Homeಕರ್ನಾಟಕ13 ಕ್ವಿಂಟಾಲ್‌ ಗಾಂಜಾ‌ ವಶ: ಆರೋಪಿ ಬಿಜೆಪಿ ಕಾರ್ಯಕರ್ತನೆಂದು ಕಾಂಗ್ರೆಸ್ ಆರೋಪ

13 ಕ್ವಿಂಟಾಲ್‌ ಗಾಂಜಾ‌ ವಶ: ಆರೋಪಿ ಬಿಜೆಪಿ ಕಾರ್ಯಕರ್ತನೆಂದು ಕಾಂಗ್ರೆಸ್ ಆರೋಪ

- Advertisement -
- Advertisement -

ಕಲಬುರ್ಗಿಯ ಕುರಿ ಸಾಗಾಣಿಕ ಕೇಂದ್ರದಲ್ಲಿ ರಹಸ್ಯವಾಗಿ ಬಚ್ಚಿಟ್ಟಿದ್ದ 13.50 ಕ್ವಿಂಟಲ್ 300 ಗ್ರಾಂ ಗಾಂಜಾವನ್ನು ಬೆಂಗಳೂರು ಪೊಲೀಸರು ನಿನ್ನೆ ಪತ್ತೆಹಚ್ಚಿದ್ದು, ನಾಲ್ವರನ್ನು ಬಂಧಿಸಿದ್ದರು. ಬಂಧಿತರಲ್ಲಿ ಒಬ್ಬ ಬಿಜೆಪಿ ಕಾರ್ಯಕರ್ತ ಎಂದು ರಾಜ್ಯ ಕಾಂಗ್ರೆಸ್ ಆರೋಪಿಸಿದೆ.

ನಿನ್ನೆ ಬೆಂಗಳೂರು ಪೊಲೀಸರು ಕಲಬುರ್ಗಿಯಲ್ಲಿ ನಾಲ್ಕು ಜನರನ್ನು ಬಂಧಿಸಿದ್ದು, ಬಂಧಿತರನ್ನು ಗಾಯತ್ರಿನಗರದ ಜ್ಞಾನಶೇಖರ್ (37), ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಸಿದ್ದುನಾಥ್ ಲಾವಟೆ (22), ಬೀದರ್ ಜಿಲ್ಲೆಯ ಔರಾದ್ ತಾಲ್ಲೂಕಿನ ನಾಗನಾಥ್ (39) ಹಾಗೂ ಕಲಬುರ್ಗಿ ಜಿಲ್ಲೆಯ ಕಾಳಗಿ ತಾಲ್ಲೂಕಿನ ಚಂದ್ರಕಾಂತ್ (34) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಡ್ರಗ್ಸ್ ಮಾಫಿಯ ಪ್ರಕರಣ: ಪೊಲೀಸರ ವಶದಲ್ಲಿರುವ ಡ್ರಗ್ ಪೆಡ್ಲರ್ ಕಾರ್ತಿಕ್ ರಾಜ್ ಬಿಜೆಪಿ ಕಾರ್ಯಕರ್ತನೆ?

ಈ ಬಗ್ಗೆ ಇಂದು ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್‌, “ಕಲ್ಬುರ್ಗಿಯಲ್ಲಿ ವಶಪಡಿಸಿಕೊಂಡ 1,200 ಕೆಜಿ ಗಾಂಜಾ ಪ್ರಕರಣದ ಪ್ರಮುಖ ಆರೋಪಿ ಬಿಜೆಪಿ ಕಾರ್ಯಕರ್ತ. ಡ್ರಗ್ಸ್, ಗಾಂಜಾ ಮುಂತಾದ ಅಕ್ರಮ ಚಟುವಟಿಕೆಗಳ ತಾಣವಾದ ಬಿಜೆಪಿ. ’ಕೋತಿ ಮೊಸರು ತಿಂದು ಮೇಕೆಯ ಮೂತಿಗೆ ಮೆತ್ತಿದಂತೆ’ ಎಂಬ ಗಾದೆ ಮಾತಿನಂತೆ ಅನ್ಯರತ್ತ ಹುಸಿ ಆರೋಪ ಮಾಡಿ ತಮ್ಮ ಮಾನ ಮುಚ್ಚಿಕೊಳ್ಳಲು ಯತ್ನಿಸುತ್ತಿದೆ” ಎಂದು ಹೇಳಿದೆ.

ಇದನ್ನೂ ಓದಿ: ಡ್ರಗ್ಸ್ ದಂಧೆ: ಜಿಲ್ಲಾವಾರು ಮಾಹಿತಿ ಕೋರಿ ಗೃಹಸಚಿವರಿಗೆ ಪತ್ರ ಬರೆದ ಸಿದ್ಧರಾಮಯ್ಯ

ಇಷ್ಟೇ ಅಲ್ಲದೆ ಕಾಂಗ್ರೆಸ್‌ ಶಾಸಕ ಪ್ರಯಾಂಕ್ ಖರ್ಗೆ ಟ್ವಿಟ್ಟರ್‌ನಲ್ಲಿ ಬಿಜೆಪಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದು, “ಲೂಟ್ ಅಸ್ ಪಾರ್ಟಿ ಬಿಜೆಪಿ ಡ್ರಗ್‌ ಮಾಫಿಯಾ ಪ್ರಕರಣದಲ್ಲಿ ಕಾಂಗ್ರೇಸ್‌ ಸಾಮೀಲಾಗಿದೆ ಎಂದು ಮಾತನಾಡುತ್ತಿದೆ. ಇದು ಯಾರು ಎಂದು ಊಹಿಸಿ? ಖಂಡಿಯವಾಗಿಯು ಇದರಲ್ಲಿ ನಾನು ಯಾವುದೇ ಕಾಂಗ್ರೆಸಿನ ಚಿನ್ಹೆಯನ್ನು ಕಾಣುತ್ತಿಲ್ಲ.” ಎಂದು ಟ್ವೀಟ್ ಮಾಡಿದ್ದಾರೆ.

ನೀವೇ ಅಧಿಕಾರದಲ್ಲಿದ್ದು, ಎಲ್ಲಾ ಸಂಪನ್ಮೂಲಗಳು ನಿಮ್ಮ ಬಳಿ ಇದೆ, ಅದನ್ನು ಬಳಸಿ ಕಲಬುರ್ಗಿಯಲ್ಲಿ ಎಷ್ಟು ಜೂಜು ಅಡ್ಡೆಗಳು ಇವೆ ಎಂಬುವುದನ್ನು ದಯವಿಟ್ಟು ಕಂಡುಹಿಡಿಯಿರಿ. ಮನರಂಜನಾ ಕ್ಲಬ್‌ಗಳನ್ನು ನಡೆಸಲು ಯಾರು ಅನುಮತಿ ನೀಡುತ್ತಿದ್ದಾರೆ? ಈ ಪೆಡ್ಲರ್‌ಗಳು ಯಾರ ರಾಜಕೀಯ ರಕ್ಷಣೆಯಡಿಯಲ್ಲಿ ಬೆಳೆಯುತ್ತಿದ್ದಾರೆ?” ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್‌ ಇಂದು ಬಿಡುಗಡೆ ಮಾಡಲಾಗಿರುವ ಪೋಟೋದಲ್ಲಿ ಇರುವ ವ್ಯಕ್ತಿಯನ್ನು ಮಾಧ್ಯಮಗಳು ಚಂದ್ರಕಾಂತ್‌ ಎಂದು ಹೇಳಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲಾಗಿದೆ.


ಇದನ್ನೂ ಓದಿ: ಡ್ರಗ್ಸ್ ನಿಯಂತ್ರಣ: ಪೊಲೀಸ್ ಅಧಿಕಾರಿಗಳ ಜೊತೆ ಗೃಹಸಚಿವರ ಸಭೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...