Homeಮುಖಪುಟಲೆ. ಗವರ್ನರ್ ಸಹಿತ 15 ಮಂದಿ ಅಬಕಾರಿ ನೀತಿಗೆ ಸಹಿ ಹಾಕಿದ್ದರು : ಸಿಬಿಐ ವಾದಕ್ಕೆ...

ಲೆ. ಗವರ್ನರ್ ಸಹಿತ 15 ಮಂದಿ ಅಬಕಾರಿ ನೀತಿಗೆ ಸಹಿ ಹಾಕಿದ್ದರು : ಸಿಬಿಐ ವಾದಕ್ಕೆ ಕೇಜ್ರಿವಾಲ್ ಪ್ರತ್ಯುತ್ತರ

- Advertisement -
- Advertisement -

ವಿವಾದಿತ ದೆಹಲಿ ಅಬಕಾರಿ ನೀತಿಗೆ ಅಂದಿನ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ಸೇರಿದಂತೆ ಹದಿನೈದು ಮಂದಿ ಸಹಿ ಹಾಕಿದ್ದರು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಹೈಕೋರ್ಟ್‌ಗೆ ತಿಳಿಸಿದ್ದಾಗಿ ಬಾರ್ & ಬೆಂಚ್ ವರದಿ ಮಾಡಿದೆ.

“ಕೇಜ್ರಿವಾಲ್‌ ಅವರಿಗೆ ಹಗರಣದ ಬಗ್ಗೆ ಅರಿವಿತ್ತು, ಅವರೇ ಹಗರಣದ ಸೂತ್ರಧಾರ” ಎಂಬ ಸಿಬಿಐ ಪರ ವಕೀಲ ಡಿ ಪಿ ಸಿಂಗ್‌ ವಾದಕ್ಕೆ ಪ್ರತಿಕ್ರಿಯಿಸಿರುವ ಕೇಜ್ರಿವಾಲ್‌ ಪರ ಹಿರಿಯ ನ್ಯಾಯವಾದಿ ಅಭಿಷೇಕ್‌ ಮನು ಸಿಂಘ್ವಿ “ಕೇಜ್ರಿವಾಲ್ ಅವರನ್ನು ಬಂಧಿಸುವ ಸಿಬಿಐ ತರ್ಕವನ್ನು ಮನ್ನಿಸಿದರೆ, ಅಬಕಾರಿ ನೀತಿ ಪ್ರಕರಣದಲ್ಲಿ ಸುಮಾರು 50 ಅಧಿಕಾರಿಗಳನ್ನಷ್ಟೇ ಅಲ್ಲದೆ ದೆಹಲಿ ಲೆ. ಗವರ್ನರ್ ಅವರನ್ನು ಕೂಡ ಆರೋಪಿಗಳನ್ನಾಗಿ ಮಾಡಬೇಕಾದೀತು” ಎಂದು ವಾದ ಮಂಡಿಸಿದ್ದಾರೆ.

ವಾದ-ಪ್ರತಿವಾದಗಳನ್ನು ಆಲಿಸಿರುವ ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ತೀರ್ಪು ಕಾಯ್ದಿರಿಸಿದ್ದಾರೆ. ಇಡಿ ತನಿಖೆ ನಡೆಸುತ್ತಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಕೇಜ್ರಿವಾಲ್ ಅವರನ್ನು ಜೂನ್ 26 ರಂದು ಸಿಬಿಐ ಬಂಧಿಸಿತ್ತು.

ಅದರ ಬೆನ್ನಲ್ಲೇ ಇಡಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಮಧ್ಯಂತರ ಜಾಮೀನು ನೀಡಿತಾದರೂ, ಸಿಬಿಐ ಪ್ರಕರಣದಲ್ಲಿ ಇನ್ನೂ ಜಾಮೀನು ದೊರೆಯದೇ ಇರುವುದರಿಂದ ಕೇಜ್ರಿವಾಲ್ ಸೆರೆವಾಸ ಅನುಭವಿಸುತ್ತಿದ್ದಾರೆ.

ಜಾಮೀನು ಕೋರಿ ಹಾಗೂ ಸಿಬಿಐ ಬಂಧನ ಪ್ರಶ್ನಿಸಿ, ಎರಡು ಪ್ರತ್ಯೇಕ ಅರ್ಜಿಗಳನ್ನು ಕೇಜ್ರಿವಾಲ್‌ ಹೈಕೋರ್ಟ್‌ಗೆ ಸಲ್ಲಿಸಿದ್ದಾರೆ. ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸೋಮವಾರ (ಜು.29) ನಡೆದಿದ್ದು ಬಂಧನ ಪ್ರಶ್ನಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಈಗಾಗಲೇ ತೀರ್ಪು ಕಾಯ್ದಿರಿಸಲಾಗಿದೆ.

ಇದನ್ನೂ ಓದಿ : ಅತ್ಯಾಚಾರ ಸಂತ್ರಸ್ತೆಯನ್ನು ಮಹಿಳಾ ವೈದ್ಯರೇ ಪರೀಕ್ಷಿಸುವಂತೆ ಕಾನೂನಿಗೆ ತಿದ್ದುಪಡಿ ತನ್ನಿ: ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...