Homeಮುಖಪುಟಮಧ್ಯಪ್ರದೇಶ: ಬಸ್‌-ಟ್ರಕ್ ನಡುವೆ ಅಪಘಾತ; 13 ಮಂದಿ ಸಜೀವ ದಹನ

ಮಧ್ಯಪ್ರದೇಶ: ಬಸ್‌-ಟ್ರಕ್ ನಡುವೆ ಅಪಘಾತ; 13 ಮಂದಿ ಸಜೀವ ದಹನ

- Advertisement -
- Advertisement -

ಬುಧವಾರ ರಾತ್ರಿ ಮಧ್ಯಪ್ರದೇಶದ ಗುಣಾ ಜಿಲ್ಲೆಯಲ್ಲಿ ಟ್ರಕ್‌ ಮತ್ತು ಬಸ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಸ್‌ ಹೊತ್ತಿ ಉರಿದಿದ್ದು, 12 ಮಂದಿ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. 14 ಜನರಿಗೆ ತೀವ್ರ ಸುಟ್ಟ ಗಾಯಗಳಾಗಿವೆ.

ಗುಣಾ-ಆರೋನ್ ರಸ್ತೆಯಲ್ಲಿ ಖಾಸಗಿ ಬಸ್ ಮತ್ತು ಟ್ರಕ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಗುಣಾ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತದ ವೇಳೆ ಬಸ್‌ನಲ್ಲಿ 30 ಮಂದಿ ಪ್ರಯಾಣಿಕರಿದ್ದರು. ಈ ಪೈಕಿ 12 ಮಂದಿ ಸಜೀವ ದಹನವಾಗಿದ್ದಾರೆ. 14 ಜನರು ಗಾಯಗೊಂಡಿದ್ದಾರೆ. ಇನ್ನುಳಿದ ನಾಲ್ವರು ಬಸ್‌ನಿಂದ ಹೊರಬಂದು ಅಪಾಯದಿಂದ ಪಾರಾಗಿದ್ದಾರೆ ಎಂದು ಗುಣಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.

ರಾತ್ರಿ 9 ಗಂಟೆಯ ಸುಮಾರಿಗೆ ಅಪಘಾತ ಸಂಭವಿಸಿದೆ. ಅಪಘಾತಕ್ಕೀಡಾದ ಬಸ್ ಆರೋನ್ ಕಡೆಗೆ ತೆರಳುತಿತ್ತು. ಟ್ರಕ್ ಗುಣಾ ಕಡೆ ಸಂಚರಿಸುತ್ತಿತ್ತು. ಘಟನೆ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದು, ಮೃತರಿಗೆ ತಲಾ 4 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ ತಲಾ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಮುಖ್ಯಮಂತ್ರಿಗಳು ಅಪಘಾತದ ಬಗ್ಗೆ ತನಿಖೆಗೆ ಆದೇಶಿಸಿದ್ದಾರೆ.

ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ಘಟನೆ ಕುರಿತು ಬೇಸರ ವ್ಯಕ್ತಪಡಿಸಿದ್ದು, “ಘಟನೆಯ ಬಗ್ಗೆ ಮಾಹಿತಿ ಪಡೆದ ಕೂಡಲೇ ನಾನು ಜಿಲ್ಲಾಧಿಕಾರಿ ಮತ್ತು ಎಸ್‌ಪಿಯೊಂದಿಗೆ ಮಾತನಾಡಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲು ಸೂಚಿಸಿದ್ದೇನೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ದೂರು ನೀಡಿದರೂ ಕ್ರಮ ತೆಗೆದುಕೊಳ್ಳದ ಪೊಲೀಸರು; ಎಸ್‌ಪಿ ಕಚೇರಿ ಮುಂದೆ ಬೆಂಕಿ ಹಚ್ಚಿಕೊಂಡ ದಲಿತ ಯುವಕ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...