Homeಮುಖಪುಟಜಾರ್ಖಂಡ್‌: ಬಾಲಕನನ್ನು ಥಳಿಸಿ ಹತ್ಯೆ ಮಾಡಿದ ಗುಂಪು

ಜಾರ್ಖಂಡ್‌: ಬಾಲಕನನ್ನು ಥಳಿಸಿ ಹತ್ಯೆ ಮಾಡಿದ ಗುಂಪು

- Advertisement -
- Advertisement -

ಬೈಕ್‌ ಎಮ್ಮೆಗೆ ಡಿಕ್ಕಿ ಹೊಡೆದಿದೆ ಎಂದು ಅರೋಪಿಸಿ ಜಾರ್ಖಂಡ್‌ನ ದುಮ್ಕಾ ಜಿಲ್ಲೆಯಲ್ಲಿ 16 ವರ್ಷದ ಬಾಲಕನನ್ನು ಜನರ ಗುಂಪೊಂದು ಥಳಿಸಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ.

ಸಂತಾಲಿ ತೊಲದ ಕುರ್ಮಹತ್‌ನ ನಿವಾಸಿಯಾಗಿರುವ ಬಾಲಕ ಭಾನುವಾರ ಸಂಜೆ ಫುಟ್‌ಬಾಲ್ ಪಂದ್ಯ ವೀಕ್ಷಿಸಿ ಮೂವರು ಸ್ನೇಹಿತರೊಂದಿಗೆ ಬೈಕ್‌ನಲ್ಲಿ ಮನೆಗೆ ತೆರಳುತ್ತಿರುವಾಗ ಹನ್ಸ್‌ದಿಹಾ ಪೊಲೀಸ್ ಠಾಣೆ ವ್ಯಾಪ್ತಿಯ ಥಥಿ ಗ್ರಾಮದಲ್ಲಿ ಬೈಕ್‌ ಎಮ್ಮೆಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬಾಲಕರು ಮತ್ತು ಎಮ್ಮೆಗಳ ಹಿಂಡಿನ ಜೊತೆಯಲ್ಲಿದ್ದ ಜನರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಬಾಲಕ ಎಮ್ಮೆಯ ಮಾಲಕರಿಗೆ ಪರಿಹಾರ ನೀಡಲು ಒಪ್ಪಿಕೊಂಡಿದ್ದಾನೆ. ಆದರೆ ನಾಲ್ಕು ಜನರು ಅವನ ಮೇಲೆ ದಾಳಿ ಮಾಡಿದ್ದಾರೆ ಎಂದು ಉಪವಿಭಾಗೀಯ ಪೊಲೀಸ್ ಅಧಿಕಾರಿ ಅಮೋದ್ ನಾರಾಯಣ ಸಿಂಗ್ ಹೇಳಿದ್ದಾರೆ.

ಗಾಯಗೊಂಡಿದ್ದ ಬಾಲಕನನ್ನು ಸರಯ್ಯಹತ್‌ನಲ್ಲಿರುವ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಆದರೆ ಆತ ಅಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಹಲ್ಲೆ ವೇಳೆ ಸಂತ್ರಸ್ತ ಬಾಲಕನ ಜೊತೆಗಿದ್ದವರು ಭಯದಿಂದ ಓಡಿ ಹೋಗಿದ್ದಾರೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಸ್ಥಳೀಯರು ಗ್ರಾಮದ ಬಳಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಎರಡು ದಿನಗಳಲ್ಲಿ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸರು ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳಲಾಗಿದೆ.

ಇದನ್ನು ಓದಿ: ಕೋಲಾರ: ಕಾಂಗ್ರೆಸ್‌ ಮುಖಂಡನ ಹತ್ಯೆ; ಆರೋಪಿಗಳ ಮೇಲೆ ಪೊಲೀಸ್‌ ಫೈರಿಂಗ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಟ್ರಸ್ಟ್‌ಗಳ ಮೂಲಕ ದೇಣಿಗೆ : ಶೇ.82ರಷ್ಟು ಪಾಲು ಪಡೆದ ಬಿಜೆಪಿ

ಸುಪ್ರೀಂ ಕೋರ್ಟ್ ವಿವಾದಾತ್ಮಕ ಚುನಾವಣಾ ಬಾಂಡ್‌ಗಳನ್ನು ರದ್ದುಗೊಳಿಸಿದ ನಂತರ 2024-25ರಲ್ಲಿ ಚುನಾವಣಾ ಟ್ರಸ್ಟ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ಕಾರ್ಪೊರೇಟ್ ದೇಣಿಗೆಗಳು ಮೂರು ಪಟ್ಟು ಹೆಚ್ಚಾಗಿದ್ದು, 3,811 ಕೋಟಿ ರೂ.ಗಳಿಗೆ ತಲುಪಿದೆ ಎಂದು ದಿ...

ಮುಂಬೈ: ಚಲಿಸುತ್ತಿದ್ದ ರೈಲಿನಿಂದ 18 ವರ್ಷದ ವಿದ್ಯಾರ್ಥಿನಿಯನ್ನು ಹೊರಗೆ ತಳ್ಳಿದ ಮಾನಸಿಕ ಅಸ್ವಸ್ಥ

ನವಿ ಮುಂಬೈನ ಪನ್ವೇಲ್-ಸಿಎಸ್‌ಎಂಟಿ ಮಾರ್ಗದಲ್ಲಿ ಚಲಿಸುವ ಸ್ಥಳೀಯ ರೈಲಿನಿಂದ 18 ವರ್ಷದ ಬಾಲಕಿಯನ್ನು ತಳ್ಳಿದ ಆರೋಪದ ಮೇಲೆ 50 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಟೈಮ್ಸ್ ಆಫ್ ಇಂಡಿಯಾ ವರದಿಯ ಪ್ರಕಾರ, 'ಮಾನಸಿಕವಾಗಿ ಅಸ್ವಸ್ಥ'...

ಪ್ರಚೋದನಕಾರಿಯಾಗಿ ಮಾತನಾಡುವವರು ಮಾತ್ರ ದ್ವೇಷ ಭಾಷಣ ತಡೆ ಮಸೂದೆಯನ್ನು ವಿರೋಧಿಸುತ್ತಾರೆ : ಸಿಎಂ ಸಿದ್ದರಾಮಯ್ಯ

ಪ್ರಚೋದನಕಾರಿ ಭಾಷಣ ಮಾಡುವವರು ಮಾತ್ರ ದ್ವೇಷ ಭಾಷಣ ತಡೆ ಮಸೂದೆಯನ್ನು ವಿರೋಧಿಸುತ್ತಾರೆ. ಸುಮ್ಮನೆ ಯಾರ ವಿರುದ್ದವೂ ಪ್ರಕರಣ ದಾಖಲಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ ಸೋಮವಾರ (ಡಿ.22) ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ,...

ಅಜ್ಮೀರ್ ದರ್ಗಾ ಉರೂಸ್‌ಗೆ ಪ್ರಧಾನಿ ಚಾದರ್ ಅರ್ಪಿಸುವುದನ್ನು ತಡೆಯುವಂತೆ ಸುಪ್ರೀಂ ಕೋರ್ಟ್‌ಗೆ ಅರ್ಜಿ

ಅಜ್ಮೀರ್ ದರ್ಗಾ ಉರೂಸ್‌ಗೆ ಪ್ರಧಾನಿ ನರೇಂದ್ರ ಮೋದಿ ಚಾದರ್ ಅರ್ಪಿಸುವುದನ್ನು ತಡೆಯುವಂತೆ ಕೋರಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ಸೂಫಿ ಸಂತ ಖ್ವಾಜಾ ಮುಯೀನುದ್ದೀನ್ ಹಸನ್ ಚಿಸ್ತಿ ಅವರ 814ನೇ ಉರೂಸ್ ಕಾರ್ಯಕ್ರಮ ಡಿಸೆಂಬರ್...

ವಲಯಾರ್‌ ಗುಂಪು ಹತ್ಯೆ ಪ್ರಕರಣ; ಮೃತನ ಕುಟುಂಬಕ್ಕೆ ‘ನ್ಯಾಯದ ಭರವಸೆ’ ನೀಡಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್

ಪಾಲಕ್ಕಾಡ್ ಜಿಲ್ಲೆಯ ವಲಯಾರ್‌ನಲ್ಲಿ ಗುಂಪು ಹಲ್ಲೆಯಲ್ಲಿ ಸಾವನ್ನಪ್ಪಿದ ರಾಮ್ ನಾರಾಯಣ್ ಬಾಕೆಲ್ ಅವರ ಕುಟುಂಬಕ್ಕೆ ನ್ಯಾಯ ಒದಗಿಸುವುದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೋಮವಾರ ಭರವಸೆ ನೀಡಿದ್ದಾರೆ. ಈ ಘಟನೆಯು ಕೇರಳದಂತಹ ಪ್ರಗತಿಪರ...

ಬ್ಯಾಂಕಾಕ್‌ನಿಂದ ₹20 ಕೋಟಿ ಮೌಲ್ಯದ ಡ್ರಗ್ಸ್ ಕಳ್ಳಸಾಗಣೆ: ಮುಂಬೈ ವಿಮಾನ ನಿಲ್ದಾಣದಲ್ಲಿ ಇಬ್ಬರ ಬಂಧನ

ಮುಂಬೈ: ಬ್ಯಾಂಕಾಕ್‌ನಿಂದ ಸುಮಾರು 20 ಕೋಟಿ ರೂಪಾಯಿ ಮೌಲ್ಯದ ಮಾದಕವಸ್ತುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಮುಂಬೈ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಭಾನುವಾರ ಇಬ್ಬರು ವ್ಯಕ್ತಿಗಳನ್ನು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸಿದ್ದಾರೆ. ಮೊದಲ ಪ್ರಕರಣದಲ್ಲಿ,...

ಹುಬ್ಬಳ್ಳಿ | ದಲಿತ ಯುವಕನ ಜೊತೆ ಮದುವೆ : ಗರ್ಭಿಣಿ ಮಗಳನ್ನು ಹತ್ಯೆಗೈದ ಪೋಷಕರು

ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಮಗಳನ್ನು ಸ್ವಂತ ತಂದೆ ಹಾಗೂ ಆತನ ಕುಟುಂಬ ಸದಸ್ಯರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ ಘಟನೆ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪೂರ ಗ್ರಾಮದಲ್ಲಿ ಭಾನುವಾರ (ಡಿ.21)...

ವಿಬಿ-ಜಿ ರಾಮ್ ಜಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆಯ (ಎಂಜಿಎನ್‌ಆರ್‌ಇಜಿಎ) ಹೆಸರು ಮತ್ತು ನಿಬಂಧನಗೆಳನ್ನು ಬದಲಿಸುವ ವಿಕಸಿತ್ ಭಾರತ್ ಗ್ಯಾರಂಟಿ ಫಾರ್ ರೋಝ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್),2025 (ವಿಬಿ-ಜಿ ರಾಮ್‌ ಜಿ) ಮಸೂದೆಗೆ...

ಪ್ರೀತಿಸಿ ಮದುವೆಯಾಗಿ ಕೇವಲ 8 ತಿಂಗಳು : ವರದಕ್ಷಿಣೆಗಾಗಿ ಹೆಂಡತಿಯನ್ನು ಹೊಡೆದು ಕೊಂದ ಗಂಡ!

ಮದುವೆಯಾಗಿ ಎಂಟು ತಿಂಗಳಿಗೆ ಗಂಡ ಹೆಂಡತಿಯನ್ನು ಮನೆ ಅಂಗಳದಲ್ಲೇ ಹೊಡೆದು ಕೊಂದ ಹೃದಯವಿದ್ರಾವಕ ಘಟನೆ ತೆಲಂಗಾಣದ ವಿಕಾರಬಾದ್ ಜಿಲ್ಲೆಯ ತಂಡೂರ್‌ನಲ್ಲಿ ನಡೆದಿದೆ. ಅನುಷಾ (22) ಕೊಲೆಯಾದ ಹೆಣ್ಣು ಮಗಳು. ಗಂಡ ಪರಮೇಶ್ (28) ವಿರುದ್ದ...

ಬಾಂಗ್ಲಾದೇಶದ ಚಿತ್ತಗಾಂಗ್‌ನಲ್ಲಿ ಭಾರತೀಯ ವೀಸಾ ಅರ್ಜಿಗಳನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಲಾಗಿದೆ

ಢಾಕಾ: ಬಾಂಗ್ಲಾದೇಶದ ಪ್ರಮುಖ ಯುವ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ನಂತರ ಹೆಚ್ಚಿದ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಬಾಂಗ್ಲಾದೇಶದ ಎರಡನೇ ಅತಿದೊಡ್ಡ ನಗರ ಚಿತ್ತಗಾಂಗ್‌ನಲ್ಲಿರುವ ಭಾರತೀಯ ವೀಸಾ ಅರ್ಜಿ ಕೇಂದ್ರದಲ್ಲಿ ವೀಸಾ...