Homeರಾಜಕೀಯರಾಷ್ಟ್ರಪತಿ ಚುನಾವಣೆ - ಬಿಜೆಪಿ ವಿರುದ್ಧ ಒಮ್ಮತದ ಅಭ್ಯರ್ಥಿಗೆ ವಿಪಕ್ಷಗಳು ಒಪ್ಪಿಗೆ: ಮಹಾತ್ಮ ಗಾಂಧಿ ಮೊಮ್ಮಗ...

ರಾಷ್ಟ್ರಪತಿ ಚುನಾವಣೆ – ಬಿಜೆಪಿ ವಿರುದ್ಧ ಒಮ್ಮತದ ಅಭ್ಯರ್ಥಿಗೆ ವಿಪಕ್ಷಗಳು ಒಪ್ಪಿಗೆ: ಮಹಾತ್ಮ ಗಾಂಧಿ ಮೊಮ್ಮಗ ಅಭ್ಯರ್ಥಿ?

- Advertisement -
- Advertisement -

ಮುಂಬರುವ ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಯ ವಿರುದ್ಧ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಹಲವು ವಿರೋಧ ಪಕ್ಷಗಳ ನಾಯಕರು ಬುಧವಾರ ಒಪ್ಪಿಗೆ ಸೂಚಿಸಿದ್ದಾರೆ. ರಾಜಕೀಯ ಪಕ್ಷಗಳ ಜಂಟಿ ಸಮಾವೇಶವನ್ನು ಕರೆದಿದ್ದ ಟಿಎಂಸಿ ಮುಖ್ಯಸ್ಥೆ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ, “ಹಲವು ಪಕ್ಷಗಳು ಇಂದು ಇಲ್ಲಿವೆ. ನಾವು ಒಬ್ಬ ಒಮ್ಮತದ ಅಭ್ಯರ್ಥಿಯನ್ನು ಮಾತ್ರ ಆಯ್ಕೆ ಮಾಡಲು ನಿರ್ಧರಿಸಿದ್ದೇವೆ. ಎಲ್ಲರೂ ಈ ಅಭ್ಯರ್ಥಿಗೆ ಬೆಂಬಲ ನೀಡಲಿದ್ದಾರೆ” ಎಂದು ಹೇಳಿದ್ದಾರೆ.

“ನಾವು ಇತರ ಪಕ್ಷಗಳೊಂದಿಗೆ ಸಮಾಲೋಚಿಸುತ್ತೇವೆ. ಇದೊಂದು ಉತ್ತಮ ಆರಂಭ. ಹಲವಾರು ತಿಂಗಳ ನಂತರ ನಾವು ಒಟ್ಟಿಗೆ ಕುಳಿತಿದ್ದು, ಈ ಒಗ್ಗಟ್ಟನ್ನು ಮತ್ತೆ ರೂಪಿಸುತ್ತೇವೆ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸಭೆಯಲ್ಲಿ ವಿರೋಧ ಪಕ್ಷದ ನಾಯಕರು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಚುನಾವಣೆಗೆ ಜಂಟಿ ವಿರೋಧ ಪಕ್ಷದ ಅಭ್ಯರ್ಥಿಯನ್ನಾಗಿ ಮಾಡುವಂತೆ ಒತ್ತಾಯಿಸಲಾಯಿತು. ಆದರೆ, ಅವರು ಮತ್ತೊಮ್ಮೆ ಪ್ರಸ್ತಾಪವನ್ನು ನಿರಾಕರಿಸಿದ್ದಾರೆ.

ಇದನ್ನೂ ಓದಿ: Explained: ಭಾರತದ ರಾಷ್ಟ್ರಪತಿ ಆಯ್ಕೆಯನ್ನು ಹೇಗೆ ಮಾಡಲಾಗುತ್ತದೆ?

ವಿರೋಧ ಪಕ್ಷದ ಸಂಭಾವ್ಯ ಅಭ್ಯರ್ಥಿಗಳಾಗಿ ಫಾರೂಕ್ ಅಬ್ದುಲ್ಲಾ ಮತ್ತು ಗೋಪಾಲಕೃಷ್ಣ ಗಾಂಧಿ ಅವರ ಹೆಸರನ್ನು ಮಮತಾ ಬ್ಯಾನರ್ಜಿ ಸೂಚಿಸಿದ್ದಾರೆ ಎಂದು ಆರ್‌ಎಸ್‌ಪಿಯ ಎನ್‌ಕೆ ಪ್ರೇಮಚಂದ್ರನ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

ಕಾಂಗ್ರೆಸ್, ಸಮಾಜವಾದಿ ಪಕ್ಷ, ಎನ್‌ಸಿಪಿ, ಡಿಎಂಕೆ, ಆರ್‌ಜೆಡಿ ಮತ್ತು ಎಡಪಕ್ಷಗಳ ನಾಯಕರು ಟಿಎಂಸಿ ವರಿಷ್ಠರು ಕರೆದ ಎರಡು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಭಾಗವಹಿಸಿದ್ದರು. ಆದರೆ ಎಎಪಿ, ಎಸ್‌ಎಡಿ, ಎಐಎಂಐಎಂ, ಟಿಆರ್‌ಎಸ್ ಮತ್ತು ಒಡಿಶಾದ ಆಡಳಿತಾರೂಢ ಬಿಜೆಡಿ ಈ ಸಭೆಗೆ ಹಾಜರಾಗಲಿಲ್ಲ.

ಶಿವಸೇನೆ, ಸಿಪಿಐ, ಸಿಪಿಐ(ಎಂ), ಸಿಪಿಐ(ಎಂಎಲ್), ನ್ಯಾಷನಲ್ ಕಾನ್ಫರೆನ್ಸ್, ಪಿಡಿಪಿ, ಜೆಡಿ(ಎಸ್), ಆರ್‌ಎಸ್‌ಪಿ, ಐಯುಎಂಎಲ್, ಆರ್‌ಎಲ್‌ಡಿ ಮತ್ತು ಜೆಎಂಎಂ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ರಾಷ್ಟ್ರಪತಿ ಚುನಾವಣೆ ಜುಲೈ 18 ರಂದು ನಡೆಯಲಿದೆ.

ಇದನ್ನೂ ಓದಿ: ಶಿಕ್ಷಣವನ್ನು ಕೇಸರಿಕರಣ ಮಾಡುವುದರಲ್ಲಿ ತಪ್ಪೇನಿದೆ: ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು

ಸಭೆಯಲ್ಲಿ ಎನ್‌ಸಿಪಿ ನಾಯಕರಾದ ಶರದ್ ಪವಾರ್ ಮತ್ತು ಪ್ರಫುಲ್ ಪಟೇಲ್, ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ, ಜೈರಾಮ್ ರಮೇಶ್ ಮತ್ತು ರಣದೀಪ್ ಸುರ್ಜೇವಾಲಾ, ಜೆಡಿಎಸ್‌ನ ಎಚ್‌ಡಿ ದೇವೇಗೌಡ ಮತ್ತು ಎಚ್‌ಡಿ ಕುಮಾರಸ್ವಾಮಿ, ಎಸ್‌ಪಿಯ ಅಖಿಲೇಶ್ ಯಾದವ್, ನ್ಯಾಷನಲ್ ಕಾನ್ಫರೆನ್ಸ್‌ನ ಒಮರ್ ಅಬ್ದುಲ್ಲಾ ಹಾಗೂ  PDP ನಾಯಕಿ ಮೆಹಬೂಬಾ ಮುಫ್ತಿ ಸೇರಿದಂತೆ ಹಲವಾರು ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...