Homeಮುಖಪುಟಸಿಸೋಡಿಯಾಗೆ 14 ದಿನಗಳ ನ್ಯಾಯಾಂಗ ಬಂಧನ; ತಿಹಾರ್ ಜೈಲಿಗೆ ಎಎಪಿ ನಾಯಕ

ಸಿಸೋಡಿಯಾಗೆ 14 ದಿನಗಳ ನ್ಯಾಯಾಂಗ ಬಂಧನ; ತಿಹಾರ್ ಜೈಲಿಗೆ ಎಎಪಿ ನಾಯಕ

- Advertisement -
- Advertisement -

ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸೋಮವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ಮಾರ್ಚ್ 20ರವರೆಗೆ ಸಿಸೋಡಿಯಾ ಅವರನ್ನು ತಿಹಾರ್ ಜೈಲಿನಲ್ಲಿ ಇರಿಸಲಾಗುತ್ತದೆ. ಕಳೆದ ಒಂದು ವಾರದಿಂದ ಎಎಪಿ ನಾಯಕ ಸಿಬಿಐ ಕಸ್ಟಡಿಯಲ್ಲಿದ್ದರು.

ದೆಹಲಿಯಲ್ಲಿ ಈಗ ರದ್ದಾಗಿರುವ ಅಬಕಾರಿ ನೀತಿಯ ರಚನೆ ಮತ್ತು ಅನುಷ್ಠಾನದಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಅವರನ್ನು ಬಂಧಿಸಲಾಗಿತ್ತು.

ಸಿಸೋಡಿಯಾ ಅವರ ಸಿಬಿಐ ಬಂಧನವನ್ನು ಶನಿವಾರ ಇನ್ನೂ ಎರಡು ದಿನಗಳವರೆಗೆ ವಿಸ್ತರಿಸಿದಾಗ, ಅವರು, ”ಇಡೀ ದಿನ ಬೆಳಿಗ್ಗೆಯಿಂದ ಸಂಜೆಯವರೆಗೆ ನನಗೆ ಒಂದೇ ರೀತಿಯ ಪ್ರಶ್ನೆಗಳನ್ನು ಕೇಳಲಾಗುತ್ತಿದೆ. ಇದು ನನಗೆ ಮಾನಸಿಕ ಕಿರುಕುಳವಾಗಿದೆ” ಎಂದು ಹೇಳಿದರು.

ನ್ಯಾಯಾಲಯವು ಈ ಹಿಂದೆ ಅನುಮತಿಸಿದ್ದ 7 ದಿನಗಳ ಸಿಬಿಐ ಕಸ್ಟಡಿ ವಿಚಾರಣೆಯ ಅವಧಿ ಮುಗಿದ ಹಿನ್ನೆಲೆಯಲ್ಲಿ ಅವರನ್ನು ಇಂದು ವಿಶೇಷ ನ್ಯಾಯಾಧೀಶ ಎಂ.ಕೆ.ನಾಗ್ಪಾಲ್ ಅವರ ಮುಂದೆ ಹಾಜರುಪಡಿಸಲಾಯಿತು.

ಇದನ್ನೂ ಓದಿ: ಕೇಂದ್ರದಿಂದ ತನಿಖಾ ಸಂಸ್ಥೆಗಳ ದುರುಪಯೋಗ: 8 ವಿರೋಧ ಪಕ್ಷಗಳಿಂದ ಪ್ರಧಾನಿಗೆ ಪತ್ರ

ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಅವರು ನುಣುಚಿಕೊಳ್ಳುವ ಉತ್ತರಗಳನ್ನು ನೀಡಿದ್ದರಿಂದ ಮತ್ತು ಸಾಕ್ಷ್ಯಾಧಾರಗಳೊಂದಿಗೆ ತನಿಖೆಗೆ ಸಹಕರಿಸದ ಕಾರಣ ಅವರನ್ನು ಬಂಧಿಸಲಾಗಿದೆ ಎಂದು ಸಿಬಿಐ ಆರೋಪಿಸಿದೆ.

ಈ ಮಧ್ಯೆ ಸಿಸೋಡಿಯಾ ಅವರು ದೆಹಲಿ ನ್ಯಾಯಾಲಯದ ಮುಂದೆ ಜಾಮೀನು ಅರ್ಜಿಯನ್ನು ಸಲ್ಲಿಸಿದ್ದಾರೆ, ಮಾರ್ಚ್ 10ರಂದು ಈ ಅರ್ಜಿ ವಿಚಾರಣೆ ನಡೆಸಲಿದೆ. ನ್ಯಾಯಾಲಯವು ತನ್ನ ಉತ್ತರವನ್ನು ಸಲ್ಲಿಸಲು ಸಿಬಿಐಗೆ ಕೇಳಿದೆ.

ಪ್ರಕರಣಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಈಗಾಗಲೇ ಪಡೆಯಲಾಗಿದೆ. ಹಾಗಾಗಿ ಕಸ್ಟಡಿಯಲ್ಲಿ ಇಡುವುದರಿಂದ ಯಾವುದೇ ಉಪಯೋಗವಾಗುವುದಿಲ್ಲ ಎಂದು ಜಾಮೀನು ಅರ್ಜಿಯಲ್ಲಿ ಸಿಸೋಡಿಯಾ ಹೇಳಿದ್ದಾರೆ.

ಸಿಸೋಡಿಯಾ ಬಂಧನಕ್ಕೆ ಸಂಬಂಧಿಸಿ ಪ್ರಧಾನಿಗೆ ವಿಪಕ್ಷಗಳ ಪತ್ರ

ಆಮ್ ಆದ್ಮಿ ಪಕ್ಷದ(ಎಎಪಿ) ನಾಯಕ ಮನೀಶ್ ಸಿಸೋಡಿಯಾ ಬಂಧನದ ವಿಚಾರದಲ್ಲಿ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಆರೋಪಿಸಿ ಎಂಟು ವಿರೋಧ ಪಕ್ಷಗಳು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿವೆ.

”ವಿರೋಧ ಪಕ್ಷದ ಸದಸ್ಯರ ವಿರುದ್ಧ ಕೇಂದ್ರೀಯ ಸಂಸ್ಥೆಗಳ ದುರ್ಬಳಕೆಯ ಈ ನಡೆಯು ನಾವು ಪ್ರಜಾಪ್ರಭುತ್ವದಿಂದ ನಿರಂಕುಶಪ್ರಭುತ್ವಕ್ಕೆ ಪರಿವರ್ತನೆಯಾಗಿದ್ದೇವೆ ಎಂದು ಸೂಚಿಸುತ್ತದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

”ಮನೀಶ್ ಸಿಸೋಡಿಯಾ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಅವರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಅಕ್ರಮವೆಸಗಿರುವ ಆರೋಪದಲ್ಲಿ ಬಂಧಿಸಿದೆ” ಎಂದು ವಿರೋಧ ಪಕ್ಷದ ನಾಯಕರು ಪ್ರಧಾನಿ ಮೋದಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...