Homeಕರ್ನಾಟಕಲಾಕ್‌ಡೌನ್‌ ಅವಧಿಯಲ್ಲಿ 1,550 ಟನ್ ಆಹಾರಧಾನ್ಯ ಹಾಳು!

ಲಾಕ್‌ಡೌನ್‌ ಅವಧಿಯಲ್ಲಿ 1,550 ಟನ್ ಆಹಾರಧಾನ್ಯ ಹಾಳು!

ಲಾಕ್‌ಡೌನ್‌ ಅವಧಿಯಲ್ಲಿ ಬಹಳಷ್ಟು ಜನರಿಗೆ ಆಹಾರ ಸಿಗದೇ ಒದ್ದಾಡಿದ್ದರು. ಆಗ ಅವರ ಹಸಿವನ್ನು ದೂರ ಮಾಡಲು ಆಹಾರಧಾನ್ಯಗಳನ್ನು ಬಳಸದೇ, ವ್ಯರ್ಥ ಮಾಡಿದ್ದು ಸರಿಯಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

- Advertisement -
- Advertisement -

ಲಾಕ್ ಡೌನ್ ಅವಧಿಯಲ್ಲಿ ಭಾರತೀಯ ಆಹಾರ ನಿಗಮದ ಉಗ್ರಾಣದಲ್ಲಿ ಶೇಖರಿಸಲ್ಪಟ್ಟಿದ್ದ 1,550 ಟನ್ ಆಹಾರಧಾನ್ಯ ಹಾಳಾಗಿದೆ ಎಂಬುದು ಗ್ರಾಹಕರ ವ್ಯವಹಾರಗಳ ಸಚಿವಾಲಯ ಬಿಡುಗಡೆ ಮಾಡಿರುವ ಅಂಕಿ ಅಂಶಗಳಿಂದ ದೃಢಪಟ್ಟಿದೆ ಎಂದು ದಿ ವೈರ್.ಇನ್ ವರದಿ ಮಾಡಿದೆ.

ಮೇ ತಿಂಗಳಲ್ಲಿ 26 ಟನ್ ಮತ್ತು ಜೂನ್ ತಿಂಗಳಲ್ಲಿ 1453 ಟನ್ ಆಹಾರಧಾನ್ಯ ನಷ್ಟವಾಗಿದೆ ಎಂದು ಅಂಕಿಅಂಶಗಳು ಸ್ಪಷ್ಟಪಡಿಸಿವೆ. ಜುಲೈ-ಆಗಸ್ಟ್ ತಿಂಗಳಲ್ಲಿ ಕ್ರಮವಾಗಿ 41, 51 ಟನ್ ಆಹಾರಧಾನ್ಯ ನಷ್ಟವಾಗಿರುವುದು ದಾಖಲಾಗಿದೆ. ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ಶೂನ್ಯನಷ್ಟವಾಗಿರುವುದು ದಾಖಲೆಗಳಿಂದ ತಿಳಿದುಬಂದಿದೆ.

ಈ ಸಂದರ್ಭದಲ್ಲಿ ಕೆಲಸ ಕಳೆದುಕೊಂಡಿದ್ದ ವಲಸೆ ಕಾರ್ಮಿಕರು ತಮ್ಮ ದೂರದ ಗ್ರಾಮಗಳಿಗೆ ಕಾಲ್ನಡಿಗೆಯಲ್ಲೇ ಪ್ರಯಾಣ ಬೆಳೆಸಿದರು. ಬಹಳಷ್ಟು ಜನರಿಗೆ ಆಹಾರ ಸಿಗದೇ ಒದ್ದಾಡಿದ್ದರು. ಆಗ ಅವರ ಹಸಿವನ್ನು ದೂರ ಮಾಡಲು ಆಹಾರಧಾನ್ಯಗಳನ್ನು ಬಳಸದೇ, ವ್ಯರ್ಥ ಮಾಡಿದ್ದು ಸರಿಯಲ್ಲ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಗ್ರಾಹಕರ ವ್ಯವಹಾರಗಳ ಸಚಿವಾಲಯ ನೀಡಿದ ದಾಖಲೆಗಳಂತೆ ಭಾರತೀಯ ಆಹಾರ ನಿಗಮದ ಉಗ್ರಾಣಗಳಲ್ಲಿ ಆಹಾರಧಾನ್ಯಗಳನ್ನು ಸಂಗ್ರಹ ಮಾಡಲಾಗಿತ್ತು. ಈ ಆಹಾರಧಾನ್ಯಗಳು ಹಾಳಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲಾಗಿತ್ತು. ಕೀಟನಾಶಕವನ್ನು ಸಿಂಪಡಿಸಲಾಗಿತ್ತು ಎಂದು ಹೇಳಲಾಗಿದೆ.

ಇದನ್ನೂ ಓದಿ: ಲಾಕ್‌ಡೌನ್ ವಿಧಿಸಿದ್ದು ನೀವು, ಈಗ ನೀವೇ ನೆರವು ನೀಡಿ: ಕೇಂದ್ರಕ್ಕೆ ಸುಪ್ರೀಂ ತಾಕೀತು

’ಆಹಾರಧಾನ್ಯಗಳು ನಷ್ಟವಾಗಿದ್ದರೆ ಶೀಘ್ರವೇ ತನಿಖೆ ಮಾಡುತ್ತೇವೆ. ಪ್ರಕರಣ ದಾಖಲಿಸುತ್ತೇವೆ. ಅದರ ಆಧಾರದ ಮೇಲೆ ಸಂಬಂಧಪಟ್ಟ ಪ್ರಾಧಿಕಾರವು ಅಧಿಕಾರಿಗಳ ಮೇಲೆ ಕ್ರಮಕೈಗೊಳ್ಳಲಿದೆ. 2014 ರಿಂದ 2018ರ ಅವಧಿಯಲ್ಲಿ 125 ಮಂದಿ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗಿದ’ ಎಂದು ಸಚಿವ ರಾಮ್ ವಿಲಾಸ್ ಪಾಸ್ವಾನ್ ತಿಳಿಸಿದ್ದಾರೆಂದು ದಿ ವೈರ್.ಇನ್ ವರದಿ ಮಾಡಿದೆ.

ಪ್ರಸಕ್ತ ವರ್ಷದ ಏಪ್ರಿಲ್‌ನಲ್ಲಿ ಉಗ್ರಾಣಗಳಲ್ಲಿ ಸರ್ಕಾರ ವೈಜ್ಞಾನಿಕ ಮಾದರಿಯನ್ನು ಅಳವಡಿಸಿಕೊಂಡಿದ್ದರಿಂದ ನಷ್ಟ ಕಡಿಮೆಯಾಗಿದೆ. ಸಂಗ್ರಹ ಮತ್ತು ವಿತರಣೆಗೆ ಅನುಕೂಲವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

2015-16 ಸಾಲಿನಲ್ಲಿ 60.3 ದಶಲಕ್ಷ ಟನ್ ಅಕ್ಕಿ ಮತ್ತು ಗೋಧಿ ಖರೀದಿಸಿದ್ದು 3116 ಟನ್ ಆಹಾರ ಧಾನ್ಯ ಗಳು ಹಾಳಾಗಿದೆ. ಇದು ಒಟ್ಟು ಖರೀದಿಯಲ್ಲಿ ಕೇವಲ ಶೇ. 0.005ರಷ್ಟು ಮಾತ್ರ ಎಂದು ಪಾಸ್ವಾನ್ ಸ್ಪಷ್ಟಪಡಿಸಿದ್ದಾರೆ. 2016-17ನೇ ಸಾಲಿನಲ್ಲಿ 61 ದಶಲಕ್ಷ ಟನ್ ಖರೀದಿಸಿದ್ದು ನಷ್ಟ ಪ್ರಮಾಣ ಕೇವಲ ಶೇ. 0.014ರಷ್ಟು ಆಗಿದೆ ಎಂದು ವರದಿ ತಿಳಿಸಿದೆ.

ಈ ನಡುವೆ 2017-18, 2018-19ನೇ ಸಾಲಿನಲ್ಲಿ ಶೇ. 0.003ರಷ್ಟು ಮತ್ತು ಶೇ. 0.006 ರಷ್ಟು ನಷ್ಟವಾಗಿದೆ. 2019-20ರಲ್ಲಿ 75.17 ದಶಲಕ್ಷ ಟನ್ ಆಹಾರಧಾನ್ಯ ಖರೀದಿಸಿತ್ತು. ಇದರಲ್ಲಿ 1930 ಟನ್ ನಷ್ಟವಾಗಿದೆ. ಇದು ಒಟ್ಟು ಖರೀದಿಯ ಕೇವಲ ಶೇ.0.002ರಷ್ಟು ಆಗಿದೆ ಎಂದು ದಿ ವೈರ್.ಇನ್ ವರದಿ ಮಾಡಿದೆ.


ಇದನ್ನೂ ಓದಿ: ಭಾರಿ ಮಳೆ, ಲಾಕ್‌ಡೌನ್ ಎಫೆಕ್ಟ್: ಮುಂದಿನ ವರ್ಷ ಉಪ್ಪಿನ ಕೊರತೆ ಸಾಧ್ಯತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...