Homeಮುಖಪುಟಕೋವಿಡ್‌ಗೆ 135 ಪಂಚಾಯತ್ ಚುನಾವಣಾ ಸಿಬ್ಬಂದಿ ಬಲಿ: ಯುಪಿ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಶೋ-ಕಾಸ್ ನೋಟಿಸ್

ಕೋವಿಡ್‌ಗೆ 135 ಪಂಚಾಯತ್ ಚುನಾವಣಾ ಸಿಬ್ಬಂದಿ ಬಲಿ: ಯುಪಿ ಚುನಾವಣಾ ಆಯೋಗಕ್ಕೆ ಹೈಕೋರ್ಟ್ ಶೋ-ಕಾಸ್ ನೋಟಿಸ್

- Advertisement -
- Advertisement -

ಪಂಚಾಯತ್ ಚುನಾವಣಾ ಕೆಲಸಕ್ಕೆ ನಿಯೋಜನಗೊಂಡ 135 ವಿದ್ಯಾರ್ಥಿಗಳು, ‘ಶಿಕ್ಷಾ ಮಿತ್ರರು’ ಮತ್ತು ಚುನಾವಣಾ ಕರ್ತವ್ಯಕ್ಕೆ ನೇಮಕಗೊಂಡ ತನಿಖಾಧಿಕಾರಿಗಳು ಕೋವಿಡ್ ಕಾರಣದಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಹಿಂದಿ ದಿನಪತ್ರಿಕೆ ‘ಅಮರ್ ಉಜಲಾ’ದಲ್ಲಿ ಪ್ರಕಟವಾದ ಸುದ್ದಿ ಲೇಖನವೊಂದನ್ನು ಗಮನಿಸಿರುವ ಅಲಹಾಬಾದ್ ಹೈಕೋರ್ಟ್, ಉತ್ತರಪ್ರದೇಶ ಚುನಾವಣಾ ಆಯೋಗಕ್ಕೆ ಇಂದು ಶೋ-ಕಾಸ್ ನೋಟಿಸ್ ನೀಡಿದೆ ಎಂದು ಲೈವ್ ಲಾ, ಇಂಡಿಯಾ ಟುಡೇ ವರದಿ ಮಾಡಿವೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿದ್ಧಾರ್ಥ ವರ್ಮಾ ಮತ್ತು ನ್ಯಾಯಮೂರ್ತಿ ಅಜಿತ್ ಕುಮಾರ್ ಅವರನ್ನೊಳಗೊಂಡ ವಿಭಾಗೀಯ ಪೀಠವು, ರಾಜ್ಯ ಚುನಾವಣಾ ಆಯೋಗಕ್ಕೆ, ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಪಂಚಾಯತ್ ಚುನಾವಣೆಯ ಉಳಿದ ಹಂತಗಳಲ್ಲಿ ತ್ವರಿತ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶಿಸಿತು, ಇಲ್ಲದಿದ್ದರೆ ಇದರಲ್ಲಿ ಭಾಗಿಯಾಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿತು.

ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ರಾಜ್ಯ ಚುನಾವಣಾ ಆಯೋಗಕ್ಕೆ ಶೋ-ಕಾಸ್ ನೋಟಿಸ್ ನೀಡಿ, ಪಂಚಾಯತ್ ಚುನಾವಣೆಯ ಸಂದರ್ಭದಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಜಾರಿಗೊಳಿಸಲು ವಿಫಲವಾಗಿದ್ದು ಏಕೆ ಎಂದು ಪ್ರಶ್ನಿಸಿದೆ. ಅಂತಹ ಉಲ್ಲಂಘನೆಗಳಿಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಆದೇಶಿಸಿದೆ.
“ಚುನಾವಣಾ ಕರ್ತವ್ಯದಲ್ಲಿರುವ ಜನರನ್ನು ಮಾರಕ ವೈರಸ್ ಸೋಂಕಿಗೆ ಒಳಗಾಗದಂತೆ ರಕ್ಷಿಸಲು ಪೊಲೀಸರು ಅಥವಾ ಚುನಾವಣಾ ಆಯೋಗವು ಏನನ್ನೂ ಮಾಡಿಲ್ಲ” ಎಂದು ಆದೇಶದಲ್ಲಿ ಟೀಕಿಸಲಾಗಿದೆ.

ತುರ್ತು ಪರಿಹಾರ ಕ್ರಮ ತೆಗೆದುಕೊಳ್ಳಲು ಸರ್ಕಾರಕ್ಕೆ ನಿರ್ದೇಶನ ನೀಡಿದ ನ್ಯಾಯಾಲಯ, “ಕೈಗೊಂಡ ಕ್ರಮಗಳು ಮತ್ತು ಅದರ ಸಮರ್ಪಕತೆಯ ಬಗ್ಗೆ ತೋರಿಸಲು ಯಾವುದೇ ದಾಖಲೆಗಳನ್ನು ಅಥವಾ ಸಾರ್ವಜನಿಕ ಪ್ರಕಟಣೆಗಳನ್ನು ಕೋರ್ಟ್ ಸಹಿಸುವುದಿಲ್ಲ ಎಂದು ನಾವು ಸ್ಪಷ್ಟಪಡಿಸುತ್ತೇವೆ. ರಾಜ್ಯದಲ್ಲಿ 2020ರ ಅಂತ್ಯದ ವೇಳೆಗೆ ವೈರಸ್ ಪ್ರಭಾವ ದುರ್ಬಲಗೊಂಡ ನಂತರ ಮೈಮರೆತ ಸರ್ಕಾರ, ಪಂಚಾಯತ್ ಚುನಾವಣೆ ಸೇರಿದಂತೆ ಇತರ ಚಟುವಟಿಕೆಗಳಲ್ಲಿ ಹೆಚ್ಚು ತೊಡಗಿಸಿಕೊಂಡಿದೆ’ ಎಂದು ಕೋರ್ಟ್ ಅಭಿಪ್ರಾಯ ಪಟ್ಟಿದೆ.

ಸಾರ್ವಜನಿಕ ಆರೋಗ್ಯ ವ್ಯವಸ್ಥೆಯು ಜನರ ಅಗತ್ಯಗಳನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದು ಗಮನಿಸಿದ ನ್ಯಾಯಾಲಯ, ಲಕ್ನೋ, ಪ್ರಯಾಗರಾಜ್, ವಾರಣಾಸಿ, ಆಗ್ರಾ, ಕಾನ್ಪುರ ನಗರ, ಗೋರಖ್‌ಪುರ ಮತ್ತು ಝಾನ್ಸಿಗಳಲ್ಲಿನ ಸರ್ಕಾರಿ ಆಸ್ಪತ್ರೆಗಳಿಗೆ ದಿನಕ್ಕೆ ಎರಡು ಬಾರಿ ಆರೋಗ್ಯ ಬುಲೆಟಿನ್ ಪ್ರಕಟಿಸುವಂತೆ ನಿರ್ದೇಶನ ನೀಡಿತು. ಇದರಿಂದ ಆಸ್ಪತ್ರೆಗಳಿಗೆ ರೋಗಿಗಳ ಪರಿಚಾರಕರು ಭೇಟಿ ನೀಡುವುದನ್ನು ಕಡಿಮೆಗೊಳಿಸಬಹುದು ಎಂದು ಕೋರ್ಟ್ ಸಲಹೆ ನೀಡಿದೆ.
ಈ ಕುರಿತು ಮುಂದಿನ ವಿಚಾರಣೆಯನ್ನು ಮೇ 3ಕ್ಕೆ ನಿಗದಿಪಡಿಸಲಾಗಿದೆ.


ಇದನ್ನೂಓದಿ: ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಐಟಿ ಸೆಲ್, ಪೋಸ್ಟ್ ಕಾರ್ಡ್, ಬಿಜೆಪಿ ವಕ್ತಾರರು ಹೇಳಿದ ಸುಳ್ಳುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...