Homeಕರೋನಾ ತಲ್ಲಣಮಹಾರಾಷ್ಟ್ರದಲ್ಲಿ ಸೋಮವಾರದಿಂದ 15 ದಿನಗಳ ಲಾಕ್‌ಡೌನ್‌ ಸಾಧ್ಯತೆ

ಮಹಾರಾಷ್ಟ್ರದಲ್ಲಿ ಸೋಮವಾರದಿಂದ 15 ದಿನಗಳ ಲಾಕ್‌ಡೌನ್‌ ಸಾಧ್ಯತೆ

- Advertisement -
- Advertisement -

ಕೊರೊನಾ ಹೆಚ್ಚಳದ ಹಿನ್ನಲೆಯಲ್ಲಿ ಮಹಾರಾಷ್ಟ್ರ ಸರ್ಕಾರವು ರಾಜ್ಯದಲ್ಲಿ ಕಳೆದ ಐದು ದಿನಗಳಿಂದ ಹಗಲಿನಲ್ಲಿ ಕಟ್ಟುನಿಟ್ಟಿನ ನಿರ್ಬಂಧಗಳು ಮತ್ತು ರಾತ್ರಿ ವೇಳೆ ಕರ್ಫ್ಯೂವನ್ನು ಘೋಷಿಸಿತ್ತು. ಜೊತೆಗೆ ವಾರಾಂತ್ಯದಲ್ಲಿ ಲಾಕ್‌ಡೌನ್ ಕೂಡಾ ಹೇರಲಾಗಿತ್ತು. ವಾರಾಂತ್ಯದ ಲಾಕ್‌ಡೌನ್‌‌ನನ್ನು ಗಮನಿಸಿರುವ ಮುಖ್ಯಮಂ‌ತ್ರಿ ಉದ್ದವ್ ಠಾಕ್ರೆ, ಕೊರೊನಾ ಹರಡುವುದನ್ನು ತಡೆಯಲು ಬೇಕಾಗಿ ಸೋಮವಾರದಿಂದ 15 ದಿನಗಳವರೆಗೆ ಲಾಕ್‌ಡೌನ್ ವಿಧಿಸುವ ಸಾಧ್ಯತೆ ಇದೆ ಎಂದು ಶನಿವಾರ ಸೂಚಿಸಿದ್ದಾರೆ.

ಶನಿವಾರ ನಡೆದ ಆಡಳಿತಾರೂಢ ಮೂರು ಮೈತ್ರಿ ಪಕ್ಷಗಳು ಮತ್ತು ಪ್ರತಿಪಕ್ಷಗಳ ಸಭೆಯಲ್ಲಿ, ರಾಜ್ಯ ಸರ್ಕಾರವು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ಎಲ್ಲ ಪಕ್ಷಗಳ ಸಹಕಾರವನ್ನು ಕೋರಿದರು. ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಸೇರಿದಂತೆ ಹಾಜರಿದ್ದ ಎಲ್ಲರೂ ತಮ್ಮ ಬೆಂಬಲವನ್ನು ಮುಖ್ಯಮಂತ್ರಿಗೆ ನೀಡಿದ್ದಾರೆ.

ಇದನ್ನೂ ಓದಿ: ಪರೀಕ್ಷೆಗಳು ಇದ್ದೇ ಇರುತ್ತವೆ, ಬೇಸಿಗೆ ರಜೆ ಇಲ್ಲ – ಡಿಸಿಎಂ ಅಶ್ವತ್ಥನಾರಾಯಣ

“ವಿರೋಧ ಪಕ್ಷವಾಗಿ, ನಾವು ಸರ್ಕಾರಕ್ಕೆ ನಮ್ಮ ಬೆಂಬಲವನ್ನು ನೀಡಲು ಸಿದ್ಧರಿದ್ದೇವೆ. ಲಾಕ್‌ಡೌನ್ ಸಮಯದಲ್ಲಿ ಉದ್ಯೋಗ ನಷ್ಟ ಮತ್ತು ಜೀವನೋಪಾಯದ ಸಮಸ್ಯೆಗಳ ಬಗ್ಗೆ ಜನರ ಆತಂಕಗಳನ್ನು ನಿವಾರಿಸಲು ಸರ್ಕಾರವು ವಿವರವಾದ ಯೋಜನೆಯನ್ನು ರೂಪಿಸಬೇಕು” ಎಂದು ಫಡ್ನವೀಸ್ ಒತ್ತಾಯಿಸಿದರು.

ಎನ್‌ಸಿಪಿ ನಾಯಕ, ಸಚಿವ ನವಾಬ್ ಮಲಿಕ್, ಅಗತ್ಯವಿದ್ದರೆ ಸಂಪೂರ್ಣ ಲಾಕ್‌ಡೌನ್ ಅಥವಾ ಕಟ್ಟುನಿಟ್ಟಿನ ನಿರ್ಬಂಧಗಳ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಎಲ್ಲಾ ಪಕ್ಷಗಳು ಒಪ್ಪಿಕೊಂಡಿವೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಾಯಕ, ಸಚಿವ ಅಶೋಕ್ ಚವಾಣ್, “ಸಂಪೂರ್ಣ ಲಾಕ್‌ಡೌನ್ ಅನ್ನು ಹೇಗೆ ವಿಧಿಸಬೇಕು ಎಂಬುದರ ಕುರಿತು ಠಾಕ್ರೆ ಮಾರ್ಗಸೂಚಿಯನ್ನು ಸಿದ್ಧಪಡಿಸುತ್ತಿದ್ದಾರೆ. ಪ್ರಕರಣಗಳ ಸಂಖ್ಯೆ ಕಡಿಮೆಯಾಗಲು ಪ್ರಾರಂಭವಾದರೆ ನಿರ್ಬಂಧಗಳನ್ನು ಕ್ರಮೇಣ ಹಿಂತೆಗೆದುಕೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿಗೂ, ಪ್ರಧಾನಿ ಮೋದಿಗೂ ಒಂದಷ್ಟು ಮಾನಸಿಕ ಚಿಕಿತ್ಸೆಯ ಅಗತ್ಯವಿದೆ: ಕಾಂಗ್ರೆಸ್ ತೀವ್ರ ವಾಗ್ದಾಳಿ

ಸಭೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು 15 ದಿನಗಳ ಲಾಕ್‌ಡೌನ್ ಪ್ರಸ್ತಾಪಿಸಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ. ನಿಖರವಾದ ಅವಧಿ 15 ದಿನಗಳು ಅಥವಾ ಏಪ್ರಿಲ್ ಅಂತ್ಯದವರೆಗೂ ಲಾಕ್‌ಡೌನ್‌ ಸಾಧ್ಯತೆ ಇದೆ ಎನ್ನಲಾಗಿದೆ. ಮುಖ್ಯಮಂತ್ರಿ ಉದ್ದವ್ ಠಾಕ್ರೆ ರಾಜ್ಯ ಕೋವಿಡ್ ಕಾರ್ಯಪಡೆಯೊಂದಿಗೆ ಭೇಟಿಯಾದ ನಂತರ ಭಾನುವಾರ ಘೋಷಿಸುವ ಸಾಧ್ಯತೆಯಿದೆ. ಸೋಮವಾರ ಸಂಜೆ ಸಂಪೂರ್ಣ ಲಾಕ್‌ಡೌನ್ ಜಾರಿಗೆ ಬರಬಹುದು ಎಂದು ಮೂಲಗಳು ತಿಳಿಸಿವೆ.

ಮಹಾರಾಷ್ಟ್ರದಲ್ಲಿ ಶನಿವಾರ 55,411 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, ಮುಂಬೈನಲ್ಲಿ 9,330 ಪ್ರಕರಣಗಳು ದಾಖಲಾಗಿವೆ. ಈ ವಾರ ರಾಜ್ಯದಲ್ಲಿ ಕಟ್ಟುನಿಟ್ಟಿನ ನಿರ್ಬಂಧ ಹೇರಿದ್ದರಿಂದ ರಾಜ್ಯದಾದ್ಯಂತ ಹೊಸ ಪ್ರಕರಣಗಳಲ್ಲಿ ಅಲ್ಪ ಕುಸಿತ ಕಂಡಿದೆ. ರಾಜ್ಯದಲ್ಲಿ 5.36 ಲಕ್ಷ ಸಕ್ರಿಯ ಪ್ರಕರಣದಳಿವೆ. ಕಳೆದ ನಾಲ್ಕು ದಿನಗಳಿಂದ ರಾಜ್ಯದಲ್ಲಿ 300 ಕ್ಕೂ ಹೆಚ್ಚು ಜನರು ಕೊರೊನಾದಿಂದಾಗಿ ಮೃತಪಟ್ಟಿದ್ದಾರೆ.

ಇದನ್ನೂ ಓದಿ: ಬಂಗಾಳದಲ್ಲಿ ಐವರು ಟಿಎಂಸಿ ಕಾರ್ಯಕರ್ತರಿಗೆ ಗುಂಡಿಕ್ಕಿ ಹತ್ಯೆ-ಆರೋಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...