Homeಮುಖಪುಟಬಾಂಗ್ಲಾದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ : ದೇಶದಾದ್ಯಂತ 1,300 ಜನರ ಬಂಧನ

ಬಾಂಗ್ಲಾದಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆ : ದೇಶದಾದ್ಯಂತ 1,300 ಜನರ ಬಂಧನ

- Advertisement -
- Advertisement -

ಬಾಂಗ್ಲಾದೇಶದಲ್ಲಿ ಗುಂಪು ದಾಳಿ ಮತ್ತು ವಿಧ್ವಂಸಕ ಕೃತ್ಯಗಳ ನಡುವೆ ‘ಆಪರೇಷನ್ ಡೆವಿಲ್ ಹಂಟ್’ ನ ಭಾಗವಾಗಿ ಭದ್ರತಾ ಪಡೆಗಳು 1,308 ಜನರನ್ನು ಬಂಧಿಸಿವೆ ಎಂದು ದಿ ಡೈಲಿ ಸ್ಟಾರ್ ಭಾನುವಾರ (ಫೆ.9) ವರದಿ ಮಾಡಿದೆ.

ರಾಷ್ಟ್ರೀಯ ಸ್ಮಾರಕವಾಗಿರುವ ರಾಷ್ಟ್ರಪಿತ ಮುಜಿಬುರ್ ರೆಹಮಾನ್ ಅವರು ವಾಸವಿದ್ದ ಮನೆಯನ್ನು ಪ್ರತಿಭಟನಾಕಾರರು ಏಕಾಏಕಿ ಧ್ವಂಸಗೊಳಿಸಿದ ಘಟನೆ ಬಳಿಕ, ಭದ್ರತಾ ಪಡೆಗಳು ಕಾರ್ಯಾಚರಣೆ ಕೈಗೊಂಡಿದೆ.

ಆವಾಮಿ ಲೀಗ್ ನಾಯಕಿ, ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರ ತಂದೆ ಮುಜಿಬುರ್ ರೆಹಮಾನ್ ಅವರು ಬಾಂಗ್ಲಾದೇಶದ ಸ್ವಾತಂತ್ರ್ಯ ಹೋರಾಟಗಾರರು ಹೌದು.

ಸೇನೆ, ಪೊಲೀಸರು ಮತ್ತು ಅವರ ವಿಶೇಷ ಘಟಕಗಳನ್ನು ಒಳಗೊಂಡ ಜಂಟಿ ಕಾರ್ಯಾಚರಣೆಯಲ್ಲಿ, ಮುಖ್ಯವಾಗಿ ಬಾಂಗ್ಲಾದೇಶದ ಮಹಾನಗರಗಳಲ್ಲಿ 274 ಜನರನ್ನು ಬಂಧಿಸಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ್ದಾಗಿ ಸುದ್ದಿ ಸಂಸ್ಥೆ ಪಿಟಿಐ ಹೇಳಿದೆ.

ಬಂಧಿತರಲ್ಲಿ ಹೆಚ್ಚಿನವರು ಅವಾಮಿ ಲೀಗ್ ಮತ್ತು ಅದರ ಸಹವರ್ತಿ ಸಂಸ್ಥೆಗಳ ಸದಸ್ಯರು ಎಂದು ದಿ ಡೈಲಿ ಸ್ಟಾರ್ ವರದಿ ಮಾಡಿದೆ.

ರಾಜಧಾನಿ ಢಾಕಾದಿಂದ 25 ಕಿ.ಮೀ ಉತ್ತರಕ್ಕೆ ಗಾಝಿಪುರದಲ್ಲಿ ಅವಾಮಿ ಲೀಗ್‌ನ 81 ಸದಸ್ಯರನ್ನು ಬಂಧಿಸಲಾಗಿದೆ ಎಂದು ಪಿಟಿಐ ವರದಿ ತಿಳಿಸಿದೆ.

ಶುಕ್ರವಾರ ರಾತ್ರಿ, ಗಾಝಿಪುರದ ದಕ್ಷಿಣಖಾನ್ ಪ್ರದೇಶದಲ್ಲಿ ಅವಾಮಿ ಲೀಗ್‌ಗೆ ಸಂಬಂಧಿಸಿದ ಆಸ್ತಿಗಳನ್ನು ಧ್ವಂಸ ಮಾಡಲು ಹೊರಟಿದ್ದ ಗುಂಪುಗಳ ಭಾಗವಾಗಿದ್ದ 14 ಜನರು ಗಾಯಗೊಂಡಿದ್ದಾರೆ.

ಮಾಜಿ ಸಚಿವ ಮೊಝಮ್ಮೆಲ್ ಹಕ್ ಅವರ ಮನೆಯ ದಾಳಿ ನಡೆದ ಸಂದರ್ಭದಲ್ಲಿ ಹಿಂಸಾಚಾರ ಉಂಟಾಗಿದೆ. ಕಳೆದ ವರ್ಷದ ಆಗಸ್ಟ್‌ನಲ್ಲಿ ಶೇಖ್ ಹಸೀನಾ ಸರ್ಕಾರ ಪತನಗೊಂಡ ನಂತರ ತಲೆಮರೆಸಿಕೊಂಡಿರುವ ಅಥವಾ ದೇಶದಿಂದ ಪಲಾಯನ ಮಾಡಿರುವ ಅವಾಮಿ ಲೀಗ್‌ನ ಹಿರಿಯ ನಾಯಕರಲ್ಲಿ ಹಕ್ ಕೂಡ ಒಬ್ಬರು.

ತಮ್ಮ ಕಾರ್ಯಕರ್ತರು ಲೂಟಿ ಮಾಡುವುದನ್ನು ನಿಲ್ಲಿಸಲು ಹಕ್ ಅವರ ಮನೆಗೆ ಹೋಗಿದ್ದರು ಆದರೆ, ದುಷ್ಕರ್ಮಿಗಳು ತಮ್ಮ ಮೇಲೆ ದಾಳಿ ನಡೆಸಿದ್ದಾರೆ ಎಂದು ತಾರತಮ್ಯ ವಿರೋಧಿ ವಿದ್ಯಾರ್ಥಿ ಚಳವಳಿಯ ನಾಯಕರು ಆರೋಪಿಸಿದ್ದಾರೆ.

ಶೇಖ್ ಹಸೀನಾ ಅವರ ಸರ್ಕಾರದ ವಿರುದ್ಧ ವಿದ್ಯಾರ್ಥಿಗಳ ನೇತೃತ್ವದಲ್ಲಿ ಸುದೀರ್ಘ ಕಾಲ ನಡೆದ ಪ್ರತಿಭಟನೆಯಲ್ಲಿ 560 ಜನರು ಸಾವನ್ನಪ್ಪಿದರು. ತೀವ್ರ ಪ್ರತಿಭಟನೆಯ ಹಿನ್ನೆಲೆ 16 ವರ್ಷಗಳ ಕಾಲ ಪ್ರಧಾನಿಯಾಗಿದ್ದ ಶೇಖ್ ಹಸೀನಾ, 2024ರ ಆಗಸ್ಟ್ 5 ರಂದು ಢಾಕಾದಿಂದ ನವದೆಹಲಿಗೆ ಪಲಾಯನ ಮಾಡಿದ್ದರು.

ಆಗಸ್ಟ್ 8, 2024 ರಂದು ನೊಬೆಲ್ ಪ್ರಶಸ್ತಿ ವಿಜೇತ ಅರ್ಥಶಾಸ್ತ್ರಜ್ಞ ಮುಹಮ್ಮದ್ ಯೂನುಸ್ ದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಮಣಿಪುರ | ಬಂಡುಕೋರ ಗುಂಪಿನಿಂದ ಸೇನೆಯ ಶಸ್ತ್ರಾಸ್ತ್ರ ಲೂಟಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...