Homeಮುಖಪುಟಖಾಲಿ ಮನೆಯಲ್ಲಿ ನಮಾಝ್ : 12 ಜನರನ್ನು ಬಂಧಿಸಿದ ಪೊಲೀಸರು

ಖಾಲಿ ಮನೆಯಲ್ಲಿ ನಮಾಝ್ : 12 ಜನರನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಹಳ್ಳಿಯೊಂದರ ಖಾಲಿ ಮನೆಯಲ್ಲಿ ನಮಾಝ್ ಮಾಡಿದ 12 ಜನರನ್ನು ಪೊಲೀಸರು ಬಂಧಿಸಿದ್ದಾರೆ ವರದಿಯಾಗಿದೆ.

ಅನುಮತಿ ಪಡೆಯದೆ ನಮಾಝ್ ಮಾಡಿದ್ದಾರೆ ಎಂಬ ಕಾರಣಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು theprint.in ವರದಿ ಮಾಡಿದೆ. ಮನೆಯೊಳಗೆ ಜನರು ನಮಾಝ್ ಮಾಡಿದ್ದು ಎನ್ನಲಾದ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕಳೆದ ಹಲವು ವಾರಗಳಿಂದ ಖಾಲಿ ಮನೆಯನ್ನು ತಾತ್ಕಾಲಿಕ ಮದ್ರಸವಾಗಿ ಬಳಸಲಾಗುತ್ತಿದೆ ಎಂಬ ಮಾಹಿತಿ ಮೊಹಮ್ಮದ್‌ಗಂಜ್ ಗ್ರಾಮದ ಜನರಿಂದ ಬಂದ ನಂತರ ಪೊಲೀಸರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ ಎಂದು ಎಸ್‌ಪಿ (ದಕ್ಷಿಣ) ಅಂಶಿಕಾ ವರ್ಮಾ ತಿಳಿಸಿದ್ದಾಗಿ theprint.in ಉಲ್ಲೇಖಿಸಿದೆ.

“ಅನುಮತಿ ಇಲ್ಲದೆ ಯಾವುದೇ ಹೊಸ ಧಾರ್ಮಿಕ ಚಟುವಟಿಕೆ ಅಥವಾ ಸಭೆ ನಡೆಸುವುದು ಕಾನೂನಿನ ಉಲ್ಲಂಘನೆಯಾಗಿದೆ. ಅಂತಹ ಚಟುವಟಿಕೆಗಳು ಪುನರಾವರ್ತನೆಯಾದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಎಸ್‌ಪಿ ಹೇಳಿದ್ದಾರೆ. ಜನರು ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಂತೆ ಮನವಿ ಮಾಡಿದ್ದಾರೆ ಎಂದು ವರದಿ ತಿಳಿಸಿದೆ.

ಬಂಧಿತ 12 ಜನರ ಮೇಲೆ ಶಾಂತಿ ಭಂಗಕ್ಕೆ ಸಂಬಂಧಿಸಿದ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿ, ನಂತರ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗಿತ್ತು. ಮ್ಯಾಜಿಸ್ಟ್ರೇಟ್ ಜಾಮೀನು ಮಂಜೂರು ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತಲೆಮರೆಸಿಕೊಂಡಿರುವ ಇತರ ಮೂವರು ವ್ಯಕ್ತಿಗಳನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ ಎಂದಿದ್ದಾರೆ.

ಪೊಲೀಸರ ಪ್ರಕಾರ, ಪ್ರಾಥಮಿಕ ತನಿಖೆಯಲ್ಲಿ ಖಾಲಿ ಇರುವ ಮನೆ ಹನೀಫ್ ಎಂಬುವವರಿಗೆ ಸೇರಿದ್ದು, ಶುಕ್ರವಾರದ ನಮಾಜ್‌ಗೆ ತಾತ್ಕಾಲಿಕವಾಗಿ ಬಳಸಲಾಗುತ್ತಿತ್ತು ಎಂದು ತಿಳಿದು ಬಂದಿದೆ. ಅಧಿಕಾರಿಗಳು ಕೇಳಿದಾಗ ಯಾವುದೇ ಲಿಖಿತ ಅನುಮತಿ ಅಥವಾ ಮಾನ್ಯ ದಾಖಲೆಗಳನ್ನು ತೋರಿಸಲು ಸಾಧ್ಯವಾಗಿಲ್ಲ.

ಮನೆಯಲ್ಲಿ ಅನುಮತಿಯಿಲ್ಲದೆ ನಿಯಮಿತವಾಗಿ ಪ್ರಾರ್ಥನೆ ನಡೆಸುವುದಕ್ಕೆ ಕೆಲವು ಗ್ರಾಮಸ್ಥರು ಆಕ್ಷೇಪ ವ್ಯಕ್ತಪಡಿಸಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು, ನಂತರ ಪೊಲೀಸರು ಸ್ಥಳಕ್ಕೆ ತೆರಳಿ ಸಭೆಯನ್ನು ನಿಲ್ಲಿಸಿದ್ದಾರೆ ಎಂದು ಪೊಲೀಸ್ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ತನಿಖೆಯ ಭಾಗವಾಗಿ ಆನ್‌ಲೈನ್ ವಿಡಿಯೋವನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ | ಜನಾಂಗೀಯ ಹಿಂಸಾಚಾರದ ವೇಳೆ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಕುಕಿ ಯುವತಿ ಸಾವು

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದ ವೇಳೆ, ಅಂದರೆ ಮೇ 2023ರಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ 20 ವರ್ಷದ ಕುಕಿ ಸಮುದಾಯದ ಯುವತಿ, ದೀರ್ಘಕಾಲದ ಅನಾರೋಗ್ಯದ ನಂತರ ಜನವರಿ 10ರಂದು ನಿಧನರಾದರು ಎಂದು ನ್ಯೂಸ್‌ಲಾಂಡ್ರಿ ಶನಿವಾರ (ಜ.17)...

‘ನಮ್ಮ ದೇಶ ಮಾರಾಟಕ್ಕಿಲ್ಲ’: ಟ್ರಂಪ್‌ ಸಂಚಿನ ವಿರುದ್ಧ ಬೀದಿಗಿಳಿದ ಗ್ರೀನ್‌ಲ್ಯಾಂಡ್‌ ಜನತೆ, ಬೃಹತ್ ಪ್ರತಿಭಟನೆ

ಖನಿಜ ಸಮೃದ್ದ ಗ್ರೀನ್‌ಲ್ಯಾಂಡ್‌ ಅನ್ನು ವಶಪಡಿಸಿಕೊಳ್ಳುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಂಚಿನ ವಿರುದ್ದ ಅಲ್ಲಿನ ಜನರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಶನಿವಾರ (ಜ.17) ಗ್ರೀನ್‌ಲ್ಯಾಂಡ್‌ ರಾಜಧಾನಿ ನೂಕ್‌ನಲ್ಲಿ ಭಿತ್ತಿಪತ್ರಗಳನ್ನು ಹಿಡಿದು ಬೀದಿಗಳಿದ ಸಾವಿರಾರು...

ಪಾದ್ರಿ ಮೇಲೆ ಹಲ್ಲೆ ನಡೆಸಿದ ಹಿಂದುತ್ವ ಗುಂಪು : ಸಗಣಿ ತಿನ್ನಿಸಿ, ಜೈ ಶ್ರೀ ರಾಮ್ ಹೇಳುವಂತೆ ಒತ್ತಾಯ; ವರದಿ

ಒಡಿಶಾದ ಧೆಂಕನಲ್‌ನಲ್ಲಿ ಪಾದ್ರಿಯೊಬ್ಬರ ಮೇಲೆ ಬಜರಂಗದಳ ಸದಸ್ಯರು ಹಲ್ಲೆ ನಡೆಸಿದ್ದು, ಸಗಣಿ ತಿನ್ನಿಸಿ, ಜೈ ಶ್ರೀರಾಮ್ ಕೂಗುವಂತೆ ಒತ್ತಾಯಿಸಿದ್ದಾರೆ ಎಂದು ಮಕ್ತೂಬ್ ಮೀಡಿಯಾ ವರದಿ ಮಾಡಿದೆ. ಜನವರಿ 4ರಂದು ಭಾನುವಾರ ಈ ಘಟನೆ ನಡೆದಿದ್ದು,...

ವಿಮಾನ ಸೇವೆಯಲ್ಲಿ ವ್ಯತ್ಯಯ : ಇಂಡಿಗೋ ಏರ್‌ಲೈನ್ಸ್‌ಗೆ 22 ಕೋಟಿ ರೂ. ದಂಡ

ಕಳೆದ ತಿಂಗಳು ವಿಮಾನಯಾನ ಸೇವೆಯಲ್ಲಿ ಉಂಟಾದ ಭಾರೀ ವ್ಯತ್ಯಯಕ್ಕೆ ಸಂಬಂಧಿಸಿದಂತೆ ನಾಗರಿಕ ವಿಮಾನಯಾನಗಳ ಮಹಾನಿರ್ದೇಶನಾಲಯ (ಡಿಜಿಸಿಎ) ಇಂಡಿಗೋ ವಿಮಾನಯಾನ ಸಂಸ್ಥೆಗೆ 22.2 ಕೋಟಿ ರೂಪಾಯಿ ದಂಡ ವಿಧಿಸಿದೆ. ಡಿಸೆಂಬರ್ 3 ರಿಂದ 5 ರವರೆಗಿನ...

ತೆಲಂಗಾಣದಲ್ಲಿ ರೋಹಿತ್ ವೇಮುಲಾ ಕಾಯ್ದೆ ಜಾರಿಗೊಳಿಸುತ್ತೇವೆ: ಭಟ್ಟಿ ವಿಕ್ರಮಾರ್ಕ ಮಲ್ಲು

ರಾಜ್ಯದಲ್ಲಿ ರೋಹಿತ್ ವೇಮುಲಾ ಕಾಯ್ದೆಯನ್ನು ಆದಷ್ಟು ಬೇಗ ಜಾರಿಗೆ ತರಲಾಗುವುದು ಎಂದು ತೆಲಂಗಾಣ ಉಪಮುಖ್ಯಮಂತ್ರಿ ಭಟ್ಟಿ ವಿಕ್ರಮಾರ್ಕ ಮಲ್ಲು ಶನಿವಾರ ಹೇಳಿದ್ದಾರೆ. ಪ್ರಜಾ ಭವನದಲ್ಲಿ ಜಸ್ಟೀಸ್ ಫಾರ್ ರೋಹಿತ್ ವೇಮುಲಾ ಅಭಿಯಾನ ಸಮಿತಿಯ...

88 ಪ್ರಕರಣಗಳಲ್ಲಿ ಪೊಲೀಸರೇ ಶಾಮೀಲು ; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ : ಸಿಎಂ ಸಿದ್ದರಾಮಯ್ಯ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶನಿವಾರ (ಜ.17) ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನ ಉದ್ಘಾಟಿಸಿದ ನಂತರ ಮಾಧ್ಯಮ ಗೋಷ್ಠಿಯಲ್ಲಿ ಅವರು ಮಾತನಾಡಿದರು. ಪೋಲೀಸ್ ಇಲಾಖೆ ಕೆಲವು...

ಇಂದೋರ್ ಕಲುಷಿತ ನೀರು ದುರಂತ : ಸಂತ್ರಸ್ತ ಕುಟುಂಬಗಳನ್ನು ಭೇಟಿಯಾದ ರಾಹುಲ್ ಗಾಂಧಿ

ಶನಿವಾರ (ಜ.17) ಮಧ್ಯಪ್ರದೇಶದ ಇಂದೋರ್‌ಗೆ ಭೇಟಿ ನೀಡಿದ ಲೋಕಸಭೆಯ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ, ಇತ್ತೀಚೆಗೆ ಸಂಭವಿಸಿದ ಕಲುಷಿತ ನೀರು ದುರಂತದ ಸಂತ್ರಸ್ತರನ್ನು ಭೇಟಿಯಾದರು. ಕಲುಷಿತ ನೀರು ಕುಡಿದು ವಾಂತಿ ಮತ್ತು...

ಮಹಾರಾಷ್ಟ್ರದಲ್ಲಿ ಬಿಜೆಪಿ-ಎನ್‌ಡಿಎ ಜೊತೆ ಯಾವುದೇ ಮೈತ್ರಿ ಇಲ್ಲ: ಓವೈಸಿ

ಮಹಾರಾಷ್ಟ್ರದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಅಥವಾ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ಜೊತೆ ಯಾವುದೇ ಮೈತ್ರಿ ಇರುವುದಿಲ್ಲ ಎಂದು ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಭಾರತದ ಅತ್ಯಂತ ಶ್ರೀಮಂತ ರಾಜ್ಯವಾದ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ...

ರೋಹಿತ್ ವೇಮುಲ ಕಾಯ್ದೆ ಘೋಷಣೆಯಲ್ಲ, ಅಗತ್ಯ : ರಾಹುಲ್ ಗಾಂಧಿ

ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್‌ಡಿ ವಿದ್ಯಾರ್ಥಿ ರೋಹಿತ್ ವೇಮುಲ ಜಾತಿ ತಾರತಮ್ಯಕ್ಕೆ ಬಲಿಯಾಗಿ ಇಂದಿಗೆ (17 ಜನವರಿ 2026) 10 ವರ್ಷಗಳಾಗಿದ್ದು, ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ರೋಹಿತ್ ಅವರನ್ನು ಸ್ಮರಿಸಿ ಸಾಮಾಜಿಕ...

ದೇವರು-ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ; ಬಿಜೆಪಿ ಕೌನ್ಸಿಲರ್‌ಗಳಿಗೆ ಕೇರಳ ಹೈಕೋರ್ಟ್ ನೋಟಿಸ್

ತಿರುವನಂತಪುರಂ ನಗರಸಭೆಯ ಬಿಜೆಪಿ ಕೌನ್ಸಿಲರ್‌ಗಳು ವಿವಿಧ ದೇವರು, ಹುತಾತ್ಮರು ಮತ್ತು ರಾಜಕೀಯ ಚಳುವಳಿಗಳ ಹೆಸರಿನಲ್ಲಿ ಮಾಡಿದ ಪ್ರಮಾಣವಚನಗಳ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಯ ಕುರಿತು ಕೇರಳ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ...