Homeರಾಜಕೀಯರಾಷ್ಟ್ರಪತಿ ಚುನಾವಣೆ-ಬಿಜೆಪಿಯ ದ್ರೌಪದಿ ಮುರ್ಮು ಅವರನ್ನು BSP ಬೆಂಬಲಿಸಲಿದೆ: ಮಾಯಾವತಿ

ರಾಷ್ಟ್ರಪತಿ ಚುನಾವಣೆ-ಬಿಜೆಪಿಯ ದ್ರೌಪದಿ ಮುರ್ಮು ಅವರನ್ನು BSP ಬೆಂಬಲಿಸಲಿದೆ: ಮಾಯಾವತಿ

- Advertisement -
- Advertisement -

ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸುವುದಾಗಿ ಬಹುಜನ ಸಮಾಜ ಪಕ್ಷ(ಬಿಎಸ್‌ಪಿ)ದ ಮುಖ್ಯಸ್ಥೆ ಮಾಯಾವತಿ ಶನಿವಾರ ಘೋಷಿಸಿದ್ದಾರೆ. ಬುಡಕಟ್ಟು ನಾಯಕರಾದ ಮುರ್ಮು ಅವರನ್ನು ಬೆಂಬಲಿಸುವ ತಮ್ಮ ನಿರ್ಧಾರವನ್ನು ಸಮರ್ಥಿಸಿರುವ ಅವರು ‘ಬಿಎಸ್‌ಪಿಯು ಬುಡಕಟ್ಟು ಸಮುದಾಯವನ್ನು ನಮ್ಮ ಚಳವಳಿಯ ಪ್ರಮುಖ ಭಾಗವೆಂದು ಗುರುತಿಸಿದೆ’ ಎಂದು ಹೇಳಿದ್ದಾರೆ.

ವಿರೋಧ ಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾ ಅವರ ಕುರಿತು ಪಕ್ಷವನ್ನು ಸಂಪರ್ಕಿಸದ ಪ್ರತಿಪಕ್ಷಗಳ ವಿರುದ್ಧವೂ ಅವರು ವಾಗ್ದಾಳಿ ನಡೆಸಿದ್ದಾರೆ. “ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮೊದಲ ಸಭೆಗೆ ಕೆಲವು ಆಯ್ದ ಪಕ್ಷಗಳನ್ನು ಮಾತ್ರ ಕರೆದರು. ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಕೂಡ ಬಿಎಸ್ಪಿಯನ್ನು ಚರ್ಚೆಗೆ ಕರೆಯಲಿಲ್ಲ” ಎಂದು ಅವರು ಆರೋಪಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರತಿಪಕ್ಷಗಳು ತಮ್ಮ ಪಕ್ಷದ ವಿರುದ್ಧ ಜಾತಿವಾದಿ ಮನಸ್ಥಿತಿಯನ್ನು ಮುಂದುವರೆಸುತ್ತಿರುವುದರಿಂದ, ಬಿಎಸ್ಪಿ ಅಧ್ಯಕ್ಷೀಯ ಚುನಾವಣೆಯ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ಸ್ವತಂತ್ರವಾಗಿದೆ ಎಂದು ಮಾಯಾವತಿ ಹೇಳಿದ್ದಾರೆ.

ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ: ವಿಪಕ್ಷಗಳ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಘೋಷಣೆ

“ಬಿಎಸ್‌ಪಿ ಮಾತ್ರ ದಲಿತರ ನಾಯಕತ್ವ ಹೊಂದಿರುವ ರಾಷ್ಟ್ರೀಯ ಪಕ್ಷವಾಗಿದೆ. ನಾವು ಬಿಜೆಪಿ ಅಥವಾ ಕಾಂಗ್ರೆಸ್ ಅನ್ನು ಅನುಸರಿಸುವ ಪಕ್ಷವಲ್ಲ. ಕೈಗಾರಿಕೋದ್ಯಮಿಗಳೊಂದಿಗೆ ಶಾಮೀಲಾಗಿರುವ ಪಕ್ಷವಲ್ಲ. ನಾವು ತುಳಿತಕ್ಕೊಳಗಾದವರ ಪರವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ. ಯಾವುದೇ ಪಕ್ಷವು ಅಂತಹ ತುಳಿತಕ್ಕೊಳಗಾದ ಜಾತಿಗಳು ಅಥವಾ ವರ್ಗದ ಜನರ ಪರವಾಗಿ ನಿರ್ಧಾರ ತೆಗೆದುಕೊಳ್ಳುತ್ತದೆಯೊ, ಆಗ ಯಾವುದೇ ಪರಿಣಾಮಗಳನ್ನು ಲೆಕ್ಕಿಸದೆ ನಾವು ಆ ಪಕ್ಷಗಳನ್ನು ಬೆಂಬಲಿಸುತ್ತೇವೆ”ಎಂದು ಅವರು ಹೇಳಿದ್ದಾರೆ.

ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ಬಿಜೆಪಿಯು ಬುಡಕಟ್ಟು ನಾಯಕಿ ದ್ರೌಪದಿ ಮುರ್ಮು ಅವರನ್ನು ಸ್ಪರ್ಧೆಗೆ ನಿಲ್ಲಿಸಿದೆ. ಅವರು ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮತ್ತು ಅದರ ಮೈತ್ರಿಕೂಟದ ಹಿರಿಯ ನಾಯಕರ ಸಮ್ಮುಖದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಅವರು ಸ್ಪರ್ಧಿಸಲಿದ್ದಾರೆ.

ಒಂದು ವೇಳೆ ಮುರ್ಮು ಅವರು ಚುನಾಯಿತರಾದರೆ, ಮೊದಲ ಮಹಿಳಾ ಬುಡಕಟ್ಟು ನಾಯಕಿ ಮತ್ತು ಈ ಹುದ್ದೆಗೆ ತಲುಪಿರುವ ಎರಡನೇ ಮಹಿಳೆಯಾಗಲಿದ್ದಾರೆ. 64 ನೇ ವಯಸ್ಸಿನ ಮುರ್ಮು ಅವರು ಆಯ್ಕೆಯಾದರೆ ಎರಡನೇ ಕಿರಿಯ ರಾಷ್ಟ್ರಪತಿಯಾಗಲಿದ್ದಾರೆ.

ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ: ಬುಡಕಟ್ಟು ಸಮುದಾಯದ ದ್ರೌಪದಿ ಮುರ್ಮು ಎನ್‌ಡಿಎ ಅಭ್ಯರ್ಥಿ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅಧಿಕಾರಾವಧಿ ಜುಲೈ 24 ರಂದು ಕೊನೆಗೊಳ್ಳಲಿದೆ. ಜುಲೈ 18 ರಂದು ಅಧ್ಯಕ್ಷೀಯ ಚುನಾವಣೆ ನಡೆಯಲಿದ್ದು, 21ರಂದು ಮತ ಎಣಿಕೆ ನಡೆಯಲಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...