Homeಕರ್ನಾಟಕಗುಬ್ಬಿ ದಲಿತ ಮುಖಂಡ ನರಸಿಂಹಮೂರ್ತಿ ಕೊಲೆ ಪ್ರಕರಣ: 13 ಮಂದಿ ಅರೆಸ್ಟ್‌

ಗುಬ್ಬಿ ದಲಿತ ಮುಖಂಡ ನರಸಿಂಹಮೂರ್ತಿ ಕೊಲೆ ಪ್ರಕರಣ: 13 ಮಂದಿ ಅರೆಸ್ಟ್‌

- Advertisement -
- Advertisement -

ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣದ ದಲಿತ ಮುಖಂಡ ನರಸಿಂಹಮೂರ್ತಿ (ಕುರಿ ಮೂರ್ತಿ) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಪೊಲೀಸರು 13 ಜನರನ್ನು ಬಂಧಿಸಿ, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ಅಧಿಕ್ಷಕ ರಾಹುಲ್‌ ಶಹಾಪುರ್‌ವಾಡ್‌ ತಿಳಿಸಿದ್ದಾರೆ.

ಜೂನ್‌ 15ರ ಬುಧವಾರ ಮಧ್ಯಾಹ್ನ 1 ಗಂಟೆ ಸಮಯದಲ್ಲಿ ಗುಬ್ಬಿ ಪಟ್ಟಣದ ಹೆದ್ದಾರಿ ಬದಿಯ ಅಂಗಡಿಯ ಬಳಿ ಟೀ ಕುಡಿಯುತ್ತ ಕುಳಿತ್ತಿದ್ದ ನರಸಿಂಹಮೂರ್ತಿಯವರನ್ನು ಏಳು ಮಂದಿ ಅಪರಿಚಿತರು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದಿದ್ದರು. ಹತ್ಯೆಗೆ ಸಂಬಂಧ ಕನಕಪುರದ ಹಾರೋಹಳ್ಳಿ ಸಮೀಪದ ಫಾರಂಹೌಸ್‌ನಲ್ಲಿ ಅಡಗಿದ್ದ 13 ಆರೋಪಿಗಳನ್ನು ಶುಕ್ರವಾರ ಮುಂಜಾನೆ ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಿಟ್ಟೂರು ಹಾಗೂ ಗುಬ್ಬಿ ಹೊಸಳ್ಳಿಯ ಎರಡು ಜಮೀನು ವಿವಾದ ಹಾಗೂ ಹಿಂದಿನ ಕೆಲವು ಪ್ರಕರಣಗಳ ವೈಮನಸ್ಸುಗಳು ಕೊಲೆಗೆ ಕಾರಣ ಎಂದು ಪ್ರಾಥಮಿಕ ಹಂತದ ವಿಚಾರಣೆಯಿಂದ ತಿಳಿದುಬಂದಿದೆ ಎಂದು ಎಸ್‌ಪಿ ತಿಳಿಸಿದ್ದು, “ಪೂರ್ಣ ಪ್ರಮಾಣದ ವಿಚಾರಣೆಗಾಗಿ ಆರೋಪಿಗಳನ್ನು ಪೊಲೀಸ್‌ ವಶಕ್ಕೆ ಪಡೆಯಲಾಗಿದೆ” ಎಂದಿದ್ದಾರೆ.

ಗುಬ್ಬಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್‌ 143, 147, 148, 302, ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಅನ್ವಯ ಪ್ರಕರಣ ದಾಖಲಾಗಿದೆ.

ಗುಬ್ಬಿ ಹೊಸಹಳ್ಳಿಯ ಎಚ್.ಸಿ.ಕಿರಣ್‌ ಬಿನ್‌ ರಾಜಣ್ಣ (33 ವರ್ಷ), ಮಂಡ್ಯ ತಾಲ್ಲೂಕಿನ ರಾಜ ಅಲಿಯಾಸ್‌ ಕ್ಯಾಟ್ ರಾಜ (35),  ಪಾಂಡವಪುರದ ಮಂಜು ಅಲಿಯಾಸ್ ಮ್ಯಾಕ್ಷಿ (30), ಬಿಡದಿ ಬಳಿಯ ಅಭಿಷೇಕ್‌ ಅಲಿಯಾಸ್‌ ಕರಿಯ (30), ಗುಬ್ಬಿ ಪಟ್ಟಣದ ನಯಾಜ್ ಬಿನ್‌ ವಜೀರ್‌ (25), ಮೈಸೂರಿನ ವೆಂಕಟೇಶ್‌ (32) ಕೆಂಗೇರಿಯ ಕೀರ್ತಿ (23), ಬಿಡದಿ ಸಮೀಪದ ಚಂದ್ರಶೇಖರ್‌ ಎಚ್‌.ಎಸ್‌. ಅಲಿಯಾಸ್ ಚಂದು (29), ಗುಬ್ಬಿಯ ಭರತ್‌‌ ಕೆ.ಎನ್‌. (24), ಧೀರಜ್‌ ಜಿ.ಕೆ. (32), ವೆಂಕಟೇಶ್‌ ಬೆಂಗಳೂರು (30), ಬಿಲ್ಲೇ ಪಾಳ್ಯ ಬಸವರಾಜು (25), ನಾಗರಾಜು (20) ಬಿಲ್ಲೇಪಾಳ್ಯ ಬಂಧಿತ ಆರೋಪಿಗಳು.

ಶಿರಾ ಡಿವೈಎಸ್‌ಪಿ ಎಲ್.ಕುಮಾರಪ್ಪ ನೇತೃತ್ವದಲ್ಲಿ ತಂಡವನ್ನು ರಚಿಸಿದ್ದು ಸದರಿ ತಂಡವು 13 ಆರೋಪಿಗಳನ್ನು ದಸ್ತಗಿರಿ ಮಾಡಿ ವಿಚಾರಣೆ ಮಾಡಿದೆ. ಕೊಲೆಯನ್ನು ಏಳು ಜನರು ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಆರು ಜನರು ಕೊಲೆಗೆ ಸಹಕರಿಸಿದ್ದಾರೆ. ಆರೋಪಿಗಳಲ್ಲಿ  ಆರು ಜನ ಆರೋಪಿಗಳು ಗುಬ್ಬಿ ಟೌನ್‌ ವಾಸಿಗಳಾಗಿದ್ದು ಇಬ್ಬರು ಮಂಡ್ಯ ವಾಸಿಗಳು, ಇಬ್ಬರು ಮೈಸೂರು ವಾಸಿಗಳು, ಇಬ್ಬರು ರಾಮನಗರ ಮತ್ತು ಒಬ್ಬ ಬೆಂಗಳೂರು ನಗರ ವಾಸಿಯಾಗಿರುವುದಾಗಿ ಎಸ್‌ಪಿ ಮಾಹಿತಿ ನೀಡಿದ್ದಾರೆ..

ಕೊಲೆ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉದೇಶ್‌, ಡಿವೈಎಸ್‌ಪಿ ಎಲ್‌.ಕುಮಾರಪ್ಪ, ಅಧಿಕಾರಿಗಳಾದ ರವಿಕುಮಾರ್‌, ಎಫ್‌.ಕೆ.ನದಾಫ್‌, ಅವಿನಾಶ್‌, ಸಿಬ್ಬಂದಿ ಶಾಂತರಾಜು, ಸೈಮನ್‌, ವಿಕ್ಟರ್‌, ಇನಾಯತ್‌, ರಮೇಶ್‌, ಮಹೇಶ್‌, ಗೋಪಿನಾಥ, ಮಂಜುನಾಥ್‌ಸ್ವಾಮಿ, ನವೀನ್‌, ಮಾರುತೇಶ್‌, ಫಾರೂಖ್, ಗಿರೀಶ್‌ ಶ್ರಮವಹಿಸಿದ್ದು, ಪೊಲೀಸ್ ವರಿಷ್ಠಾಧಿಕಾರಿ ಅಭಿನಂದನೆ ಸಲ್ಲಿಸಿದ್ದಾರೆ.

ತಾಲ್ಲೂಕಿನ ಪೆದ್ದನಹಳ್ಳಿ ಗ್ರಾಮದಲ್ಲಿ ಕೆಲವು ವಾರಗಳ ಹಿಂದೆ ಇಬ್ಬರು ದಲಿತ ಯುವಕರನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಕರಿಶೆಟ್ಟಿ ಹಟ್ಟಿ ಬಳಿ ಎರಡು ವಾರಗಳ ಹಿಂದೆ ವ್ಯಕ್ತಿಯೊಬ್ಬರ ಕೊಲೆ ನಡೆದಿತ್ತು. ಈ ಘಟನೆಗಳ ಬೆನ್ನಲ್ಲೇ ಕುರಿಮೂರ್ತಿಯವರ ಕೊಲೆ ನಡೆದಿದ್ದು ಆತಂಕ ಸೃಷ್ಟಿಸಿತ್ತು.

ಇದನ್ನೂ ಓದಿರಿ: ಔಷಧಿ ಪ್ಯಾಕೇಜ್‌ನಲ್ಲಿ ‘ಭಾಜಪ’ ಹೆಸರು: ಪಕ್ಷದ ಪ್ರಚಾರಕ್ಕೆ ಜನರ ಹಣ ದುರ್ಬಳಕೆ?

ಪೆದ್ದನಹಳ್ಳಿ ಪ್ರಕರಣ

ಪೆದ್ದನಹಳ್ಳಿಯಲ್ಲಿ ಗ್ರಾಮದಲ್ಲಿ ಏಪ್ರಿಲ್‌ 21ರ ರಾತ್ರಿ ಪೆದ್ದನಹಳ್ಳಿ ಗ್ರಾಮದ ಗಿರೀಶ್ (ಮಾದಿಗ ಸಮುದಾಯ), ಮಂಚಲದೊರೆ ಗ್ರಾಮದ ಗಿರೀಶ್‌ (ನಾಯಕ ಸಮುದಾಯ) ಅವರನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಸವರ್ಣೀಯರನ್ನು ಬಂಧಿಸಲಾಗಿದೆ. (ಪೆದ್ದನಹಳ್ಳಿ ಪ್ರಕರಣ ಕುರಿತು ಓದಿರಿ: ಇಬ್ಬರು ದಲಿತ ಯುವಕರ ಹತ್ಯೆಯ ಸುತ್ತ ಎಷ್ಟೊಂದು ಸಂಕಟ!)

ತುಮಕೂರು: ಮತ್ತೊಂದು ಕೊಲೆ ಪ್ರಕರಣ

ತುಮಕೂರು ತಾಲ್ಲೂಕು ಕೋರಾ ಹೋಬಳಿ ಜಕ್ಕೇನಹಳ್ಳಿ ಗ್ರಾಮದಲ್ಲಿ ಏಪ್ರಿಲ್‌ 29ನೇ ತಾರೀಕು ಮತ್ತೊಂದು ಪ್ರಕರಣ ಬೆಳಕಿಗೆ ಬಂದಿತ್ತು. ಊರಿನ ಬಳಿ ನಡೆಯುತ್ತಿರುವ ಎತ್ತಿನಹೊಳೆ ಕಾಮಗಾರಿಯ ಚಾನೆಲ್‌ನಲ್ಲಿ ಮಾದಿಗ ಸಮುದಾಯದ ಮುತ್ತುರಾಜ (26) ಎಂಬ ಯುವಕನ ಶವ ಪತ್ತೆಯಾಗಿದ್ದರು. ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆಂದೇ ಬಿಂಬಿಸಲಾಗಿತ್ತು. ಆದರೆ ಮೇ 17ರಂದು ಎಸ್‌.ಸಿ. ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಸವರ್ಣೀಯ ವ್ಯಕ್ತಿಯನ್ನು ಆರೋಪಿ ಎಂದು ಗುರುತಿಸಲಾಗಿದೆ. (ಸಂಪೂರ್ಣ ಸುದ್ದಿ ಇಲ್ಲಿ ಓದಿರಿಮುಚ್ಚಿ ಹೋಗುತ್ತಿದೆಯೇ ಮತ್ತೊಬ್ಬ ದಲಿತನ ಕೊಲೆ ಪ್ರಕರಣ?)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...