Homeಮುಖಪುಟರಷ್ಯಾ ಸೇನೆಯಲ್ಲಿ ದುಡಿಯುತ್ತಿದ್ದ 12 ಭಾರತೀಯರು ಸಾವು, 16 ಮಂದಿ ನಾಪತ್ತೆ : ವಿದೇಶಾಂಗ ಸಚಿವಾಲಯ

ರಷ್ಯಾ ಸೇನೆಯಲ್ಲಿ ದುಡಿಯುತ್ತಿದ್ದ 12 ಭಾರತೀಯರು ಸಾವು, 16 ಮಂದಿ ನಾಪತ್ತೆ : ವಿದೇಶಾಂಗ ಸಚಿವಾಲಯ

- Advertisement -
- Advertisement -

ರಷ್ಯಾದ ಅಧಿಕಾರಿಗಳು ತಿಳಿಸಿರುವಂತೆ, ರಷ್ಯಾ ಸೇನೆಯಲ್ಲಿ ದುಡಿಯುತ್ತಿದ್ದ 16 ಭಾರತೀಯ ಪ್ರಜೆಗಳು ಕಾಣೆಯಾಗಿದ್ದಾರೆ. ರಷ್ಯಾದ ಸಶಸ್ತ್ರ ಪಡೆಗಳ ಭಾಗವಾಗಿದ್ದ 12 ಭಾರತೀಯರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಭಾರತೀಯ ವಿದೇಶಾಂಗ ಸಚಿವಾಲಯ (ಎಂಇಎ) ಶುಕ್ರವಾರ (ಜ.17) ತಿಳಿಸಿದೆ.

ಮಾಧ್ಯಮಗಳಿಗೆ ಮಾಹಿತಿ ನೀಡಿದ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್, “ರಷ್ಯಾ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ 126 ಭಾರತೀಯ ಪ್ರಜೆಗಳ ವಿವರಗಳು ನಮ್ಮಲ್ಲಿ ದಾಖಲಾಗಿವೆ. ಈ ಪೈಕಿ 96 ಜನರನ್ನು ಬಿಡುಗಡೆ ಮಾಡಿ ಭಾರತಕ್ಕೆ ಕರೆತರಲಾಗಿದೆ. ಉಳಿದ 30 ಜನರಲ್ಲಿ 18 ಮಂದಿ ರಷ್ಯಾದ ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. 12 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಿದ್ದಾರೆ.

ಭಾರತದ ಇನ್ನೂ 16 ಜನರು ಎಲ್ಲಿದ್ದಾರೆ ಎಂಬುದು ಗೊತ್ತಾಗಿಲ್ಲ. ರಷ್ಯಾದ ಅಧಿಕಾರಿಗಳು ಅವರು ‘ಕಾಣೆಯಾಗಿರುವುದಾಗಿ’ ಪರಿಗಣಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

“ನಾವು ರಷ್ಯಾ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದೇವೆ. ಉಳಿದವರನ್ನು ಶೀಘ್ರ ಬಿಡುಗಡೆ ಮಾಡಲು ಮತ್ತು ತಾಯ್ನಾಡಿಗೆ ಕರೆತರಲು ಸಕ್ರಿಯವಾಗಿ ಪ್ರಯತ್ನಿಸುತ್ತಿದ್ದೇವೆ” ಎಂದು ಜೈಸ್ವಾಲ್ ಹೇಳಿದ್ದಾರೆ.

ಬಿನಿಲ್ ಬಾಬು ಅವರ ಸಾವು ಅತ್ಯಂತ ದುರದೃಷ್ಟಕರ. ಅವರ ಕುಟುಂಬಕ್ಕೆ ನಮ್ಮ ಸಂತಾಪ ಸೂಚಿಸಿದ್ದೇವೆ. ಅವರ ಮೃತದೇಹವನ್ನು ಆದಷ್ಟು ಬೇಗ ಭಾರತಕ್ಕೆ ತರುವ ಸಲುವಾಗಿ ನಮ್ಮ ರಾಯಭಾರ ಕಚೇರಿ ರಷ್ಯಾದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದೆ. ಗಾಯಗೊಂಡ ಮತ್ತೊಬ್ಬ ವ್ಯಕ್ತಿ ಮಾಸ್ಕೋದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಮುಗಿದ ಕೂಡಲೇ ಅವರು ಭಾರತಕ್ಕೆ ಮರಳುತ್ತಾರೆ ಜೈಸ್ವಾಲ್ ತಿಳಿಸಿದ್ದಾರೆ.

ರಷ್ಯಾ ಸೇನೆಯಲ್ಲಿ ದುಡಿಯುತ್ತಿದ್ದ ಕೇರಳದ ತ್ರಿಶ್ಶೂರ್ ಮೂಲದ ಬಿನಿಲ್ ಬಾಬು (32) ಮತ್ತು ಅವರ ಸಂಬಂಧಿ ಡ್ರೋನ್ ದಾಳಿಯಿಂದ ಗಾಯಗೊಂಡಿದ್ದರು. ಬಳಿಕ ಬಿನಿಲ್ ಸಾವನ್ನಪ್ಪಿದ್ದಾರೆ. ಅವರ ಸಂಬಂಧಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಗಳು ಹೇಳಿವೆ.

ಜುಲೈ 2024ರಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗಿನ ಮಾತುಕತೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಸೇನೆಯಲ್ಲಿ ಸಿಲುಕಿರುವ ಭಾರತೀಯರ ಬಿಡುಗಡೆಯ ವಿಷಯವನ್ನು ಉಲ್ಲೇಖಿಸಿದ್ದರು. ಅಕ್ಟೋಬರ್‌ನಲ್ಲಿ ಕಝಾನ್‌ನಲ್ಲಿ ನಡೆದ 16ನೇ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲೂ ಉಭಯ ನಾಯಕರು ಭೇಟಿಯಾದಾಗ ಮೋದಿ ಈ ವಿಷಯವನ್ನು ಪುನರುಚ್ಚರಿಸಿದ್ದರು ಎಂದು ವರದಿಗಳು ಹೇಳಿವೆ.

ಭಾರತದ ವಿವಿಧ ರಾಜ್ಯಗಳ ಯುವಕರನ್ನು ಕೆಲಸದ ಆಮಿಷವೊಡ್ಡಿ ರಷ್ಯಾಗೆ ಕರೆದೊಯ್ದು, ಅಲ್ಲಿ ಉಕ್ರೇನ್‌ ಜೊತೆಗಿನ ಯುದ್ದ ಭೂಮಿಯಲ್ಲಿ ಬಲವಂತವಾಗಿ ಶಸಸ್ತ್ರ ಪಡೆಯ ಭಾಗವಾಗಿ ನೇಮಿಸಲಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ.

ಪಾಕಿಸ್ತಾನ | ಮಾಜಿ ಪ್ರಧಾನಿ ಇಮ್ರಾನ್‌ ಖಾನ್‌ಗೆ 14 ವರ್ಷ, ಪತ್ನಿಗೆ 7 ವರ್ಷ ಜೈಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...