ಕುರಾನ್ ಮತ್ತು ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಬಿಜೆಪಿ ಬೆಂಬಲಿತ ಹೆಚ್‌ಜೆವಿ ಸಂಘಟನೆಯ ರಾಜ್ಯ ಸಂಚಾಲಕ ಕೇಶವ ಮೂರ್ತಿ ಮತ್ತು ಇತರರ ವಿರುದ್ಧ ಕೋಲಾರ ಜಿಲ್ಲಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅವರ ವಿರುದ್ಧ ಅಂಜುಮನ್-ಎ-ಇಸ್ಲಾಮಿಯಾ ಸಂಘಟನೆಯ ಅಧ್ಯಕ್ಷ ಜಮೀರ್ ಅಹಮದ್ ಅವರು ದೂರು ದಾಖಲಿಸಿದ್ದರು.
ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯಾ ಲಾಲ್ ಹತ್ಯೆಯನ್ನು ವಿರೋಧಿಸಿ ಜುಲೈ 1 ರಂದು ನಡೆದ ಪ್ರತಿಭಟನೆಯಲ್ಲಿ ಭಾಷಣ ಮಾಡಿದ್ದ ಕೇಶವ ಮೂರ್ತಿ, “ಕುರಾನ್ ಜನರನ್ನು ಕೊಲ್ಲು ಎಂದು ಹೇಳುತ್ತದೆ. ಆದ್ದರಿಂದ ಕುರಾನ್ ಓದುವವರು ಅದನ್ನು ಅನುಸರಿಸುತ್ತಾರೆ ಎಂದು ನೀವು ಭಾವಿಸುವುದಿಲ್ಲವೇ? ಯಾರು ಕುರಾನ್ ಅನ್ನು ಓದುತ್ತಾರೋ, ಅವರು ಭಯೋತ್ಪಾದಕರು” ಎಂದು ಹೇಳಿ ವಿವಾದ ಸೃಷ್ಟಿಸಿದ್ದನು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಕೇಶವ ಮೂರ್ತಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153ಎ (ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 153 ಬಿ (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ) ಮತ್ತು 295 ಎ (ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬಿಜೆಪಿಯ ರಾಷ್ಟ್ರೀಯ ವಕ್ತಾರೆಯಾಗಿದ್ದ ನೂಪುರ್ ಶರ್ಮಾ ಅವರು ಟಿವಿ ಚರ್ಚೆಯೊಂದರಲ್ಲಿ ಮಾತನಾಡುತ್ತಾ, ಪ್ರವಾದಿ ಮೊಹಮ್ಮದ್ ಅವರನ್ನು ಅವಹೇಳನ ಮಾಡಿದ್ದರು. ಇದರ ವಿರುದ್ದ ಹಲವಾರು ದೇಶಗಳು ಆಕ್ರೋಶ ವ್ಯಕ್ತಪಡಿಸಿತ್ತು. ತೀವ್ರ ಒತ್ತಡದಿಂದ ಬಿಜೆಪಿ ನೂಪುರ್ ಶರ್ಮಾ ಅವರನ್ನು ಪಕ್ಷದಿಂದ ಅಮಾನತು ಮಾಡಿತ್ತು.
ಇದನ್ನೂ ಓದಿ: ದ್ವೇಷ ಭಾಷಣ: ಬಲಪಂಥೀಯ ನಾಯಕಿ ಸಾಧ್ವಿ ಅನ್ನಪೂರ್ಣ ವಿರುದ್ಧ ಪ್ರಕರಣ ದಾಖಲು
ಇದರ ನಂತರ ಬಿಜೆಪಿ ಬೆಂಬಲಿಗರೇ ತಮ್ಮ ಪಕ್ಷದ ವಿರುದ್ಧ ತಿರುಗಿ ಬಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿದ್ದರು. ಈ ವೇಳೆ ಟೈಲರ್ ಕನ್ಹಯ್ಯಾ ಲಾಲ್ ಅವರು ಕೂಡಾ ಸಾಮಾಜಿಕ ಮಾಧ್ಯಮಗಳಲ್ಲಿ ಬೆಂಬಲಿಸಿದ್ದರು. ಈ ದ್ವೇಷದಿಂದ ಇಬ್ಬರು ದುಷ್ಕರ್ಮಿಗಳು ಅವರನ್ನು ಹತ್ಯೆ ಮಾಡಿದ್ದಾರೆ. ಆರೋಪಿಗಳಲ್ಲಿ ಒಬ್ಬ ವ್ಯಕ್ತಿ ಬಿಜೆಪಿ ಕಾರ್ಯಕರ್ತ ಎಂದು ಮಾಧ್ಯಮಗಳು ವರದಿ ಮಾಡಿದ್ದು, ಬಿಜೆಪಿ ನಾಯಕರೊಂದಿಗೆ ಆತನ ಚಿತ್ರಗಳು ವೈರಲ್ ಆಗಿವೆ.


