Homeಮುಖಪುಟ13 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ; 7 ಮಂದಿಯ ಬಂಧನ

13 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ; 7 ಮಂದಿಯ ಬಂಧನ

- Advertisement -
- Advertisement -

ಮಹಾರಾಷ್ಟ್ರದ ಪುಣೆಯಲ್ಲಿ 13 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಪ್ರಕರಣದಲ್ಲಿ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಆಗಸ್ಟ್‌ 31ರ ರಾತ್ರಿ ಪುಣೆ ರೈಲ್ವೆ ನಿಲ್ದಾಣ ಬಳಿ ತನ್ನ ಸ್ನೇಹಿತರೊಬ್ಬರನ್ನು ಬಾಲಕಿ ಕಾಯುತ್ತ ನಿಂತಿದ್ದಾಗ ಆಟೋ ರಿಕ್ಷಾ ಚಾಲಕನೊಬ್ಬ ಆಕೆಯನ್ನು ನೋಡಿದ್ದಾನೆ. ಬಾಲಕಿಯ ಸ್ನೇಹಿತರ್‍ಯಾರೂ ಬರದಿದ್ದಾಗ ಆಟೋ ಚಾಲಕ, ಬಾಲಕಿಯ ಬಳಿ ಹೋಗಿ, “ಈಗಾಗಲೇ ಸಾಕಷ್ಟು ಸಮಯವಾಗಿದೆ. ನಿನ್ನನ್ನು ಮನೆಗೆ ಬಿಟ್ಟು ಬರುತ್ತೇನೆ” ಎಂದು ನಂಬಿಸಿ, ಅಪಹರಿಸಿ ತನ್ನ ಸ್ನೇಹಿತರನ್ನು ಕರೆಸಿಕೊಂಡು ಸಾಮೂಹಿಕ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಗಳು ಹಿಂತಿರುಗದಿದ್ದಾಗ ಬಾಲಕಿಯ ತಂದೆ, ಪೊಲೀಸರಿಗೆ ದೂರು ನೀಡಿದ್ದಾರೆ. ನಂತರ ಪೊಲೀಸರು ಕಾಣೆಯಾದ ಹುಡುಗಿಯನ್ನು ಪುಣೆ ನಗರದಲ್ಲೇ ಪತ್ತೆಹಚ್ಚಿದ್ದಾರೆ. ಯುವತಿಯ ಹೇಳಿಕೆ ಪಡೆದ ಬಳಿಕ ಪ್ರಕರಣ ದಾಖಲಿಸಲಾಗಿದೆ ಎಂದು ಪುಣೆಯ ಪೊಲೀಸ್ ಉಪ ಆಯುಕ್ತರಾದ ನರ್ಮತಾ ಪಾಟೀಲ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ’ಸಬಿಯಾ’ ಹೆಣ್ಣಲ್ಲವೇ?: ಅತ್ಯಾಚಾರ, ಕೊಲೆಗೆ ಮೌನ ತಾಳಿದ ಸಮಾಜಕ್ಕೆ ಪ್ರಜ್ಞಾವಂತರ ಪ್ರಶ್ನೆ

ಕಾಣೆಯಾಗಿದ್ದ ಬಾಲಕಿಯನ್ನು ಭಾನುವಾರ ಪತ್ತೆ ಹಚ್ಚಲಾಯಿತು. ತನ್ನನ್ನು ಅಪಹರಿಸಿ, ಅತ್ಯಾಚಾರ ಎಸಗಿರುವುದಾಗಿ ಬಾಲಕಿ ಹೇಳಿಕೆ ನೀಡಿದ್ದಾಳೆ ಎಂದು ವಾನ್ವಾಡಿ ಪೊಲೀಸ್ ಠಾಣೆಯ ಸೀನಿಯರ್ ಇನ್‌ಸ್ಪೆಕ್ಟರ್ ದೀಪಕ್‌ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರರನ್ನು ಪೊಲೀಸರು ಬೆನ್ನತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...