Homeಮುಖಪುಟಮೋದಿ ತವರು ರಾಜ್ಯದಲ್ಲಿ ಗಣನೀಯವಾಗಿ ಮುಚ್ಚಲ್ಪಟ್ಟ ಸರಕಾರಿ ಶಾಲೆಗಳು!

ಮೋದಿ ತವರು ರಾಜ್ಯದಲ್ಲಿ ಗಣನೀಯವಾಗಿ ಮುಚ್ಚಲ್ಪಟ್ಟ ಸರಕಾರಿ ಶಾಲೆಗಳು!

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿಯ ತವರು ರಾಜ್ಯ ಗುಜರಾತ್‌ನಲ್ಲಿ ಕಳೆದ ಮೂರು ವರ್ಷಗಳಲ್ಲಿ 170 ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಮುಚ್ಚಲಾಗಿದೆ ಎಂಬಂತಹ ಸ್ಪೋಟಕ ವರದಿ ಬಹಿರಂಗವಾಗಿದೆ.

ಗುಜರಾತ್‌ನಲ್ಲಿನ ದೇವಭೂಮಿ ದ್ವಾರಕಾ, ಗಿರ್ ಸೋಮನಾಥ್ ಮತ್ತು ಕಚ್ ಜಿಲ್ಲೆಗಳಲ್ಲಿ ಶಾಲೆಗಳನ್ನು ಮುಚ್ಚಲಾಗಿದ್ದು, ವಿದ್ಯಾರ್ಥಿಗಳ ಕೊರತೆಯಿಂದ 329 ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ.

ಫೆಬ್ರವರಿ 26ರಂದು ಗುಜರಾತ್ ವಿಧಾನಸಭೆಗೆ ಸರ್ಕಾರವು ನೀಡಿದ ಅಂಕಿಅಂಶಗಳ ಪ್ರಕಾರ, 2020-21ಕ್ಕೆ ಹೋಲಿಸಿದರೆ 2021-22ರಲ್ಲಿ ಮುಚ್ಚಲಾದ ಶಾಲೆಗಳ ಸಂಖ್ಯೆ ಬಹುಪಟ್ಟು ಹೆಚ್ಚಾಗಿದೆ. 2020-21ರಲ್ಲಿ 20 ಶಾಲೆಗಳನ್ನು ಮುಚ್ಚಿದ್ದರೆ, 2021-22ರಲ್ಲಿ ಈ ಸಂಖ್ಯೆ 133ಕ್ಕೆ ಏರಿದೆ. ಆದರೆ 2022-23ರಲ್ಲಿ ಈ ಸಂಖ್ಯೆ 17ಕ್ಕೆ ಇಳಿದಿದೆ ಎಂದು ತಿಳಿಸಿದೆ.

ಸದನದಲ್ಲಿ ಈ ವಿಷಯದಲ್ಲಿ ಪ್ರಶ್ನೆಯನ್ನು ಕೇಳಿದ್ದ ಕಾಂಗ್ರೆಸ್ ಶಾಸಕ ಇಮ್ರಾನ್ ಖೇದವಾಲಾ ಮಾದ್ಯಮಗಳ ಜೊತೆ ಮಾತನಾಡಿದ್ದು, ರಾಜ್ಯದಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿದ್ದಾರೆ ಮತ್ತು ಹೊಸ ಶಾಲೆಗಳನ್ನು ತೆರೆಯುತ್ತಿಲ್ಲ. ಒಂದು ಕಡೆ, ಸರ್ಕಾರವು  ತನ್ನ ಶಾಲೆಗಳಲ್ಲಿ 100 ಪ್ರತಿಶತ ದಾಖಲಾತಿಯನ್ನು ಸಾಧಿಸುವುದಾಗಿ ಹೇಳಿಕೊಂಡಿದೆ. ಇದು ಶಾಲೆಗಳನ್ನು ಮುಚ್ಚುತ್ತಿದೆ, ವಿಶೇಷವಾಗಿ ಮಕ್ಕಳಿಗೆ ಬೇರೆ ಯಾವುದೇ ಆಯ್ಕೆಗಳಿಲ್ಲದ ಪ್ರದೇಶಗಳಲ್ಲಿಈ ಬೆಳವಣಿಗೆ ನಡೆದಿದೆ ಎಂದು ಆರೋಪಿಸಿದ್ದಾರೆ.

ಮಾಹಿತಿಯ ಪ್ರಕಾರ, ಶಾಲೆಗಳಾದ್ಯಂತ I ಮತ್ತು VIII ನೇ ತರಗತಿಗಳ ನಡುವಿನ 329 ತರಗತಿಗಳನ್ನು ಈ ಮೂರು ವರ್ಷಗಳಲ್ಲಿ ಮುಚ್ಚಲಾಗಿದೆ. 2021-22ರಲ್ಲಿ 266 ತರಗತಿಗಳನ್ನು ಮುಚ್ಚಲಾಗಿದೆ. ನಂತರ 2021-22 ರಲ್ಲಿ 53 ಮತ್ತು 2022-23ರಲ್ಲಿ 10 ತರಗತಿಗಳನ್ನು ವಿದ್ಯಾರ್ಥಿಗಳಿಲ್ಲದೆ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

ದೇವಭೂಮಿ ದ್ವಾರಕಾದಲ್ಲಿ 42 ಶಾಲೆಗಳನ್ನು ಮುಚ್ಚಲಾಗಿದ್ದು, 107 ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ.  ಗಿರ್ ಸೋಮನಾಥ್‌ನಲ್ಲಿ ಎಂಟು ಶಾಲೆಗಳನ್ನು ಬಂದ್ ಮಾಡಲಾಗಿದ್ದು, 76 ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ.  ಕಚ್‌ನಲ್ಲಿ 9 ಶಾಲೆಗಳನ್ನು ಬಂದ್‌ ಮಾಡಲಾಗಿದ್ದು, 47 ತರಗತಿಗಳನ್ನು ಸ್ಥಗಿತಗೊಳಿಸಲಾಗಿದೆ. ನಿರ್ದಿಷ್ಟ ತರಗತಿಗಳಲ್ಲಿ ಕಡಿಮೆ ಸಂಖ್ಯೆಯ ವಿದ್ಯಾರ್ಥಿಗಳ ಕಾರಣದಿಂದಾಗಿ ಈ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಸರ್ಕಾರ ಉಲ್ಲೇಖಿಸಿದೆ. ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇರುವ ಕಾರಣ ಶಾಲೆಗಳನ್ನು ಹತ್ತಿರದ ಶಾಲೆಗಳೊಂದಿಗೆ ವಿಲೀನಗೊಳಿಸಲಾಗಿದೆ ಎಂದು ಕಚ್ ಜಿಲ್ಲಾ ಪ್ರಾಥಮಿಕ ಶಿಕ್ಷಣಾಧಿಕಾರಿ ಭೂಪೇಂದ್ರ ವಘೇಲಾ ಹೇಳಿದ್ದಾರೆ.

ದೇವಭೂಮಿ ದ್ವಾರಕಾ ಮತ್ತು ಕಚ್ ಜಿಲ್ಲೆಗಳಲ್ಲಿ 10%ಕ್ಕಿಂತ ಹೆಚ್ಚು ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಒಬ್ಬ ಶಿಕ್ಷಕರು ನಡೆಸುತ್ತಿದ್ದಾರೆ. ಸರ್ಕಾರಿ ಅಂಕಿಅಂಶಗಳ ಪ್ರಕಾರ, ದೇವಭೂಮಿ ದ್ವಾರಕಾದಲ್ಲಿ 17.72 ಪ್ರತಿಶತದಷ್ಟು ಇಂತಹ ಶಾಲೆಗಳಿವೆ, ಕಚ್‌ನ ಅಂಕಿ ಅಂಶವು 10.54 ಪ್ರತಿಶತದಷ್ಟಿದೆ.

ರಾಜ್ಯದಲ್ಲಿ ಇರುವ 30,510 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 1,595 ಶಾಲೆಗಳು (ಶೇ. 5.22) ಒಬ್ಬ ಶಿಕ್ಷಕರೊಂದಿಗೆ ನಡೆಯುತ್ತಿವೆ. ಗುಜರಾತ್‌ನಲ್ಲಿ ಕೇವಲ ಒಬ್ಬ ಶಿಕ್ಷಕರನ್ನು ಹೊಂದಿರುವ ಸರ್ಕಾರಿ ಪ್ರಾಥಮಿಕ ಶಾಲೆಗಳ ಸಂಖ್ಯೆ ಕಳೆದ ಎರಡು ವರ್ಷಗಳಲ್ಲಿ ಸುಮಾರು 700 ರಿಂದ 1,606ಕ್ಕೆ ಏರಿಕೆಯಾಗಿದೆ ಎಂದು ವರದಿಯು ತಿಳಿಸಿದೆ.

ಇದನ್ನು ಓದಿ: ಧರ್ಮ, ಜಾತಿ ಆಧಾರದಲ್ಲಿ ಚುನಾವಣಾ ಪ್ರಚಾರ ಮಾಡಬೇಡಿ: ಪಕ್ಷಗಳಿಗೆ ಚುನಾವಣಾ ಆಯೋಗ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...