Homeಮುಖಪುಟಕೇರಳ: ಅತ್ಯಾಚಾರಕ್ಕೊಳಗಾದ 16 ವರ್ಷದ ದಲಿತ ಯುವತಿ ಆತ್ಮಹತ್ಯೆಗೆ ಯತ್ನ!

ಕೇರಳ: ಅತ್ಯಾಚಾರಕ್ಕೊಳಗಾದ 16 ವರ್ಷದ ದಲಿತ ಯುವತಿ ಆತ್ಮಹತ್ಯೆಗೆ ಯತ್ನ!

ಆಟೋರಿಕ್ಷಾ ಚಾಲಕ ಮನು ಮನೋಜ್ ತಮ್ಮ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿ ಸಂತ್ರಸ್ತೆಯ ಪೋಷಕರು ಬುಧವಾರ ಪೊಲೀಸರನ್ನು ಸಂಪರ್ಕಿಸಿದ್ದರು

- Advertisement -
- Advertisement -

ಕೇರಳದ ನರಿಯಂಪಾರದಲ್ಲಿ ಆಟೋರಿಕ್ಷಾ ಚಾಲಕನೊಬ್ಬನಿಂದ ಅತ್ಯಾಚಾರಕ್ಕೊಳಗಾದ 16 ವರ್ಷದ ದಲಿತ ಯುವತಿಯೊಬ್ಬಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಗುರುವಾರ ಬೆಳಿಗ್ಗೆ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯನ್ನು ಶೀಘ್ರದಲ್ಲೇ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿಂದ ಆಕೆಯನ್ನು ಕೊಟ್ಟಾಯಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ (ಎಂಸಿಎಚ್) ಸ್ಥಳಾಂತರಿಸಲಾಯಿತು ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಆಕೆ ಶೇಕಡಾ 40 ರಷ್ಟು ಸುಟ್ಟಗಾಯಗಳನ್ನು ಅನುಭವಿಸಿದರೂ, ಅಪಾಯದ ಹಂತವನ್ನು ದಾಟಿದ್ದಾಳೆ ಎಂದು ಎಂಸಿಎಚ್ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: 1 ವರ್ಷದಿಂದ ಫ್ರೀಜರ್​ನಲ್ಲಿ ಇಟ್ಟಿದ್ದ ನೂಡಲ್ಸ್ ತಿಂದು 9 ಮಂದಿ ಸಾವು!

ಆಟೋರಿಕ್ಷಾ ಚಾಲಕ ಮನು ಮನೋಜ್ ತಮ್ಮ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿ ಸಂತ್ರಸ್ತೆಯ ಪೋಷಕರು ಬುಧವಾರ ಪೊಲೀಸರನ್ನು ಸಂಪರ್ಕಿಸಿದ್ದರು.

ದೂರನ್ನು ಆಧರಿಸಿ, ಮನು ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಸದ್ಯ ಪರಾರಿಯಾಗಿದ್ದ ಆರೋಪಿಯನ್ನು ಪತ್ತೆ ಹಚ್ಚಲು ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

ಜೀವ ಅಮೂಲ್ಯವಾಗಿದೆ. ಮಾನಸಿಕ ಒತ್ತಡಗಳಿದ್ದರೆ ಇಲ್ಲಿ ಸಂಪರ್ಕಿಸಿ:

ಬೆಂಗಳೂರು ಸಹಾಯವಾಣಿ – 080-25497777, ಬೆಳಿಗ್ಗೆ 10 ರಿಂದ ಸಂಜೆ 8 ರವರೆಗೆ

ಕರ್ನಾಟಕ ಆರೋಗ್ಯ ಸಹಾಯವಾಣಿ: 104


ಇದನ್ನೂ ಓದಿ: ದೇಶ ನಡೆಯುತ್ತಿರುವುದು ಸಂವಿಧಾನದ ಮೇಲೆ; ಬಿಜೆಪಿ ಪ್ರಣಾಳಿಕೆಯ ಮೇಲಲ್ಲ: ಮೆಹಬೂಬಾ ಮುಫ್ತಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ವಿವರಿಸಲು ಸಮಯಾವಕಾಶ ಕೋರಿ ಪ್ರಧಾನಿಗೆ ಖರ್ಗೆ ಪತ್ರ

0
ಲೋಕಸಭೆ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆ 'ನ್ಯಾಯಪತ್ರ'ದ ಕುರಿತು ಪ್ರಧಾನಿ ಮೋದಿ ಸರಣಿ ಹೇಳಿಕೆಗಳನ್ನು ಕೊಡುತ್ತಿದ್ದು, ಈ ಹಿನ್ನೆಲೆ ಪ್ರಣಾಳಿಕೆಯ ಕುರಿತು ವಿವರಿಸಲು ಸಮಯ ಕೋರಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪತ್ರ ಬರೆದಿದ್ದಾರೆ. ಖರ್ಗೆ...