Homeಕರ್ನಾಟಕಉಪ ಕುಲಪತಿ ಹುದ್ದೆ ಕೊಡಿಸುವುದಾಗಿ 17.5 ಲಕ್ಷ ವಂಚನೆ - ರಾಮಸೇನೆಯ ಸಂಸ್ಥಾಪಕ ಬಂಧನ

ಉಪ ಕುಲಪತಿ ಹುದ್ದೆ ಕೊಡಿಸುವುದಾಗಿ 17.5 ಲಕ್ಷ ವಂಚನೆ – ರಾಮಸೇನೆಯ ಸಂಸ್ಥಾಪಕ ಬಂಧನ

- Advertisement -
- Advertisement -

ವಿಶ್ವವಿದ್ಯಾನಿಲಯದಲ್ಲಿ ಉಪಕುಲಪತಿ ಹುದ್ದೆ ಕೊಡಿಸುವುದಾಗಿ ನಂಬಿಸಿ ಹಣ ಪಡೆದು ವಂಚಿಸಿದ ಆರೋಪದಲ್ಲಿ ರಾಮಸೇನೆಯ ಸಂಸ್ಥಾಪಕ ಪ್ರಸಾದ್ ಅತ್ತಾವರ ಎಂಬುವವನನ್ನು ಬಂಧಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕುರಿತು ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಮಂಗಳೂರು ವಿವಿಯಲ್ಲಿ ಉಪ ಕುಲಪತಿ ಹುದ್ದೆ ಕೊಡಿಸುತ್ತೇನೆ ಎಂದು ಕೆಮಿಸ್ಟ್ರಿ ವಿಭಾಗದಲ್ಲಿ ಪ್ರಾಧ್ಯಾಪಕರಾಗಿರುವ ವಿವೇಕ್ ಆಚಾರ್ಯ ಅವರ ಬಳಿ 17.5 ಲಕ್ಷ ರೂ. ಹಣವನ್ನು ಪಡೆದಿದ್ದ. ಜೊತೆಗೆ ಆರೋಪಿಯು ತನಗೆ ಮುಖ್ಯಮಂತ್ರಿಯು ಪರಿಚಯವಿರುವುದಾಗಿಯೂ ಹೇಳಿಕೊಂಡಿದ್ದ.

ಈ ಹಿಂದೆ ಹಿಂದುತ್ವ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದ ಪ್ರಸಾದ್ ಅತ್ತಾವರ ಶ್ರೀರಾಮ ಸೇನೆಯಲ್ಲಿ ಸಕ್ರಿಯನಾಗಿದ್ದ. ಬಳಿಕ ಆ ಸಂಘಟನೆಯಿಂದ ಹೊರಬಂದು ತನ್ನದೇ ಆದ ರಾಮಸೇನೆ ಎಂಬ ಹೆಸರಲ್ಲಿ ಸಂಘಟನೆ ಕಟ್ಟಿಕೊಂಡಿದ್ದ. ಅದರ ಸಂಸ್ಥಾಪಕ ಮತ್ತು ರಾಜ್ಯಾಧ್ಯಕ್ಷನೂ ತಾನೇ ಎಂದು ಹೇಳಿಕೊಂಡಿದ್ದಲ್ಲದೆ, ಮಂಗಳೂರು ಮತ್ತು ಬೆಂಗಳೂರಿನಲ್ಲಿ ಬಿಜೆಪಿ ಪ್ರಮುಖರ ಸಖ್ಯ ಬೆಳೆಸಿಕೊಂಡಿದ್ದ ಎನ್ನಲಾಗಿದೆ.

ಇದನ್ನೂ ಓದಿ: ಸಿಎಂ ಪಳನಿಸ್ವಾಮಿ ತಾಯಿಯ ಬಗ್ಗೆ ಅವಹೇಳನಕಾರಿ ಹೇಳಿಕೆ: ಕ್ಷಮೆ ಕೇಳಿದ ಡಿಎಂಕೆ ನಾಯಕ

ಪ್ರಸಾದ್ ಅತ್ತಾವರ ವಿರುದ್ಧ ಈ ಹಿಂದೆ ಕಂಕನಾಡಿ ನಗರ ಠಾಣೆಯಲ್ಲಿ ರೌಡಿಶೀಟ್ ಬುಕ್ ಮಾಡಲಾಗಿತ್ತು. ಬಂದರು, ಕದ್ರಿ ಮತ್ತು ಕಂಕನಾಡಿ ಠಾಣೆಗಳಲ್ಲಿ ಈತನ ವಿರುದ್ಧ ಹಲವು ಕೇಸುಗಳಿವೆ. ಇದೀಗ ಕುಲಪತಿ ಸ್ಥಾನದ ಆಮಿಷವೊಡ್ಡಿ ಹಣ ಪಡೆದ ಆರೋಪದಲ್ಲಿ ಬಂಧಿಸಲಾಗಿದೆ. ಇದೇ ರೀತಿ ಹಲವರಿಂದ ಹಣ ಪಡೆದು ಮೋಸಗೈದಿರುವ ವಿಚಾರ ತನಿಖೆಯಲ್ಲಿ ಬೆಳಕಿಗೆ ಬಂದಿದ್ದು ಅದರ ಬಗ್ಗೆ ದೂರು ಬಂದಲ್ಲಿ ತನಿಖೆ ಮಾಡಲಾಗುವುದು ಎಂದು ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.

ಮಂಗಳೂರು ವಿವಿಯಲ್ಲಿ ಕೆಮಿಸ್ಟ್ರಿ ವಿಭಾಗದಲ್ಲಿ ಪ್ರಾಧ್ಯಾಪಕರಾಗಿರುವ ವಿವೇಕ್ ಆಚಾರ್ಯ ಉಪ ಕುಲಪತಿ ಆಗಲು ಎಲ್ಲ ಅರ್ಹತೆಗಳನ್ನು ಹೊಂದಿದ್ದರು. ಅಲ್ಲದೆ ಅದಕ್ಕಾಗಿ ಲಾಭಿ ನಡೆಸಿದ್ದರು. ಈ ವೇಳೆ, ಪ್ರಸಾದ್ ಅತ್ತಾವರ ತಾನು ಸಿಎಂ ಜೊತೆಗೆ ನಂಟು ಹೊಂದಿರುವುದಾಗಿ ಹೇಳಿಕೊಂಡು 15 ಲಕ್ಷ ಮತ್ತು ತನಗೆ ಅದಕ್ಕಾಗಿ ಓಡಾಡಲೆಂದು ಮತ್ತೆ 2.5 ಲಕ್ಷ ರೂ. ಹಣ ಪಡೆದಿದ್ದ. ಹಣ ಪಡೆದು ವರ್ಷದ ಮೇಲಾದರೂ ಕುಲಪತಿ ಹುದ್ದೆ ಕೊಡಿಸದ ಕಾರಣ ವಿವೇಕ್ ಆಚಾರ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು ಎಂದು ವಾರ್ತಾಭಾರತಿ ವರದಿ ಮಾಡಿದೆ.


ಇದನ್ನೂ ಓದಿ: ಹಿಂದಿಯಲ್ಲಿ ಸ್ವಾಗತ ಕೋರಿದ ನಿರೂಪಕಿ: ವೇದಿಕೆಯಿಂದ ಕೆಳಗಿಳಿದ ಎ ಆರ್ ರಹಮಾನ್!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...