Homeಮುಖಪುಟರೈಲು ಹಳಿಗಳಲ್ಲಿ ಪ್ರಾಣಬಿಟ್ಟ 14 ವಲಸೆ ಕಾರ್ಮಿಕರು : ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ನಡೆದ ದುರ್ಘಟನೆ

ರೈಲು ಹಳಿಗಳಲ್ಲಿ ಪ್ರಾಣಬಿಟ್ಟ 14 ವಲಸೆ ಕಾರ್ಮಿಕರು : ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ನಡೆದ ದುರ್ಘಟನೆ

ಆ ರೈಲ್ವೇ ಟ್ರ್ಯಾಕ್‌ಗಳ ಬಳಿ ಮೃತರ ಪಾದರಕ್ಷೆಗಳು ಮತ್ತು ಇತರ ವೈಯಕ್ತಿಕ ವಸ್ತುಗಳಿಂದ ಬಿದ್ದಿವೆ. ಅವರು ತಮ್ಮ ಪ್ರಯಾಣಕ್ಕಾಗಿ ಸಾಗಿಸುತ್ತಿದ್ದ ರೊಟ್ಟಿಗಳು ಸಹ ಚೆಲ್ಲಾಪಿಲ್ಲಿಯಾಗಿದ್ದು ನೋಡುಗರ ಮನಕರಗಿಸುವಂತಿವೆ. 

- Advertisement -
- Advertisement -

ಇಂದು ಬೆಳಿಗ್ಗೆ ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ರೈಲ್ವೇ ಹಳಿಗಳ ಮೇಲೆ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ಸರಕುಗಳ ರೈಲು ಹರಿದ ಪರಿಣಾಮ 14 ಕಾರ್ಮಿಕರು ದುರ್ಮರಣ ಹೊಂದಿರುವ ಕರಾಳ ಘಟನೆ ಜರುಗಿದೆ.

ಈ ದುರ್ಘಟನೆಯಲ್ಲಿ 5 ಜನರು ಗಾಯಗೊಂಡಿದ್ದು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಮೋಕ್ಷದಾ ಪಾಟೀಲ್ ತಿಳಿಸಿದ್ದಾರೆ.

ಮಧ್ಯಪ್ರದೇಶದ ವಲಸೆ ಕಾರ್ಮಿಕರಾದ ಇವರು ಮಹಾರಾಷ್ಟ್ರದ ಜಲ್ನಾದಿಂದ ಮಧ್ಯಪ್ರದೇಶದ ಭುಸ್ವಾಲ್‌ಗೆ ಕಾಲ್ನಡಿಗೆಯಲ್ಲಿ ತೆರಳುತ್ತಿದ್ದರು ಎನ್ನಲಾಗಿದೆ. ಲಾಕ್‌ಡೌನ್‌ ಕಾರಣಕ್ಕೆ ರೈಲುಸೇವೆ ರದ್ದುಗೊಂಡಿರುವುದರಿಂದ ಅಪಾಯವಿಲ್ಲ ಎಂದು ರೈಲು ಹಳಿಗಳ ಮೇಲೆ ಮಲಗಿದ್ದಾಗ ಇಂದು ಬೆಳಿಗ್ಗೆ 5.15ಕ್ಕೆ ರೈಲು ಹರಿದ ಘಟನೆ ಸಂಭವಿಸಿದೆ.

ಆ ರೈಲ್ವೇ ಟ್ರ್ಯಾಕ್‌ಗಳ ಬಳಿ ಮೃತರ ಪಾದರಕ್ಷೆಗಳು ಮತ್ತು ಇತರ ವೈಯಕ್ತಿಕ ವಸ್ತುಗಳಿಂದ ಬಿದ್ದಿವೆ. ಅವರು ತಮ್ಮ ಪ್ರಯಾಣಕ್ಕಾಗಿ ಸಾಗಿಸುತ್ತಿದ್ದ ರೊಟ್ಟಿಗಳು ಸಹ ಚೆಲ್ಲಾಪಿಲ್ಲಿಯಾಗಿದ್ದು ನೋಡುಗರ ಮನಕರಗಿಸುವಂತಿವೆ.

ಇನ್ನು ಘಟನೆ ಕುರಿತು ರೈಲ್ವೆ ಸಚಿವಾಲಯವು ಸರಣಿ ಟ್ವೀಟ್‌ಗಳನ್ನು ಮಾಡಿದೆ. “ಇಂದು ಮುಂಜಾನೆ ಕೆಲವು ಜನರು ಟ್ರಾಕ್‌ ಮೇಲೆ ಮಲಗಿರುವುದು ಕಾಣಿಸಿತು. ಕೂಡಲೇ ಸರಕು ರೈಲಿನ ಲೊಕೊ ಪೈಲಟ್ ರೈಲನ್ನು ನಿಲ್ಲಿಸಲು ಪ್ರಯತ್ನಿಸಿದನು. ಆದರೆ ಅಂತಿಮವಾಗಿ ಸಾಧ್ಯವಾಗದೇ 14 ಜನರು ಸಾವನಪ್ಪಬೇಕಾಗಿದೆ. ಗಾಯಗೊಂಡವರನ್ನು ಔರಂಗಾಬಾದ್ ಸಿವಿಲ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವಿಚಾರಣೆಗೆ ಆದೇಶಿಸಲಾಗಿದೆ” ಎಂದು ರೈಲ್ವೆ ಸಚಿವಾಲಯ ಟ್ವೀಟ್ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರು “ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡಲಾಗುತ್ತಿದೆ” ಎಂದು ಟ್ವೀಟ್ ಮಾಡಿದ್ದಾರೆ. “ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿನ ರೈಲು ಅಪಘಾತದಿಂದ ಪ್ರಾಣಹಾನಿ ತೀವ್ರ ದುಃಖಿತವಾಗಿದೆ. ರೈಲ್ವೆ ಸಚಿವ ಶ್ರೀ ಪಿಯೂಷ್ ಗೋಯಲ್ ಅವರೊಂದಿಗೆ ಮಾತನಾಡಿದ್ದಾರೆ ಮತ್ತು ಅವರು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಅಗತ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುತ್ತಿದೆ” ಎಂದು ಪಿಎಂ ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಅಪಘಾತದ ಸ್ಥಳಕ್ಕೆ ಫುಲಾಂಬ್ರಿಯ ಶಾಸಕರಾಗಿರುವ ಮಹಾರಾಷ್ಟ್ರದ ಮಾಜಿ ಸ್ಪೀಕರ್ ಹರಿಭೌ ಬಾಗ್ಡೆ ಭೇಟಿ ನೀಡಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿ, ಆ ಕಾರ್ಮಿಕರ ಕುಟುಂಬಗಳಿಗೆ ಸಹಾಯ ಕೋರಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್‌ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರೊಂದಿಗೆ ಮಾತನಾಡಿದ್ದಾರೆ. ಅವರು ಸಹ ಮೃತರ ಕುಟುಂಬಗಳಿಗೆ 5 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.

ಗಾಯಗೊಂಡ ವಲಸಿಗರ ಚಿಕಿತ್ಸೆಗೆ ಸಂಬಂಧಿಸಿದ ವ್ಯವಸ್ಥೆಗಳಿಗಾಗಿ ಚೌಹಾಣ್‌ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಮಧ್ಯಪ್ರದೇಶದ ಅಧಿಕಾರಿಗಳು ತಿಳಿಸಿದ್ದಾರೆ.

ತುರ್ತು ಕಾರಣಗಳಿಗಾಗಿ ಮನೆಗೆ ಮರಳಬೇಕಾದ ವಲಸಿಗರಿಗಾಗಿ ಹಲವಾರು ರಾಜ್ಯಗಳು “ಶ್ರಮಿಕ್” ವಿಶೇಷ ರೈಲುಗಳನ್ನು ಓಡಿಸುತ್ತಿದ್ದರೂ, ಸರ್ಕಾರಗಳು ಸೃಷ್ಟಿಸಿರುವ ಗೊಂದಲಗಳಿಂದಾಗಿ ಅನೇಕರು ಕಾಲ್ನಡಿಗೆಯಲ್ಲಿಯೇ ಹಿಂತಿರುಗಲು ಪ್ರಾರಂಭಿಸಿದ್ದಾರೆ.


ಇದನ್ನೂ ಓದಿ: ಒತ್ತಡಕ್ಕೆ ಮಣಿದ ಸರ್ಕಾರ: ನಾಳೆಯಿಂದ ಕಾರ್ಮಿಕರಿಗೆ ರೈಲು ಸೇವೆ ಆರಂಭ 

Also Read: Gas leak at Vishakhapatnam, 10 dead, over 5000 fell sick

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...