Homeರಾಜಕೀಯಮಹಾರಾಷ್ಟ್ರ: ‘ಶಿಂಧೆ ನಮ್ಮ ನಾಯಕ’ ಎಂದು ಉಪ ಸಭಾಪತಿಗೆ ಪತ್ರ ಕಳುಹಿಸಿದ ಬಂಡಾಯ ಶಾಸಕರು

ಮಹಾರಾಷ್ಟ್ರ: ‘ಶಿಂಧೆ ನಮ್ಮ ನಾಯಕ’ ಎಂದು ಉಪ ಸಭಾಪತಿಗೆ ಪತ್ರ ಕಳುಹಿಸಿದ ಬಂಡಾಯ ಶಾಸಕರು

- Advertisement -
- Advertisement -

ಏಕನಾಥ್ ಶಿಂಧೆ ಬಣದ 37 ಶಿವಸೇನೆ ಶಾಸಕರು ಗುರುವಾರ ತಡರಾತ್ರಿ ಮಹಾರಾಷ್ಟ್ರ ವಿಧಾನಸಭೆಯ ಉಪ ಸ್ಪೀಕರ್ ನರಹರಿ ಝಿರ್ವಾಲ್ ಅವರಿಗೆ ಪತ್ರವೊಂದನ್ನು ಕಳುಹಿಸುವುದರೊಂದಿಗೆ ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಮತ್ತಷ್ಟು ಉತ್ತುಂಗಕ್ಕೇರಿದೆ. ಪತ್ರದಲ್ಲಿ ಶಿಂಧೆ ಅವರು ತಾನು ಶಿವಸೇನೆ ಶಾಸಕಾಂಗ ಪಕ್ಷದ ನಾಯಕ ಎಂದು ಸ್ವತಃ ಘೋಷಿಸಿದ್ದು, ಭರತ್‌ಶೆಟ್ ಗೊಗವಾಲೆ ಅವರನ್ನು ಪಕ್ಷದ ಮುಖ್ಯ ಸಚೇತಕರಾಗಿ ನೇಮಿಸಲಾಗಿದೆ ಎಂದು ಹೇಳಿದ್ದಾರೆ.

“ಏಕನಾಥರಾವ್ ಸಂಭಾಜಿ ಶಿಂಧೆ ಶಿವಸೇನೆ ಶಾಸಕಾಂಗ ಪಕ್ಷದ ನಾಯಕರಾಗಿ ಮತ್ತು ಶಿವಸೇನೆ ಶಾಸಕಾಂಗ ಪಕ್ಷದ ಮುಖ್ಯ ಸಚೇತಕರಾಗಿ ಭರತ್‌ಶೆಟ್ ಗೊಗವಾಲೆ ಅವರನ್ನು ಶಿವಸೇನೆ ಶಾಸಕಾಂಗ ಪಕ್ಷದ ಅಡಿಯಲ್ಲಿರುವ ಸದಸ್ಯರು ನೇಮಕ ಮಾಡಿದ್ದಾರೆ. ನೇಮಕಾತಿಯ ಮರುದೃಢೀಕರಣಕ್ಕೆ ಸಂಬಂಧಿಸಿದಂತೆ ಜೂನ್ 23 2022 ರ ದಿನಾಂಕದ ನಿರ್ಣಯದ ಪ್ರತಿಯನ್ನು ನಾನು ಇಲ್ಲಿ ಲಗತ್ತಿಸುತ್ತಿದ್ದೇನೆ” ಎಂದು ಪತ್ರದಲ್ಲಿ ಬರೆಯಲಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಿಂಧೆ ಅವರ ಬಂಡಾಯದ ನಂತರ ಶಿವಸೇನೆ ಶಾಸಕಾಂಗ ಪಕ್ಷದ ನಾಯಕರಾಗಿ ಅಜಯ್ ಚೌಧರಿ ಅವರನ್ನು ಉದ್ಧವ್‌ ನೇತೃತ್ವದ ಶಿವಸೇನೆ ಬಣ ನೇಮಕ ಮಾಡಿತ್ತು. ಅಜಯ್ ಚೌಧರಿ ಅವರು ಉಪ ಸ್ಪೀಕರ್‌ ಅವರನ್ನು ಭೇಟಿಯಾಗಿ ಪಕ್ಷದ ಶಿಸ್ತು ಉಲ್ಲಂಘಿಸಿ ಬಂಡಾಯ ಬಣಕ್ಕೆ ಸೇರಿರುವ 12 ಶಾಸಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಳಿಕೊಂಡಿದ್ದರು.

ಇದನ್ನೂ ಓದಿ: ಮಹಾರಾಷ್ಟ್ರ ಸರ್ಕಾರ ಅತಂತ್ರ: ಇಲ್ಲಿವರೆಗೆ ಏನಾಯಿತು? ಸಂಕ್ಷಿಪ್ತ ವರದಿ ಇಲ್ಲಿದೆ

ಈ ಮಧ್ಯೆ, ಬಂಡಾಯ ಶಾಸಕರು ‘24 ಗಂಟೆಗಳ ಒಳಗೆ’ ಹಿಂದಿರುಗಿದರೆ ಮಹಾರಾಷ್ಟ್ರದ ಮೈತ್ರಿ ಸರ್ಕಾರದಿಂದ ಹೊರಬರುವ ಬಗ್ಗೆ ಚರ್ಚಿಸುವುದಾಗಿ ಶಿವಸೇನೆ ನಾಯಕ ಸಂಜಯ್ ರಾವತ್‌ ಘೋಷಿಸಿದ್ದರು. ಆದರೂ ಕಾಂಗ್ರೆಸ್ ಮತ್ತು ಎನ್‌ಸಿಪಿ ಎರಡೂ ಮೈತ್ರಿ ಪಕ್ಷಗಳು ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ತಮ್ಮ ಬೆಂಬಲವನ್ನು ವಾಗ್ದಾನ ಮಾಡಿದ್ದಾರೆ.

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಗುರುವಾರ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, “ಈ ಸರ್ಕಾರಕ್ಕೆ ಬಹುಮತ ಇದೆಯೆ ಅಥವಾ ಇಲ್ಲವೆ ಎಂಬುವುದನ್ನು ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚನೆ ಮಾಡಿ ಪರೀಕ್ಷಿಸಲಾಗುವುದು” ಎಂದು ಹೇಳಿದ್ದಾರೆ.

ಎನ್‌ಸಿಪಿ ಶಾಸಕರನ್ನು ಭೇಟಿ ಮಾಡಿದ ಶರದ್‌ ಪವಾರ್‌ ಅವರು, ಶಿವಸೇನೆ ಶಾಸಕರು ಹಿಂತಿರುಗುತ್ತಾರೆ ಮತ್ತು ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಎಂವಿಎ ಬಹುಮತವನ್ನು ಸಾಬೀತುಪಡಿಸುತ್ತದೆ ಎಂದು ಭರವಸೆ ನೀಡಿದ ಅವರು, “ಬಂಡಾಯಕ್ಕೆ ಬಿಜೆಪಿಯೇ ಕಾರಣ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರ: ಸಿಎಂ ಗೃಹ ಕಚೇರಿ ಬಿಟ್ಟು ಸ್ವಂತ ಮನೆಗೆ ತೆರಳಿದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ

“ಶಾಸಕರು ಹಿಂದಿರುಗಿದಾಗ ಅವರು ಹೇಗೆ ಅಲ್ಲಿಗೆ ಹೋದರು ಎಂಬ ವಾಸ್ತವವನ್ನು ವಿವರಿಸುತ್ತಾರೆ. ಅವರು ಇಲ್ಲಿಗೆ ಬಂದು ಶಿವಸೇನೆಯೊಂದಿಗಿದ್ದೇವೆ ಎಂದು ಸ್ಪಷ್ಟಪಡಿಸಿ ಮೈತ್ರಿ ಸರ್ಕಾರವು ಬಹುಮತ ಸಾಬೀತುಪಡಿಸಲಿದೆ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...