Homeಅಂತರಾಷ್ಟ್ರೀಯ1,200 ವರ್ಷಗಳಷ್ಟು ಹಳೆಯ ಹಿಂದೂ ದೇವಾಲಯ ಜೀರ್ಣೋದ್ಧಾರ ಮಾಡಲಿರುವ ಪಾಕಿಸ್ತಾನ!

1,200 ವರ್ಷಗಳಷ್ಟು ಹಳೆಯ ಹಿಂದೂ ದೇವಾಲಯ ಜೀರ್ಣೋದ್ಧಾರ ಮಾಡಲಿರುವ ಪಾಕಿಸ್ತಾನ!

ಭಾರತದಲ್ಲಿ ಬಾಬರಿ ಮಸೀದಿ ಧ್ವಂಸದ ವೇಳೆ ದೇವಾಲಯವನ್ನು ಧ್ವಂಸ ಮಾಡಿ ಬೆಂಕಿ ಹಚ್ಚಲಾಗಿತ್ತು

- Advertisement -
- Advertisement -

ಸುದೀರ್ಘ ಕಾನೂನು ಹೋರಾಟದ ನಂತರ ಪಾಕಿಸ್ತಾನದ ಲಾಹೋರ್ ನಗರದಲ್ಲಿ 1,200 ವರ್ಷಗಳಷ್ಟು ಹಳೆಯದಾದ ಹಿಂದೂ ದೇವಾಲಯವನ್ನು ಪುನಃಸ್ಥಾಪಿಸಲಾಗುವುದು ಎಂದು ದೇಶದ ಅಲ್ಪಸಂಖ್ಯಾತರ ಪೂಜಾ ಸ್ಥಳಗಳ ಮೇಲ್ವಿಚಾರಣಾ ಫೆಡರಲ್ ಸಂಸ್ಥೆಯಾದ ದಿ ಇವಾಕ್ಯೂ ಟ್ರಸ್ಟ್ ಪ್ರಾಪರ್ಟಿ ಬೋರ್ಡ್ (ಇಟಿಪಿಬಿ)  ಬುಧವಾರ ತಿಳಿಸಿದೆ. ಈಗಾಗಲೆ ಅಲ್ಲಿರುವ “ಅಕ್ರಮ ನಿವಾಸಿಗಳನ್ನು” ಹೊರಹಾಕಿದ ನಂತರ ಕೆಲಸ ಪ್ರಾರಂಭಿಸುವುದಾಗಿ ಸಂಸ್ಥೆ ಹೇಳಿದೆ.

ಇವಾಕ್ಯೂ ಟ್ರಸ್ಟ್‌ ಕಳೆದ ತಿಂಗಳು ಪ್ರಸಿದ್ಧ ಅನಾರ್ಕಲಿ ಬಜಾರ್ ಲಾಹೋರ್ ಬಳಿ ಇರುವ ವಾಲ್ಮೀಕಿ ದೇವಾಲಯವನ್ನು ಕ್ರಿಶ್ಚಿಯನ್ ಕುಟುಂಬದಿಂದ ಹಿಂಪಡೆದಿದೆ. ಕೃಷ್ಣ ದೇವಾಲಯದ ಪಕ್ಕದ ವಾಲ್ಮೀಕಿ ದೇವಾಲಯವು ಲಾಹೋರ್‌ನಲ್ಲಿರುವ ಏಕೈಕ ಸಕ್ರಿಯವಾಗಿರುವ ದೇವಾಲಯವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹಿಂದೂ ಧರ್ಮಕ್ಕೆ ಮತಾಂತರಗೊಂಡಿರುವುದಾಗಿ ಹೇಳಿಕೊಳ್ಳುವ ಕ್ರೈಸ್ತ ಕುಟುಂಬ ಕಳೆದ ಎರಡು ದಶಕಗಳಿಂದ ವಾಲ್ಮೀಕಿ ಜಾತಿಯ ಹಿಂದೂಗಳಿಗೆ ಮಾತ್ರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲು ಅನುಕೂಲ ಮಾಡಿಕೊಡುತ್ತಿತ್ತು. ಇಪ್ಪತ್ತು ವರ್ಷಗಳ ಹಿಂದೆ ಕ್ರಿಶ್ಚಿಯನ್ ಕುಟುಂಬ ದೇವಾಲಯವನ್ನು ವಶಪಡಿಸಿಕೊಂಡಿತ್ತು.

‘ಮಾಸ್ಟರ್ ಪ್ಲಾನ್’ ಪ್ರಕಾರ ಮುಂದಿನ ದಿನಗಳಲ್ಲಿ ವಾಲ್ಮೀಕಿ ದೇವಾಲಯವನ್ನು ಪುನಃಸ್ಥಾಪಿಸಲಾಗುವುದು ಎಂದು ಇವಾಕ್ಯೂ ಟ್ರಸ್ಟ್ ವಕ್ತಾರ ಅಮೀರ್ ಹಶ್ಮಿ ಪಿಟಿಐಗೆ ತಿಳಿಸಿದ್ದಾರೆ. “100 ಕ್ಕೂ ಹೆಚ್ಚು ಹಿಂದೂಗಳು, ಕೆಲವು ಸಿಖ್ ಮತ್ತು ಕ್ರಿಶ್ಚಿಯನ್ ನಾಯಕರು ಇಂದು ವಾಲ್ಮೀಕಿ ದೇವಸ್ಥಾನದಲ್ಲಿ ಜಮಾಯಿಸಿದರು. ಹಿಂದೂಗಳು ತಮ್ಮ ಧಾರ್ಮಿಕ ಆಚರಣೆಗಳನ್ನು ಮಾಡಿದರು” ಎಂದು ಅವರು ಹೇಳಿದ್ದಾರೆ.

“ದೇವಾಲಯದ ಭೂಮಿಯನ್ನು ಕಂದಾಯ ದಾಖಲೆಯಲ್ಲಿ ಇಟಿಪಿಬಿಗೆ ವರ್ಗಾಯಿಸಲಾಗಿದೆ. ಆದರೆ ಕುಟುಂಬವು 2010-2011 ರಲ್ಲಿ ಆಸ್ತಿಯ ಮಾಲೀಕರು ಎಂದು ಹೇಳಿಕೊಂಡು ಸಿವಿಲ್ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿತ್ತು” ಎಂದು ಇವಾಕ್ಯೂ ಟ್ರಸ್ಟ್‌ ಅಧಿಕಾರಿಯೊಬ್ಬರು ಡಾನ್ ಪತ್ರಿಕೆಗೆ ತಿಳಿಸಿದ್ದಾರೆ.

ಇದನ್ನೂ ಓದಿ: ‘Go to India!’: ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ಗೆ ವಿಪಕ್ಷ ನಾಯಕಿ ವಾಗ್ದಾಳಿ

“ಕುಟುಂಬವು ನ್ಯಾಯಾಲಯಕ್ಕೆ ಹೋಗಿದ್ದು ಮಾತ್ರವಲ್ಲದೆ ದೇವಾಲಯವನ್ನು ವಾಲ್ಮೀಕಿ ಹಿಂದೂಗಳಿಗೆ ಮಾತ್ರ ಪೂಜೆ ಸಲ್ಲಿಸಲು ಅವಕಾಶ ಕೊಟ್ಟಿತ್ತು. ಹಾಗಾಗಿ ಇವಾಕ್ಯೂ ಟ್ರಸ್ಟ್‌ಗೆ ಪ್ರಕರಣದ ಹೋರಾಟವನ್ನು ನ್ಯಾಯಾಲಯ ಹೊರತುಪಡಿಸಿ ಯಾವುದೇ ಆಯ್ಕೆ ಇರಲಿಲ್ಲ. ನ್ಯಾಯಾಲಯವು ಸುಳ್ಳು ಪ್ರತಿಪಾದನೆ ಮಾಡಿದ್ದಕ್ಕಾಗಿ ಕುಟುಂಬಕ್ಕೆ ಛೀಮಾರಿ ಹಾಕಿದೆ” ಎಂದು ಅಧಿಕಾರಿ ಹೇಳಿದ್ದಾರೆ.

1992 ರಲ್ಲಿ ಭಾರತದಲ್ಲಿ ಬಾಬರಿ ಮಸೀದಿ ಧ್ವಂಸದ ನಂತರ, ಉದ್ರಿಕ್ತ ಜನಸಮೂಹವು ಶಸ್ತ್ರಾಸ್ತ್ರಗಳನ್ನು ಹಿಡಿದು ವಾಲ್ಮೀಕಿ ದೇವಾಲಯಕ್ಕೆ ನುಗ್ಗಿತ್ತು. ಕೃಷ್ಣ ಮತ್ತು ವಾಲ್ಮೀಕಿ ವಿಗ್ರಹಗಳನ್ನು ಒಡೆದು, ಅಡುಗೆಮನೆಯಲ್ಲಿದ್ದ ಪಾತ್ರೆ ಪಗಡೆಗಳನ್ನು ಒಡೆದು, ಪ್ರತಿಮೆಗಳ ಮೇಲೆ ಅಲಂಕರಿಸಿದ ಚಿನ್ನವನ್ನು ವಶಪಡಿಸಿಕೊಂಡಿದ್ದರು ಎಂದು ಎನ್‌ಡಿಟಿವಿ ಉಲ್ಲೇಖಿಸಿದೆ. ದೇವಾಲಯವನ್ನು ಕೆಡವಿ ಕಟ್ಟಡಕ್ಕೆ ಬೆಂಕಿ ಹಚ್ಚಲಾಗಿತ್ತು. ಈ ಬೆಂಕಿ  ಅಕ್ಕಪಕ್ಕದ ಅಂಗಡಿಗಳಿಗೂ ಬೆಂಕಿ ಹೊತ್ತಿಕೊಂಡಿದ್ದರಿಂದ ಬೆಂಕಿ ನಂದಿಸಲು ಅಧಿಕಾರಿಗಳಿಗೆ ದಿನಗಟ್ಟಲೆ ಪರದಾಡಬೇಕಾಯಿತು ಎಂದು ವರದಿ ಹೇಳಿದೆ.

ಪಾಕಿಸ್ತಾನದ ಸುಪ್ರೀಂ ಕೋರ್ಟ್‌ನಿಂದ ರಚಿಸಲ್ಪಟ್ಟ ಏಕವ್ಯಕ್ತಿ ಆಯೋಗವು ತನ್ನ ಶಿಫಾರಸುಗಳನ್ನು ಸರ್ಕಾರಕ್ಕೆ ಸಲ್ಲಿಸಿತು. ಈ ಆಯೋಗವೂ ಹಿಂದೂ ಸಮುದಾಯಕ್ಕೆ ಉತ್ತಮ ಸೌಲಭ್ಯಗಳೊಂದಿಗೆ ದೇವಾಲಯವನ್ನು ನವೀಕರಿಸಬೇಕು ಎಂದು ಇವಾಕ್ಯೂ ಟ್ರಸ್ಟ್‌ ವಕ್ತಾರರು ಡಾನ್ ಪತ್ರಿಕೆಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನ ಸುಪ್ರೀಂಕೋರ್ಟ್‌ನ ಮೊದಲ ಮಹಿಳಾ ನ್ಯಾಯಮೂರ್ತಿಯಾಗಿ ಆಯೆಷಾ ಮಲಿಕ್ ನೇಮಕ

ದೇಶ ವಿಭಜನೆಯ ನಂತರ ಭಾರತಕ್ಕೆ ವಲಸೆ ಬಂದ ಸಿಖ್ಖರು ಮತ್ತು ಹಿಂದೂಗಳು ಬಿಟ್ಟುಹೋದ ದೇವಾಲಯಗಳು ಮತ್ತು ಭೂಮಿಯನ್ನು ಇವಾಕ್ಯೂ ಟ್ರಸ್ಟ್‌ ನೋಡಿಕೊಳ್ಳುತ್ತದೆ. ಇವಾಕ್ಯೂ ಟ್ರಸ್ಟ್‌‌ ಪಾಕಿಸ್ತಾನದಾದ್ಯಂತ 200 ಗುರುದ್ವಾರಗಳು ಮತ್ತು 150 ದೇವಾಲಯಗಳನ್ನು ನೋಡಿಕೊಳ್ಳುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...