Homeಕರ್ನಾಟಕದ್ವೇಷ ಭಾಷಣ: ಬಿಜೆಪಿ ಬೆಂಬಲಿತ ಸಂಘಟನೆ ಹೆಚ್‌ಜೆವಿ ರಾಜ್ಯ ಸಂಚಾಲಕ ಕೇಶವ ಮೂರ್ತಿ ವಿರುದ್ಧ ಎಫ್‌ಐಆರ್‌

ದ್ವೇಷ ಭಾಷಣ: ಬಿಜೆಪಿ ಬೆಂಬಲಿತ ಸಂಘಟನೆ ಹೆಚ್‌ಜೆವಿ ರಾಜ್ಯ ಸಂಚಾಲಕ ಕೇಶವ ಮೂರ್ತಿ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಕುರಾನ್ ಮತ್ತು ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಬಿಜೆಪಿ ಬೆಂಬಲಿತ ಹೆಚ್‌ಜೆವಿ ಸಂಘಟನೆಯ ರಾಜ್ಯ ಸಂಚಾಲಕ ಕೇಶವ ಮೂರ್ತಿ ಮತ್ತು ಇತರರ ವಿರುದ್ಧ ಕೋಲಾರ ಜಿಲ್ಲಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಅವರ ವಿರುದ್ಧ ಅಂಜುಮನ್-ಎ-ಇಸ್ಲಾಮಿಯಾ ಸಂಘಟನೆಯ ಅಧ್ಯಕ್ಷ ಜಮೀರ್ ಅಹಮದ್ ಅವರು ದೂರು ದಾಖಲಿಸಿದ್ದರು.

ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯಾ ಲಾಲ್ ಹತ್ಯೆಯನ್ನು ವಿರೋಧಿಸಿ ಜುಲೈ 1 ರಂದು ನಡೆದ ಪ್ರತಿಭಟನೆಯಲ್ಲಿ ಭಾಷಣ ಮಾಡಿದ್ದ ಕೇಶವ ಮೂರ್ತಿ, “ಕುರಾನ್ ಜನರನ್ನು ಕೊಲ್ಲು ಎಂದು ಹೇಳುತ್ತದೆ. ಆದ್ದರಿಂದ ಕುರಾನ್ ಓದುವವರು ಅದನ್ನು ಅನುಸರಿಸುತ್ತಾರೆ ಎಂದು ನೀವು ಭಾವಿಸುವುದಿಲ್ಲವೇ? ಯಾರು ಕುರಾನ್ ಅನ್ನು ಓದುತ್ತಾರೋ, ಅವರು ಭಯೋತ್ಪಾದಕರು” ಎಂದು ಹೇಳಿ ವಿವಾದ ಸೃಷ್ಟಿಸಿದ್ದನು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಕೇಶವ ಮೂರ್ತಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153ಎ (ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 153 ಬಿ (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆ) ಮತ್ತು 295 ಎ (ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬಿಜೆಪಿಯ ರಾಷ್ಟ್ರೀಯ ವಕ್ತಾರೆಯಾಗಿದ್ದ ನೂಪುರ್ ಶರ್ಮಾ ಅವರು ಟಿವಿ ಚರ್ಚೆಯೊಂದರಲ್ಲಿ ಮಾತನಾಡುತ್ತಾ, ಪ್ರವಾದಿ ಮೊಹಮ್ಮದ್ ಅವರನ್ನು ಅವಹೇಳನ ಮಾಡಿದ್ದರು. ಇದರ ವಿರುದ್ದ ಹಲವಾರು ದೇಶಗಳು ಆಕ್ರೋಶ ವ್ಯಕ್ತಪಡಿಸಿತ್ತು. ತೀವ್ರ ಒತ್ತಡದಿಂದ ಬಿಜೆಪಿ ನೂಪುರ್‌ ಶರ್ಮಾ ಅವರನ್ನು ಪಕ್ಷದಿಂದ ಅಮಾನತು ಮಾಡಿತ್ತು.

ಇದನ್ನೂ ಓದಿ: ದ್ವೇಷ ಭಾಷಣ: ಬಲಪಂಥೀಯ ನಾಯಕಿ ಸಾಧ್ವಿ ಅನ್ನಪೂರ್ಣ ವಿರುದ್ಧ ಪ್ರಕರಣ ದಾಖಲು

ಇದರ ನಂತರ ಬಿಜೆಪಿ ಬೆಂಬಲಿಗರೇ ತಮ್ಮ ಪಕ್ಷದ ವಿರುದ್ಧ ತಿರುಗಿ ಬಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ನೂಪುರ್‌ ಶರ್ಮಾ ಅವರನ್ನು ಬೆಂಬಲಿಸಿದ್ದರು. ಈ ವೇಳೆ ಟೈಲರ್ ಕನ್ಹಯ್ಯಾ ಲಾಲ್ ಅವರು ಕೂಡಾ ಸಾಮಾಜಿಕ ಮಾಧ್ಯಮಗಳಲ್ಲಿ ಬೆಂಬಲಿಸಿದ್ದರು. ಈ ದ್ವೇಷದಿಂದ ಇಬ್ಬರು ದುಷ್ಕರ್ಮಿಗಳು ಅವರನ್ನು ಹತ್ಯೆ ಮಾಡಿದ್ದಾರೆ. ಆರೋಪಿಗಳಲ್ಲಿ ಒಬ್ಬ ವ್ಯಕ್ತಿ ಬಿಜೆಪಿ ಕಾರ್ಯಕರ್ತ ಎಂದು ಮಾಧ್ಯಮಗಳು ವರದಿ ಮಾಡಿದ್ದು, ಬಿಜೆಪಿ ನಾಯಕರೊಂದಿಗೆ ಆತನ ಚಿತ್ರಗಳು ವೈರಲ್ ಆಗಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...