Homeಕರ್ನಾಟಕಬೆಂಗಳೂರು: ಬಾಂಗ್ಲಾ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 12 ಜನರ ಬಂಧನ

ಬೆಂಗಳೂರು: ಬಾಂಗ್ಲಾ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 12 ಜನರ ಬಂಧನ

- Advertisement -
- Advertisement -

ಬಾಂಗ್ಲಾದೇಶದ 23 ವರ್ಷದ ಯುವತಿ ಮೇಲೆ ನಡೆದಿದ್ದ ಬರ್ಬರ ಸಾಮೂಹಿಕ ಅತ್ಯಾಚಾರ ಮತ್ತು ಚಿತ್ರಹಿಂಸೆ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಜನರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣದ ತನಿಖೆ ಮುಕ್ತಾಯಗೊಂಡಿದ್ದು, ರಾಮಮೂರ್ತಿನಗರ ಪೊಲೀಸರು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಬುಧವಾರ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ಆರೋಪಿಗಳಲ್ಲಿ ಇಬ್ಬರು ಯುವತಿಯರಿದ್ದಾರೆ. ಬಂಧಿತರಲ್ಲಿ 11 ಮಂದಿ ಬಾಂಗ್ಲಾದೇಶದ ಪ್ರಜೆಗಳಾಗಿದ್ದಾರೆ.

ಐದು ವಾರಗಳ ಅಲ್ಪಾವಧಿಯಲ್ಲಿ ತನಿಖೆ ಪೂರ್ಣಗೊಂಡಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಗುರುವಾರ ಟ್ವೀಟ್ ಮಾಡಿದ್ದಾರೆ. 12 ಆರೋಪಿಗಳ ವಿರುದ್ಧ 1,019 ‍ಪುಟಗಳನ್ನು ಒಳಗೊಂಡಂತೆ ಒಂದನೇ ಎಸಿಎಂಎಂ ನ್ಯಾಯಾಲಯಕ್ಕೆ ಪ್ರಾಥಮಿಕ ಚಾರ್ಜ್‍ಶೀಟ್ ಸಲ್ಲಿಸಲಾಗಿದೆ’ ಎಂದು ತಿಳಿಸಿದ್ದಾರೆ. ಈ ವರ್ಷದ ಮೇ ತಿಂಗಳಲ್ಲಿ ಈ ಬರ್ಬರ ಘಟನೆ ನಡೆದಿತ್ತು.

ಇದನ್ನೂ ಓದಿ: ಉಪ್ಪಿನಂಗಡಿ: ಪೊಲೀಸರ ಬೇಜವಾಬ್ದಾರಿಯಿಂದ ಯುವಕ ಸಾವು , ನಿಲ್ಲದ ಪೊಲೀಸ್‌ ದೌರ್ಜನ್ಯ- ಆರೋಪ

 

ಐದು ವಾರಗಳಲ್ಲಿ ಪ್ರಕರಣ ಭೇದಿಸಿದ ಕಾರ್ಯಕ್ಕಾಗಿ ಪೊಲೀಸ್ ಆಯುಕ್ತ ಕಮಲ್ ಪಂತ್ ತನಿಖಾ ತಂಡವನ್ನು ಶ್ಲಾಘಿಸಿದ್ದಾರೆ. ತಂಡಕ್ಕೆ 1 ಲಕ್ಷ ರೂಪಾಯಿ ಬಹುಮಾನವನ್ನು ಮಂಜೂರು ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ನಾಲ್ಕು ಜನ ಪುರುಷರು ಮತ್ತು ಇಬ್ಬರು ಯುವತಿಯರು, ಒಬ್ಬ ಯುವತಿಯನ್ನು ಹಿಂಸಿಸುತ್ತಿರುವ, ಸಾಮೂಹಿಕವಾಗಿ ಅತ್ಯಾಚಾರ ನಡೆಸುತ್ತಿರುವ, ಗುಪ್ತಾಂಗಕ್ಕೆ ಗಾಜಿನ ಬಾಟಲಿಯನ್ನು ತುರುಕುತ್ತಿರುವ ಹೇಯ ಅಮಾನವೀಯ ದೃಶ್ಯದ ವಿಡಿಯೊ ವೈರಲ್ ಆಗಿತ್ತು. ಜನರಿಂದ ಜನರಿಗೆ ತಲುಪಿದ್ದ ಈ ವಿಡಿಯೊ ದೇಶಾದ್ಯಂತ ಖಂಡನೆಗೆ ಒಳಗಾಗಿತ್ತು.‌ ಬೆಂಗಳೂರು ಪೊಲೀಸರು ಅಸ್ಸಾಂ ಪೊಲೀಸರ ಸಹಕಾರದೊಂದಿಗೆ ನಾಲ್ವರು ಆರೋಪಿಗಳನ್ನು ಮೇ 27, 2021 ಗುರುವಾರ ಅವಲಹಳ್ಳಿಯಲ್ಲಿಯಲ್ಲಿ ಬಂಧಿಸಿದ್ದರು.

ಅತ್ಯಾಚಾರ ಸಂತ್ರಸ್ತೆ, ಮೂರು ವರ್ಷಗಳ ಹಿಂದೆ ಬಾಂಗ್ಲಾದೇಶದ ಮಾನವ ಕಳ್ಳಸಾಗಣೆದಾರರ ಜಾಲದ ಮೂಲಕ ಅಸ್ಸಾಂ, ಪಶ್ಚಿಮ ಬಂಗಾಳ, ತೆಲಂಗಾಣ ಮತ್ತು ಕರ್ನಾಟಕಕ್ಕೆ ಬಂದಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ. ನಂತರ ಆಕೆಯನ್ನು ಈ ಕಳ್ಳಸಾಗಣೆದಾರರ ತಂಡ ಬಲವಂತವಾಗಿ ವೇಶ್ಯಾವಾಟಿಕೆಗೆ ಒಳಪಡಿಸಿತ್ತು. ಆರ್ಥಿಕ ವಿವಾದದ ನಂತರ ಆರೋಪಿಗಳು ಆಕೆಯನ್ನು ಹಿಂಸಿಸಿ, ಸಾಮೂಹಿಕ ಅತ್ಯಾಚಾರ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ ಎರಡು ತಿಂಗಳುಗಳಲ್ಲಿ ತನಿಖೆ ಮತ್ತು ಬಂಧನದ ಸಮಯದಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಮೂವರು ಆರೋಪಿಗಳಿಗೆ ಪೊಲೀಸರು ಗುಂಡಿಕ್ಕಿ ಗಾಯಗೊಳಿಸಿದ್ದಾರೆ. ಪ್ರಕರಣದಲ್ಲಿ 10 ಮಂದಿಯ ವಿರುದ್ದ ಅತ್ಯಾಚಾರ ಆರೋಪ ಹಾಗೂ ಇಬ್ಬರು ಯುವತಿಯರ ವಿರುದ್ಧ ಅಕ್ರಮ ವಲಸೆ ಆರೋಪವಿದೆ. ಕೃತ್ಯಕ್ಕೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಸಾಕ್ಷಿಗಳನ್ನು ಚಾರ್ಜ್‍ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.


ಇದನ್ನೂ ಓದಿ: ಬೆಂಗಳೂರಿನಲ್ಲೊಂದು ಬರ್ಬರ ಸಾಮೂಹಿಕ ಅತ್ಯಾಚಾರ: ಆರೋಪಿಗಳ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...