Homeಮುಖಪುಟಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

- Advertisement -
- Advertisement -

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ ದೇಶಾದ್ಯಂತ ಸಹೋದರತ್ವ ಕಾರ್ಯಕ್ರಮ ಹಮ್ಮಿಕೊಂಡಿದೆ. ಜೂನ್ 5ರಿಂದ 21ರವರೆಗೂ ಕೇಂದ್ರ ಸರ್ಕಾರದ ಯೋಜನೆಗಳು, ಸಾಧನೆಗಳ ಬಗ್ಗೆ ಜಾಗೃತಿ ಮೂಡಿಸಲು ಮುಂದಾಗಿದೆ.2029ರ ನಂತರ ಮೋದಿ ಮತ್ತೆ ಅಧಿಕಾರಕ್ಕೆ ಬರುವ ಯಾವುದೇ ಖಾತರಿ ಇಲ್ಲದಿರುವುದರಿಂದ, ಪ್ರಸ್ತುತ ಅವರ ಕೊನೆಯ ಅವಧಿ ಎನ್ನಲಾಗುತ್ತಿರುವ ಈ ಸಮಯದಲ್ಲಿ, ದೇಶದ ಒಳಗೆ ಮತ್ತು ಹೊರಗೆ ಹೆಚ್ಚುತ್ತಿರುವ ಉದ್ವಿಗ್ನತೆಗಳು ಅವರ ಆಡಳಿತದ ದಾಖಲೆಯನ್ನು ಹತ್ತಿರದಿಂದ ಪರಿಶೀಲಿಸುವಂತೆ ಒತ್ತಾಯಿಸುತ್ತವೆ.

ಜೂನ್ 10, 2026 ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಒಂದು ಹೊಸ ದಿನಗಳ ಲೆಕ್ಕದ ದಾಖಲೆಗೆ ಸಾಕ್ಷಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸತತವಾಗಿ 4,399 ದಿನಗಳ ಕಾಲ ಅಧಿಕಾರ ಪೂರೈಸುವ ಮೂಲಕ, ಮೊದಲ ಸಾರ್ವತ್ರಿಕ ಚುನಾವಣೆಯ ನಂತರ ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರು ಬರೆದಿದ್ದ (4,398 ದಿನಗಳ) ಸತತ ಸುದೀರ್ಘ ಆಡಳಿತದ ದಾಖಲೆಯನ್ನು ಮೋದಿ ಹೆಸರಿಗೆ ಸೇರಿಸಿಕೊಂಡಿದ್ದಾರೆ.

ಆದರೆ, ಪ್ರಜಾಪ್ರಭುತ್ವದಲ್ಲಿ ನಾಯಕನ ಯಶಸ್ಸನ್ನು (ದಾಖಲೆ ಎನ್ನುವುದಾದರೆ) ಕೇವಲ ಅಧಿಕಾರದಲ್ಲಿ ಕಳೆದ ದಿನಗಳ ಲೆಕ್ಕದಿಂದ ಅಳೆಯಬೇಕೇ ಅಥವಾ ದೇಶದ ಸಾಮಾನ್ಯ ಜನರ ಬದುಕಿನಲ್ಲಿ ತಂದ ಬದಲಾವಣೆಯಿಂದ ಅಳೆಯಬೇಕೇ? ಪ್ರಧಾನಿ ಮೋದಿಯವರ ಈ 12 ವರ್ಷಗಳ ಆಡಳಿತಾವಧಿಯಲ್ಲಿ ದೇಶದ ಬಡವರು, ದಲಿತರು, ಯುವಕರು ಮತ್ತು ಅಲ್ಪಸಂಖ್ಯಾತರು ನಿಜವಾಗಿಯೂ ಸಂತೋಷದಿಂದ ಇದ್ದಾರೆಯೇ? ಈ ಪ್ರಶ್ನೆಗಳಿಗೆ ಉತ್ತರ ಹುಡುಕುತ್ತಾ ಹೋದರೆ, ಕಹಿ ವಾಸ್ತವಗಳು ಮುನ್ನೆಲೆಗೆ ಬರುತ್ತವೆ. ಅವರ ನಾಯಕತ್ವವು ರಾಷ್ಟ್ರೀಯ ಭದ್ರತೆ, ಆರ್ಥಿಕ ಪ್ರಗತಿ, ಪ್ರಜಾಪ್ರಭುತ್ವದ ಕುಸಿತ, ಸಾಂಸ್ಥಿಕ ಅವನತಿ ಮತ್ತು ವಿದೇಶಾಂಗ ನೀತಿಯ ವೈಫಲ್ಯಗಳ ಕುರಿತು ಕಳವಳಗಳನ್ನೂ ಹುಟ್ಟುಹಾಕಿದೆ.

ಅತಿ ಹೆಚ್ಚು ದಿನ ಪ್ರಧಾನಿಯಾಗಿದ್ದ ನೆಹರೂ ಅವರ ದಾಖಲೆಯನ್ನು ಮೋದಿ ಮುರಿದಿರಬಹುದು. ಆದರೆ, ನೆಹರೂ ಕಾಲದಲ್ಲಿ ದೇಶ ಶೂನ್ಯದಿಂದ ಕಟ್ಟಿದ ಐಐಟಿ, ಇಸ್ರೋ, ಎಚ್‌ಎಎಲ್‌ನಂತಹ ಬೃಹತ್ ಸಂಸ್ಥೆಗಳು ಭವಿಷ್ಯದ ಭಾರತಕ್ಕೆ ಬುನಾದಿ ಹಾಕಿತ್ತು. ಇಂದು ದಿನಗಳ ಲೆಕ್ಕದಲ್ಲಿ ಮುನ್ನುಗ್ಗುತ್ತಿದ್ದರೂ, ದೇಶದ ಆರ್ಥಿಕತೆಯ ಬೆನ್ನೆಲುಬಾದ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು (MSMEs) ನೋಟು ಅಮಾನ್ಯೀಕರಣ ಹಾಗೂ ತಪ್ಪು ನೀತಿಗಳಿಂದಾಗಿ ಸತ್ತಿವೆ. ಸಾವಿರಾರು ಉದ್ಯಮಗಳು ಮುಚ್ಚಿಹೋಗಿವೆ. 2024ರ ವೇಳೆಗೆ ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಮಾಡುತ್ತೇನೆ ಎಂದಿದ್ದ ಭರವಸೆ ಏನಾಗಿದೆ ಎಂದು ಪ್ರಧಾನಿಯನ್ನೇ ಕೇಳಬೇಕು. ವಿದೇಶಿ ಹೂಡಿಕೆದಾರರು ದೇಶ ಬಿಟ್ಟು ಹೋಗುತ್ತಿದ್ದಾರೆ, ಸ್ವತಃ ಭಾರತೀಯ ಉದ್ಯಮಿಗಳೇ ವಿದೇಶಗಳಲ್ಲಿ ಹೂಡಿಕೆ ಮಾಡಲು ಮುಂದಾಗುತ್ತಿದ್ದಾರೆ. ಇದು ಪ್ರಧಾನಿಯವರ 12 ವರ್ಷದ ಸಾಧನೆಯೇ? .

ಹತ್ತು ವರ್ಷಗಳ ಹಿಂದೆ ದೇಶದ ಮಹಿಳೆಯರಿಗೆ ಹೊಗೆ ಮುಕ್ತ ಮತ್ತು ಆರೋಗ್ಯಕರ ಜೀವನ ನೀಡುವುದಾಗಿ ‘ಉಜ್ವಲ ಯೋಜನೆ’ಯಡಿ ಉಚಿತ ಸಿಲಿಂಡರ್ ನೀಡಲಾಯಿತು. ಆದರೆ ಅದರ ವಾಸ್ತವವೇನು? ಸಬ್ಸಿಡಿ ಕಡಿತಗೊಳಿಸಲಾಗಿದೆ, ಅಡುಗೆ ಅನಿಲ ಮತ್ತು ಇಂಧನ ಬೆಲೆ ಗಗನಕ್ಕೇರಿದೆ. ಸಬ್ಸಿಡಿ ಕಡಿತದಿಂದಾಗಿ ಬಡ ಮಹಿಳೆಯರು ಮತ್ತೆ ಹಳೆಯ ಒಲೆಗಳ ಕಡೆಗೆ ಮುಖ ಮಾಡುವ ಪರಿಸ್ಥಿತಿ ಬಂದಿದೆ. ದೇಶದಲ್ಲಿ ಬಡತನ ನಿರ್ಮೂಲನೆಯಾಗಿದೆ ಎಂದು ಸರ್ಕಾರ ಹೆಡ್‌ಲೈನ್ಸ್‌ ಪ್ರಚಾರ ಮಾಡುತ್ತಿದ್ದರೂ, ಸಾಮಾನ್ಯ ಕುಟುಂಬಗಳು ದಿನಬಳಕೆಯ ವಸ್ತುಗಳಾದ ಹಾಲು, ಬೇಳೆಕಾಳು ಮತ್ತು ಇಂಧನದ ಹಣದುಬ್ಬರದಿಂದ ತತ್ತರಿಸಿಹೋಗಿವೆ ಇದು ಪ್ರಧಾನಿಯವರ 12 ವರ್ಷದ ಸಾಧನೆಯೇ?.

ದೇಶವನ್ನು ಜಾಗತಿಕ ಉದ್ಯೋಗ ಸೃಷ್ಟಿಯ ಕೇಂದ್ರವನ್ನಾಗಿ ಮಾಡುತ್ತೇವೆ ಎಂಬ ಘೋಷಣೆಗಳ ನಡುವೆಯೇ, ದೇಶದ ಯುವಜನತೆ ಇತಿಹಾಸದಲ್ಲೇ ಕಾಣದ ನಿರುದ್ಯೋಗದ ಬೇಗೆಯಲ್ಲಿ ಬೇಯುತ್ತಿದ್ದಾರೆ. ವರದಿಯ ಪ್ರಕಾರ, ಪ್ರತಿ 10 ಪದವೀಧರರಲ್ಲಿ ನಾಲ್ವರು ನಿರುದ್ಯೋಗಿಗಳಾಗಿದ್ದಾರೆ. ಪದವಿ ಮುಗಿಸಿದ ಯುವಕರಿಗೆ ವರ್ಷದೊಳಗೆ ಒಂದು ಖಾಯಂ ಸಂಬಳದ ಕೆಲಸ ಸಿಗುತ್ತಿಲ್ಲ. ಉದ್ಯೋಗ ಸೃಷ್ಟಿಯಲ್ಲಿನ ಈ ವೈಫಲ್ಯ ದೇಶದ ಮಾನವ ಸಂಪನ್ಮೂಲವನ್ನು ಶತಮಾನಗಳಷ್ಟು ಹಿಂದೆ ತಳ್ಳುತ್ತಿದೆ.

ಮೋದಿ ಸರ್ಕಾರದ ಅಡಿಯಲ್ಲಿ ದೇಶದ ಉನ್ನತ ಶಿಕ್ಷಣ ಮತ್ತು ಸ್ಪರ್ಧಾತ್ಮಕ ಪರೀಕ್ಷಾ ವ್ಯವಸ್ಥೆ ಸಂಪೂರ್ಣವಾಗಿ ಹಳಿ ತಪ್ಪಿದೆ. ಕಳೆದ ಕೆಲವು ವರ್ಷಗಳಲ್ಲಿ ಸಿಬಿಎಸ್‌ಇ ಸೇರಿದಂತೆ ದೇಶದ ಪ್ರಮುಖ ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸರಣಿಯಾಗಿ ಸೋರಿಕೆಯಾಗುತ್ತಿವೆ (Paper Leaks). ತಾಂತ್ರಿಕ ದೋಷಗಳು ಮತ್ತು ಆಡಳಿತಾತ್ಮಕ ವೈಫಲ್ಯಗಳಿಂದಾಗಿ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅನಿಶ್ಚಿತತೆಯಲ್ಲಿದೆ. ಶಿಕ್ಷಣ ವ್ಯವಸ್ಥೆಯನ್ನು ಆಧುನೀಕರಿಸುವ ಬದಲು ಹಗರಣಗಳ ಕೂಪವಾಗಿಸಲಾಗಿದೆ. ದೇಶದ ವಿದ್ಯಾರ್ಥಿ-ಯವಜನರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದಾರೆ.

ಕೇಂದ್ರದ ಬಿಜೆಪಿ ಸರ್ಕಾರ ಮತ್ತು ಹಲವು ರಾಜ್ಯಗಳಲ್ಲಿನ ಅದರದೇ ಪಕ್ಷದ ಸರ್ಕಾರಗಳು ಹೆಚ್ಚುತ್ತಿರುವ ಬೆಲೆ ಏರಿಕೆ, ಬಡತನ, ನಿರುದ್ಯೋಗ, ಕಾನೂನು ಮತ್ತು ಸುವ್ಯವಸ್ಥೆ ಲೋಪ, ದಿನೇದಿನೇ ಹೆಚ್ಚುತ್ತಿರುವ ಭ್ರಷ್ಟಾಚಾರ, ದೈನಂದಿನ ಆಡಳಿತದಲ್ಲಿ ಪಕ್ಷದ ಕಾರ್ಯಕರ್ತರು ಮತ್ತು ಪದಾಧಿಕಾರಿಗಳ ಅನಗತ್ಯ ಹಸ್ತಕ್ಷೇಪ, ಹಾಗೂ ಪಕ್ಷದ ಕಾರ್ಯಕರ್ತರಲ್ಲಿ ನೈತಿಕತೆಯ ಕುಸಿತ ಮತ್ತು ಜೀವ ವಿರೋಧಿ ವರ್ತನೆಗಳನ್ನು ನಿಯಂತ್ರಿಸುವಲ್ಲಿ ವಿಫಲವಾಗಿವೆ. ಇದು ಪಕ್ಷದ ಸದಸ್ಯರು ಮತ್ತು ಪದಾಧಿಕಾರಿಗಳ ಮೇಲಿನ ಉನ್ನತ ನಾಯಕರ ನಿಯಂತ್ರಣ ಸಡಿಲಗೊಳ್ಳುತ್ತಿರುವುದನ್ನು ಸೂಚಿಸುತ್ತದೆ.

ಸಾವಿರಾರು ರೈತರು ದಿವಾಳಿಯಾಗಿ ಮತ್ತು ನೈಸರ್ಗಿಕ ವಿಕೋಪಗಳಿಂದ ತತ್ತರಿಸುತ್ತಿರುವಾಗ, ಕೇಂದ್ರ ಸರ್ಕಾರವು ಶ್ರೀಮಂತ ಉದ್ಯಮಿ ಗೌತಮ್ ಅದಾನಿ ಅವರ ದೊಡ್ಡ ಸಾಲಗಳನ್ನು ಮನ್ನಾ ಮಾಡಿದೆ. ಭಾರತದ ಅತ್ಯಂತ ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಅವರು ಇತರ ವಿಐಪಿಗಳು ಮತ್ತು ರಾಜಕಾರಣಿಗಳು ಭಾರತ ಸರ್ಕಾರ ಒದಗಿಸುವ Z+ ಭದ್ರತೆಯನ್ನು ಆನಂದಿಸುತ್ತಿದ್ದಾರೆ. ಸಾಮಾನ್ಯ ನಾಗರಿಕರು ಪಾವತಿಸುವ ತೆರಿಗೆ ಹಣದಿಂದ ಈ ಭದ್ರತೆಯ ವೆಚ್ಚವನ್ನು ಭರಿಸಲಾಗುತ್ತಿದೆ. ವಿಪರ್ಯಾಸವೆಂದರೆ, ಗಣ್ಯರು ಉನ್ನತ ಭದ್ರತೆಯನ್ನು ಅನುಭವಿಸುತ್ತಿದ್ದರೆ, ಸಾಮಾನ್ಯ ನಾಗರಿಕರು ಪೊಲೀಸ್ ಸಿಬ್ಬಂದಿಯ ಕೊರತೆ ಮತ್ತು ನಿಷ್ಪರಿಣಾಮಕಾರಿ ಕಾನೂನು ಜಾರಿ ವ್ಯವಸ್ಥೆಯಿಂದಾಗಿ ಹೆಚ್ಚಾಗಿ ಅಪರಾಧಗಳಿಗೆ ಬಲಿಯಾಗುತ್ತಿದ್ದಾರೆ.

ಇದಲ್ಲದೆ, ಬಿಜೆಪಿ ಸರ್ಕಾರವು ತನ್ನ ಹಿತಾಸಕ್ತಿಗಾಗಿ ಸಿಬಿಐ (CBI), ಚುನಾವಣಾ ಆಯೋಗ, ಜಾರಿ ನಿರ್ದೇಶನಾಲಯ (ED) ಮತ್ತು ಆದಾಯ ತೆರಿಗೆ ಇಲಾಖೆಗಳ ಅಧಿಕಾರವನ್ನು ದುರುಪಯೋಗಪಡಿಸಿಕೊಂಡು, ವಿವಿಧ ಕ್ರಿಮಿನಲ್ ಆರೋಪಗಳನ್ನು ಎದುರಿಸುತ್ತಿರುವ ಬಿಜೆಪಿಯೇತರ ನಾಯಕರನ್ನು ಹೆದರಿಸುತ್ತಿದೆ. ಅಜಿತ್ ಪವಾರ್, ಛಗನ್ ಭುಜಬಲ್, ಅಶೋಕ್ ಚವಾಣ್, ಹಿಮಂತ ಬಿಸ್ವಾ ಶರ್ಮಾ, ಸುವೇಂದು ಅಧಿಕಾರಿ, ಪ್ರಫುಲ್ ಪಟೇಲ್ ಮತ್ತು ಇತರ ಅನೇಕರ ಪ್ರಕರಣಗಳಲ್ಲಿ ಇದನ್ನು ಕಾಣಬಹುದು. ಈ ಸಂಸ್ಥೆಗಳನ್ನು ಬಳಸಿಕೊಂಡು ಈ ರಾಜಕಾರಣಿಗಳು ಬಿಜೆಪಿಗೆ ಸೇರುವಂತೆ ಮತ್ತು ಅದರ ಹಿತಾಸಕ್ತಿಗಳನ್ನು ಬೆಂಬಲಿಸುವಂತೆ ಒತ್ತಡ ಹೇರಲಾಗುತ್ತಿದೆ. ಅತ್ಯಂತ ವಿಪರ್ಯಾಸದ ಸಂಗತಿಯೆಂದರೆ, ಈ ಕಳಂಕಿತ ರಾಜಕಾರಣಿಗಳು ಬಿಜೆಪಿಗೆ ಸೇರಿದ ತಕ್ಷಣ, ಅವರ ಮೇಲಿನ ಪ್ರಕರಣಗಳನ್ನು ಹಿಂಪಡೆಯಲಾಗುತ್ತದೆ ಅಥವಾ ಮಂಗಮಾಯವಾಗುತ್ತವೆ.

ರಾಜ್ಯದ ನಿಯಂತ್ರಣದಲ್ಲಿರುವ ಅಥವಾ ಸರ್ಕಾರದ ಪರವಾಗಿರುವ ಮಾಧ್ಯಮ ಸಂಸ್ಥೆಗಳು ಮೋದಿಯವರ ರಾಜಕೀಯದ ಮತ್ತೊಂದು ಕಳವಳಕಾರಿ ಅಂಶವಾಗಿದೆ. ಮಾಧ್ಯಮಗಳು ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭ ಎಂಬ ತತ್ವವನ್ನು ಉಲ್ಲಂಘಿಸುವ ಮೂಲಕ ಅವು ಪ್ರಜಾಪ್ರಭುತ್ವದ ಆಶಯವನ್ನೇ ಬುಡಮೇಲು ಮಾಡುತ್ತಿವೆ. ನೋಯ್ಡಾ ಮೂಲದ ಸುದ್ದಿ ವಾಹಿನಿಗಳನ್ನು ಹೆಚ್ಚಾಗಿ “ಗೋದಿ ಮೀಡಿಯಾ” ಎಂದು ಕರೆಯಲಾಗುತ್ತಿದ್ದು, ಅನೇಕರು ಅವುಗಳನ್ನು ಪಕ್ಷಪಾತದ ಮತ್ತು ಮಾರಾಟವಾದ ಮಾಧ್ಯಮಗಳು ಎಂದು ಪರಿಗಣಿಸುತ್ತಾರೆ. ದೇಶದ ಮುದ್ರಣ ಮಾಧ್ಯಮವೂ ಸಹ ಸರ್ಕಾರವನ್ನು ಪ್ರಶ್ನಿಸಲು ಅಥವಾ ಹೊಣೆಗಾರರನ್ನಾಗಿ ಮಾಡಲು ಧೈರ್ಯ ಮಾಡುತ್ತಿಲ್ಲ, ಇದು 1975ರ ತುರ್ತು ಪರಿಸ್ಥಿತಿಯ ದಿನಗಳನ್ನು ನೆನಪಿಸುವಂತಿದೆ.

ಮೋದಿ ಅವರ ಸಚಿವ ಸಂಪುಟ ಕೂಡ ಎರಡು ಮೂರು ಹೆಸರುಗಳನ್ನು ಹೊರತುಪಡಿಸಿದರೆ ಅನಾಮಿಕ. ಹಾಗಾಗಿ, ಈ 12 ವರ್ಷಗಳ ಎಲ್ಲ ಆಗುಹೋಗುಗಳಿಗೂ ಅವರೇ ಸಹಜ ಹೊಣೆಗಾರ. ಯಾಕೆಂದರೆ, ಅವರ ಅಬ್ಬರದ ಆರಂಭಿಕ ನೆರೇಟಿವ್ ಅವರ ಪೂರ್ವಸೂರಿಗಳನ್ನು ಸಂಪೂರ್ಣ ನಿರಾಕರಿಸಿತ್ತು. ಆದರೆ, ಅವರ ಪ್ರತಿಯೊಂದೂ ಸಾಧನೆ ಪೂರ್ವಸೂರಿಗಳು ರೂಪಿಸಿದ ಸಕಾರಣ ತಳಪಾಯದ ಮೇಲೇ ಎದ್ದದ್ದು. ಹಾಗಾಗಿ, ಕಡೆಗೂ, ದೇಶದ ಸಂದರ್ಭದಲ್ಲಿ, ಈ 12 ವರ್ಷಗಳ ಅವಧಿಯಲ್ಲಿ ಮೋದಿಯವರ ಸ್ವಂತದ್ದೆನ್ನುವ ಒಂದು ಸಾಧನೆ ಏನು? ಎಂಬ ಪ್ರಶ್ನೆ ಉಳಿದೇಬಿಡುತ್ತದೆ ಎನ್ನತ್ತಾರೆ ಹಿರಿಯ ಪತ್ರಕರ್ತರಾದ ರಾಜಾರಾಮ್ ತಲ್ಲೂರ್.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...