Homeಮುಖಪುಟಜಮ್ಮು ಕಾಶ್ಮೀರದ ವೈಷ್ಣೋ ದೇವಿ ದೇವಾಲಯದಲ್ಲಿ ಕಾಳ್ತುಳಿತ: 12 ಯಾತ್ರಾರ್ಥಿಗಳು ಮರಣ

ಜಮ್ಮು ಕಾಶ್ಮೀರದ ವೈಷ್ಣೋ ದೇವಿ ದೇವಾಲಯದಲ್ಲಿ ಕಾಳ್ತುಳಿತ: 12 ಯಾತ್ರಾರ್ಥಿಗಳು ಮರಣ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದ ಮಾತಾ ವೈಷ್ಣೋ ದೇವಿ ದೇಗುಲದಲ್ಲಿ ಉಂಟಾದ ಕಾಲ್ತುಳಿತದಿಂದಾಗಿ 12 ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. ಭಕ್ತಾದಿಗಳ ನೂಕುನುಗ್ಗಲಿನಿಂದಾಗಿ ಕಾಲ್ತುಳಿತ ಉಂಟಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ದುರಂತ ಪರಿಸ್ಥಿತಿಯನ್ನು “ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುತ್ತಿದ್ದಾರೆ ಮತ್ತು ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ” ಎಂದು ಸಚಿವರೊಬ್ಬರು ತಿಳಿಸಿದ್ದಾರೆ.

ಕಾಲ್ತುಳಿತದಲ್ಲಿ 12 ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, ಕನಿಷ್ಠ 14 ಮಂದಿ ಗಾಯಗೊಂಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ಖಚಿತಪಡಿಸಿದ್ದಾರೆ. ಎಲ್ಲಾ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ತ್ರಿಕೂಟ ಬೆಟ್ಟದ ಗರ್ಭಗುಡಿಯ ಹೊರಭಾಗದಲ್ಲಿ ಈ ಘಟನೆ ನಡೆದಿದೆ. ಹೊಸ ವರ್ಷದ ಹಿನ್ನೆಲೆಯಲ್ಲಿ ಪೂಜೆ ಸಲ್ಲಿಸಲು ಅಪಾರ ಸಂಖ್ಯೆಯ ಭಕ್ತರು ವೈಷ್ಣೋದೇವಿ ಭವನವನ್ನು ಪ್ರವೇಶಿಸಿದಾಗ ನೂಕುನುಗ್ಗಲು ಉಂಟಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಕ್ಷಣ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಮಾತಾ ವೈಷ್ಣೋ ದೇವಿ ಭವನದಲ್ಲಿ ನೂಕುನುಗ್ಗಲು ಉಂಟಾದ ಪರಿಣಾಮ ಪ್ರಾಣಹಾನಿಯಾಗಿರುವುದು ಅತೀವ ದುಃಖ ತಂದಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಅವರು ದುಃಖತಪ್ತ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

ಕಾಳ್ತುಳಿತದಿಂದ ಸಾವಿಗೀಡಾದವರ ಕುಟುಂಬದವರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ.ಗಳನ್ನು, ಗಾಯಾಳುಗಳಿಗೆ 50,000 ರೂ.ಗಳನ್ನು ನೀಡಲಾಗುವುದು ಎಂದು ಪ್ರಧಾನಿ ಕಚೇರಿ ತಿಳಿಸಿದೆ.

“ಮಾತಾ ವೈಷ್ಣೋ ದೇವಿ ದೇಗುಲದಲ್ಲಿ ಕಾಲ್ತುಳಿತದಿಂದಾಗಿ ಪ್ರಾಣಹಾನಿಯಾಗಿರುವುದು ತೀವ್ರ ನೋವಾಗಿದೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪ ಮತ್ತು ಗಾಯಾಳುಗಳೊಂದಿಗೆ ಪ್ರಾರ್ಥನೆಗಳು” ಎಂದು ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ತಮ್ಮ ಅಧಿಕೃತ ಖಾತೆಯಿಂದ ಟ್ವೀಟ್ ಮಾಡಿದ್ದಾರೆ.

“ನಾನು ಪ್ರಧಾನಿಯವರೊಂದಿಗೆ ಮಾತನಾಡಿದ್ದೇನೆ. ಘಟನೆಯ ಬಗ್ಗೆ ಅವರಿಗೆ ವಿವರಿಸಿದ್ದೇನೆ ಎಂದು ಅವರು ಮಾಹಿತಿ ನೀಡಿದ್ದಾರೆ. ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ₹10 ಲಕ್ಷ ಹಾಗೂ ಗಾಯಗೊಂಡವರಿಗೆ ₹2 ಲಕ್ಷ ಪರಿಹಾರ ನೀಡಲಾಗುವುದು” ಎಂದು ಘೋಷಿಸಿರುವ ಅವರು, ಚಿಕಿತ್ಸೆಯ ವೆಚ್ಚವನ್ನು ದೇಗುಲ ಮಂಡಳಿಯೇ ಭರಿಸಲಿದೆ ಎಂದು ಮಾಹಿತಿ ನೀಡಿದ್ದಾರೆ.


ಇದನ್ನೂ ಓದಿರಿ: ಉಡುಪಿ ಸರ್ಕಾರಿ ಪಿಯು ಬಾಲಕಿಯರ ಕಾಲೇಜಿನಲ್ಲಿ ಸ್ಕಾರ್ಫ್ ಹಾಕದಂತೆ ನಿರ್ಬಂಧ; ವಿದ್ಯಾರ್ಥಿನಿಯರ ಪ್ರತಿಭಟನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಮಾಸ್ ನಾಯಕ ಸಿನ್ವಾರ್, ಇಸ್ರೇಲ್ ಪ್ರಧಾನಿ ನೆತನ್ಯಾಹು ವಿರುದ್ದ ಬಂಧನ ವಾರೆಂಟ್‌ಗೆ ಆಗ್ರಹ

0
ಗಾಝಾದ ಹಮಾಸ್ ನಾಯಕ ಯಾಹ್ಯಾ ಸಿನ್ವಾರ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ವಿರುದ್ಧ ಅಂತಾರಾಷ್ಟ್ರೀಯ ಕ್ರಿಮಿನಲ್ (ಐಸಿಸಿ) ಕೋರ್ಟ್‌ನಿಂದ ಬಂಧನ ವಾರೆಂಟ್ ಕೋರುವುದಾಗಿ ನ್ಯಾಯಾಲಯದ ಪ್ರಾಸಿಕ್ಯೂಟರ್ ಕರೀಮ್ ಖಾನ್ ಸೋಮವಾರ ಸಿಎನ್‌ಎನ್‌ಗೆ...