Homeಮುಖಪುಟಒಪಿಎಸ್ ವ್ಯಾಪ್ತಿಗೆ 13 ಸಾವಿರ ಸರ್ಕಾರಿ ನೌಕರರು; ರಾಜ್ಯ ಸರ್ಕಾರದಿಂದ ಆದೇಶ

ಒಪಿಎಸ್ ವ್ಯಾಪ್ತಿಗೆ 13 ಸಾವಿರ ಸರ್ಕಾರಿ ನೌಕರರು; ರಾಜ್ಯ ಸರ್ಕಾರದಿಂದ ಆದೇಶ

- Advertisement -
- Advertisement -

2006ರ ಏಪ್ರಿಲ್ 1ಕ್ಕಿಂತ ಮೊದಲು ನೇಮಕಗೊಂಡ ಸುಮಾರು 13,000 ಉದ್ಯೋಗಿಗಳನ್ನು ಹಳೆಯ ಪಿಂಚಣಿ ಯೋಜನೆಯ (ಒಪಿಎಸ್) ವ್ಯಾಪ್ತಿಗೆ ತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

‘2006 ಏಪ್ರಿಲ್ ಪೂರ್ವದಲ್ಲಿ ನೇಮಕಾತಿ ಅಧಿಸೂಚನೆಯಾಗಿ 2006ರ ನಂತರ ನೇಮಕಾತಿಗೊಂಡ ರಾಜ್ಯ ಸರ್ಕಾರದ ಸುಮಾರು 13,000 ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿ ಆದೇಶ ಹೊರಡಿಸಲಾಗಿದೆ. ‘ಚುನಾವಣೆಗೂ ಪೂರ್ವದಲ್ಲಿ ಎನ್.ಪಿ.ಎಸ್ ನೌಕರರು ಮುಷ್ಕರು ಮಾಡುವ ವೇಳೆ ಸ್ಥಳಕ್ಕೆ ಭೇಟಿ ನೀಡಿ ನಾವು ಅಧಿಕಾರಕ್ಕೆ ಬಂದ ನಂತರ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದೆ, ಕೊಟ್ಟ ಮಾತಿನಂತೆ ಬೇಡಿಕೆ ಈಡೇರಿಸಿ ನುಡಿದಂತೆ ನಡೆದಿದ್ದೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

‘ಎಲ್ಲಾ 13,000 ಎನ್.ಪಿ.ಎಸ್ ನೌಕರರ ಕುಟುಂಬಗಳಿಗೆ ನಮ್ಮ ಈ ನಿರ್ಧಾರ ನೆಮ್ಮದಿ ನೀಡಿದೆ ಎಂದು ಭಾವಿಸಿದ್ದೇನೆ’ ಎಂದು ಹೇಳಿದ್ದಾರೆ.

ಆದೇಶದಲ್ಲಿ ಏನಿದೆ?

01.04.2006ರ ಪೂರ್ವದಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಹೊರಡಿಸಿದ ನೇಮಕಾತಿ ಅಧಿಸೂಚನೆಗಳ ಮೇರೆಗೆ ಆಯ್ಕೆ ಹೊ೦ದಿ, ದಿನಾ೦ಕ: 01.04.2006ರ೦ದು ಅಥವಾ ಆ ದಿನಾಂಕದ ನಂತರ ಸೇವೆಗೆ ಸೇರಿರುವ ಕಾರಣದಿ೦ದ ನೂತನ ಪಿಂಚಣಿ ಯೋಜನೆಯ (ರಾಷ್ಟ್ರೀಯ ಪಿ೦ಚಣಿ ಯೋಜನೆ) ವ್ಯಾಪ್ತಿಗೊಳಪಟ್ಟಿರುವ ಸರ್ಕಾರಿ ನೌಕರರನ್ನು ಸರ್ಕಾರವು ಅವರ ಅಭಿಮತದ ಮೇರೆಗೆ ಕೆಳಕ೦ಡ ಷರತ್ತುಗಳಿಗೊಳಪಟ್ಟು, ಒ೦ದು ಬಾರಿಯ ಕ್ರಮವಾಗಿ ಹಿಂದಿನ ಡಿಫೈನ್ಡ್ ಪಿ೦ಚಣಿ ಯೋಜನೆಯ ವ್ಯಾಪ್ತಿಗೊಳಡಿಸಲು ಒಪ್ಪಿಗೆ ನೀಡಿದೆ.

ದಿನಾ೦ಕ: 01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊ೦ದಿ, ಆ ದಿನಾಂಕದ೦ದು ಅಥವಾ ತದನ೦ತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ಸರ್ಕಾರಿ ನೌಕರರು ಹಿ೦ದಿನ ಡಿಫೈನ್ ಪಿ೦ಚಣಿ ಯೋಜನೆಗೆ ಒಳಪಡಲು ಇಚ್ಚಿಸಿದಲ್ಲಿ, ತಮ್ಮ ಅಭಿಮತವನ್ನು ನಿಗಧಿತ ನಮೂನೆಯಲ್ಲಿ ದಿನಾ೦ಕ: 30.06.2024ರೊಳಗೆ ಸಕ್ಷಮ ನೇಮಕಾತಿ ಪ್ರಾಧಿಕಾರಕ್ಕೆ ನೇರವಾಗಿ ಸಲ್ಲಿಸತಕ್ಕದ್ದು. ಈ ಆಯ್ಕೆಯನ್ನು ಒ೦ದು ಬಾರಿಗೆ ಮಾತ್ರ ಚಲಾಯಿಸಲು ಅವಕಾಶವಿರುತ್ತದೆ. ಒ೦ದು ಬಾರಿ ಮಾಡಿಕೊ೦ಡ ಆಯ್ಕೆಯನ್ನು ಬದಲಾಯಿಸಲು ಅವಕಾಶವಿಲ್ಲ ಎಂದು ಸರ್ಕಾರದ ಆದೇಶದಲ್ಲಿ ತಿಳಿಸಲಾಗಿದೆ.

ಮೇಲಿನ ಒಂದರಂತೆ ಆಯ್ಕೆಯನ್ನು ಚಲಾಯಿಸಲು ಅರ್ಹ ಸರ್ಕಾರಿ ನೌಕರರು ನಿಗಧಿತ ದಿನಾ೦ಕದೊಳಗೆ ತಮ್ಮ ಆಯ್ಕೆಯನ್ನು ಚಲಾಯಿಸದೇ ಇದ್ದಲ್ಲಿ ರಾಷ್ಟ್ರೀಯ ಪಿ೦ಚಣಿ ಯೋಜನೆಯಲ್ಲಿ ಮುಂದುವರಿಯುತ್ತಾರೆ. ನೌಕರರ ಆಯ್ಕೆಗನುಸಾರ, ಅವರು ತಮ್ಮ ಹಿ೦ದಿನ ಡಿಫೈನ್ಡ್ ಪಿಂಚಣಿ ಯೋಜನೆಗೊಳಪಡಲು ನಿಗಧಿತ ಅರ್ಹತೆಯನ್ನು ಹೊ೦ದಿರುವುದನ್ನು ಸಕ್ಷಮ ನೇಮಕಾತಿ ಪ್ರಾಧಿಕಾರವು ಖಚಿತಪಡಿಸಿಕೊ೦ಡು ದಿನಾಂಕ: 31.07.2024 ರೊಳಗಾಗಿ ಅ೦ತಹ ನೌಕರರನ್ನು ಹಿ೦ದಿನ ಡಿಫೈನ್ ಪಿಂಚಣಿ ಯೋಜನೆಗೊಳಪಡಿಸಲು ಶಿಫಾರಸ್ಸಿನೊ೦ದಿಗೆ ಇಲಾಖಾ ಮುಖ್ಯಸ್ಥರಿಗೆ ಕ್ರೋಢೀಕೃತ ಪ್ರಸ್ತಾವನೆಯನ್ನು ಸಲ್ಲಿಸತಕ್ಕದ್ದು. ಇಲಾಖಾ ಮುಖ್ಯಸ್ಥರು ತಮ್ಮ ಅಧೀನದ ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಂದ ಸ್ಟೀಕೃತವಾದ ಪ್ರಸ್ತಾವನೆಗಳನ್ನು ಪರಿಶೀಲಿಸಿ, ಹಿ೦ದಿನ ಡಿಫೈನ್ಡ್ ಪಿ೦ಚಣಿ ಯೋಜನೆಗೆ ಒಳಪಡಲು ಅರ್ಹ ನೌಕರರ ಪಟ್ಟಿಯನ್ನು ದಿನಾ೦ಕ: 31.08.2024ರೊಳಗೆ ಆರ್ಥಿಕ ಇಲಾಖೆಯ ಅನುಮೋದನೆಗಾಗಿ ಸಲ್ಲಿಸತಕ್ಕದ್ದು ಎಂದು ಹೇಳಿದೆ.

ದಿನಾ೦ಕ: 01.04.2006ರ ಪೂರ್ವದಲ್ಲಿನ ರಾಜ್ಯ ಸಿವಿಲ್ ಸೇವೆಯಲ್ಲಿನ ಖಾಲಿ ಹುದ್ದೆಗಳಿಗೆ ಹೊರಡಿಸಲಾದ ನೇಮಕಾತಿ ಅಧಿಸೂಚನೆಯನ್ವಯ ಆಯ್ಕೆಯಾಗಿ, ಕರ್ತವ್ಯಕ್ಕೆ ವರದಿ ಮಾಡಿಕೊಂಡು ತದನ೦ತರ ಸಮುಚಿತ ಮಾರ್ಗದಲ್ಲಿ ಅರ್ಜಿಯನ್ನು ಸಲ್ಲಿಸಿ, ಸರ್ಕಾರದ ಅನ್ಯ ಇಲಾಖೆಯಲ್ಲಿನ ಹುದ್ದೆಗೆ ನೇಮಕಾತಿ ಹೊಂದಿದ ಅರ್ಹ ಸರ್ಕಾರಿ ನೌಕರರು, ತಮ್ಮ ಹಿ೦ದಿನ ಡಿಫೈನ್ಡ್ ಪಿ೦ಚಣಿ ಯೋಜನೆ ಸೌಲಭ್ಯ ಪಡೆದುಕೊಳ್ಳಲು ಇಚ್ಚಿಸಿದಲ್ಲಿ, ಮನವಿಯನ್ನು ಹಿ೦ದಿನ ನೇಮಕಾತಿ ಪಾಧಿಕಾರಕ್ಕೆ ದಿನಾ೦ಕ: 30.06.2024ರೊಳಗಾಗಿ ಸಲ್ಲಿಸತಕ್ಕದ್ದು.

ನೇಮಕಾತಿ ಪ್ರಾಧಿಕಾರವು ಅ೦ತಹ ಸರ್ಕಾರಿ ನೌಕರನು ಸಮುಚಿತ ಮಾರ್ಗದಲ್ಲಿ ಅರ್ಜಿ ಸಲ್ಲಿಸಿ, ಅನ್ಯ ಇಲಾಖೆಗೆ ಆಯ್ಕೆಯಾದ ಹುದ್ದೆಗೆ ವರದಿ ಮಾಡಿಕೊಳ್ಳುವ ಸಲುವಾಗಿ ಬಿಡುಗಡೆ ಹೊ೦ದಿರುವುದನ್ನು ಖಚಿತಪಡಿಸಿಕೊ೦ಡು, ಮೇಲಿನ ಕ್ರಮ ಸ೦ಖ್ಯೆ 4 ರಂತೆ ಪರಿಶೀಲಿಸಿ, ಮೇಲಿನ ಕ್ರಮ ಸ೦ಖ್ಯೆ 5 ರಂತೆ ಮು೦ದಿನ ಕ್ರಮಕ್ಕಾಗಿ ಕಳುಹಿಸತಕ್ಕದ್ದು ಎಂದು ಆದೇಶದಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ; ನನಗೆ ಹಿಂದಿ ಬರಲ್ಲ, ಕ್ರಿಮಿನಲ್ ಕಾನೂನುಗಳನ್ನು ಹಳೆಯ ಹೆಸರಿನಿಂದಲೇ ಉಲ್ಲೇಖಿಸುತ್ತೇನೆ: ನ್ಯಾ. ಆನಂದ್ ವೆಂಕಟೇಶ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಜಸ್ಥಾನ: ಬಿಜೆಪಿ ಸರ್ಕಾರದ ಯೋಜನೆಯಲ್ಲಿ 1,140 ಕೋಟಿ ರೂ.ನಷ್ಟ: ತಮ್ಮದೇ ಸರಕಾರದ ವಿರುದ್ಧ ಆರೋಪಿಸಿದ...

0
ರಾಜಸ್ಥಾನದ ಬಿಜೆಪಿ ಸರಕಾರ ಅಧಿಕಾರಕ್ಕೇರಿದ ಆರು ತಿಂಗಳಲ್ಲೇ ಬಿಕ್ಕಟ್ಟನ್ನು ಎದುರಿಸುತ್ತಿದ್ದು, ಮುಖ್ಯಮಂತ್ರಿಯ ಅಧೀನದ ಇಲಾಖೆಯಲ್ಲಿನ ವಸತಿ ಯೋಜನೆಯಲ್ಲಿನ ಲೋಪದೋಷವನ್ನು ಕ್ಯಾಬಿನೆಟ್ ಸಚಿವರೋರ್ವರು ಬಹಿರಂಗಪಡಿಸಿದ್ದು, ಇದರಿಂದ ಸರಕಾರದ ಬೊಕ್ಕಸಕ್ಕೆ 1,146 ಕೋಟಿ ರೂ. ನಷ್ಟವಾಗಿದೆ...