಲಿರುವ ಸುಪ್ರೀಂಕೋರ್ಟ್

- Advertisement -
- Advertisement -

ದೇಶದ್ರೋಹದ ಕಾನೂನಿನ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಬುಧವಾರ (ಇಂದು) ನಿಗದಿಪಡಿಸಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಹಾಗೂ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಹಿಮಾ ಕೊಹ್ಲಿ ಅವರ ತ್ರಿಸದಸ್ಯ ಪೀಠವು ವಿಚಾರಣೆಗೆ ತೆಗೆದುಕೊಳ್ಳುವ ಸಾಧ್ಯತೆಯಿದೆ.

ಈ ಬಗ್ಗೆ ಒಂದು ಅರ್ಜಿಯನ್ನು ನಿವೃತ್ತ ಸೇನಾ ಜನರಲ್ ಎಸ್.ಜಿ.ಒಂಬತ್ಕೆರೆ ಮತ್ತು ಇನ್ನೊಂದು ಅರ್ಜಿಯನ್ನು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಸಲ್ಲಿಸಿವೆ.

ಸ್ವಾತಂತ್ಯ್ರ ಹೋರಾಟದ ಸಮದಯಲ್ಲಿ ಮಹಾತ್ಮಾ ಗಾಂಧಿಯಂತಹವರನ್ನು ಮೌನಗೊಳಿಸಲು ಬ್ರಿಟಿಷರು ಬಳಸಿದ ನಿಬಂಧನೆಗಳು ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಕಾನೂನು ಪುಸ್ತಕದಲ್ಲಿ ಯಾಕೆ ಉಳಿದುಕೊಂಡಿವೆ ಎಂದು ಕಳೆದ ವರ್ಷ ಏಪ್ರಿಲ್‌ನಲ್ಲಿ ಸುಪ್ರೀಂಕೋರ್ಟ್ ಒಕ್ಕೂಟ ಸರ್ಕಾರವನ್ನು ಕೇಳಿತ್ತು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ದೇಶದ್ರೋಹವು ವಸಾಹತುಶಾಹಿ ಕಾನೂನು. ಇದು ಸ್ವಾತಂತ್ರ್ಯವನ್ನು ಹತ್ತಿಕ್ಕುತ್ತದೆ. ಇದನ್ನು ಮಹಾತ್ಮ ಗಾಂಧಿ, ತಿಲಕ್ ವಿರುದ್ಧ ಬಳಸಲಾಗಿದೆ … ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಈ ಕಾನೂನು ಅಗತ್ಯವಿದೆಯೇ?” ಎಂದು ಮುಖ್ಯ ನ್ಯಾಯಮೂರ್ತಿ ರಮಣ ನೇತೃತ್ವದ ತ್ರಿಸದಸ್ಯ ಪೀಠವು ಮೌಖಿಕವಾಗಿ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಮತ್ತು ಒಕ್ಕೂಟ ಸರ್ಕಾರದ ಪರವಾಗಿ ಹಾಜರಾಗಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರೊಂದಿಗೆ ಮೌಖಿಕವಾಗಿ ಹೇಳಿತ್ತು.

ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನಲ್ಲಿ ದೇಶದ್ರೋಹ ಕಾನೂನಿನ ಸಾಂವಿಧಾನಿಕತೆ ಪ್ರಶ್ನಿಸಿರುವ ಎಸ್.ಜಿ ಒಂಬತ್ಕೆರೆ ಯಾರು?

ದೇಶದ್ರೋಹ ಅಥವಾ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 124 ಎ ಅನ್ನು ಸರ್ಕಾರವು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಮುಖ್ಯ ನ್ಯಾಯಮೂರ್ತಿ ರಮಣ ಹೇಳಿದ್ದರು. “ದೇಶದ್ರೋಹದ ಬಳಕೆಯು ಬಡಗಿಗೆ ಮರದ ತುಂಡನ್ನು ಕತ್ತರಿಸಲು ಗರಗಸವನ್ನು ನೀಡಿದಂತೆ ಮತ್ತು ಅವನು ಅದನ್ನು ಇಡೀ ಕಾಡನ್ನೇ ಕತ್ತರಿಸಲು ಬಳಸುತ್ತಾನೆ” ಎಂದು ಮುಖ್ಯ ನ್ಯಾಯಮೂರ್ತಿ ರಮಣ ವಾಗ್ದಾಳಿ ನಡೆಸಿದ್ದರು.

“ನೀವು ಐಪಿಸಿಯ ಈ ಸೆಕ್ಷನ್ 124 ಎ ಬಳಕೆಯ ಇತಿಹಾಸವನ್ನು ನೋಡಿದರೆ, ಇದರಲ್ಲಿ ಶಿಕ್ಷೆಗೆ ಒಳಗಾಗಿರುವವರ ಪ್ರಮಾಣವು ತುಂಬಾ ಕಡಿಮೆಯಾಗಿದೆ ಎಂದು ನೀವು ಕಂಡುಕೊಳ್ಳುತ್ತೀರಿ. ಆಡಳಿತಗಾರರು ಈ ಅಧಿಕಾರದ ದುರುಪಯೋಗದ ಸಾಧ್ಯತೆಯಿದೆ” ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದರು.

ಸೆಕ್ಷನ್ 124 ಎ ರದ್ದುಗೊಳಿಸುವಂತೆ ವಕೀಲರಾದ ಪಿ ಬಿ ಸುರೇಶ್ ಮತ್ತು ಪ್ರಸನ್ನ ಎಸ್ ಅವರು ಪ್ರತಿನಿಧಿಸಿದ ಜನರಲ್ (ನಿವೃತ್ತ) ವೊಂಬಟ್ಕೆರೆ ಅವರು ಸಲ್ಲಿಸಿದ ಅರ್ಜಿಯ ಮೇರೆಗೆ ಮತ್ತು ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ ಮತ್ತು ವ್ಯಂಗ್ಯಚಿತ್ರಕಾರ ಅಸೀಮ್ ತ್ರಿವೇದಿ ಜಂಟಿಯಾಗಿ ಸಲ್ಲಿಸಿದ ರಿಟ್ ಅರ್ಜಿಯ ಮೇಲೆ ನ್ಯಾಯಾಲಯವು ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತ್ತು.

ಇದನ್ನೂ ಓದಿ: 5 ವರ್ಷಗಳಲ್ಲಿ 326 ದೇಶದ್ರೋಹ ಪ್ರಕರಣಗಳು ಕಾನೂನಿನ ದುರುಪಯೋಗವನ್ನು ತೋರಿಸುತ್ತವೆ: ಸುಪ್ರೀಂಕೋರ್ಟ್‌

ಆಂಧ್ರಪ್ರದೇಶ ಸರ್ಕಾರದ ವಿರುದ್ಧ ಕಿಶೋರ್ ಚಂದ್ರ ವಾಂಗ್ಕೆಮ್ಚಾ ಮತ್ತು ಶ್ರೀಮತಿ ಆಮೋದಾ ಬ್ರಾಡ್‌ಕಾಸ್ಟಿಂಗ್ ಕಂಪನಿ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿರುವ ಇತರ ಎರಡು ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿವೆ ಎಂದು ಪೀಠವು ಹೇಳಿದೆ. ಈ ಎರಡೂ ಪ್ರಕರಣಗಳು ದೇಶದ್ರೋಹದ ಆರೋಪಗಳಿಗೆ ಸಂಬಂಧಿಸಿವೆ.

ಹಿರಿಯ ಪತ್ರಕರ್ತ ಅರುಣ್ ಶೌರಿ ಮತ್ತು ವಕೀಲ ಪ್ರಶಾಂತ್ ಭೂಷಣ್ ಪ್ರತಿನಿಧಿಸುವ ಎನ್‌ಜಿಒ ಕಾಮನ್ ಕಾಸ್ ಕೂಡ ಸೆಕ್ಷನ್ 124 ಎ ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಅವರ ಅರ್ಜಿಯು “ಸಂವಿಧಾನಪೂರ್ವ ಕಾನೂನುಗಳಿಗೆ ಸಾಂವಿಧಾನಿಕತೆಯ ಊಹೆಯು ಅನ್ವಯಿಸುವುದಿಲ್ಲ. ಯಾಕೆಂದರೆ ಆ ಕಾನೂನುಗಳು ವಿದೇಶಿ ಶಾಸಕಾಂಗ ಅಥವಾ ಸಂಸ್ಥೆಯಿಂದ ಮಾಡಲ್ಪಟ್ಟಿದೆ” ಎಂದು ವಾದಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...