Homeಮುಖಪುಟ12.9k ಬಿಟ್‌ಕಾಯಿನ್‌ಗಳನ್ನು ಕರ್ನಾಟಕದ ರಾಜಕಾರಣಿಗಳು, ಪೊಲೀಸರು ಎನ್‌ಕ್ಯಾಶ್ ಮಾಡಿದ್ದಾರೆ: RTI ಕಾರ್ಯಕರ್ತ

12.9k ಬಿಟ್‌ಕಾಯಿನ್‌ಗಳನ್ನು ಕರ್ನಾಟಕದ ರಾಜಕಾರಣಿಗಳು, ಪೊಲೀಸರು ಎನ್‌ಕ್ಯಾಶ್ ಮಾಡಿದ್ದಾರೆ: RTI ಕಾರ್ಯಕರ್ತ

- Advertisement -
- Advertisement -

ರಾಜಕೀಯ ವಿವಾದಕ್ಕೆ ಸಿಲುಕಿರುವ ಹ್ಯಾಕರ್ ಶ್ರೀಕೃಷ್ಣ ರಮೇಶ್ ಅಲಿಯಾಸ್ ಶ್ರೀಕಿಯ ಬಹುಕೋಟಿ ಬಿಟ್‌ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಹಲವು ಮಾಹಿತಿಗಳು ಹೊರಬೀಳುತ್ತಲೇ ಇವೆ. “ಪೊಲೀಸ್ ಅಧಿಕಾರಿಗಳು ಮತ್ತು ಪ್ರಭಾವಿ ರಾಜಕಾರಣಿಗಳಿಂದ ಡ್ರಗ್ ಪ್ರಕರಣದಲ್ಲಿ ಭ್ರಷ್ಟಾಚಾರದ ವಿರುದ್ಧದ ದೂರನ್ನು”  ಜಂಟಿ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ಮತ್ತು ಪೊಲೀಸ್ ಕಮಿಷನರ್ ಕಮಲ್ ಪಂತ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ನಿರ್ಲಕ್ಷಿಸಿದ್ದಾರೆ ಎಂದು ಆರ್‌ಟಿಐ ಕಾರ್ಯಕರ್ತ ಎಆರ್ ಅಶೋಕ್ ಕುಮಾರ್ ಅಡಿಗ ಆರೋಪಿಸಿದ್ದಾರೆ.

ದೂರಿನ ಸಂಪೂರ್ಣ ವಿವರವನ್ನು ಪ್ರಧಾನಿ ಕಚೇರಿ, ಕೇಂದ್ರ ಗೃಹ ಸಚಿವರು ಮತ್ತು ಕೇಂದ್ರ ಗೃಹ ಕಾರ್ಯದರ್ಶಿಗಳಿಗೆ ಕಳುಹಿಸಲಾಗಿದೆ ಎಂದು ಅಶೋಕ್ ಹೇಳಿದ್ದಾರೆ.

ಏಪ್ರಿಲ್ 22, 2021ರಂದು ಅವರು ನೀಡಿರುವ ದೂರಿನ ಪ್ರತಿಯನ್ನು ಸಂದೀಪ್ ಪಾಟೀಲ್ ಮತ್ತು ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್, ಸೆಂಟ್ರಲ್ ಕ್ರೈಂ ಬ್ರಾಂಚ್, ಬಿಎಸ್ ಅಂಗಡಿ ಅವರಿಗೆ ಕಳುಹಿಸಲಾಗಿದೆ ಎಂದು ಹೇಳಿಕೊಳ್ಳುವ ವಾಟ್ಸಾಪ್ ಚಾಟ್‌ಗಳ ಚಿತ್ರಗಳನ್ನು ಅಶೋಕ್‌ ಹಂಚಿಕೊಂಡಿದ್ದಾರೆ. ಹಗರಣದ ಬಗ್ಗೆ ಅವರು ಏಪ್ರಿಲ್‌ನಲ್ಲಿಯೇ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಶ್ರೀಕಿಯಿಂದ ನಗದೀಕರಿಸಲಾದ ಸುಮಾರು 12,900 ಬಿಟ್‌ಕಾಯಿನ್‌ಗಳ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದು ಅಶೋಕ್ ಹೇಳಿದ್ದಾರೆ. “ಡಿಸೆಂಬರ್ 2020 ರಲ್ಲಿ ಡ್ರಗ್ ಪ್ರಕರಣದಲ್ಲಿ ಶ್ರೀಕಿಯನ್ನು ಬಂಧಿಸಲಾಗಿತ್ತು. ಜನವರಿ 2021 ರಲ್ಲಿ, ಕೆಲವು ಉನ್ನತ ಮಟ್ಟದ CCB ಅಧಿಕಾರಿಗಳು ಶ್ರೀಕಿಯಿಂದ 9,600 ಬಿಟ್‌ಕಾಯಿನ್‌ಗಳನ್ನು ತೆಗೆದುಕೊಂಡಿದ್ದಾರೆ ಎಂಬ ಮಾಹಿತಿ ನನಗೆ ಬಂದಿತು. ಈ ಮಾಹಿತಿಯನ್ನು ನಾನು ಜನವರಿ 3 ರಂದು ಐಪಿಎಸ್ ಅಧಿಕಾರಿಯೊಂದಿಗೆ ವಾಟ್ಸಾಪ್‌ನಲ್ಲಿ ಹಂಚಿಕೊಂಡಿದ್ದೇನೆ. ಆದರೆ ಏನೂ ಕ್ರಮ ಕೈಗೊಳ್ಳಲಾಗಿಲ್ಲ” ಎಂದು ಅವರು ಹೇಳಿದ್ದಾರೆ.

“ನಾನು ಏಪ್ರಿಲ್ 20 ರಂದು ಕಮಲ್ ಪಂತ್ ಅವರಿಗೆ ವಾಟ್ಸಾಪ್ ಸಂದೇಶವನ್ನು ಕಳುಹಿಸಿದ್ದೇನೆ. ಈ ಹಗರಣವನ್ನು ವಿವರಿಸಲು ನಾನು ಅವರನ್ನು ಭೇಟಿಯಾಗಲು ಬಯಸುತ್ತೇನೆ ಎಂದೂ ಕೂಡ ತಿಳಿಸಿದ್ದೆ. ಆದರೆ, ಅವರಿಂದ ಯಾವುದೇ ಪ್ರತಿಕ್ರಿಯೆ ಬರಲಿಲ್ಲ.” ತನ್ನ ದೂರಿನಲ್ಲಿ, “ಶ್ರೀಕಿ ಬಿಟ್‌ಕಾಯಿನ್‌ನ ಅಧಿಕೃತ ವೆಬ್‌ಸೈಟ್ ಅನ್ನು ಹ್ಯಾಕ್ ಮಾಡಿದ್ದು, ಸಾವಿರಾರು ಬಿಟ್‌ಕಾಯಿನ್‌ಗಳನ್ನು ಅಕ್ರಮವಾಗಿ ತನ್ನ ವ್ಯಾಲೆಟ್‌ಗೆ ವರ್ಗಾಯಿಸಿದ್ದಾನೆ ಎಂದು ಕಂಡುಬಂದಿದೆ ಎಂದು ಅವರು ಹೇಳಿದ್ದಾರೆ.

ಈತನ ವಿರುದ್ಧ ನೆದರ್ ಲ್ಯಾಂಡ್ ನ ಮ್‌ಸ್ಟರ್‌ಡ್ಯಾಮ್‌ನಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಬಗ್ಗೆ ಆಮ್‌ಸ್ಟರ್‌ಡ್ಯಾಮ್‌ನ ರಾಷ್ಟ್ರೀಯ ಪೊಲೀಸ್ ಕಾರ್ಪ್ಸ್ ತನಿಖೆ ನಡೆಸುತ್ತಿದೆ. ಶ್ರೀಕಿ ವರ್ಗಾಯಿಸಿದ ಬಿಟ್‌ಕಾಯಿನ್‌ಗಳನ್ನು ಟ್ರ್ಯಾಕ್ ಮಾಡುತ್ತಿದೆ. ನಾನು ಈ ಎಲ್ಲಾ ದಾಖಲೆಗಳ ಪ್ರತಿಯನ್ನು ಸಂಗ್ರಹಿಸಿದ್ದೇನೆ ಮತ್ತು ಎಫ್‌ಬಿಐ ಅನ್ನು ಸಂಪರ್ಕಿಸಿದ್ದೇನೆ. ಬೆಂಗಳೂರಿನ ಇಂಟರ್‌ಪೋಲ್‌ಗೆ ದಾಖಲೆಗಳನ್ನು ನೀಡುವಂತೆ ಎಫ್‌ಬಿಐ ಮನವಿ ಮಾಡಿದೆ ಎಂದು ಅವರು ಹೇಳಿದ್ದಾರೆ.

ಬೆಂಗಳೂರಿನ ಇಂಟರ್‌ಪೋಲ್‌ನ ಸಂಪರ್ಕ ಅಧಿಕಾರಿ ಉಮೇಶ್ ಕುಮಾರ್, ಎಡಿಜಿಪಿ, ಸಿಐಡಿ ಸೇರಿದಂತೆ ಭಾರತೀಯ ಏಜೆನ್ಸಿಗಳ ಮೇಲೆ ನಂಬಿಕೆಯಿಲ್ಲದ ಕಾರಣ, ನಾನು ಫ್ರಾನ್ಸ್‌ನಲ್ಲಿರುವ ಇಂಟರ್‌ಪೋಲ್‌ಗೆ ಪತ್ರ ಬರೆದಿದ್ದೇನೆ ಎಂದು ಅವರು ಹೇಳಿದ್ದಾರೆ.

ಫೈಲ್ ಸುಮಾರು 1,017 ಸ್ಕ್ರೀನ್‌ಶಾಟ್‌ಗಳನ್ನು ಒಳಗೊಂಡಿದೆ. ಪ್ರತಿ ಬಾರಿ ಬಿಟ್‌ಕಾಯಿನ್ ಅನ್ನು ನಗದೀಕರಿಸಿದಾಗ ಎಫ್‌ಬಿಐ ಸಂದೇಶವನ್ನು ಸ್ವೀಕರಿಸಿದೆ. ಶ್ರೀಕಿ ಪೊಲೀಸರ ವಶದಲ್ಲಿದ್ದಾಗಲೇ 12,900 ಬಿಟ್‌ಕಾಯಿನ್‌ಗಳನ್ನು ನಗದೀಕರಿಸಲಾಗಿದೆ ಎಂದು ತಿಳಿದಿದ್ದರೂ ಹಿರಿಯ ಪೊಲೀಸ್ ಅಧಿಕಾರಿಗಳು ಕ್ರಮ ಜರುಗಿಸಲು ವಿಫಲರಾಗಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದೆಹಲಿ ಗಡಿಗಳಲ್ಲಿ ಹುತಾತ್ಮರಾದ ರೈತರಿಗೆ ತಲಾ 3 ಲಕ್ಷ ಪರಿಹಾರ ಘೋಷಿಸಿದ ತೆಲಂಗಾಣ

ಈ “ಡೀಲ್” ನಲ್ಲಿ 17 ಜನರು ಭಾಗಿಯಾಗಿರುವ ಬಗ್ಗೆ ತಮ್ಮ ಬಳಿ ದಾಖಲೆಗಳಿವೆ ಎಂದು ಅಶೋಕ್‌ ಹೇಳಿದ್ದಾರೆ. “ರಾಜ್ಯದ ಪೊಲೀಸ್‌ ಇಲಾಖೆ ಅಥವಾ ಇತರರು ನನ್ನನ್ನು ಸುಳ್ಳು ಪ್ರಕರಣಗಳಲ್ಲಿ ಸಿಲುಕಿಸಲು ಅಥವಾ ನನಗೆ ಹಾನಿ ಮಾಡಲು ಪ್ರಯತ್ನಿಸಿದರೆ” ಕೇಂದ್ರ ಸರ್ಕಾರದ ಅಧಿಕಾರಿಗಳಿಗೆ ದಾಖಲೆಗಳನ್ನು ಕಳುಹಿಸಲು ತಾವು ಯೋಜಿಸುತ್ತಿರುವುದಾಗಿ ಅಶೋಕ್‌ ಅವರು ಪೊಲೀಸ್ ಅಧಿಕಾರಿಗಳಿಗೆ ಬರೆದಿರುವ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಏಪ್ರಿಲ್ 26 ರಂದು ಸಂದೀಪ್ ಪಾಟೀಲ್ ಅವರ ಕಚೇರಿಗೆ ಲಿಖಿತ ದೂರನ್ನು ನೀಡಿದ್ದೇನೆ ಎಂದು ಅವರು ಹೇಳಿದ್ದಾರೆ. ಏಪ್ರಿಲ್ 27 ರಂದು ತಮ್ಮನ್ನು ಸಿಸಿಬಿ ಕಚೇರಿಗೆ ಕರೆಸಿ ಡಿಸಿಪಿ  ಎಲ್ಲಾ ವಿವರಗಳನ್ನು ತೆಗೆದುಕೊಂಡು, ತಮ್ಮ ಹಿರಿಯ ಅಧಿಕಾರಿ ಸಂದೀಪ್ ಪಾಟೀಲ್ ಅವರಿಗೆ ತಿಳಿಸಲಾಗುವುದು ಎಂದು ಭರವಸೆ ನೀಡಿದರು. ಆದರೆ ಯಾವುದೇ ಪ್ರತಿಕ್ರಿಯೆ ಬರಲಿಲ್ಲ ಎಂದು ಅಶೋಕ್ ಹೇಳಿದ್ದಾರೆ.

ಅಶೋಕ್‌ ಅವರು ತಮ್ಮ ಬಳಿ ಹೆಚ್ಚಿನ ದಾಖಲೆಗಳಿವೆ, ಆದರೆ ಅವುಗಳನ್ನು ಈಗ ಬಿಡುಗಡೆ ಮಾಡುವುದಿಲ್ಲ ಎಂದೂ ಹೇಳಿದ್ದಾರೆ.

ತಮ್ಮ ಜೀವಕ್ಕೆ ಅಪಾಯವಿದೆ ಮತ್ತು ಹಗರಣದಲ್ಲಿ ಭಾಗಿಯಾಗಿರುವ ಪೊಲೀಸ್ ಅಧಿಕಾರಿಗಳು ಮತ್ತು ರಾಜಕಾರಣಿಗಳ ಬಗ್ಗೆ ತಮ್ಮ ಬಳಿ ಮಾಹಿತಿ ಇರುವುದರಿಂದ ಮಾಧ್ಯಮಗಳನ್ನು ಸಂಪರ್ಕಿಸುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

ದೂರನ್ನು ನಿರ್ಲಕ್ಷಿಸಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ರೈತರ ಬಗ್ಗೆ ತುಚ್ಛವಾಗಿ ಮಾತನಾಡಿದ ಬಿಜೆಪಿ ನಾಯಕರಿವರು: ಇವರನ್ನು ಕ್ಷಮಿಸಲಾದಿತೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಆದಷ್ಟು ಬೇಗ ದಾಖಲೆಗಳನ್ನು ಬಿಡುಗಡೆ ಮಾಡಿ ಅಶೋಕ್ ರವರೇ ,ನಿಮ್ಮ ದಾಖಲೆಗಳ ಬಿಡುಗಡೆ ಮಾಧ್ಯಮ ಗಳಿಗಿಂತ ,ನ್ಯಾಯಾಧೀಶರಿಗೆ ನೀಡಿ ,ನಿಮಗೆ ರಾಜಕೀಯ ಒತ್ತಡ, ಅಧಿಕಾರಿಗಳ ಭಯ ಭೀತಿ ಇದ್ದರೆ ರಾಜ್ಯಪಾಲ,ರಾಷ್ಟ್ರ ಪತಿಗಳಿಗೆ ನೀಡಿ

  2. ಹೌದು , ರಾಜುರವರು ಹೇಳಿದ್ದು ಸರಿ, ಅದೇ ರೀತಿ ಮಾಡಿದರೆ ಅನ್ಯಾಯಕ್ಕೆ ಕಾನೂನಾತ್ಮಕವಾಗಿ ತಕ್ಕುದಾದ ಶಿಕ್ಷೆ ದೊರೆಯಬಹುದು 👍👍👍👍

LEAVE A REPLY

Please enter your comment!
Please enter your name here

- Advertisment -

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....