HomeUncategorizedಪಕ್ಷದ ಜಾಹೀರಾತಿಗೆ ವ್ಯಯಿಸಿದ 164 ಕೋಟಿ ರೂ. ಪಾವತಿಸಿ: ಕೇಜ್ರಿವಾಲ್ ಸರ್ಕಾರಕ್ಕೆ ನೋಟಿಸ್

ಪಕ್ಷದ ಜಾಹೀರಾತಿಗೆ ವ್ಯಯಿಸಿದ 164 ಕೋಟಿ ರೂ. ಪಾವತಿಸಿ: ಕೇಜ್ರಿವಾಲ್ ಸರ್ಕಾರಕ್ಕೆ ನೋಟಿಸ್

- Advertisement -
- Advertisement -

ಅರವಿಂದ್‌ ಕೇಜ್ರಿವಾಲ್‌ ಅವರ ಸರಕಾರವು ಆಮ್‌ ಆದ್ಮಿ ಪಕ್ಷದ ರಾಜಕೀಯ ಜಾಹೀರಾತಿಗೆ  ₹ 163.62 ಕೋಟಿ ರೂ. ಹಣವನ್ನು ಖರ್ಚು ಮಾಡಿದೆ ಎಂದು ಮಾಹಿತಿ ಮತ್ತು ಪ್ರಚಾರ ನಿರ್ದೇಶನಾಲಯ (ಡಿಐಪಿ) ನೋಟಿಸ್‌ ನೀಡಿದೆ. 10 ದಿನಗಳೊಳಗೆ ಆ ಹಣವನ್ನು ಎಎಪಿ ಪಾವತಿಸಬೇಕು, ಎಂದು ಸೂಚನೆಯಲ್ಲಿ ಎಚ್ಚರಿಸಿದೆ. ವಸೂಲಿಯಾಗದೇ ಇದ್ದಲ್ಲಿ ಪಕ್ಷದ ಕಚೇರಿಗೆ ಬೀಗ ಜಡಿಯಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

“ಒಟ್ಟು ₹ 163,61,88,265/- ಮೊತ್ತವನ್ನು ಮರುಪಾವತಿಸಲು ಅಂತಿಮ ಅವಕಾಶವನ್ನು ನೀಡಲಾಗಿದೆ. ಈ ನೋಟಿಸ್ ಜಾರಿ ಮಾಡಿದ 10 ದಿನಗಳೊಳಗೆ ಕೆಳಗೆ ನೀಡಲಾದ ಖಾತೆಗೆ ಹಣ ಠೇವಣಿ ಮಾಡಬೇಕು. ಒಂದು ವೇಳೆ ನೀಡಿದ ಕಾಲಾವಕಾಶದಲ್ಲಿ ಹಣ ಮರುಪಾವತಿ ಮಾಡದಿದ್ದಲ್ಲಿ ಕಾನೂನಿನ ಪ್ರಕಾರ ಮುಂದಿನ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ,” ಎಂದು ನೋಟಿಸ್ ನಲ್ಲಿ ತಿಳಿಸಲಾಗಿದೆ.

2017ರ ಮಾರ್ಚ್ 31ರವರೆಗೆ ಪಕ್ಷದ ಜಾಹೀರಾತಿಗಾಗಿ ಒಟ್ಟು ₹ 99,31,10,053 (ರೂ. 99.31 ಕೋಟಿ) ವ್ಯಯಿಸಲಾಗಿದೆ. ಇನ್ನು ಉಳಿದ ₹ 64,30,78,212 (ರೂ. 64.31 ಕೋಟಿ) ಮೊತ್ತ ದಂಡದ ಬಡ್ಡಿಯಾಗಿದೆ ಎಂದು ಹಣದ ಬಗ್ಗೆ ನೋಟಿಸ್ ನಲ್ಲಿ ವಿವರಿಸಲಾಗಿದೆ.

ಇನ್ನು ಈ ನೋಟಿಸ್‌ಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು, ‘ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ, ಬಿಜೆಪಿ ಚುನಾಯಿತ ಸಚಿವರು ಮತ್ತು ಆಡಳಿತಾರೂಢ ಸರ್ಕಾರ ಎಎಪಿಯನ್ನು ಗುರಿಯಾಗಿಸಿಕೊಂಡು ಈ ನೋಟಿಸ್ ನೀಡಲಾಗಿದೆ ಎಂದು ಆರೋಪಿಸಿದರು.

ಅರವಿಂದ್ ಕೇಜ್ರಿವಾಲ್ ನೇತೃತ್ವದ ಪಕ್ಷವು ಸರ್ಕಾರಿ ಜಾಹೀರಾತಿನ ಸೋಗಿನಲ್ಲಿ ರಾಜಕೀಯ ಜಾಹೀರಾತುಗಳನ್ನು ನಡೆಸುತ್ತಿದೆ ಎಂದು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಆರೋಪಿಸಿದ್ದರು. ಇದಾದ ಸುಮಾರು ಒಂದು ತಿಂಗಳ ನಂತರ ಈ ಬೆಳವಣಿಗೆಯಾಗಿದೆ.

ಡಿಸೆಂಬರ್ 20 ರಂದು ಲೆಫ್ಟಿನೆಂಟ್ ಗವರ್ನರ್ ಅವರು ಎಎಪಿಯಿಂದ ₹ 97 ಕೋಟಿ ವಸೂಲಿ ಮಾಡುವಂತೆ ಆದೇಶ ಹೊರಡಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಎಎಪಿ, ಅಂತಹ ಆದೇಶಗಳನ್ನು ರವಾನಿಸಲು ಅವರಿಗೆ ಯಾವುದೇ ಅಧಿಕಾರವಿಲ್ಲ ಎಂದು ಹೇಳಿತ್ತು.

ಎಎಪಿಯ ಮುಖ್ಯ ವಕ್ತಾರ ಸೌರಭ್ ಭಾರದ್ವಾಜ್ ಅವರು, ಲೆಫ್ಟಿನೆಂಟ್ ಗವರ್ನರ್ ಕಳುಹಿಸಿದ ಆದೇಶವನ್ನು “ಹೊಸ ಪ್ರೇಮ ಪತ್ರ” ಎಂದು ವ್ಯಂಗ್ಯವಾಡಿದ್ದರು. “ನಮ್ಮದು ಈಗ ರಾಷ್ಟ್ರೀಯ ಪಕ್ಷವಾಗಿ ಗುರುತಿಸಿಕೊಂಡಿದೆ. ಅಷ್ಟೇ ಅಲ್ಲದೇ ಎಂಸಿಡಿಯಲ್ಲಿ ಅಧಿಕಾರವನ್ನು ಕಿತ್ತುಕೊಂಡಿದ್ದೇವೆ ಹಾಗಾಗಿ ಬಿಜೆಪಿ ಗಲಿಬಿಲಿಗೊಂಡಿದೆ. ಎಲ್‌ಜಿ ಸಾಹಬ್ ಅವರು ಬಿಜೆಪಿಯ ನಿರ್ದೇಶನದಂತೆ ಎಲ್ಲವನ್ನೂ ಮಾಡುತ್ತಿದ್ದಾರೆ ಮತ್ತು ಇದು ದೆಹಲಿಯ ಜನರನ್ನು ತೊಂದರೆಗೊಳಿಸುತ್ತಿದೆ. ಲೆಫ್ಟಿನೆಂಟ್ ಗವರ್ನರ್ ನಿರ್ದೇಶನಗಳಿಗೆ ಕಾನೂನಿನ ದೃಷ್ಟಿಯಲ್ಲಿ ಯಾವುದೇ ಮಾನ್ಯತೆ ಇರುವುದಿಲ್ಲ ಎಂದು ಅವರು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...