Homeಮುಖಪುಟಕೋಟಾ: ನೀಟ್‌ ಆಕಾಂಕ್ಷಿ ವಿದ್ಯಾರ್ಥಿನಿ ಆತ್ಮಹತ್ಯೆ

ಕೋಟಾ: ನೀಟ್‌ ಆಕಾಂಕ್ಷಿ ವಿದ್ಯಾರ್ಥಿನಿ ಆತ್ಮಹತ್ಯೆ

- Advertisement -
- Advertisement -

ರಾಜಸ್ಥಾನದ ಕೋಟಾದಲ್ಲಿ ಇಂದು ಮತ್ತೋರ್ವ ನೀಟ್‌ ಆಕಾಂಕ್ಷಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 16 ವರ್ಷದ ವಿದ್ಯಾರ್ಥಿನಿ  ತನ್ನ ಹಾಸ್ಟೆಲ್‌ನ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಇದು ಕಳೆದ 8 ತಿಂಗಳಲ್ಲಿ ನಡೆದ 25ನೇ ಪ್ರಕರಣವಾಗಿದೆ.

ವರದಿಗಳ ಪ್ರಕಾರ, ಆತ್ಮಹತ್ಯೆ ಮಾಡಿಕೊಂಡ ಬಾಲಕಿ ಜಾರ್ಖಂಡ್‌ನ ರಾಂಚಿ ಮೂಲದವರಾಗಿದ್ದಾರೆ. ಕೋಚಿಂಗ್ ಹಬ್‌ನಲ್ಲಿ ಕಳೆದ ಎಂಟು ತಿಂಗಳಲ್ಲಿ ಇದು 25ನೇ ಆತ್ಮಹತ್ಯೆ ಪ್ರಕರಣವಾಗಿದೆ ಎಂದು ವರದಿಯಾಗಿದೆ.

ಬಾಲಕಿ ನಗರದ ಬ್ಲೇಜ್ ಹಾಸ್ಟೆಲ್‌ನಲ್ಲಿ ವಾಸವಾಗಿದ್ದು, ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದರು. ನಿನ್ನೆ  ಹಾಸ್ಟೆಲ್‌ನಲ್ಲಿರುವ ತನ್ನ ಕೋಣೆಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

ಕೋಟಾದಲ್ಲಿ ನೀಟ್, ಯುಪಿಎಸ್ಸಿ ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳಲ್ಲಿ ಗಣನೀಯವಾಗಿ ಹೆಚ್ಚಳವಾಗುತ್ತಿದೆ. ಅಧಿಕೃತ ಅಂಕಿಅಂಶಗಳ ಪ್ರಕಾರ, ಕಳೆದ ವರ್ಷ 15 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಕೋಚಿಂಗ್ ಸೆಂಟರ್‌ಗಳನ್ನು 2021 ಮತ್ತು 2020ರಲ್ಲಿ ಮುಚ್ಚಲಾಯಿತು ಆದ್ದರಿಂದ ಕೋಟಾದಲ್ಲಿ ಯಾವುದೇ ಆತ್ಮಹತ್ಯೆ ವರದಿಯಾಗಿಲ್ಲ.

ಕೋವಿಡ್‌ಗಿಂತ ಮೊದಲು 2019ರಲ್ಲಿ 18ವಿದ್ಯಾರ್ಥಿಗಳು, 2018ರಲ್ಲಿ 20, 2017ರಲ್ಲಿ 7, 2016ರಲ್ಲಿ 17 ಮತ್ತು 2015ರಲ್ಲಿ 18 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿ ತಿಳಿಸಿದೆ.

ರಾಜಸ್ಥಾನದ ಕೋಟಾ ಸ್ಪರ್ಧಾತ್ಮಕ ಪರೀಕ್ಷೆಗೆ ತರಭೇತಿ ಪಡೆಯುವ ದೇಶದ ಪ್ರಮುಖ ಕೇಂದ್ರಗಳಲ್ಲಿ ಒಂದಾಗಿದ್ದು, ಅಲ್ಲಿಗೆ ವಿವಿಧ ರಾಜ್ಯಗಳಿಂದ ವಿದ್ಯಾರ್ಥಿಗಳು ತರಬೇತಿಗಾಗಿ ಬರುತ್ತಾರೆ.

ಇತ್ತೀಚೆಗೆ ಕೋಟಾದಲ್ಲಿ ಆತ್ಮಹತ್ಯೆ ಹೆಚ್ಚಳ ಹಿನ್ನೆಲೆ ‘ದರ್ವಾಜೆ ಪೇ ದಸ್ತಕ್’ ಎಂಬ ಅಭಿಯಾನವನ್ನು ಆರಂಭಿಸಲಾಗಿತ್ತು. ಅಭಿಯಾನದ ಭಾಗವಾಗಿ ವಿದ್ಯಾರ್ಥಿಗಳು ಖಿನ್ನತೆ, ಒತ್ತಡಕ್ಕೆ ಒಳಗಾಗಿದ್ದಾರೆಯೇ ಎಂಬುವುದನ್ನು ಪತ್ತೆ ಹಚ್ಚಲು ವಾರ್ಡನ್‌ಗಳು, ಮೆಸ್ ಕೆಲಸಗಾರರು ಮತ್ತು ಆಹಾರ ಪೂರೈಕೆದಾರರನ್ನು ನಿಯೋಜಿಸಲಾಗುತ್ತಿತ್ತು.

ಇದನ್ನು ಓದಿ: ಕೋಟಾ; ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಗೆ ‘ದರ್ವಾಜೆ ಪೇ ದಸ್ತಕ್’ ಅಭಿಯಾನ ಆರಂಭ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಧಾನಿ ಮೋದಿ ಜನರನ್ನು ಪ್ರಚೋದಿಸುತ್ತಿದ್ದಾರೆ, ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು: ಮಲ್ಲಿಕಾರ್ಜುನ ಖರ್ಗೆ

0
'ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ರಾಮಮಂದಿರದ ಮೇಲೆ ಬುಲ್ಡೋಜರ್ ಹರಿಸಲಿದೆ' ಎಂದು ಹೇಳುವ ಮೂಲಕ ಪ್ರಧಾನಿ ಮೋದಿ ಜನರನ್ನು ಪ್ರಚೋದಿಸುವ ಕೆಲಸ ಮಾಡುತ್ತಿದ್ದಾರೆ. ಅವರ ವಿರುದ್ಧ ಚುನಾವಣಾ ಆಯೋಗ...