HomeಅಂಕಣಗಳುKarnataka against SIR3ನೇ ಹಂತದ 'SIR' ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

- Advertisement -
- Advertisement -

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು ಕೈಬಿಡಲ್ಪಟ್ಟಿವೆ. ಒಟ್ಟು 1.58 ಕೋಟಿಗೂ ಅಧಿಕ ಅರ್ಹ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದು ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ.

ಪರಿಷ್ಕರಣೆಗೂ ಮುನ್ನ ಈ 12 ಭಾಗಗಳಲ್ಲಿ ಒಟ್ಟು 13.77 ಕೋಟಿ ಮತದಾರರಿದ್ದರು. ಆದರೆ ಕರಡು ಪಟ್ಟಿ ಬಿಡುಗಡೆಯಾದ ಬಳಿಕ ಈ ಸಂಖ್ಯೆ 12.18 ಕೋಟಿಗೆ ಕುಸಿದಿದೆ. ಅಂದರೆ ಶೇಕಡಾ 11.51 ರಷ್ಟು ಮತದಾರರನ್ನು ವಿವಿಧ ಕಾರಣಗಳಿಂದ ಮತಪಟ್ಟಿಯಿಂದ ಹೊರಗಿಡಲಾಗಿದೆ.

  • ಆಂಧ್ರಪ್ರದೇಶ: ಪರಿಷ್ಕರಣೆಗೂ ಮುನ್ನ 4.16 ಕೋಟಿಯಷ್ಟಿದ್ದ ಮತದಾರರ ಸಂಖ್ಯೆ 3.71 ಕೋಟಿಗೆ ಇಳಿಕೆಯಾಗಿದ್ದು, ಬರೋಬ್ಬರಿ 44.89 ಲಕ್ಷ (10.78%) ಹೆಸರುಗಳನ್ನು ಕೈಬಿಡಲಾಗಿದೆ.
  • ಜಾರ್ಖಂಡ್: 2.64 ಕೋಟಿಯಿಂದ 2.21 ಕೋಟಿಗೆ ಕುಸಿದಿದ್ದು, 43.61 ಲಕ್ಷ (16.48%) ಮತದಾರರ ಹೆಸರುಗಳು ಡಿಲೀಟ್ ಆಗಿವೆ.
  • ಹರ್ಯಾಣ: 2.06 ಕೋಟಿಯಿಂದ 1.72 ಕೋಟಿಗೆ ಇಳಿಕೆಯಾಗಿದ್ದು, 33.83 ಲಕ್ಷ (16.38%) ಹೆಸರುಗಳನ್ನು ತೆರವುಗೊಳಿಸಲಾಗಿದೆ.
  • ಒಡಿಶಾ: 3.33 ಕೋಟಿಯಿಂದ 3.13 ಕೋಟಿಗೆ ತಗ್ಗಿದ್ದು, 20.12 ಲಕ್ಷ (6.02%) ಮತದಾರರನ್ನು ಪಟ್ಟಿಯಿಂದ ತೆಗೆಯಲಾಗಿದೆ.
  • ಉತ್ತರಾಖಂಡ: 79.6 ಲಕ್ಷದಿಂದ 71.33 ಲಕ್ಷಕ್ಕೆ ಇಳಿಕೆಯಾಗಿದ್ದು, 8.26 ಲಕ್ಷ (10.39%) ಹೆಸರುಗಳು ಗಾಯಬ್ ಆಗಿವೆ.

ಇತರ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು: ಮೇಘಾಲಯದಲ್ಲಿ 1.80 ಲಕ್ಷ (7.67%), ಅರುಣಾಚಲ ಪ್ರದೇಶದಲ್ಲಿ 1.69 ಲಕ್ಷ (19.09%), ಮಣಿಪುರದಲ್ಲಿ 1.58 ಲಕ್ಷ (7.5%), ದಾದ್ರಾ ಮತ್ತು ನಗರ್ ಹವೇಲಿ ಹಾಗೂ ದಾಮನ್-ದಿಯುನಲ್ಲಿ 1.26 ಲಕ್ಷ (29.64%), ಚಂಡೀಗಢದಲ್ಲಿ 66,181 (12.8%), ಮಿಝೋರಾಂನಲ್ಲಿ 46,162 (5.2%) ಹಾಗೂ ಸಿಕ್ಕಿಂನಲ್ಲಿ 37,724 (8%) ಮತದಾರರನ್ನು ಪಟ್ಟಿಯಿಂದ ಹೊರಗಿಡಲಾಗಿದೆ.

ಕರ್ನಾಟಕ ಸೇರಿ ಹಲವು ರಾಜ್ಯಗಳ ಪಟ್ಟಿ ಬಿಡುಗಡೆ ಬಾಕಿ

ಅನೇಕ ರಾಜ್ಯಗಳ ಕರಡು ಮತದಾರರ ಪಟ್ಟಿ ಬಿಡುಗಡೆಯಾಗಿದ್ದು, ಉಳಿದ ಪ್ರಮುಖ ರಾಜ್ಯಗಳ ಪಟ್ಟಿಗಳು ಮುಂದಿನ ದಿನಗಳಲ್ಲಿ ಪ್ರಕಟಗೊಳ್ಳಲಿವೆ:

  • ಪಂಜಾಬ್: ಆಗಸ್ಟ್ 13
  • ತೆಲಂಗಾಣ: ಆಗಸ್ಟ್ 17
  • ಕರ್ನಾಟಕ, ದೆಹಲಿ ಮತ್ತು ಮಹಾರಾಷ್ಟ್ರ: ಆಗಸ್ಟ್ 24
  • ನಾಗಾಲ್ಯಾಂಡ್: ಸೆಪ್ಟೆಂಬರ್ 20
  • ತ್ರಿಪುರಾ: ಅಕ್ಟೋಬರ್ 21
ಹೆಸರು ಸೇರ್ಪಡೆಗೆ ಮತ್ತೊಮ್ಮೆ ಅವಕಾಶ

ಈಗ ಬಿಡುಗಡೆಯಾಗಿರುವುದು ಕೇವಲ ಕರಡು ಮತದಾರರ ಪಟ್ಟಿಯಾಗಿದ್ದು (Draft Electoral Roll), ಹೆಸರು ಬಿಟ್ಟುಹೋದವರು ಹಾಗೂ ಹೊಸ ಮತದಾರರು ತಮ್ಮ ಆಕ್ಷೇಪಣೆ ಸಲ್ಲಿಸಲು ಮತ್ತು ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಲು ಚುನಾವಣಾ ಆಯೋಗ ಅವಕಾಶ ಕಲ್ಪಿಸಿದೆ. ಹೀಗಾಗಿ ಅಂತಿಮ ಪಟ್ಟಿ ಪ್ರಕಟವಾಗುವ ವೇಳೆ ಮತದಾರರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಆಯೋಗ ಸ್ಪಷ್ಟಪಡಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ಪುನಃ ಅಗ್ರಸ್ಥಾನ ಪಡೆದ ಗೌತಮ್ ಅದಾನಿ; ಶೇ. 13 ರಷ್ಟು ಸಂಪತ್ತು ಹೆಚ್ಚಳ

ಎಂ3ಎಂ ಹುರುನ್ ಇಂಡಿಯಾ ರಿಚ್ ಲಿಸ್ಟ್ 2026 ರ ಪ್ರಕಾರ, ಭಾರತದ ಬಿಲಿಯನೇರ್‌ಗಳ ಸಂಖ್ಯೆಯು ದಾಖಲೆಯ 391 ಕ್ಕೆ ತಲುಪಿದ್ದು, ಮುಖೇಶ್ ಅಂಬಾನಿ ಅವರನ್ನು ಹಿಂದಿಕ್ಕಿರುವ ಗೌತಮ್ ಅದಾನಿ ಮತ್ತು ಅವರ ಕುಟುಂಬವು...

ಚುನಾವಣಾ ಆಯೋಗದ ಆಂತರಿಕ ಭಿನ್ನಾಭಿಪ್ರಾಯ: SIR ಕುರಿತು ಮಾಜಿ ಮುಖ್ಯ ಚುನಾವಣಾ ಆಯುಕ್ತರು, ತಜ್ಞರ ಕಳವಳ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಭಾರತೀಯ ಚುನಾವಣಾ ಆಯೋಗದೊಳಗೆ ದಾಖಲಾಗಿರುವ ಭಿನ್ನಾಭಿಪ್ರಾಯಗಳು ಇದೀಗ ವ್ಯಾಪಕ ಚರ್ಚೆಗೆ ಕಾರಣವಾಗಿವೆ. ದಿ ಇಂಡಿಯನ್ ಎಕ್ಸ್‌ಪ್ರೆಸ್  ನಡೆಸಿದ ತನಿಖಾ ವರದಿ ಪ್ರಕಾರ,...

ಚಲಿಸುವ ರೈಲಿನಲ್ಲಿ ಹಲ್ಲೆ ನಡೆಸಿ ‘ಜೈ ಶ್ರೀ ರಾಮ್’ ಘೋಷಣೆ ಕೂಗುವಂತೆ ಒತ್ತಾಯ: ಮುಸ್ಲಿಂ ಯುವಕನ ಆರೋಪ

ಮುಂಬೈಯಿಂದ ಉತ್ತರ ಪ್ರದೇಶಕ್ಕೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ತನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಮುಸ್ಲಿಂ ಯುವಕನೊಬ್ಬ ಆರೋಪಿಸಿದ್ದಾನೆ. ದಾಳಿಕೋರರು ತನ್ನ ಶರ್ಟ್ ಹರಿದು, ಥಳಿಸಿ, ಬಲವಂತವಾಗಿ "ಜೈ ಶ್ರೀ ರಾಮ್" ಎಂದು ಜಪಿಸುವಂತೆ...

ಫಾರ್ಮ್ 6 ರಲ್ಲಿನ ಬದಲಾವಣೆಗಳು ಕಾನೂನುಬಾಹಿರ; ಆಯೋಗದೊಳಗಿನ ಭಿನ್ನಾಭಿಪ್ರಾಯ ಗಂಭೀರ: ಮಾಜಿ ಸಿಇಸಿ ಓ.ಪಿ. ರಾವತ್

"ಶಾಸನಬದ್ಧ ಮತದಾರರ ನೋಂದಣಿ ಫಾರ್ಮ್ ನಂ 6 ರಲ್ಲಿ ಮಾಡಲಾದ ಬದಲಾವಣೆಗಳು ಸಂಪೂರ್ಣವಾಗಿ ತಪ್ಪು ಮತ್ತು ಕಾನೂನುಬಾಹಿರ" ಎಂದು ಮಾಜಿ ಮುಖ್ಯ ಚುನಾವಣಾ ಆಯುಕ್ತ ಓ.ಪಿ. ರಾವತ್ ತಿಳಿಸಿದ್ದಾರೆ. "ಚುನಾವಣಾ ಆಯೋಗದೊಳಗಿನ...

‘ಸಲ್ವಾರ್ ತೆಗೆಯಲು ಯತ್ನ, ಎದೆ ಒತ್ತುವುದು ಅತ್ಯಾಚಾರ ಯತ್ನವಲ್ಲವೇ?’: ಪಾಟ್ನಾ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ಚಾಟಿ 

ನವದೆಹಲಿ: ಮಹಿಳೆಯ ಸಲ್ವಾರ್ ತೆಗೆಯಲು ಯತ್ನಿಸುವುದು ಮತ್ತು ಆಕೆಯ ಎದೆಯನ್ನು ಒತ್ತುವುದು ಸೇರಿದಂತೆ ಲೈಂಗಿಕ ದೌರ್ಜನ್ಯದ ಆರೋಪಗಳು ಅತ್ಯಾಚಾರಕ್ಕೆ ಯತ್ನಿಸಿದ ಅಪರಾಧದ ವ್ಯಾಪ್ತಿಗೆ ಬರುವುದಿಲ್ಲ ಎಂದು ಪಾಟ್ನಾ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ...

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಜಾಗೊಳಿಸಿ; ಕೂಡಲೇ ಎಸ್‌ಐಆರ್ ನಿಲ್ಲಿಸಿ: ವಿಪಕ್ಷಗಳ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಚುನಾವಣಾ ಆಯೋಗದ ಇಬ್ಬರು ಚುನಾವಣಾ ಆಯುಕ್ತರು ಗಂಭೀರ ಕಳವಳ ವ್ಯಕ್ತಪಡಿಸಿರುವುದು ದೊಡ್ಡ ರಾಜಕೀಯ ಬಿರುಗಾಳಿಗೆ ಕಾರಣವಾಗಿದೆ. "ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್...

‘ಸಹೋದರಿಯರು, ಹೆಣ್ಣುಮಕ್ಕಳನ್ನೂ ಕರೆತನ್ನಿ; ನಮ್ಮ ಹುಡುಗರೂ ಸಿದ್ಧ’: ಮುಸ್ಲಿಂ ಮಹಿಳೆಯರ ವಿರುದ್ಧ ಮಧ್ಯಪ್ರದೇಶ ಬಿಜೆಪಿ ಶಾಸಕನ ಅತ್ಯಾಚಾರ ಬೆದರಿಕೆ

ಭೋಪಾಲ್: ನವರಾತ್ರಿ ಸಂದರ್ಭದಲ್ಲಿ ನಡೆಯುವ ಗರ್ಬಾ ಕಾರ್ಯಕ್ರಮಗಳಿಗೆ ಮುಸ್ಲಿಂ ಯುವಕರು ಆಗಮಿಸುವುದನ್ನು ಗುರಿಯಾಗಿಸಿಕೊಂಡು ಮಧ್ಯಪ್ರದೇಶದ ಬಿಜೆಪಿ ಶಾಸಕ ರಾಮೇಶ್ವರ ಶರ್ಮಾ ನೀಡಿರುವ ಹೇಳಿಕೆ ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. “ಮುಸ್ಲಿಂ ಹುಡುಗರು ಮಾತ್ರ...

BWSSB ಗುತ್ತಿಗೆ ಪದ್ಧತಿ ರದ್ದತಿಗೆ ಆಗ್ರಹ: ಜಲಮಂಡಳಿ ಗುತ್ತಿಗೆ ಕಾರ್ಮಿಕರ ಸರಣಿ ಸಾವಿಗೆ ಆಕ್ರೋಶ, ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದ ನೀರು ಸರಬರಾಜು ಮತ್ತು ಒಳಚರಂಡಿ ವ್ಯವಸ್ಥೆಯನ್ನು ಅಹೋರಾತ್ರಿ ಸುಗಮವಾಗಿ ನಿರ್ವಹಿಸುವ BWSSB ಜಲಮಂಡಳಿಯ ಸಾವಿರಾರು ಗುತ್ತಿಗೆ ಕಾರ್ಮಿಕರು ತಮ್ಮ ಜೀವಭದ್ರತೆ ಹಾಗೂ ಮೂಲಭೂತ ಹಕ್ಕುಗಳಿಗಾಗಿ ಆಗ್ರಹಿಸಿ ಇಂದು (ಸೆಪ್ಟೆಂಬರ್ 23)...

ಕೋಲ್ಕತ್ತಾ: ಟಿಎಂಸಿ ಐಟಿ ಸೆಲ್ ಮುಖ್ಯಸ್ಥೆ ಉಪಾಸನಾ ಚೌಧರಿ ಮನೆ ಮೇಲೆ ಕಲ್ಲುತೂರಾಟ, ಮಾಜಿ ಶಾಸಕ ಹುಮಾಯೂನ್ ಕಬೀರ್ ಮೇಲೂ ಹಲ್ಲೆ!

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಮುಕುಂದಪುರದಲ್ಲಿ ಮಂಗಳವಾರ (ಸೆ. 22) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಭಾರಿ ಘರ್ಷಣೆ ನಡೆದಿದೆ. ಘಟನೆಯಲ್ಲಿ ಟಿಎಂಸಿ ಐಟಿ ಸೆಲ್ ಮುಖ್ಯಸ್ಥೆ ಹಾಗೂ ವಕ್ತಾರೆ...

SIR ಏಕಪಕ್ಷೀಯ ತೀರ್ಮಾನ ಖಂಡಿಸಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿರುದ್ಧ ಸಿಡಿದೆದ್ದ ಇಬ್ಬರು ಆಯುಕ್ತರು

ದೇಶದ ಅತ್ಯುನ್ನತ ಸಾಂವಿಧಾನಿಕ ಸಂಸ್ಥೆಯಾದ ಕೇಂದ್ರ ಚುನಾವಣಾ ಆಯೋಗದ (ECI) ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಭಾರಿ ಸ್ವರೂಪದ ಬಿರುಕು ಮೂಡಿದೆ. ಎಸ್‌ಐಆರ್ (Special Intensive Revision – SIR / ವಿಶೇಷ...