Homeಮುಖಪುಟಛತ್ತೀಸ್‌ಗಢ: ಭದ್ರತಾ ಪಡೆಗಳಿಂದ ಜಂಟಿ ಕಾರ್ಯಾಚರಣೆ; 12 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢ: ಭದ್ರತಾ ಪಡೆಗಳಿಂದ ಜಂಟಿ ಕಾರ್ಯಾಚರಣೆ; 12 ಮಾವೋವಾದಿಗಳ ಹತ್ಯೆ

- Advertisement -
- Advertisement -

ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ನಡೆದ ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ 12 ಮಾವೋವಾದಿಗಳನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದೆ.

ಗಂಗಲೂರ್ ಪೊಲೀಸ್ ಠಾಣಾ ವ್ಯಾಪ್ತಿಯ ಪಿಡಿಯಾ ಗ್ರಾಮದ ಸಮೀಪದಲ್ಲಿರುವ ಅರಣ್ಯ ಪ್ರದೇಶದಲ್ಲಿ ಭಾರೀ ಸಂಖ್ಯೆಯಲ್ಲಿ ಭದ್ರತಾ ಸಿಬ್ಬಂದಿಗಳು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸಿದ್ದು, ಗುಂಡಿನ ಕಾಳಗ ನಡೆದ ಸ್ಥಳದಲ್ಲಿ ಈವರೆಗೆ 12 ಮಾವೋವಾದಿಗಳ ಮೃತದೇಹಗಳು ಪತ್ತೆಯಾಗಿವೆ ಎಂದು ತಿಳಿದು ಬಂದಿದೆ.

ಇದಲ್ಲದೆ ಐಇಡಿ ಸ್ಫೋಟದಲ್ಲಿ ಜಿಲ್ಲಾ ಮೀಸಲು ಗಾರ್ಡ್ (ಡಿಆರ್‌ಜಿ) ಯೋಧ ಗಾಯಗೊಂಡಿದ್ದಾರೆ. ಛತ್ತೀಸ್‌ಗಢದಲ್ಲಿ ಈ ವರ್ಷ ಕೊಲ್ಲಲ್ಪಟ್ಟ ಮಾವೋವಾದಿಗಳ ಸಂಖ್ಯೆ ಈಗ 103ಕ್ಕೆ ಏರಿಕೆಯಾಗಿದೆ. ಇದು 2019ರಿಂದ ಅತ್ಯಧಿಕವಾಗಿದೆ.

ಮಾವೋವಾದಿಗಳ ಭದ್ರಕೋಟೆ ಎಂದು ಪರಿಗಣಿಸಲಾಗಿರುವ ಪಿಡಿಯಾ ಪೊಲೀಸ್ ಠಾಣಾ ವ್ಯಾಪ್ತಿಯ ಗಂಗಲೂರು ಪ್ರದೇಶದಲ್ಲಿ ಘಟನೆ ನಡೆದಿದೆ. ಇದು ಒಂದೇ ವಾರಗಳಲ್ಲಿ ಗಂಗಲೂರಿನಲ್ಲಿ ನಡೆದ ಎರಡನೇ ಪ್ರಮುಖ ಎನ್‌ಕೌಂಟರ್ ಆಗಿತ್ತು. ಏಪ್ರಿಲ್ 2ರಂದು ಈ ಪ್ರದೇಶದಲ್ಲಿ 13 ಮಾವೋವಾದಿಗಳನ್ನು ಹತ್ಯೆ ಮಾಡಲಾಗಿತ್ತು.

ಪಿಡಿಯಾ ಅರಣ್ಯದಲ್ಲಿ ಸುಮಾರು 150 ಮಾವೋವಾದಿಗಳು ಇರುವ ಬಗ್ಗೆ ಮಾಹಿತಿ ಸಿಕ್ಕಿದೆ. ಮಾವೋವಾದಿಗಳು ಪಶ್ಚಿಮ ಬಸ್ತಾರ್ ವಿಭಾಗ, ದರ್ಭಾ ವಿಭಾಗ, ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ (ಪಿಜಿಎಲ್‌ಎ) ಕಂಪನಿ 2ರ ಕಮಾಂಡರ್ ವೆಲ್ಲಾಗೆ ಸೇರಿದವರಾಗಿದ್ದರು ಎಂದು ಬಿಜಾಪುರ ಎಸ್ಪಿ ಜಿತೇಂದ್ರ ಕುಮಾರ್ ಯಾದವ್ ತಿಳಿಸಿದ್ದಾರೆ.

ಮಾವೋವಾದಿಗಳು ಇರುವ ಬಗ್ಗೆ ಮಾಹಿತಿ ಪಡೆದುಕೊಂಡು ಬಿಜಾಪುರ, ದಾಂತೇವಾಡ ಮತ್ತು ಸುಕ್ಮಾದ ಡಿಆರ್‌ಜಿ ಸಿಬ್ಬಂದಿ, ಬಸ್ತಾರ್ ಫೈಟರ್ಸ್, ವಿಶೇಷ ಕಾರ್ಯಪಡೆ, ಕೋಬ್ರಾ ಮತ್ತು ಸಿಆರ್‌ಪಿಎಫ್ ಬೆಟಾಲಿಯನ್‌ಗಳನ್ನು ಒಳಗೊಂಡ ಭದ್ರತಾ ಪಡೆಗಳು ರಾತ್ರಿ ಜಂಟಿ ಕಾರ್ಯಾಚರಣೆಯನ್ನು ಕೈಗೊಂಡಿವೆ. 800ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಮೂರು ಜಿಲ್ಲೆಗಳ ಪಡೆಗಳ ಜಂಟಿ ಪ್ರಯತ್ನ ಇದಾಗಿದೆ. ಕಾರ್ಯಾಚರಣೆಯನ್ನು ಹಲವಾರು ದಿಕ್ಕುಗಳಿಂದ ಪ್ರಾರಂಭಿಸಲಾಯಿತು. ಆರಕ್ಕೂ ಹೆಚ್ಚು ಸ್ಥಳಗಳಲ್ಲಿ ಸುಮಾರು 12 ಗಂಟೆಗಳ ಕಾಲ ಗುಂಡಿನ ಚಕಮಕಿ ನಡೆದಿದೆ ಎಂದು ದಂತೇವಾಡ ಎಸ್ಪಿ ಗೌರವ್ ರೈ ಹೇಳಿದ್ದಾರೆ.

ಈ ಎನ್‌ಕೌಂಟರ್ ಬಿಜಾಪುರ ಜಿಲ್ಲಾ ಕೇಂದ್ರದಿಂದ 40 ಕಿಮೀ ದೂರದಲ್ಲಿ ಮತ್ತು ಏಪ್ರಿಲ್ 2ರಂದು ನಡೆದ ಎನ್‌ಕೌಂಟರ್ ಸೈಟ್‌ನಿಂದ ದಕ್ಷಿಣಕ್ಕೆ 8-10 ಕಿಮೀ ದೂರದಲ್ಲಿ ನಡೆದಿದೆ.

ಇದನ್ನು ಓದಿ: ಹಣದುಬ್ಬರ, ಉದ್ಯೋಗಗಳ ಬಗ್ಗೆ ಮಾತನಾಡುವ ಬದಲು ಬಿಜೆಪಿ ದೇವರ ಹೆಸರಿನಲ್ಲಿ ಮತ ಕೇಳುತ್ತಿದೆ: ಪ್ರಿಯಾಂಕಾ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...