ದೇಶದ ಆರ್ಥಿಕ ರಾಜಧಾನಿ ಮುಂಬೈ ಮೇಲೆ ನವೆಂಬರ್ 26, 2008 ರಂದು ನಡೆದ ಭಯೋತ್ಪಾದಕ ದಾಳಿಗೆ ಇಂದು 13 ವರ್ಷ. ಈ ದಾಳಿಯಲ್ಲಿ ಹುತಾತ್ಮರಾದವರಿಗೆ ದೇಶದ ರಾಜಕಾರಣಿಗಳು, ಗಣ್ಯರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕೇಂದ್ರ ಸಚಿವರು ದಳಿಯಲ್ಲಿ ಹುತಾತ್ಮರಾದ ಯೋಧರು ಮತ್ತು ನಾಗರಿಕರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಭಯೋತ್ಪಾದಕರನ್ನು ಸದೆಬಡಿಯುವಲ್ಲಿ ಭದ್ರತಾ ಪಡೆಗಳು ತೋರಿದ ಧೈರ್ಯವನ್ನು ಶ್ಲಾಘಿಸಿದ್ದಾರೆ.
“26/11 ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದವರಿಗೆ ನನ್ನ ಶ್ರದ್ಧಾಂಜಲಿಗಳು. ಕರ್ತವ್ಯದಲ್ಲಿ ತಮ್ಮ ಪ್ರಾಣವನ್ನು ಅರ್ಪಿಸಿದ ಭದ್ರತಾ ಪಡೆಗಳ ಶೌರ್ಯ ಮತ್ತು ತ್ಯಾಗಕ್ಕೆ ರಾಷ್ಟ್ರವು ಯಾವಾಗಲೂ ಕೃತಜ್ಞರಾಗಿರಬೇಕು” ಎಂದು ರಾಷ್ಟ್ರಪತಿ ಕೋವಿಂದ್ ಹೇಳಿದ್ದಾರೆ. ಟ್ವಿಟರ್‌ನಲ್ಲಿ ಬರೆದಿದ್ದಾರೆ.
ಇದನ್ನೂ ಓದಿ: ಮುಂಬೈ ದಾಳಿಯ ಬಗ್ಗೆ ಮನಮೋಹನ್ ಸಿಂಗ್ ಅವರನ್ನು ಪ್ರಶ್ನಿಸಿದ ಮಾಧ್ಯಮ ಪುಲ್ವಾಮ ದಾಳಿ ಬಗ್ಗೆ ಮೋದಿಯನ್ನು ಪ್ರಶ್ನಿಸಲಿಲ್ಲ!
My heartfelt tributes to the martyrs and homage to the victims of the 26/11 #MumbaiTerrorAttacks. The nation will always be grateful for the bravery and sacrifice of the security forces who laid down their lives in the line of duty.
— President of India (@rashtrapatibhvn) November 26, 2021
ದಾಳಿಯಲ್ಲಿ ಹುತಾತ್ಮರಾದವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಭಯೋತ್ಪಾದಕರ ವಿರುದ್ಧ ಹೋರಾಡಿದ ಭದ್ರತಾ ಸಿಬ್ಬಂದಿಯ ವೀಡಿಯೊ ಮಾಂಟೇಜ್ ಜೊತೆಗೆ ಸೈನಿಕರ ಶೌರ್ಯವನ್ನು ಶ್ಲಾಘಿಸಿ ಟ್ವೀಟ್ ಮಾಡಿದ್ದಾರೆ.
ಗೃಹ ಸಚಿವ ಅಮಿತ್ ಶಾ ಹಿಂದಿಯಲ್ಲಿ ಟ್ವೀಟ್ ಮಾಡಿದ್ದು, ಭದ್ರತಾ ಪಡೆಗಳ ತ್ಯಾಗಕ್ಕೆ ಭಾರತ ಯಾವಾಗಲೂ ಋಣಿಯಾಗಿರುತ್ತದೆ ಎಂದು ಹೇಳಿದ್ದಾರೆ.
ನವೆಂಬರ್ 26, 2008 ರಂದು ಲಷ್ಕರ್–ಎ– ತೊಯ್ಬಾದ ಸಂಘಟನೆ ಭಯೋತ್ಪಾದಕರು ಪಾಕಿಸ್ತಾನದಿಂದ ಸಮುದ್ರ ಮಾರ್ಗದ ಮೂಲಕ ಮುಂಬೈ ಪ್ರವೇಶಿಸಿ, ನಡೆಸಿದ ಸರಣಿ ದಾಳಿಗಳಲ್ಲಿ 18 ಭದ್ರತಾ ಸಿಬ್ಬಂದಿ ಸೇರಿದಂತೆ 166 ಜನರು ಈ ಘಟನೆಯಲ್ಲಿ ಮೃತಪಟ್ಟಿದ್ದರು. ಉಗ್ರರು ಮಹಾನಗರಿಯ ಜನನಿಬಿಡ ಪ್ರದೇಶಗಳಲ್ಲಿ ಗುಂಡಿನ ಮಳೆ ಸುರಿಸಿದ್ದರು. ಮುಂಬೈನ ತಾಜ್ ಹೋಟೆಲ್ ಮೇಲೆ ಉಗ್ರರು ದಾಳಿ ಮಾಡಿದ್ದರು. ಭದ್ರತಾ ಪಡೆಗಳು 10 ಉಗ್ರರ ಪೈಕಿ ಒಂಬತ್ತು ಮಂದಿಯನ್ನು ಹೊಡೆದುರುಳಿಸಿತ್ತು. ಬದುಕುಳಿದ್ದ ಏಕೈಕ ಉಗ್ರ ಅಜ್ಮಲ್ ಕಸಬ್ ಅನ್ನು ನವೆಂಬರ್ 21, 2021 ರಂದು ಗಲ್ಲಿಗೇರಿಸಲಾಯಿತು.


