Homeಮುಖಪುಟ'14 ಕೋಟಿ ಜನರು ಆಹಾರ ಭದ್ರತೆಯಿಂದ ವಂಚಿತರಾಗಿದ್ದಾರೆ, ತ್ವರಿತವಾಗಿ ಜನಗಣತಿ ನಡೆಸಿ' : ಸರ್ಕಾರಕ್ಕೆ ಸೋನಿಯಾ...

’14 ಕೋಟಿ ಜನರು ಆಹಾರ ಭದ್ರತೆಯಿಂದ ವಂಚಿತರಾಗಿದ್ದಾರೆ, ತ್ವರಿತವಾಗಿ ಜನಗಣತಿ ನಡೆಸಿ’ : ಸರ್ಕಾರಕ್ಕೆ ಸೋನಿಯಾ ಗಾಂಧಿ ಆಗ್ರಹ

- Advertisement -
- Advertisement -

ದೇಶದಲ್ಲಿ ಸುಮಾರು 14 ಕೋಟಿ ಜನರು ಆಹಾರ ಭದ್ರತಾ ಕಾನೂನಿನಡಿಯ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ ಎಂದಿರುವ ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ, ತ್ವರಿತವಾಗಿ ಜನಗಣತಿ ನಡೆಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಸೋಮವಾರ (ಫೆ.10) ಮೊದಲ ಬಾರಿಗೆ ಶೂನ್ಯ ವೇಳೆಯಲ್ಲಿ ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್‌ಎಫ್‌ಎಸ್‌ಎ) ಅಡಿಯಲ್ಲಿ ಫಲಾನುಭವಿಗಳನ್ನು 2011ರ ಜನಗಣತಿಯ ಪ್ರಕಾರ ಗುರುತಿಸಲಾಗುತ್ತಿದೆಯೇ ಹೊರತು, ಇತ್ತೀಚಿನ ಜನಸಂಖ್ಯೆಯ ಪ್ರಕಾರವಲ್ಲ ಎಂದು ಹೇಳಿದ್ದಾರೆ.

ಯುಪಿಎ ಸರ್ಕಾರ ಸೆಪ್ಟೆಂಬರ್ 2013ರಲ್ಲಿ ಪರಿಚಯಿಸಿದ, ದೇಶದ 140 ಕೋಟಿ ಜನಸಂಖ್ಯೆಗೆ ಆಹಾರ ಮತ್ತು ಪೌಷ್ಟಿಕಾಂಶದ ಭದ್ರತೆ ಒದಗಿಸುವ ಗುರಿ ಹೊಂದಿರುವ ಅತ್ಯಂತ ಮಹತ್ವದ ಯೋಜನೆ ಎನ್‌ಎಫ್‌ಎಸ್‌ಎ ಎಂದು ಸೋನಿಯಾ ಗಾಂಧಿ ತಿಳಿಸಿದ್ದಾರೆ.

ಕೋವಿಡ್ -19 ಬಿಕ್ಕಟ್ಟಿನ ಸಂದರ್ಭದಲ್ಲಿ ಲಕ್ಷಾಂತರ ದುರ್ಬಲ ಕುಟುಂಬಗಳನ್ನು ಹಸಿವಿನಿಂದ ರಕ್ಷಿಸುವಲ್ಲಿ ಈ ಕಾಯ್ದೆ ನಿರ್ಣಾಯಕ ಪಾತ್ರ ವಹಿಸಿದೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

2011ರ ಜನಗಣತಿಯ ಆಧಾರದ ಮೇಲೆ ಫಲಾನುಭವಿಗಳ ಕೋಟಾವನ್ನು ಇನ್ನೂ ನಿರ್ಧರಿಸಲಾಗುತ್ತಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ಜನಗಣತಿಯ ಮಾಹಿತಿ ದಶಕಕ್ಕೂ ಹೆಚ್ಚು ಹಳೆಯದು ಎಂದಿದ್ದಾರೆ.

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ-2013 ಸಾರ್ವಜನಿಕ ವಿತರಣಾ ವ್ಯವಸ್ಥೆ (ಟಿಪಿಡಿಎಸ್) ಅಡಿಯಲ್ಲಿ ಹೆಚ್ಚಿನ ಸಬ್ಸಿಡಿ ಆಹಾರ ಧಾನ್ಯಗಳನ್ನು ಪಡೆಯಲು ಗ್ರಾಮೀಣ ಪ್ರದೇಶದ ಶೇಕಡ 75 ರಷ್ಟು ಮತ್ತು ನಗರ ಪ್ರದೇಶದ ಜನಸಂಖ್ಯೆಯ ಶೇಕಡ 50ರಷ್ಟು ಜನರಿಗೆ ಅವಕಾಶ ಒದಗಿಸುತ್ತದೆ. 2011ರ ಜನಗಣತಿಯ ಪ್ರಕಾರ ಫಲಾನುಭವಿಗಳ ಸಂಖ್ಯೆ ಸುಮಾರು 81.35 ಕೋಟಿ ಇದೆ.

ಪ್ರಸ್ತುತ, ಆಹಾರ ಭದ್ರತಾ ಕಾನೂನಿನಡಿಯಲ್ಲಿ ಸರ್ಕಾರವು ಪ್ರತಿ ವ್ಯಕ್ತಿಗೆ ತಿಂಗಳಿಗೆ 5 ಕೆಜಿ ಉಚಿತ ಆಹಾರ ಧಾನ್ಯಗಳನ್ನು ಒದಗಿಸುತ್ತಿದೆ.

“ಸ್ವತಂತ್ರ ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ, ದಶಕದ ಜನಗಣತಿಯು ನಾಲ್ಕು ವರ್ಷಗಳಿಗೂ ಹೆಚ್ಚು ವಿಳಂಬವಾಗಿದೆ. 2021ಕ್ಕೆ ಜನಗಣತಿ ನಡೆಯಬೇಕಿತ್ತು. ಆದರೆ, ಆಗ ಕೋವಿಡ್ ಕಾರಣ ನೀಡಿ ಸರ್ಕಾರ ಮುಂದೂಡಿಕೆ ಮಾಡಿದೆ. ಜನಗಣತಿಯ ಅವಧಿ ಕಳೆದು 5 ವರ್ಷಗಳಾಯಿತು. ಸರ್ಕಾರ ಯಾವಾಗ ಗಣತಿ ನಡೆಸಲಿದೆ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ.

ಬಜೆಟ್ ಹಂಚಿಕೆಗಳನ್ನು ನೋಡಿದರೆ ಹೊಸ ಜನಗಣತಿ ಈ ವರ್ಷ ನಡೆಸುವ ಸಾಧ್ಯತೆಯಿಲ್ಲ ಎಂದು ತೋರುತ್ತದೆ. ಇದರಿಂದ ಸುಮಾರು 14 ಕೋಟಿ ಅರ್ಹ ಭಾರತೀಯರು ಎನ್‌ಎಫ್‌ಎಸ್‌ಎ ಅಡಿಯಲ್ಲಿ ತಮ್ಮ ಹಕ್ಕಿನ ಪ್ರಯೋಜನಗಳಿಂದ ವಂಚಿತರಾಗುತ್ತಿದ್ದಾರೆ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

“ಜನಗಣತಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಸರ್ಕಾರ ಆದ್ಯತೆ ನೀಡುವುದು ಮತ್ತು ಎಲ್ಲಾ ಅರ್ಹ ವ್ಯಕ್ತಿಗಳು ಎನ್‌ಎಫ್‌ಎಸ್‌ಎ ಅಡಿಯಲ್ಲಿ ಅವರಿಗೆ ಖಾತರಿಪಡಿಸಿದ ಪ್ರಯೋಜನಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳುವುದು ಅತ್ಯಗತ್ಯ. ಆಹಾರ ಭದ್ರತೆ ಒಂದು ಸವಲತ್ತು ಅಲ್ಲ. ಅದು ಮೂಲಭೂತ ಹಕ್ಕು ಎಂದು ಸೋನಿಯಾ ಗಾಂಧಿ ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂಜಿಕೆಎವೈ) ಅಡಿಯಲ್ಲಿ ಉಚಿತ ಆಹಾರ ಧಾನ್ಯಗಳ ವಿತರಣೆಯ ಅವಧಿಯನ್ನು ಜನವರಿ 1, 2024 ರಿಂದ ಐದು ವರ್ಷಗಳವರೆಗೆ ವಿಸ್ತರಿಸಲಾಗಿದೆ.

ಮಣಿಪುರ ಹಿಂಸಾಚಾರ| ಕಳೆದ 20 ತಿಂಗಳಿಂದ ಕಣಿವೆ ನಾಡಲ್ಲಿ ನಡೆದದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...