Homeಮುಖಪುಟಜಮ್ಮು ಕಾಶ್ಮೀರಕ್ಕೆ 1,350 ಕೋಟಿ  ರೂ. ಆರ್ಥಿಕ ಪ್ಯಾಕೇಜ್ ಘೋಷಣೆ

ಜಮ್ಮು ಕಾಶ್ಮೀರಕ್ಕೆ 1,350 ಕೋಟಿ  ರೂ. ಆರ್ಥಿಕ ಪ್ಯಾಕೇಜ್ ಘೋಷಣೆ

ಒಂದು ವರ್ಷ ನೀರು ಹಾಗೂ ವಿದ್ಯುತ್​ ಬಿಲ್​​ ಮೇಲೆ ಶೇಕಡಾ 50ರಷ್ಟು ರಿಯಾಯಿತಿ, ಎಲ್ಲಾ ಸಾಲಗಾರರಿಗೆ ಮಾರ್ಚ್ 2021 ರವರೆಗೆ ಸ್ಟಾಂಪ್ ಶುಲ್ಕ ವಿನಾಯಿತಿ ನೀಡಲಾಗಿದೆ.

- Advertisement -
- Advertisement -

ಪ್ರವಾಸೋದ್ಯಮವನ್ನು ನಂಬಿಕೊಂಡಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ವ್ಯಾಪಾರೋದ್ಯಮ ಕುಂಠಿತಗೊಂಡಿರುವ ಹಿನ್ನೆಲೆ ಉದ್ಯಮ ಮತ್ತು ಇತರೆ ಕ್ಷೇತ್ರಗಳಿಗೆ ಚೇತರಿಕೆ ನೀಡಲು 1,350 ಕೋಟಿ  ರೂ.ಗಾತ್ರದ ಆರ್ಥಿಕ ಪ್ಯಾಕೇಜ್ ಅನ್ನು ಲೆಫ್ಟಿನಂಟ್ ಗವರ್ನರ್ ಮನೋಜ್ ಸಿನ್ಹಾ ಘೋಷಿಸಿದ್ದಾರೆ.

ಒಂದು ವರ್ಷ ನೀರು ಹಾಗೂ ವಿದ್ಯುತ್​ ಬಿಲ್​​ ಮೇಲೆ ಶೇಕಡಾ 50 ರಷ್ಟು ರಿಯಾಯಿತಿ ನೀಡಿರೋದು ಪ್ಯಾಕೇಜ್​ನ ಪ್ರಮುಖ ಅಂಶಗಳಲ್ಲಿ ಒಂದಾಗಿದೆ. ಇದಕ್ಕಾಗಿ 105 ಕೋಟಿ ರೂಪಾಯಿ ಖರ್ಚು ಮಾಡುತ್ತೇವೆ. ಇದರಿಂದ ರೈತರು, ಸಾಮಾನ್ಯ ಜನರು, ಉದ್ಯಮಿ ಮತ್ತು ಇತರರು ಪ್ರಯೋಜನ ಪಡೆಯುತ್ತಾರೆಎಂದು ಸಿನ್ಹಾ ಹೇಳಿದರು.

ಎಲ್ಲಾ ಸಾಲಗಾರರಿಗೆ ಮಾರ್ಚ್ 2021 ರವರೆಗೆ ಸ್ಟಾಂಪ್ ಶುಲ್ಕ ವಿನಾಯಿತಿ ನೀಡಲಾಗಿದೆ. ಕೈಗಾರಿಕಾ ವಲಯವನ್ನು ಪುನರುಜ್ಜೀವನಗೊಳಿಸಲು ಶೀಘ್ರದಲ್ಲೇ ಹೊಸ ಕೈಗಾರಿಕಾ ನೀತಿಯನ್ನು ಪ್ರಕಟಿಸಲಾಗುವುದು. ಪ್ರಧಾನಿ ಮೋದಿ ಘೋಷಣೆ ಮಾಡಿದ್ದ ಆತ್ಮನಿರ್ಭರ ಅಭಿಯಾನ 14,000 ಕೋಟಿ  ರೂಪಾಯಿಗಳ ಸೌಲಭ್ಯಗಳ ಜೊತೆಗೆ ಹೆಚ್ಚುವಾರಿಯಾಗಿ ಪರಿಹಾರವನ್ನ ನೀಡಲಾಗುತ್ತಿದೆ ಎಂದು ಮನೋಜ್ ಸಿನ್ಹಾ ಹೇಳಿದ್ದಾರೆ.

PC: Zee Business

ಇದನ್ನೂ ಓದಿ: ರವಿಕೃಷ್ಣಾ ರೆಡ್ಡಿಯವರಿಗೆ ಅಪಘಾತ: “ಚಲಿಸು ಕರ್ನಾಟಕ” ಸೈಕಲ್ ಯಾತ್ರೆ ತಾತ್ಕಾಲಿಕ ಸ್ಥಗಿತ

ಪ್ರಸಕ್ತ ಹಣಕಾಸು ವರ್ಷದಲ್ಲಿ 6 ತಿಂಗಳವರೆಗೆ ಯಾವುದೇ ಷರತ್ತುಗಳಿಲ್ಲದೆ ವ್ಯಾಪಾರ ವಲಯದ ಪ್ರತಿ ಸಾಲಗಾರನಿಗೆ ಶೇಕಡ 5ರಷ್ಟು ಬಡ್ಡಿ ಮನ್ನಾ ಅವಕಾಶ ನೀಡಲಾಗುತ್ತದೆ. ಇದು ಉದ್ಯೋಗ ಸೃಷ್ಟಿಸಲು ಸಹಾಯ ಮಾಡುತ್ತದೆ ಎಂದಿದ್ದಾರೆ. 

ಕ್ರೆಡಿಟ್ ಕಾರ್ಡ್ ಯೋಜನೆಯಡಿ, ಕೈಮಗ್ಗ ಮತ್ತು ಕರಕುಶಲ ಉದ್ಯಮದಲ್ಲಿ ಕೆಲಸ ಮಾಡುವ ಜನರಿಗೆ ನೀಡಲಾಗುತ್ತಿದ್ದ ಹಣದ ಗರಿಷ್ಠ ಮೊತ್ತ 1 ಲಕ್ಷದಿಂದ 2 ಲಕ್ಷಕ್ಕೆ ಏರಿಕೆ. ಜೊತೆಗೆ ಶೇ. 7 ರಷ್ಟು ಬಡ್ಡಿ ಮನ್ನಾ ಅವಕಾಶ. ಇದರ ಜೊತೆಗೆ ಅಕ್ಟೋಬರ್ 1 ರಿಂದ ಜಮ್ಮು ಕಾಶ್ಮೀರ ಬ್ಯಾಂಕ್​ನಲ್ಲಿ ಯುವ ಮತ್ತು ಮಹಿಳಾ ಉದ್ಯಮಗಳಿಗೆ ವಿಶೇಷ ಡೆಸ್ಕ್  ಪ್ರಾರಂಭ ಮಾಡಲಾಗುವುದು ಎಂದರು.


ಇದನ್ನೂ ಓದಿ: ರಾಜ್ಯಕ್ಕೆ ಕೇಂದ್ರದ ಪರಿಹಾರ?: ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಲಹೆಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...