Homeಮುಖಪುಟಕೆಂಪುಕೋಟೆ ಘಟನೆಯ ರೂವಾರಿ ದೀಪ್‌ ಸಿಧುಗೆ 14 ದಿನ ನ್ಯಾಯಾಂಗ ಬಂಧನ

ಕೆಂಪುಕೋಟೆ ಘಟನೆಯ ರೂವಾರಿ ದೀಪ್‌ ಸಿಧುಗೆ 14 ದಿನ ನ್ಯಾಯಾಂಗ ಬಂಧನ

- Advertisement -
- Advertisement -

ಗಣರಾಜ್ಯೋತ್ಸವ ದಿನದಂದು ಕೆಂಪುಕೋಟೆಯಲ್ಲಿ ನಡೆದ ಅಹಿತಕರ ಘಟನೆಯ ಪ್ರಮುಖ ರೂವಾರಿ ದೀಪ್‌ ಸಿಧುವನ್ನು ದೆಹಲಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ಈ ಪ್ರಕರಣದಲ್ಲಿ ಬಂಧನವಾಗಿದ್ದ ದೀಪ್ ಸಿಧುವನ್ನು 7 ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿತ್ತು. ಇದರ ಅವಧಿ ಮುಗಿದ ನಂತರ  ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಸಮರ್ಜೀತ್ ಕೌರ್ ಅವರ ಮುಂದೆ ಹಾಜರುಪಡಿಸಲಾಯಿತು. ಕೆಂಪು ಕೋಟೆಯಲ್ಲಿ ನಡೆದ ಹಿಂಸಾತ್ಮಕ ಘಟನೆಗಳ ಪ್ರಮುಖ ಪ್ರಚೋದಕರಲ್ಲಿ ಈತನೂ ಒಬ್ಬ ಎಂದು ಪೊಲೀಸರು ಆರೋಪಿಸಿದ್ದರಿಂದ ನ್ಯಾಯಾಲಯವು ಈ ಮೊದಲು ದೀಪ್ ಸಿಧು ಅನ್ನು ಪೊಲೀಸ್ ಕಸ್ಟಡಿಗೆ ಕಳುಹಿಸಿತ್ತು.

ಇದನ್ನೂ ಓದಿ: ರಂಜನ್ ಗೊಗೊಯ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿ: ಸಾಕೇತ್ ಗೋಖಲೆ ಆಗ್ರಹ

ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಲಕ್ಷಾಂತರ ರೈತರು ಕಳೆದ 3 ತಿಂಗಳಿನಿಂದ ದೆಹಲಿಯ ಗಡಿಗಳಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಇದರ ಭಾಗವಾಗಿ ಜನವರಿ 26 ರಂದು ಬೃಹತ್ ಟ್ರ್ಯಾಕ್ಟರ್ ಪರೇಡ್ ನಡೆಸಲು ರೈತ ಒಕ್ಕೂಟ ಕರೆ ನೀಡಿತ್ತು. ಈ ಮೆರವಣಿಗೆಯಲ್ಲಿ ದೀಪ್ ಸಿಧುವಿನ ಪ್ರಚೋದಿತ ಗುಂಪೊಂದು ಉದ್ದೇಶಿತ ಮಾರ್ಗ ಬಿಟ್ಟು ಕೆಂಪುಕೋಟೆಗೆ ನುಗ್ಗಿ ಸಿಖ್ ಬಾವುಟವನ್ನು ಹಾರಿಸಿತ್ತು. ಇಲ್ಲಿ ರೈತರು ಮತ್ತು ಪೊಲೀಸರ ನಡುವೆ ಹಿಂಸಾತ್ಮಕ ಘಟನೆಗಳು ನಡೆದು ಇಬ್ಬರೂ ಗಾಯಗೊಂಡಿದ್ದರು.

ಇದಾದ ನಂತರ ದೀಪ್ ಸಿಧು ತಲೆಮರೆಸಿಕೊಂಡಿದ್ದ. ಈತನ ಕುರಿತು ಮಾಹಿತಿ ನೀಡಿದವರಿಗೆ ದೆಹಲಿ ಪೊಲೀಸರು 1 ಲಕ್ಷ ಬಹುಮಾನ ಘೋಷಿಸಿದ್ದರು. ಕಳೆದ ವಾರ ಈತನನ್ನು ಬಂಧಿಸಲಾಗಿತ್ತು.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಊಟದ ವೇಳೆ ರಾಹುಲ್ ಗಾಂಧಿ ಮಾಸ್ಕ್ ಧರಿಸಿರಲಿಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...