Homeಕರ್ನಾಟಕ31 ವರ್ಷಗಳಲ್ಲಿ 150 ಬೋರ್‌ವೆಲ್: ರೈತನ ಸತತ ಪ್ರಯತ್ನಕ್ಕೆ ಕೊನೆಗೂ ಸಿಕ್ಕ ಪ್ರತಿಫಲ

31 ವರ್ಷಗಳಲ್ಲಿ 150 ಬೋರ್‌ವೆಲ್: ರೈತನ ಸತತ ಪ್ರಯತ್ನಕ್ಕೆ ಕೊನೆಗೂ ಸಿಕ್ಕ ಪ್ರತಿಫಲ

ಆದರೆ ಬಸಾಪುರ ವಿಮಾನ ನಿಲ್ದಾಣ ವಿಸ್ತರಣೆಗಾಗಿ ಭೂಮಿಯನ್ನು ವಶಪಡಿಸಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ಸೋಮವಾರ ಸರ್ಕಾರ ನಮಗೆ ನೋಟಿಸ್ ನೀಡಿದೆ- ಚನ್ನಕುಮಾರ ಮೇಟಿ

- Advertisement -
- Advertisement -

ಕಳೆದ 31 ವರ್ಷಗಳಲ್ಲಿ 150 ಬೋರ್‌ವೆಲ್‌ಗಳನ್ನು ಕೊರೆಸಿದರೂ ನೀರು ಸಿಕ್ಕಿರಲಿಲ್ಲ. ಆದರೆ ಕಳೆದ ವಾರ ಕೊನೆಯ ಪ್ರಯತ್ನ ಯಶಸ್ವಿಯಾಗಿ ನೀರು ಸಿಕ್ಕಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.

ಕುತುಗನಹಳ್ಳಿ ಗ್ರಾಮದ 53 ವರ್ಷದ ಅಶೋಕ್ ಮೇಟಿಯ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಕಳೆದ ಒಂದು ವಾರದಲ್ಲಿ 4 ಬೋರ್‌ವೆಲ್‌ಗಳನ್ನು ಕೊರೆಸಿದ್ದಾರೆ. 31 ವರ್ಷಗಳ ಪ್ರಯತ್ನವು ಕೊನೆಗೂ ಪ್ರತಿಫಲ ನೀಡಿದೆ.

“ನಾವು ನೀರನ್ನು ಪಡೆಯಲು ಕಳೆದ 31 ವರ್ಷಗಳಲ್ಲಿ ಎಲ್ಲಾ ರೀತಿಯಿಂದಲೂ ಪ್ರಯತ್ನಿಸಿದ್ದೇವೆ. ನೀರು ಸಿಗುವ ಬಿಂದುವನ್ನು ಕಂಡುಹಿಡಿಯಲು ನಾವು ಯಂತ್ರೋಪಕರಣಗಳ ವಿಧಾನ ಮತ್ತು ಸಾಂಪ್ರದಾಯಿಕ ವಿಧಾನಗಳನ್ನು ಬಳಸಿದ್ದೇವೆ. ಆದರೆ ಅವುಗಳೆಲ್ಲವೂ ವ್ಯರ್ಥವಾಗಿತ್ತು. ನಾವು ಜಮೀನಿನಲ್ಲಿ ಪೂಜೆಗಳನ್ನು ಸಹ ಮಾಡಿದ್ದೇವೆ. ಅಂತಿಮವಾಗಿ ಕಳೆದ ವಾರ ನೀರು ಸಿಕ್ಕಿದೆ. ಸುಮಾರು 3 ಇಂಚುಗಳಷ್ಟು ನೀರು ಬರುತ್ತಿದೆ” ಎಂದು ಅಶೋಕ್ ಮೇಟಿ ಹೇಳಿದರು.

ಇದನ್ನೂ ಓದಿ: ಭಾರತದಲ್ಲಿ ನ್ಯಾಯಾಂಗ ವ್ಯವಸ್ಥೆ ಕುಸಿದಿದೆ: ಅಯೋಧ್ಯೆ ತೀರ್ಪು ನೀಡಿದ್ದ ಮಾಜಿ ಸಿಜೆಐ ರಂಜನ್ ಗೊಗೊಯ್…

“ನಾವು ಮಳೆ ಆಶ್ರಿತ ಬೆಳೆಗಳನ್ನು ಮಾತ್ರ ಬೆಳೆಯುತ್ತಿದ್ದೆವು. ಈಗ ಬೋರ್‌ವೆಲ್‌ನಲ್ಲಿ ನೀರು ಸಿಕ್ಕಿರುವುದರಿಂದ ಕೃಷಿಯನ್ನು ಇನ್ನಷ್ಟು ವಿಸ್ತರಿಸಲು ಯೋಚಿಸುತ್ತಿದ್ದೇವೆ” ಎಂದು ಅವರು ಹೇಳಿದರು.

ಕೊಪ್ಪಳ ಜಿಲ್ಲೆಯ ಹಲವಾರು ಪ್ರದೇಶಗಳಲ್ಲಿ ಅಂತರ್ಜಲ ಕೆಲವೊಮ್ಮೆ ತುಂಬಾ ಆಳದಲ್ಲಿರುತ್ತದೆ. ಕಳೆದ ಎರಡು ವರ್ಷಗಳಿಂದ ಈ ಪ್ರದೇಶದಲ್ಲಿ ಉತ್ತಮ ಮಳೆಯಾಗಿದ್ದು, ಇದು ಅಂತರ್ಜಲ ಮಟ್ಟವನ್ನು ಹೆಚ್ಚಿಸಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಹಾಗಾಗಿ ಈ ರೈತ ಬೋರ್‌ವೆಲ್‌ನಲ್ಲಿ ನೀರು ಪಡೆಯಲು ಸಾಧ್ಯವಾಗಿರಬಹುದು ಎಂದು ಜಲವಿಜ್ಞಾನ ತಜ್ಞರು ಹೇಳಿದ್ದಾರೆ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಅಶೋಕ್ ಮೇಟಿಯವರು ಬೋರ್‌ವೆಲ್ ಕೊರೆಸುವುದರಲ್ಲಿ ವಿಫಲವಾಗಿದ್ದರೂ ಸಹ ತಮ್ಮ ಪ್ರಯತ್ನವನ್ನು ನಿಲ್ಲಿಸಲಿಲ್ಲ. ಇವರ ಕುಟುಂಬವು 27 ಎಕರೆ ಭೂಮಿಯನ್ನು ಹೊಂದಿದೆ” ಎಂದು ಕುತಗನಹಳ್ಳಿಯ ಗ್ರಾಮಸ್ಥರೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿಯ ರಾಗಗಳಿಗೆ ರಾಜ್ಯಪಾಲರನ್ನು ನೃತ್ಯ ಮಾಡಿಸಲಾಗುತ್ತಿದೆ: ಶಿವಸೇನೆ

“ಸತತವಾಗಿ ಬೋರ್‌ವೆಲ್ ಕೊರೆಸಿದ್ದರಿಂದ ಸುಮಾರು 20 ಲಕ್ಷಕ್ಕೂ ಹೆಚ್ಚಿನ ಹಣ ಖರ್ಚಾಗಿತ್ತು. ಇದರಿಂದ ಬೇಸತ್ತ ಕುಟುಂಬವು 27 ಎಕರೆ ಭೂಮಿಯನ್ನು ಮಾರಾಟ ಮಾಡಲು ನಿರ್ಧರಿಸಿತ್ತು. ಆದರೆ ಕೊನೆಯ ಪ್ರಯತ್ನವಾಗಿ ಕುಟುಂಬದವರಿಗೆ ತಿಳಿಸದೇ ಕಳೆದ ಭಾನುವಾರ ರಾತ್ರಿ ಬೋರ್‌ವೆಲ್ ಕೊರೆಸಲು ನಿರ್ಧರಿಸಿದೆ. ಆಗ ನಮ್ಮ ಪ್ರಯತ್ನಕ್ಕೆ ಪ್ರತಿಫಲ ಸಿಕ್ಕಿತು” ಎಂದು ಅಶೋಕ್ ಮೇಟಿ ಕುಟುಂಬ ಸದಸ್ಯರಾದ ಚನ್ನಕುಮಾರ ಮೇಟಿ ಟೈಮ್ಸ್‌ ಆಫ್ ಇಂಡಿಯಾಗೆ ತಿಳಿಸಿದ್ದಾರೆ.

“ಆದರೆ ಬಸಾಪುರ ವಿಮಾನ ನಿಲ್ದಾಣ ವಿಸ್ತರಣೆಗಾಗಿ ಭೂಮಿಯನ್ನು ವಶಪಡಿಸಿಕೊಳ್ಳುವುದಕ್ಕೆ ಸಂಬಂಧಿಸಿದಂತೆ ಸೋಮವಾರ ಸರ್ಕಾರ ನಮಗೆ ನೋಟಿಸ್ ನೀಡಿದೆ. ಈಗ ನಾವು ಸಂತೋಷ ಪಡಬೇಕೋ ಅಥವಾ ನೋಟಿಸ್‌ಗೆ ಉತ್ತರಿಸಬೇಕೋ ತಿಳಿಯುತ್ತಿಲ್ಲ” ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ನಾಳೆ ಪ್ರಧಾನಿ ತಮಿಳುನಾಡಿಗೆ – ಇಂದೇ ಪ್ರಾರಂಭವಾದ #GoBackModi ಟ್ರೆಂಡಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...