Homeರಾಜಕೀಯಮಹಾರಾಷ್ಟ್ರ ಪರಿಷತ್‌ ಚುನಾವಣೆಯಲ್ಲಿ BJP ಪರ ಅಡ್ಡ ಮತದಾನ: ಆಪರೇಷನ್ ಕಮಲ ಸಾಧ್ಯತೆ!

ಮಹಾರಾಷ್ಟ್ರ ಪರಿಷತ್‌ ಚುನಾವಣೆಯಲ್ಲಿ BJP ಪರ ಅಡ್ಡ ಮತದಾನ: ಆಪರೇಷನ್ ಕಮಲ ಸಾಧ್ಯತೆ!

- Advertisement -
- Advertisement -

ಮಹಾರಾಷ್ಟ್ರದ ಹತ್ತು ವಿಧಾನ ಪರಿಷತ್ ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಮಂಗಳವಾರ ಹೊರ ಬಿದ್ದಿದೆ. ಅಡ್ಡ ಮತದಾನದ ಪರಿಣಾಮವಾಗಿ ವಿರೋಧ ಪಕ್ಷವಾದ ಬಿಜೆಪಿ ಐದು ಸ್ಥಾನಗಳನ್ನು ಗೆದ್ದಿದ್ದು ಆಡಳಿತರೂಢ ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರಕ್ಕೆ ಅಘಾತಕ್ಕೀಡು ಮಾಡಿದೆ. ಉಳಿದಂತೆ ಮೈತ್ರಿ ಸರ್ಕಾರದ ಪಕ್ಷಗಳಾದ ಎನ್‌ಸಿಪಿ ಮತ್ತು ಶಿವಸೇನೆ ತಲಾ ಎರಡು ಸ್ಥಾನಗಳನ್ನು ಪಡೆದುಕೊಂಡು ಮತ್ತು ಕಾಂಗ್ರೆಸ್ ಒಂದು ಸ್ಥಾನವನ್ನು ಪಡೆಯಲು ಯಶಸ್ವಿಯಾಗಿದೆ.

ಬಿಜೆಪಿಯ ಐದನೇ ಅಭ್ಯರ್ಥಿ ಪ್ರಸಾದ್ ಲಾಡ್ 28 ಮತಗಳನ್ನು ಪಡೆದು ಚುನಾವಣೆಯಲ್ಲಿ ಅಚ್ಚರಿಯ ಗೆಲುವು ಸಾಧಿಸಿದ್ದಾರೆ. ಕಳೆದ ವಾರ ಕೂಡಾ ರಾಜ್ಯದ ವಿಪಕ್ಷ ನಾಯಕ, ಬಿಜೆಪಿ ಮುಖಂಡ ದೇವೇಂದ್ರ ಫಡ್ನವೀಸ್ ಅವರು ರಾಜ್ಯದ ಮೂರು ರಾಜ್ಯಸಭಾ ಅಭ್ಯರ್ಥಿಗಳು ಗೆಲ್ಲುವಂತೆ ನೋಡಿಕೊಂಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿವಸೇನೆಯ ಕನಿಷ್ಠ 12 ಶಾಸಕರು ಅಡ್ಡ ಮತದಾನ ಮಾಡಿದ್ದಾರೆ ಎಂದು ನಂಬಲಾಗಿದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಂಗಳವಾರ ಎಲ್ಲಾ ಶಿವಸೇನೆ ಶಾಸಕರ ತುರ್ತು ಸಭೆಯನ್ನು ಕರೆದಿದ್ದಾರೆ. ಇದರ ಬೆನ್ನಲ್ಲೇ ಮಹಾ ವಿಕಾಸ್ ಅಘಾಡಿ ಸರ್ಕಾರದ ಸಚಿವ ಏಕನಾಥ್ ಶಿಂಧೆ ಸೇರಿದಂತೆ 13 ಇತರ ಪಕ್ಷದ ಶಾಸಕರೊಂದಿಗೆ ಗುಜರಾತ್‌ಗೆ ಪ್ರಯಾಣಿಸಿದ್ದಾರೆ. ಇದು ಮಹಾರಾಷ್ಟ್ರ ಸರ್ಕಾರದಲ್ಲಿ ಅಪರೇಷನ್ ಕಮಲ ನಡೆಯಲಿದೆ ಎಂಬ ಆತಂಕವನ್ನು ಸೃಷ್ಟಿಸಿದೆ.

ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರಕ್ಕೆ ಸಂಕಷ್ಟ: ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಸಂಸದ ಸಂಜಯ್ ರಾವತ್

“ಬಿಜೆಪಿ 134 ಪ್ರಾಶಸ್ತ್ಯದ ಮತಗಳನ್ನು ಪಡೆದುಕೊಂಡಿದೆ. ಪಕ್ಷವು ಇತರ ಏಳು ಶಾಸಕರ ಬೆಂಬಲವನ್ನು ಹೊರತುಪಡಿಸಿ 106 ಶಾಸಕರನ್ನು ಹೊಂದಿದೆ. ಬಿಜೆಪಿಯ ಗೆಲುವಿನ ಸಂಪೂರ್ಣ ಶ್ರೇಯಸ್ಸು ಫಡ್ನವೀಸ್ ಅವರಿಗೆ ಸಲ್ಲುತ್ತದೆ. ನನಗೆ ಪವಾಡಗಳಲ್ಲಿ ನಂಬಿಕೆ ಇಲ್ಲ” ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಚಂದ್ರಕಾಂತ ಪಾಟೀಲ ಹೇಳಿದ್ದಾರೆ.

“ಮಹಾ ವಿಕಾಸ್ ಅಘಾಡಿ ಮೈತ್ರಿ ಸರ್ಕಾರದ ಅಸಮಾಧಾನವು ಮುನ್ನೆಲೆಗೆ ಬಂದು ಮತಗಳಾಗಿ ಪರಿವರ್ತನೆಗೊಂಡಿದೆ” ಎಂದು ದೇವೇಂದ್ರ ಫಡ್ನವಿಸ್ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಲು ಬಂದ ಅವರು ಜಲಗಾಂವ್‌ನ ಬಿಜೆಪಿ ಶಾಸಕ ಗಿರೀಶ್ ಮಹಾಜನ್ ಅವರನ್ನು ತಬ್ಬಿಕೊಂಡರು. ಮೂವರು ಶಾಸಕರನ್ನು ಹೊಂದಿರುವ ಹಿತೇಂದ್ರ ಠಾಕೂರ್ ಅವರ ‘ಬಹುಜನ ವಿಕಾಸ್ ಅಘಾಡಿ’ಯೊಂದಿಗೆ ಯಶಸ್ವಿ ಮಾತುಕತೆ ನಡೆಸುವಲ್ಲಿ ಮಹಾಜನ್ ಪ್ರಮುಖ ಪಾತ್ರ ವಹಿಸಿದ್ದಾರೆ.

ಬಿಜೆಪಿಗೆ ಮತ ಹಾಕಿದ ಶಾಸಕರ ಬಗ್ಗೆ ನನಗೆ ಮಾತ್ರ ಸತ್ಯ ಗೊತ್ತಿದೆ ಎಂದು ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ಅವರು ಆಡಳಿತರೂಢ ಸರ್ಕಾರದ 21 ಮತಗಳನ್ನು ತಮ್ಮ ಪರವಾಗಿ ಒಲಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಆಪರೇಷನ್ ಕಮಲದ ಶಂಕೆ- ಉದ್ಧವ್ ಠಾಕ್ರೆ ಸರ್ಕಾರದ ಸಚಿವ, 13 ಶಾಸಕರು ಗುಜರಾತ್‌ಗೆ

“ನಮಗೆ ಸಹಾಯ ಮಾಡಿದ ಮತ್ತು ನಮ್ಮ ಐದನೇ ಅಭ್ಯರ್ಥಿಯ ಗೆಲುವನ್ನು ಖಚಿತಪಡಿಸಿದ ಎಲ್ಲಾ ಪಕ್ಷಗಳ ಎಲ್ಲಾ ಶಾಸಕರು ಮತ್ತು ಸ್ವತಂತ್ರ ಅಭ್ಯರ್ಥಿಗಳಿಗೆ ನಾನು ಧನ್ಯವಾದ ಹೇಳುತ್ತೇನೆ. ರಾಜ್ಯಸಭಾ ಚುನಾವಣೆಯಲ್ಲಿ ನಾವು 123 ಮತಗಳನ್ನು ಪಡೆದುಕೊಂಡಿದ್ದೇವೆ. ಈ ಚುನಾವಣೆಯಲ್ಲಿ ನಾವು 134 ಮತಗಳನ್ನು ಪಡೆದುಕೊಂಡಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಮೊದಲಿನಿಂದಲೂ ಮಹಾ ವಿಕಾಸ್ ಅಘಾಡಿ ಸರ್ಕಾರದಲ್ಲಿ ಸಾಕಷ್ಟು ಜಗಳವಿದೆ ಎಂದು ಹೇಳುತ್ತಲೇ ಬಂದಿದ್ದೇನೆ. ಮೂರು ಪಕ್ಷಗಳ ನಡುವೆ ಹೊಂದಾಣಿಕೆ ಇಲ್ಲ. ನಮ್ಮಲ್ಲಿ ಐದನೇ ಅಭ್ಯರ್ಥಿಗೆ ಮತ ಇರಲಿಲ್ಲ, ಆದರೂ ನಮ್ಮ ಐದನೇ ಅಭ್ಯರ್ಥಿಗೆ ಕಾಂಗ್ರೆಸ್‌ನ ಇಬ್ಬರು ಅಭ್ಯರ್ಥಿಗಳಿಗಿಂತ ಹೆಚ್ಚು ಮತಗಳು ಬಂದಿವೆ ಎಂದು ಅವರು ಹೇಳಿದ್ದಾರೆ.

“ನಮ್ಮ ನಾಯಕ ನರೇಂದ್ರ ಮೋದಿಯವರು ಭಾರತವನ್ನು ಪರಿವರ್ತಿಸುತ್ತಿದ್ದಾರೆ. ಇಂದು ಮಹಾರಾಷ್ಟ್ರ ಅವರ ಬೆಂಬಲಕ್ಕೆ ನಿಂತಿದೆ. ಮಹಾರಾಷ್ಟ್ರದಲ್ಲಿ ಬದಲಾವಣೆಯನ್ನು ಕಾಣಬಹುದಾಗಿದೆ. ಈ ಸರ್ಕಾರದ ವಿರುದ್ಧದ ಅತೃಪ್ತಿ ಮುನ್ನೆಲೆಗೆ ಬಂದಿದೆ, ನಾವು ಬಿಜೆಪಿ ಗೆಲ್ಲುವವರೆಗೆ ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಬಿಜೆಪಿ 3 ರಾಜ್ಯಸಭಾ ಸ್ಥಾನಗಳನ್ನು ಗೆದ್ದದ್ದು ಹೇಗೆ?

ಬಿಜೆಪಿಯ ಎಲ್ಲಾ ನಾಲ್ಕು ಅಭ್ಯರ್ಥಿಗಳು ಮೊದಲ ಪ್ರಾಶಸ್ತ್ಯದ ಸುತ್ತಿನಲ್ಲಿಯೇ ಗೆದ್ದಿದ್ದರು. ಪ್ರವೀಣ್ ದಾರೆಕರ್ 29, ಪ್ರೊಫೆಸರ್ ರಾಮ್ ಶಿಂಧೆ 30, ಶ್ರೀಕಾಂತ್ ಭಾರತೀಯ 30 ಮತ್ತು ಉಮಾ ಖಾಪ್ರೆ 27 ಪಡೆದ್ದಾರೆ. ಒಂದು ಮತ ತಿದ್ದಿ ಬರೆದ ಕಾರಣ ಅಸಿಂಧು ಎಂದು ಘೋಷಿಸಲಾಗಿದೆ.

“ನಮ್ಮ ಪಕ್ಷದ ನಾಯಕರು ಕಡಿಮೆ ಮಾತನಾಡುತ್ತಾರೆ ಮತ್ತು ತಂತ್ರಗಾರಿಕೆಯಲ್ಲಿ ಹೆಚ್ಚು ಸಮಯವನ್ನು ಕಳೆಯುತ್ತಾರೆ. ಫಲಿತಾಂಶಗಳು ಅದನ್ನು ಹೇಳುತ್ತವೆ” ಎಂದು ಫಡ್ನವಿಸ್‌ಗೆ ನಿಕಟವಾಗಿರುವ ಮಹಾಜನ್ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...