Homeಮುಖಪುಟ26/11 ಮುಂಬೈ ಭಯೋತ್ಪಾದಕ ದಾಳಿಗೆ 13 ವರ್ಷ: ಹುತಾತ್ಮರನ್ನು ಸ್ಮರಿಸಿದ ಗಣ್ಯರು

26/11 ಮುಂಬೈ ಭಯೋತ್ಪಾದಕ ದಾಳಿಗೆ 13 ವರ್ಷ: ಹುತಾತ್ಮರನ್ನು ಸ್ಮರಿಸಿದ ಗಣ್ಯರು

- Advertisement -
- Advertisement -

ದೇಶದ ಆರ್ಥಿಕ ರಾಜಧಾನಿ ಮುಂಬೈ ಮೇಲೆ ನವೆಂಬರ್ 26, 2008 ರಂದು ನಡೆದ ಭಯೋತ್ಪಾದಕ ದಾಳಿಗೆ ಇಂದು 13 ವರ್ಷ. ಈ ದಾಳಿಯಲ್ಲಿ ಹುತಾತ್ಮರಾದವರಿಗೆ ದೇಶದ ರಾಜಕಾರಣಿಗಳು, ಗಣ್ಯರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕೇಂದ್ರ ಸಚಿವರು ದಳಿಯಲ್ಲಿ ಹುತಾತ್ಮರಾದ ಯೋಧರು ಮತ್ತು ನಾಗರಿಕರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಭಯೋತ್ಪಾದಕರನ್ನು ಸದೆಬಡಿಯುವಲ್ಲಿ ಭದ್ರತಾ ಪಡೆಗಳು ತೋರಿದ ಧೈರ್ಯವನ್ನು ಶ್ಲಾಘಿಸಿದ್ದಾರೆ.

“26/11 ಮುಂಬೈ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದವರಿಗೆ ನನ್ನ ಶ್ರದ್ಧಾಂಜಲಿಗಳು. ಕರ್ತವ್ಯದಲ್ಲಿ ತಮ್ಮ ಪ್ರಾಣವನ್ನು ಅರ್ಪಿಸಿದ ಭದ್ರತಾ ಪಡೆಗಳ ಶೌರ್ಯ ಮತ್ತು ತ್ಯಾಗಕ್ಕೆ ರಾಷ್ಟ್ರವು ಯಾವಾಗಲೂ ಕೃತಜ್ಞರಾಗಿರಬೇಕು” ಎಂದು ರಾಷ್ಟ್ರಪತಿ ಕೋವಿಂದ್ ಹೇಳಿದ್ದಾರೆ. ಟ್ವಿಟರ್‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ಮುಂಬೈ ದಾಳಿಯ ಬಗ್ಗೆ ಮನಮೋಹನ್‌ ಸಿಂಗ್ ಅವರನ್ನು ಪ್ರಶ್ನಿಸಿದ ಮಾಧ್ಯಮ ಪುಲ್ವಾಮ ದಾಳಿ ಬಗ್ಗೆ ಮೋದಿಯನ್ನು ಪ್ರಶ್ನಿಸಲಿಲ್ಲ!

ದಾಳಿಯಲ್ಲಿ ಹುತಾತ್ಮರಾದವರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಭಯೋತ್ಪಾದಕರ ವಿರುದ್ಧ ಹೋರಾಡಿದ ಭದ್ರತಾ ಸಿಬ್ಬಂದಿಯ ವೀಡಿಯೊ ಮಾಂಟೇಜ್ ಜೊತೆಗೆ ಸೈನಿಕರ ಶೌರ್ಯವನ್ನು ಶ್ಲಾಘಿಸಿ ಟ್ವೀಟ್ ಮಾಡಿದ್ದಾರೆ.

ಗೃಹ ಸಚಿವ ಅಮಿತ್ ಶಾ ಹಿಂದಿಯಲ್ಲಿ ಟ್ವೀಟ್ ಮಾಡಿದ್ದು, ಭದ್ರತಾ ಪಡೆಗಳ ತ್ಯಾಗಕ್ಕೆ ಭಾರತ ಯಾವಾಗಲೂ ಋಣಿಯಾಗಿರುತ್ತದೆ ಎಂದು ಹೇಳಿದ್ದಾರೆ.

ನವೆಂಬರ್ 26, 2008 ರಂದು ಲಷ್ಕರ್‌–ಎ– ತೊಯ್ಬಾದ ಸಂಘಟನೆ ಭಯೋತ್ಪಾದಕರು ಪಾಕಿಸ್ತಾನದಿಂದ ಸಮುದ್ರ ಮಾರ್ಗದ ಮೂಲಕ ಮುಂಬೈ ಪ್ರವೇಶಿಸಿ, ನಡೆಸಿದ ಸರಣಿ ದಾಳಿಗಳಲ್ಲಿ 18 ಭದ್ರತಾ ಸಿಬ್ಬಂದಿ ಸೇರಿದಂತೆ 166 ಜನರು ಈ ಘಟನೆಯಲ್ಲಿ ಮೃತಪಟ್ಟಿದ್ದರು. ಉಗ್ರರು ಮಹಾನಗರಿಯ ಜನನಿಬಿಡ ಪ್ರದೇಶಗಳಲ್ಲಿ ಗುಂಡಿನ ಮಳೆ ಸುರಿಸಿದ್ದರು. ಮುಂಬೈನ ತಾಜ್​​​​​ ಹೋಟೆಲ್ ಮೇಲೆ ಉಗ್ರರು ದಾಳಿ ಮಾಡಿದ್ದರು. ಭದ್ರತಾ ಪಡೆಗಳು 10 ಉಗ್ರರ ಪೈಕಿ ಒಂಬತ್ತು ಮಂದಿಯನ್ನು ಹೊಡೆದುರುಳಿಸಿತ್ತು. ಬದುಕುಳಿದ್ದ ಏಕೈಕ ಉಗ್ರ ಅಜ್ಮಲ್ ಕಸಬ್ ಅನ್ನು ನವೆಂಬರ್ 21, 2021 ರಂದು ಗಲ್ಲಿಗೇರಿಸಲಾಯಿತು.


ಇದನ್ನೂ ಓದಿ: 26/11 ಮುಂಬೈ ದಾಳಿ ರುವಾರಿ‌‌ ಹಫೀಜ್‌ ಸಯೀದ್‌ಗೆ ಮತ್ತೇ 10 ವರ್ಷಗಳ ಜೈಲು ಶಿಕ್ಷೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸನಾತನ ಧರ್ಮದ ಅನುಯಾಯಿಗಳಿಗೆ ಮಾತ್ರ ದೇವಿ ವಿಗ್ರಹಗಳನ್ನು ಸ್ಪರ್ಶಿಸಲು ಅನುಮತಿ: ಪಶ್ಚಿಮ ಬಂಗಾಳ ಸಿಎಂ ಸುವೇಂದು ಅಧಿಕಾರಿ

ಹುಗ್ಲಿ ನದಿಯಲ್ಲಿ ದುರ್ಗಾ ವಿಸರ್ಜನೆಯ ಸಮಯದಲ್ಲಿ ಸನಾತನ ಧರ್ಮದ ಅನುಯಾಯಿಗಳಿಗೆ ಮಾತ್ರ ದೇವಿಯ ವಿಗ್ರಹಗಳನ್ನು ಸ್ಪರ್ಶಿಸಲು ಅನುಮತಿ ನೀಡಲಾಗುವುದು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಬುಧವಾರ ಹೇಳಿದ್ದಾರೆ. ಸುರಕ್ಷತಾ ಕಾಳಜಿಗಳು ಮತ್ತು...

ಮಹಾರಾಷ್ಟ್ರ ಸಿಇಒ ಮನವಿಗೆ ಸ್ಪಂದಿಸಿದ ಚುನಾವಣಾ ಆಯೋಗ: ‘ಇಸಿಐನೆಟ್’ ಸಾಫ್ಟ್‌ವೇರ್‌ನಲ್ಲಾಯಿತು 4 ಪ್ರಮುಖ ಬದಲಾವಣೆ!

ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ತಾಂತ್ರಿಕ ಸಾಫ್ಟ್‌ವೇರ್‌ನ ಅತಿಯಾದ ನಿಯಂತ್ರಣವು ಸ್ಥಳೀಯ ನೋಂದಣಿ ಅಧಿಕಾರಿಗಳ ಶಾಸನಬದ್ಧ ಅಧಿಕಾರವನ್ನೇ ಕಸಿದುಕೊಳ್ಳುತ್ತಿದೆ ಎಂಬ ತೀವ್ರ ಕಳವಳದ ಬೆನ್ನಲ್ಲೇ, ಭಾರತೀಯ ಚುನಾವಣಾ ಆಯೋಗವು ತನ್ನ 'ಇಸಿಐನೆಟ್' (ECINet)...

ಮಸೀದಿಯಲ್ಲಿ ಚುಂಬಿಸಿದ್ದಕ್ಕೆ ಮರಣದಂಡನೆ? ಸೌದಿ ಅಮಾನವೀಯ ತೀರ್ಪಿಗೆ ತೀವ್ರ ಆಕ್ರೋಶ

ಮುಸ್ಲಿಂ ಸಮುದಾಯದ ಪವಿತ್ರ ನಗರವಾದ ಮೆಕ್ಕಾದ ಮಸೀದಿಯೊಂದರಲ್ಲಿ ಅನೈತಿಕ ಕೃತ್ಯ ಎಸಗಿದ್ದಾರೆ ಎಂಬ ಆರೋಪದ ಮೇಲೆ ಸೌದಿ ಅರೇಬಿಯಾ ಇಬ್ಬರು ಬಾಂಗ್ಲಾದೇಶಿ ಪ್ರಜೆಗಳಿಗೆ ಮರಣದಂಡನೆ ವಿಧಿಸಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಈ ಮರಣದಂಡನೆಗಳು...

ಯೂಸುಫ್ ಪಠಾಣ್‌ಗೆ ವಡೋದರಾದ ವಿವಾದಿತ ನಿವೇಶನ ಹಂಚಿಕೆ ಮಾಡಿದ ಗುಜರಾತ್ ಬಿಜೆಪಿ ಸರ್ಕಾರ : ಟಿಎಂಸಿ ತೊರೆದು ಎನ್‌ಡಿಎ ಬೆಂಬಲಿಸಿದ್ದಕ್ಕೆ ಗಿಫ್ಟ್?

ಲೋಕಸಭಾ ಸಂಸದ ಮತ್ತು ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರಿಗೆ ವಡೋದರಾದಲ್ಲಿರುವ 978 ಚದರ ಮೀಟರ್ ವಿಸ್ತೀರ್ಣದ ವಿವಾದಿತ ನಿವೇಶನವನ್ನು ಹಂಚಿಕೆ ಮಾಡಲು ಗುಜರಾತ್‌ನ ಬಿಜೆಪಿ ಸರ್ಕಾರವು ಅನುಮೋದನೆ ನೀಡಿದೆ. ಈ ಸಂಬಂಧ...

‘ಒಬ್ಬರೇ ಭೇಟಿಯಾಗಿದ್ದು ಯಾಕೆ?’ : ಎಪ್‌ಸ್ಟೀನ್ ಜೊತೆಗಿನ ಸಚಿವ ಹರ್ದೀಪ್ ಸಿಂಗ್ ಪುರಿ ಪೋಟೋ ಹಂಚಿಕೊಂಡು ಪ್ರತಿಪಕ್ಷ ನಾಯಕರ ಪ್ರಶ್ನೆ, ಉತ್ತರ ನೀಡಲು ಆಗ್ರಹ

ಕಾಂಗ್ರೆಸ್, ಟಿಎಂಸಿ ಮತ್ತು ಎನ್‌ಸಿಪಿ (ಎಸ್‌ಪಿ) ಸೇರಿದಂತೆ ವಿರೋಧ ಪಕ್ಷದ ನಾಯಕರು, ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೀನ್ ಅನ್ನು ಭೇಟಿಯಾಗಿರುವ ಫೋಟೋ...

ಸಿಎಂಆರ್‌ಎಲ್-ಎಕ್ಸಾಲಾಜಿಕ್ ಪ್ರಕರಣ: ಪಿಣರಾಯಿ ವಿಜಯನ್ ವಿರುದ್ಧದ ತನಿಖೆಗೆ 7 ದಿನಗಳ ತಡೆ ನೀಡಿದ ಸುಪ್ರೀಂ ಕೋರ್ಟ್: ಹೈಕೋರ್ಟ್‌ನಲ್ಲಿ ಮೇಲ್ಮನವಿಗೆ ಅವಕಾಶ

ಖಾಸಗಿ ಕಂಪನಿಯಿಂದ ಅಕ್ರಮ ಹಣಕಾಸು ವ್ಯವಹಾರ ನಡೆಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ 'ಸಿಎಂಆರ್‌ಎಲ್-ಎಕ್ಸಾಲಾಜಿಕ್' ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಅವರ ಪುತ್ರಿ ವೀಣಾ ಟಿ. ಹಾಗೂ ಅಳಿಯ, ಮಾಜಿ ಸಚಿವ...

ನ್ಯಾಯಾಂಗ ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಸಿಜೆಪಿಯ ಸೌರವ್ – ಅಶುತೋಷ್

ಪ್ರತಿಭಟನಾ ಸ್ಥಳವಲ್ಲ ಎಂದು ಅಧಿಸೂಚನೆ ಹೊರಡಿಸಲಾಗಿರುವ ಜಂತರ್ ಮಂತರ್‌ನಲ್ಲಿ ರಾಷ್ಟ್ರಧವಜ ಹಾರಿಸಿ ಬಂಧನಕ್ಕೊಳಗಾಗಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಮುಖಂಡರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ, ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (ಎಸ್‌ಇಎಂ)...

ಆಂಧ್ರ ಪ್ರದೇಶ ಮುನ್ಸಿಪಲ್ ಚುನಾವಣೆ: ವೈಎಸ್‌ಆರ್‌ಸಿಪಿ ಅರ್ಜಿ ಪರಿಶೀಲಿಸಿ ನಾಳೆಯೊಳಗೆ ತೀರ್ಮಾನಿಸಿ; ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ನಿರ್ದೇಶನ!

ಆಂಧ್ರಪ್ರದೇಶದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ವೇಳೆ ವ್ಯಾಪಕ ಹಿಂಸಾಚಾರ ನಡೆಸಿ, ತಮ್ಮ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸದಂತೆ ತಡೆಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ನೇತೃತ್ವದ ಪ್ರಮುಖ...

ಸಿಜೆಪಿ ನಾಯಕರು – ನೇಹಾ ಬೋರಾ ಅರ್ಜಿಗಳ ತುರ್ತು ವಿಚಾರಣೆಗೆ ಒಪ್ಪಿದ ದೆಹಲಿ ಹೈಕೋರ್ಟ್‌

ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ (ಎಸ್‌ಇಎಂ) ತಮ್ಮ ನ್ಯಾಯಾಂಗ ಬಂಧನವನ್ನು ವಿಸ್ತರಿಸಿರುವುದನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಮುಖಂಡರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಸಲ್ಲಿಸಿರುವ ಅರ್ಜಿಯನ್ನು ಬುಧವಾರ (ಅ.21) ವಿಚಾರಣೆ...

ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಜೆಎನ್‌ಯು : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಬಿಟ್ಟ ವಿದ್ಯಾರ್ಥಿಗಳು

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ ವಿದ್ಯಾರ್ಥಿ ಸಂಘದ (JNUSU) ಸದಸ್ಯರು ಮಂಗಳವಾರ (ಅಕ್ಟೋಬರ್ 20) ತಮ್ಮ 17 ದಿನಗಳ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ. ವಿದ್ಯಾರ್ಥಿ ಪ್ರತಿನಿಧಿಗಳು ಮತ್ತು ವಿಶ್ವವಿದ್ಯಾಲಯದ ಡೀನ್ ನೇತೃತ್ವದ ಸಮಿತಿಯ ನಡುವೆ...