Homeಮುಖಪುಟಕೇರಳ | ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಪ್ರಕರಣ : ಸಿಪಿಐ(ಎಂ) ಮಾಜಿ ಶಾಸಕ ಸೇರಿ 14...

ಕೇರಳ | ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಪ್ರಕರಣ : ಸಿಪಿಐ(ಎಂ) ಮಾಜಿ ಶಾಸಕ ಸೇರಿ 14 ಮಂದಿ ದೋಷಿಗಳೆಂದು ತೀರ್ಪು ಪ್ರಕಟ

- Advertisement -
- Advertisement -

ಕೇರಳದ ಕಾಸರಗೋಡಿನ ಪೆರಿಯದಲ್ಲಿ 2019ರಲ್ಲಿ ನಡೆದ ಇಬ್ಬರು ಯುವ ಕಾಂಗ್ರೆಸ್ ಕಾರ್ಯಕರ್ತರ ಕೊಲೆ ಪ್ರಕರಣದ 14 ಮಂದಿ ಆರೋಪಿಗಳನ್ನು ದೋಷಿಗಳೆಂದು ಘೋಷಿಸಿ ಕೊಚ್ಚಿಯ ಸಿಬಿಐ ವಿಶೇಷ ನ್ಯಾಯಾಲಯ ಇಂದು (ಡಿ.28) ತೀರ್ಪು ಪ್ರಕಟಿಸಿದೆ.

ಪ್ರಕರಣದ ಇತರ 10 ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. 14 ಅಪರಾಧಿಗಳ ಶಿಕ್ಷೆಯನ್ನು ಜನವರಿ 3,2025ರಂದು ಪ್ರಕಟಿಸಲಿದೆ. ಕಳೆದ 6 ವರ್ಷಗಳಿಂದ ಈ ಪ್ರಕರಣದ ವಿಚಾರಣೆ ನಡೆಯುತ್ತಿತ್ತು.

ಪ್ರಮುಖ ಸಿಪಿಐ(ಎಂ) ಮುಖಂಡರಾದ ಮಾಜಿ ಶಾಸಕ ಹಾಗೂ ಸಿಪಿಎಂ ಜಿಲ್ಲಾ ನಾಯಕ ಕೆ.ವಿ.ಕುಂಞಿರಾಮನ್, ಕಾಞಂಗಾಡ್ ಬ್ಲಾಕ್ ಪಂಚಾಯತ್ ಅಧ್ಯಕ್ಷ ಕೆ.ಮಣಿಕಂಠನ್, ಪೆರಿಯ ಸ್ಥಳೀಯ ಸಮಿತಿ ಮಾಜಿ ಸದಸ್ಯ ಎ.ಪೀತಾಂಬರನ್, ಪೆರಿಯ ಸ್ಥಳೀಯ ಸಮಿತಿಯ ಮಾಜಿ ಕಾರ್ಯದರ್ಶಿ ಎನ್.ಬಾಲಕೃಷ್ಣನ್, ಪಕ್ಕಂ ಸ್ಥಳೀಯ ಸಮಿತಿಯ ಮಾಜಿ ಕಾರ್ಯದರ್ಶಿ ರಾಘವನ್ ವೆಲುತ್ತೋಳಿ, ಸಿಐಟಿಯು ಮುಖಂಡ ಎ ಸುಭೀಶ್ ಮತ್ತು ಸಿಪಿಐ(ಎಂ) ಎಚಿಲಡುಕ್ಕಂ ಶಾಖೆಯ ಮಾಜಿ ಕಾರ್ಯದರ್ಶಿ ರಾಜೇಶ್ ಸೇರಿದಂತೆ ಒಟ್ಟು 24 ಮಂದಿ ಪ್ರಕರಣದಲ್ಲಿ ವಿಚಾರಣೆ ಎದುರಿಸಿದ್ದರು.

ಈ ಪೈಕಿ, ಪೀತಾಂಬರನ್, ಸಾಜಿ ಜಾರ್ಜ್, ಕೆ.ಎಂ ಸುರೇಶ್, ಕೆ. ಅನಿಲ್‌ಕುಮಾರ್, ಜಿಜಿನ್, ಶ್ರೀರಾಗ್, ಅಶ್ವಿನ್, ಸುಧೀಶ್, ರೆಂಜಿತ್, ಸುರೇಂದ್ರನ್, ಮಣಿಕಂಠನ್, ಕುಂಞಿರಾಮನ್, ವೆಲುತ್ತೋಳಿ ರಾಘವನ್ ಮತ್ತು ಎ.ವಿ. ಭಾಸ್ಕರನ್ ಅವರನ್ನು ದೋಷಿಗಳೆಂದು ನ್ಯಾಯಾಲಯ ಘೋಷಿಸಿದೆ.

ಪೆರಿಯ ಪರಿಸರದಲ್ಲಿ ಸಿಪಿಐ (ಎಂ) ಮತ್ತು ಕಾಂಗ್ರೆಸ್‌ ಕಾರ್ಯಕರ್ತರ ನಡುವೆ ನಡೆಯುತ್ತಿದ್ದ ಸರಣಿ ದಾಳಿ ಮತ್ತು ಪ್ರತಿದಾಳಿಗಳ ಭಾಗವಾಗಿ ನಡೆದ ಇಬ್ಬರ ಕೊಲೆಯು ರಾಜಕೀಯ ಪ್ರೇರಿತ ಎಂದು ಕೇಂದ್ರೀಯ ತನಿಖಾ ದಳ (ಸಿಬಿಐ) ಚಾರ್ಜ್‌ಶೀಟ್‌ನಲ್ಲಿ ಹೇಳಿತ್ತು.

ಫೆಬ್ರವರಿ 17, 2019ರಂದು ಕಾಸರಗೋಡಿನ ಪೆರಿಯದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರಾಗಿದ್ದ 19 ವರ್ಷದ ಕೃಪೇಶ್ ಮತ್ತು 24 ವರ್ಷದ ಶರತ್‌ ಲಾಲ್ ಅವರ ಹತ್ಯೆ ನಡೆದಿತ್ತು. ಸಿಪಿಐ (ಎಂ) ಸದಸ್ಯರು ಈ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

ಪ್ರಕರಣದ ಹಿನ್ನೆಲೆ : ಜನವರಿ 5,2019 ರಂದು ನಡೆದ ವಿಚಾರಣೆಯ ಪ್ರಕಾರ, ಕಳ್ಳಿಯೋಟ್‌ನಲ್ಲಿ ಎಸ್‌ಎಫ್‌ಐ ಮತ್ತು ಯೂತ್ ಕಾಂಗ್ರೆಸ್ ನಡುವಿನ ಘರ್ಷಣೆಯ ನಂತರ, ಶರತ್ ಲಾಲ್ ಮತ್ತು ಇತರರು ಮೊದಲ ಪ್ರಕರಣದ ಅಪರಾಧಿ ಪೀತಾಂಬರನ್ ಮತ್ತು ಇನ್ನೋರ್ವ ಅಪರಾಧಿ ಸುರೇಂದ್ರನ್ ಅಲಿಯಾಸ್ ವಿಷ್ಣು ಸುರ ಮೇಲೆ ಹಲ್ಲೆ ನಡೆಸಿದ್ದರು. ಫೆಬ್ರವರಿ 17, 2019ರಂದು, ಕೃಪೇಶ್ ಮತ್ತು ಶರತ್ ಲಾಲ್ ಅವರು ಪೆರುಮ್ಕಾಲಿಯಾಟ್ಟಂ ದೇವಸ್ಥಾನದ ಉತ್ಸವದಿಂದ ಮನೆಗೆ ಹಿಂದಿರುಗುತ್ತಿದ್ದಾಗ ಕಳ್ಳಿಯೋಟ್-ತನ್ನಿತೋಡ್ ರಸ್ತೆಯಲ್ಲಿ ಅವರ ಮೇಲೆ ದಾಳಿ ನಡೆದಿತ್ತು. ಇದರಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಇಬ್ಬರೂ ಸಾವನ್ನಪ್ಪಿದ್ದರು.

ಫೆಬ್ರವರಿ 19, 2019 ರಂದು ಎ. ಪೀತಾಂಬರನ್ ಅವರನ್ನು ಪ್ರಕರಣದ ಪ್ರಮುಖ ಆರೋಪಿಯಾಗಿ ಬಂಧಿಸಲಾಗಿತ್ತು. ಎರಡು ದಿನಗಳ ನಂತರ ಕೇರಳ ಪೊಲೀಸ್ ಕ್ರೈಂ ಬ್ರಾಂಚ್ ತನಿಖೆಯನ್ನು ವಹಿಸಿಕೊಂಡಿತ್ತು. ಮೇ 20, 2019 ರಂದು, ಕ್ರೈಂ ಬ್ರಾಂಚ್ ತನ್ನ ಚಾರ್ಜ್‌ಶೀಟ್ ಸಲ್ಲಿಸಿತ್ತು. ಅದರಲ್ಲಿ 14 ಆರೋಪಿಗಳನ್ನು ಹೆಸರಿಸಿತ್ತು. ಎಲ್ಲರೂ ಸಿಪಿಐ(ಎಂ) ಪಕ್ಷದೊಂದಿಗೆ ಸಂಪರ್ಕ ಹೊಂದಿವರಾಗಿದ್ದರು.

ಸೆಪ್ಟೆಂಬರ್ 30,2019 ರಂದು, ಕೇರಳ ಹೈಕೋರ್ಟ್‌ನ ಏಕಸದಸ್ಯ ಪೀಠ ಕ್ರೈಂ ಬ್ರಾಂಚ್ ಚಾರ್ಜ್‌ಶೀಟ್ ರದ್ದುಗೊಳಿಸಿ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿತ್ತು. ಅಕ್ಟೋಬರ್ 26, 2019 ರಂದು, ಕೇರಳ ಸರ್ಕಾರವು ಸಿಬಿಐ ತನಿಖೆಯ ವಿರುದ್ಧ ಹೈಕೋರ್ಟ್‌ನ ವಿಭಾಗೀಯ ಪೀಠಕ್ಕೆ ಮನವಿ ಸಲ್ಲಿಸಿತ್ತು. ಆಗಸ್ಟ್ 25, 2020ರಂದು, ವಿಭಾಗೀಯ ಪೀಠವು ತನಿಖೆಯನ್ನು ಸಿಬಿಐಗೆ ವರ್ಗಾಯಿಸುವ ಏಕ ಸದಸ್ಯ ಪೀಠದ ಆದೇಶವನ್ನು ಎತ್ತಿಹಿಡಿದಿತ್ತು. ಸೆಪ್ಟೆಂಬರ್ 12, 2020ರಂದು, ಕೇರಳ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿತ್ತು. ಡಿಸೆಂಬರ್ 1,2020 ರಂದು, ಸುಪ್ರೀಂ ಕೋರ್ಟ್ ಕೂಡ ರಾಜ್ಯ ಸರ್ಕಾರದ ಅರ್ಜಿಯನ್ನು ವಜಾಗೊಳಿಸಿತ್ತು. ಪ್ರಕರಣವನ್ನು ಸಿಬಿಐಗೆ ವಹಿಸಲು ಅವಕಾಶ ಮಾಡಿಕೊಟ್ಟಿತ್ತು.

ಡಿಸೆಂಬರ್ 14, 2020 ರಂದು ಸಿಬಿಐ ಔಪಚಾರಿಕವಾಗಿ ತನಿಖೆಯ ಹೊಣೆಯನ್ನು ವಹಿಸಿಕೊಂಡಿತ್ತು. ಡಿಸೆಂಬರ್ 1, 2021 ರಂದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಐವರನ್ನು ಬಂಧಿಸಿತ್ತು. ಫೆಬ್ರವರಿ 2, 2023 ರಂದು ಕೊಚ್ಚಿಯ ಸಿಬಿಐ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಪ್ರಾರಂಭವಾಗಿತ್ತು.

ಇದನ್ನೂ ಓದಿ : ಹಣ ಅಕ್ರಮ ವರ್ಗಾವಣೆ ಆರೋಪ : ವಿಚಾರಣೆಗೆ ಹಾಜರಾಗುವಂತೆ ಕೆಟಿಆರ್‌ಗೆ ಇಡಿ ಸಮನ್ಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...