Homeಅಂತರಾಷ್ಟ್ರೀಯ130 ಪರಮಾಣು ಸಿಡಿತಲೆಗಳು, ಕ್ಷಿಪಣಿಗಳು ಭಾರತದ ವಿರುದ್ಧ ಸಿದ್ಧವಾಗಿ ನಿಂತಿದೆ: ಪಾಕ್ ಸಚಿವ ಬೆದರಿಕೆ

130 ಪರಮಾಣು ಸಿಡಿತಲೆಗಳು, ಕ್ಷಿಪಣಿಗಳು ಭಾರತದ ವಿರುದ್ಧ ಸಿದ್ಧವಾಗಿ ನಿಂತಿದೆ: ಪಾಕ್ ಸಚಿವ ಬೆದರಿಕೆ

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಪಾಕಿಸ್ತಾನದ ನಡುವಿನ ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆ ಪಾಕಿಸ್ತಾನದ ಸಚಿವ ಹನೀಫ್ ಅಬ್ಬಾಸಿ ಭಾರತಕ್ಕೆ ಪರಮಾಣು ಪ್ರತೀಕಾರದ ಬೆದರಿಕೆ ಹಾಕಿದ್ದಾರೆ. ಘೋರಿ, ಶಾಹೀನ್ ಮತ್ತು ಘಜ್ನವಿ ಕ್ಷಿಪಣಿಗಳು ಸೇರಿದಂತೆ ಪಾಕಿಸ್ತಾನದ ಕ್ಷಿಪಣಿ ಶಸ್ತ್ರಾಸ್ತ್ರಗಳು ಮತ್ತು 130 ಪರಮಾಣು ಸಿಡಿತಲೆಗಳನ್ನು “ಭಾರತಕ್ಕಾಗಿ ಮಾತ್ರ” ಮೀಸಲಿಡಲಾಗಿದೆ ಎಂದು ಹೇಳಿಕೊಂಡಿದ್ದಾರೆ. ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವ ಭಾರತದ ಇತ್ತೀಚಿನ ನಿರ್ಧಾರಕ್ಕೆ ಪ್ರತಿಕ್ರಿಯೆಯಾಗಿ ಅಬ್ಬಾಸಿ ಈ ಬೆದರಿಕೆ ಹಾಕಿದ್ದಾರೆ.

ಭಾರತವು ಪಾಕಿಸ್ತಾನದ ನೀರು ಸರಬರಾಜನ್ನು ನಿಲ್ಲಿಸಲು ನಿರ್ಧರಿಸಿದರೆ, ಅದು “ಪೂರ್ಣ ಪ್ರಮಾಣದ ಯುದ್ಧಕ್ಕೆ ಸಿದ್ಧವಾಗಬೇಕು” ಎಂದು ಅಬ್ಬಾಸಿ ಬಹಿರಂಗವಾಗಿ ಘೋಷಿಸಿದ್ದಾರೆ. ಪಾಕಿಸ್ತಾನದ ಪರಮಾಣು ಶಸ್ತ್ರಾಸ್ತ್ರಗಳು ಕೇವಲ ಸಾಂಕೇತಿಕವಾಗಿ ಇರುವುದಲ್ಲ, ಬದಲಾಗಿ ದೇಶಾದ್ಯಂತ ಅವುಗಳನ್ನು ಇರಿಸಲಾಗಿದ್ದು, ಬಳಸಲು ಸಿದ್ಧವಾಗಿವೆ ಎಂದು ಹೇಳಿದ್ದಾರೆ.

“ಅವರು ನಮಗೆ ನೀರು ಸರಬರಾಜನ್ನು ನಿಲ್ಲಿಸಿದರೆ, ಅವರು ಯುದ್ಧಕ್ಕೆ ಸಿದ್ಧರಾಗಿರಬೇಕು. ನಮ್ಮಲ್ಲಿರುವ ಮಿಲಿಟರಿ ಉಪಕರಣಗಳು, ನಮ್ಮಲ್ಲಿರುವ ಕ್ಷಿಪಣಿಗಳು, ಅವು ಪ್ರದರ್ಶನಕ್ಕಾಗಿ ಇಟ್ಟಿರುವುದಲ್ಲ. ನಾವು ದೇಶಾದ್ಯಂತ ನಮ್ಮ ಪರಮಾಣು ಶಸ್ತ್ರಾಸ್ತ್ರಗಳನ್ನು ಎಲ್ಲಿ ಇರಿಸಿದ್ದೇವೆ ಎಂದು ಯಾರಿಗೂ ತಿಳಿದಿಲ್ಲ. ನಾನು ಮತ್ತೊಮ್ಮೆ ಹೇಳುತ್ತೇನೆ, ಈ ಬ್ಯಾಲಿಸ್ಟಿಕ್ ಕ್ಷಿಪಣಿಗಳು, ಅವೆಲ್ಲದರ ಗುರಿಯು ನಿಮ್ಮ ಮೇಲೆಯಾಗಿದೆ” ಎಂದು ಅವರು ಎಚ್ಚರಿಸಿದ್ದಾರೆ.

1960 ರ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸುವುದು ಮತ್ತು ಪಾಕಿಸ್ತಾನಿ ಪ್ರಜೆಗಳಿಗೆ ವೀಸಾಗಳನ್ನು ರದ್ದುಗೊಳಿಸುವುದು ಸೇರಿದಂತೆ ಪಹಲ್ಗಾಮ್ ದುರಂತ ದಾಳಿಗೆ ಭಾರತವು ಪ್ರತಿಕ್ರಮಗಳನ್ನು ತೆಗೆದುಕೊಂಡ ನಂತರ ಅಬ್ಬಾಸಿ ಈ ತೀಕ್ಷ್ಣ ಹೇಳಿಕೆ ನೀಡಿದ್ದಾರೆ. ಭಾರತದ ನಿರ್ಧಾರವನ್ನು ಅಪಹಾಸ್ಯ ಮಾಡಿದ ಸಚಿವ ಅಬ್ಬಾಸಿ, ಭಾರತವು ತನ್ನ ಕ್ರಮಗಳ ಪರಿಣಾಮಗಳನ್ನು ಅರಿತುಕೊಳ್ಳಲು ಪ್ರಾರಂಭಿಸುತ್ತಿದೆ ಎಂದು ಪರೋಕ್ಷವಾಗಿ ಹೇಳಿದ್ದಾರೆ.

ಪಾಕಿಸ್ತಾನವು ಭಾರತೀಯ ವಿಮಾನಗಳಿಗೆ ತನ್ನ ವಾಯುಪ್ರದೇಶವನ್ನು ಮುಚ್ಚಿದ್ದರಿಂದ ಉಂಟಾದ ಅಡಚಣೆಯನ್ನು ಉಲ್ಲೇಖಿಸಿದ ಅಬ್ಬಾಸಿ, ಕೇವಲ ಎರಡು ದಿನಗಳಲ್ಲಿ ಭಾರತೀಯ ವಾಯುಯಾನದಲ್ಲಿ ಅದು ಉಂಟುಮಾಡಿದ ಅವ್ಯವಸ್ಥೆಯನ್ನು ಎತ್ತಿತೋರಿಸಿದ್ದಾರೆ. “ಇನ್ನೂ 10 ದಿನಗಳ ಕಾಲ ವಿಷಯಗಳು ಹೀಗೆ ಮುಂದುವರಿದರೆ, ಭಾರತದಲ್ಲಿನ ವಿಮಾನಯಾನ ಸಂಸ್ಥೆಗಳು ದಿವಾಳಿಯಾಗುತ್ತವೆ” ಎಂದು ಹೇಳಿಕೊಂಡಿಕೊಂಡಿದ್ದಾರೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹೊಣೆಯನ್ನು, ತನ್ನ ಭದ್ರತಾ ಲೋಪಗಳನ್ನು ಪರಿಹರಿಸುವ ಬದಲು ಪಾಕಿಸ್ತಾನದ ಮೇಲೆ ಅವುಗಳನ್ನು ಹೊರಿಸುತ್ತಿದೆ ಎಂದು ಅಬ್ಬಾಸಿ ಟೀಕಿಸಿದ್ದಾರೆ. ಭಾರತವು ವ್ಯಾಪಾರ ಮತ್ತು ನೀರು ಸರಬರಾಜನ್ನು ಸ್ಥಗಿತಗೊಳಿಸಿದ ನಂತರದ ಸಂಭವನೀಯ ಆರ್ಥಿಕ ಪರಿಣಾಮಗಳಿಗೆ ಪಾಕಿಸ್ತಾನ ಈಗಾಗಲೇ ಸಿದ್ಧತೆಗಳನ್ನು ಪ್ರಾರಂಭಿಸಿದೆ ಎಂದು ಅವರು ಪ್ರತಿಪಾದಿಸಿದ್ದಾರ.

ಪಾಕಿಸ್ತಾನದ ವಿರುದ್ಧ ಭಾರತ ತೆಗೆದುಕೊಂಡ ಯಾವುದೇ ಆರ್ಥಿಕ ಕ್ರಮಗಳನ್ನು ಎದುರಿಸಲು ದೇಶ ಸಿದ್ಧವಾಗಿದೆ ಎಂದು ಹೇಳಿದ್ದಾರೆ. ಈ ನಡುವೆ ಪಾಕಿಸ್ತಾನಿ ಸೇನೆಯು ಸತತ ಮೂರನೇ ರಾತ್ರಿಯೂ ನಿಯಂತ್ರಣ ರೇಖೆಯಾದ್ಯಂತ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಮತ್ತು ಭಾರತೀಯ ಪಡೆಗಳು ಅವರಿಗೆ ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸಿದವು ಎಂದು ವರದಿಯಾಗಿದೆ. 130

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಜನಿವಾರ ವಿವಾದ | ರಾಜ್ಯ ಸರ್ಕಾರ, ಕೆಇಎಗೆ ನೋಟಿಸ್ ಜಾರಿ ಮಾಡಿದ ಕರ್ನಾಟಕ ಹೈಕೋರ್ಟ್

ಜನಿವಾರ ವಿವಾದ | ರಾಜ್ಯ ಸರ್ಕಾರ, ಕೆಇಎಗೆ ನೋಟಿಸ್ ಜಾರಿ ಮಾಡಿದ ಕರ್ನಾಟಕ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...