Homeಅಂತರಾಷ್ಟ್ರೀಯಭಾರತದ ನಾಲ್ವರು ಸೇರಿ 2025ರಲ್ಲಿ ಜಾಗತಿಕವಾಗಿ 128 ಪತ್ರಕರ್ತರ ಹತ್ಯೆ : ವರದಿ

ಭಾರತದ ನಾಲ್ವರು ಸೇರಿ 2025ರಲ್ಲಿ ಜಾಗತಿಕವಾಗಿ 128 ಪತ್ರಕರ್ತರ ಹತ್ಯೆ : ವರದಿ

- Advertisement -
- Advertisement -

ಜಾಗತಿಕವಾಗಿ 2025ರಲ್ಲಿ ನೂರಾ ಇಪ್ಪತ್ತೆಂಟು ಪತ್ರಕರ್ತರು ಕೊಲ್ಲಲ್ಪಟ್ಟಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ಒಕ್ಕೂಟ ಬುಧವಾರ (ಡಿ.31) ತಿಳಿಸಿದೆ.

ಪತ್ರಕರ್ತರ ಹತ್ಯೆಗಳಲ್ಲಿ ಅರ್ಧಕ್ಕಿಂತ ಹೆಚ್ಚು (74) ಪಶ್ಚಿಮ ಏಷ್ಯಾದಲ್ಲಿ ಸಂಭವಿಸಿವೆ ಎಂದು ಬೆಲ್ಜಿಯಂ ಮೂಲದ ಒಕ್ಕೂಟ ತಿಳಿಸಿದೆ. ಪ್ಯಾಲೆಸ್ತೀನ್ ಪ್ರದೇಶದ ಮೇಲೆ ಇಸ್ರೇಲ್ ಆಕ್ರಮಣ ನಡೆಸಿದ ಸಮಯದಲ್ಲಿ ಗಾಝಾ ಒಂದರಲ್ಲೇ 44 ಪ್ರತಿಶತ (56) ಪತ್ರಕರ್ತರು ಕೊಲ್ಲಲ್ಪಟ್ಟಿದ್ದಾರೆ ಎಂದು ಒಕ್ಕೂಟ ಹೇಳಿದೆ.

ಆಫ್ರಿಕಾದಲ್ಲಿ 18 ಪತ್ರಕರ್ತರು, ಏಷ್ಯಾ-ಪೆಸಿಫಿಕ್‌ನಲ್ಲಿ 15, ಅಮೆರಿಕದಲ್ಲಿ 11 ಮತ್ತು ಯುರೋಪಿನಲ್ಲಿ 10 ಪತ್ರಕರ್ತರು ಕೊಲ್ಲಲ್ಪಟ್ಟಿದ್ದಾರೆ. ಈ ಪಟ್ಟಿಯಲ್ಲಿ ಒಂಬತ್ತು ಆಕಸ್ಮಿಕ ಸಾವುಗಳೂ ಸೇರಿವೆ.

ಭಾರತದಲ್ಲಿ, ನಾಲ್ಕು ಸಾವುಗಳನ್ನು ಒಕ್ಕೂಟ ದಾಖಲಿಸಿದೆ. ಜನವರಿ 1, 2025 ರಂದು ಬಸ್ತಾರ್ ಜಂಕ್ಷನ್ ಎಂಬ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದ ಪತ್ರಕರ್ತ ಮುಖೇಶ್ ಚಂದ್ರಕರ್ ಅವರ ಹತ್ಯೆ ಇದರಲ್ಲಿ ಒಳಗೊಂಡಿದೆ.

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ರಸ್ತೆ ನಿರ್ಮಾಣ ಯೋಜನೆಯಲ್ಲಿನ ಅಕ್ರಮಗಳ ಬಗ್ಗೆ ವರದಿ ಮಾಡಿದ್ದಕ್ಕಾಗಿ ಮುಖೇಶ್ ಚಂದ್ರಕರ್ ಅವರನ್ನು ಕೊಲೆ ಮಾಡಲಾಗಿತ್ತು. ರಸ್ತೆ ಗುತ್ತಿಗೆದಾರರ ಆಸ್ತಿಯಲ್ಲಿರುವ ಸೆಪ್ಟಿಕ್ ಟ್ಯಾಂಕ್‌ನಲ್ಲಿ ಅವರ ಶವ ಪತ್ತೆಯಾಗಿತ್ತು.

ಜಗತ್ತಿನಾದ್ಯಂತ 533 ಪತ್ರಕರ್ತರನ್ನು ತಮ್ಮ ಕರ್ತವ್ಯ ನಿರ್ವಹಿಸಿದ್ದಕ್ಕಾಗಿ ಜೈಲಿಗೆ ಹಾಕಲಾಗಿದೆ ಎಂದು ಒಕ್ಕೂಟ ತಿಳಿಸಿದೆ.

ಏಷ್ಯಾ-ಪೆಸಿಫಿಕ್ ಪ್ರದೇಶದಲ್ಲಿ ಜೈಲು ಶಿಕ್ಷೆಗೆ ಒಳಗಾದ ಪತ್ರಕರ್ತರ ಸಂಖ್ಯೆ ಅತಿ ಹೆಚ್ಚಿದೆ. ಈ ಪ್ರದೇಶದಲ್ಲಿ ಜೈಲಿನಲ್ಲಿರುವ 277 ಪತ್ರಕರ್ತರಲ್ಲಿ 143 ಮಂದಿ ಚೀನಾದಲ್ಲಿ ಮತ್ತು 49 ಮಂದಿ ಮ್ಯಾನ್ಮಾರ್‌ನಲ್ಲಿದ್ದಾರೆ.

2024ರಲ್ಲಿ, ಒಕ್ಕೂಟ 122 ಪತ್ರಕರ್ತರ ಸಾವುಗಳನ್ನು ಮತ್ತು 516 ಜನರನ್ನು ಜೈಲಿಗೆ ಹಾಕಲಾಗಿದೆ ಎಂದು ಹೇಳಿತ್ತು.

ಒಕ್ಕೂಟ ಪತ್ರಕರ್ತರನ್ನು ರಕ್ಷಿಸುವಲ್ಲಿ ಅಧಿಕಾರಿಗಳ ಅಥವಾ ಆಡಳಿತದ ‘ನಿರಂತರ ವೈಫಲ್ಯ’ ವನ್ನು ಖಂಡಿಸಿದೆ. ಹಿಂಸಾಚಾರವನ್ನು ಕೊನೆಗೊಳಿಸಲು ತಕ್ಷಣದ ಮತ್ತು ನಿರ್ಣಾಯಕ ಕ್ರಮಕ್ಕೆ ಕರೆ ನೀಡಿದೆ.

ಒಂದು ವರ್ಷದಲ್ಲಿ 128 ಪತ್ರಕರ್ತರು ಕೊಲ್ಲಲ್ಪಡುತ್ತಿರುವುದು ‘ಕೇವಲ ಅಂಕಿಅಂಶವಲ್ಲ, ಇದು ಜಾಗತಿಕ ಬಿಕ್ಕಟ್ಟು’ ಎಂದು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಆಂಥೋನಿ ಬೆಲ್ಲಂಗರ್ ಹೇಳಿದ್ದಾರೆ.

ಪತ್ರಕರ್ತರು ತಮ್ಮ ಕೆಲಸ ಮಾಡಿದ್ದಕ್ಕಾಗಿ ಅವರನ್ನು ಗುರಿಯಾಗಿಸಿಕೊಳ್ಳುವ ಈ ಪ್ರವೃತ್ತಿ ಅತ್ಯಂತ ಕ್ರೂರ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಸರ್ಕಾರಗಳು ಮಾಧ್ಯಮ ಕಾರ್ಯಕರ್ತರನ್ನು ರಕ್ಷಿಸಲು, ಕೊಲೆಗಾರರನ್ನು ನ್ಯಾಯಾಂಗದ ಮುಂದೆ ತರಬೇಕು ಮತ್ತು ಪತ್ರಿಕಾ ಸ್ವಾತಂತ್ರ್ಯವನ್ನು ಎತ್ತಿಹಿಡಿಯಲು ಕಾರ್ಯನಿರ್ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

1990ರಿಂದ ಮತ್ತು ವಾರ್ಷಿಕ ಪಟ್ಟಿ ಬಿಡುಗಡೆಯಾದ ನಂತರ, ಒಕ್ಕೂಟ ಜಾಗತಿಕವಾಗಿ 3,170ಕ್ಕೂ ಹೆಚ್ಚು ಪತ್ರಕರ್ತರ ಸಾವುಗಳನ್ನು ದಾಖಲಿಸಿದೆ, ಪ್ರತಿ ವರ್ಷ ಸರಾಸರಿ 91 ಕೊಲೆಗಳು ಸಂಭವಿಸುತ್ತಿವೆ.

ಡಿಸೆಂಬರ್ 10ರಂದು, ಕಮಿಟಿ ಟು ಪ್ರೊಟೆಕ್ಟ್ ಜರ್ನಲಿಸ್ಟ್ 2025 ರಲ್ಲಿ 126 ಪತ್ರಕರ್ತರು ಮತ್ತು ಮಾಧ್ಯಮ ಕಾರ್ಯಕರ್ತರು ಕೊಲ್ಲಲ್ಪಟ್ಟಿದ್ದಾರೆ ಎಂದು ಹೇಳಿತ್ತು. ಜಾಗತಿಕ ಮಾಧ್ಯಮ ಕಾವಲು ಸಂಸ್ಥೆಯು ಇಡೀ ವರ್ಷದ ಕೊನೆಯ 20 ದಿನಗಳನ್ನು ಒಳಗೊಂಡ ನವೀಕರಿಸಿದ ಪಟ್ಟಿಯನ್ನು ಇನ್ನೂ ಪ್ರಕಟಿಸಿಲ್ಲ.

ಡಿಸೆಂಬರ್ 23ರಂದು, ಫ್ರೀ ಸ್ಪೀಚ್ ಕಲೆಕ್ಟಿವ್ 2025ರಲ್ಲಿ ಭಾರತದಲ್ಲಿ ಎಂಟು ಪತ್ರಕರ್ತರನ್ನು ಕೊಲ್ಲಲಾಗಿದೆ ಎಂದು ಹೇಳಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ತಡೆಯಲು ಯುಜಿಸಿ ಹೊಸ ನಿಯಮ; ಮುಂದುವರೆದ ಪ್ರಬಲಜಾತಿ ಗುಂಪಿನ ವಿರೋಧ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ಪರಿಷ್ಕೃತ ನಿಯಮಗಳ ಕುರಿತು ದೇಶದಲ್ಲಿ ಭಾರಿ ರಾಜಕೀಯ ವಾಗ್ವಾದ ಭುಗಿಲೆದ್ದಿದೆ. ಹೊಸ ಮಾರ್ಗಸೂಚಿಗಳ ಕುರಿತು...

ಜನಸೇನಾ ಶಾಸಕನಿಂದ ಅತ್ಯಾಚಾರ, ಬಲವಂತದ ಗರ್ಭಪಾತ : ಮಹಿಳೆ ಆರೋಪ

ಆಂಧ್ರ ಪ್ರದೇಶದ ರೈಲ್ವೆ ಕೊಡೂರು ವಿಧಾನಸಭಾ ಕ್ಷೇತ್ರದ ಜನ ಸೇನಾ ಶಾಸಕ ಮತ್ತು ಸರ್ಕಾರಿ ಸಚೇತಕ ಅರವ ಶ್ರೀಧರ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಮತ್ತು ಬಲವಂತದ ಗರ್ಭಪಾತ ಆರೋಪ ಮಾಡಿದ್ದಾರೆ. ಈ ಕುರಿತು ವಿಡಿಯೋ...

ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ಐವರು ಜನರು ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪುಣೆ ಜಿಲ್ಲೆಯಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ. ಎನ್‌ಸಿಪಿ ನಾಯಕರಾದ ಅಜಿತ್ ಪವಾರ್ (66) ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ...

ಗುರುಗ್ರಾಮ ಮತ್ತು ಚಂಡೀಗಢದ ಶಾಲೆಗಳಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳ ಸ್ಥಳಾಂತರ

ಗುರುಗ್ರಾಮ್‌ನ ಕನಿಷ್ಠ ಆರು ಖಾಸಗಿ ಶಾಲೆಗಳಿಗೆ ಬುಧವಾರ ಬೆಳಿಗ್ಗೆ ಬಾಂಬ್ ಬೆದರಿಕೆ ಇಮೇಲ್‌ಗಳು ಬಂದಿದ್ದು, ದೊಡ್ಡ ಪ್ರಮಾಣದ ಸ್ಥಳಾಂತರ ಮತ್ತು ಭದ್ರತಾ ತಪಾಸಣೆಗಳನ್ನು ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಬೆಳಿಗ್ಗೆ 7:10 ರ ಸುಮಾರಿಗೆ...

ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಬಾರಾಮತಿಯಲ್ಲಿ ಲ್ಯಾಂಡ್‌ ಆಗಲು ಪ್ರಯತ್ನಿಸುವಾಗ ಅವರು ಪ್ರಯಾಣಿಸುತ್ತಿದ್ದ ವಿಮಾನ ಅಪಘಾತಕ್ಕೀಡಾಗಿ ನಿಧನರಾದರು. ಈ ಅಪಘಾತ ಮೂಲಕ, ಮಹಾರಾಷ್ಟ್ರದ ಅತ್ಯಂತ ಪ್ರಭಾವಶಾಲಿ ಮತ್ತು ಶಾಶ್ವತ ರಾಜಕೀಯ ವ್ಯಕ್ತಿಗಳಲ್ಲಿ...

ಅಸ್ಸಾಂ ಎಸ್‌ಐಆರ್‌ನಲ್ಲಿ 5 ಲಕ್ಷ ‘ಮಿಯಾ’ಗಳ ಹೆಸರು ಅಳಿಸಲಾಗುವುದು, ಅವರಿಗೆ ತೊಂದರೆ ಕೊಡುವುದೇ ನನ್ನ ಕೆಲಸ : ಸಿಎಂ ಹಿಮಂತ ಬಿಸ್ವಾ ಶರ್ಮಾ

ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕೈಗೆತ್ತಿಕೊಂಡಾಗ ನಾಲ್ಕರಿಂದ ಐದು ಲಕ್ಷ 'ಮಿಯಾ ಮತದಾರರ' ಹೆಸರುಗಳನ್ನು ಅಳಿಸಲಾಗುವುದು, ಅವರಿಗೆ ತೊಂದರೆ ಕೊಡುವುದೇ ನನ್ನ ಕೆಲಸ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ...

ವಿಮಾನ ಪತನ : ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಸೇರಿ ಐದು ಮಂದಿ ಸಾವು

ಪುಣೆ ಜಿಲ್ಲೆಯ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಹಾಗೂ ನ್ಯಾಷನಲಿಸ್ಟ್ ಕಾಂಗ್ರೆಸ್‌ ಪಾರ್ಟಿ (ಎನ್‌ಸಿಪಿ) ನಾಯಕ ಅಜಿತ್ ಪವಾರ್ ಸೇರಿದಂತೆ 5 ಮಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ...

ಕಾನೂನುಬಾಹಿರ ಹತ್ಯೆ ಆರೋಪ : ಸಿಆರ್‌ಪಿಎಫ್ ಅಧಿಕಾರಿಗೆ ಶೌರ್ಯ ಚಕ್ರ ನೀಡಿರುವುದನ್ನು ಖಂಡಿಸಿದ ಕುಕಿ-ಝೋ ಗುಂಪುಗಳು

ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ಅಧಿಕಾರಿಯೊಬ್ಬರು ತಮ್ಮ ಸಮುದಾಯದ ಹತ್ತು ಪುರುಷರ "ಕಾನೂನುಬಾಹಿರ ಹತ್ಯೆ"ಯಲ್ಲಿ ಭಾಗಿಯಾಗಿದ್ದಾರೆ ಎಂದು ಮಣಿಪುರದ ಕುಕಿ-ಝೋ ಸಂಘಟನೆಗಳು ಸೋಮವಾರ (ಜ.26) ಆರೋಪಿಸಿದ್ದು, ಆ ಅಧಿಕಾರಿಗೆ ಶೌರ್ಯ ಚಕ್ರ...

ಉತ್ತರ ಪ್ರದೇಶ: ಸೋನಭದ್ರಾದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಧ್ವಂಸಗೊಳಿಸಿದ ದುಷ್ಕರ್ಮಿಗಳು 

ಸೋನಭದ್ರ: ರಾಯ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಸಿಕ್ರವಾರ್ ಗ್ರಾಮದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ಸೋಮವಾರ ರಾತ್ರಿ ಅಪರಿಚಿತ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಕ್ರಾವರ್ ಗ್ರಾಮದ ಪಂಚಾಯತ್ ಕಟ್ಟಡದ ಬಳಿ...

ಬುಡಕಟ್ಟು ರೈತರ ಬೃಹತ್ ಮೆರವಣಿಗೆ: ಬೇಡಿಕೆಗಳ ಕುರಿತು ಸಿಪಿಐ(ಎಂ)-ಎಐಕೆಎಸ್ ನಿಯೋಗದೊಂದಿಗೆ ಮುಖ್ಯಮಂತ್ರಿ ಫಡ್ನವೀಸ್ ಮಾತುಕತೆ

ಬಾಕಿ ಇರುವ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಪಿಐ(ಎಂ)-ಎಐಕೆಎಸ್ ನೇತೃತ್ವದಲ್ಲಿ ನಾಸಿಕ್‌ನಿಂದ ಮುಂಬೈಗೆ ಸಾವಿರಾರು ರೈತರು ಮತ್ತು ಬುಡಕಟ್ಟು ನಿವಾಸಿಗಳು ನಡೆಸಿದ ದೀರ್ಘ ಮೆರವಣಿಗೆ ಇಂದು ಜನವರಿ 27 ರಂದು ಮುಂಬೈನ ಮಂತ್ರಾಲಯ...