Homeಮುಖಪುಟಮಹಿಳೆಯ ಮೇಲೆ 17 ಪುರುಷರು ಅತ್ಯಾಚಾರ: ಕಳವಳ ವ್ಯಕ್ತಪಡಿಸಿದ ಮಹಿಳಾ ಆಯೋಗ

ಮಹಿಳೆಯ ಮೇಲೆ 17 ಪುರುಷರು ಅತ್ಯಾಚಾರ: ಕಳವಳ ವ್ಯಕ್ತಪಡಿಸಿದ ಮಹಿಳಾ ಆಯೋಗ

ಮಂಗಳವಾರ ರಾತ್ರಿ ದಂಪತಿಗಳು ಮಾರುಕಟ್ಟೆಯಿಂದ ಮನೆಗೆ ಮರಳುತ್ತಿದ್ದಾಗ ಮಹಿಳೆ ಅತ್ಯಾಚಾರಕ್ಕೊಳಗಾದರು. ಆರೋಪಿಗಳು ಕುಡಿದಿದ್ದರು ಎಂದು ಮಹಿಳೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ

- Advertisement -
- Advertisement -

17 ಪುರುಷರು ಮಹಿಳೆಯ ಮೇಲೆ ಅತ್ಯಾಚಾರ ಎಸಗಿರುವ ಮೃಗೀಯ ಘಟನೆ ಜಾರ್ಖಂಡ್‌ನ ಡುಮ್ಕಾ ಜಿಲ್ಲೆಯಲ್ಲಿ ನಡೆದಿದ್ದು, ಈ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗ (NCW) ಗಂಭೀರ ಕಳವಳ ವ್ಯಕ್ತಪಡಿಸಿದೆ. ಈ ಪ್ರಕರಣದ ತನಿಖೆಯನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸುವಂತೆ ರಾಜ್ಯ ಪೊಲೀಸರಿಗೆ ಸೂಚಿಸಿದೆ.

ಮಂಗಳವಾರ ರಾತ್ರಿ ದಂಪತಿಗಳು ಮಾರುಕಟ್ಟೆಯಿಂದ ಮನೆಗೆ ಮರಳುತ್ತಿದ್ದಾಗ ಮಹಿಳೆಯ ಮೇಲೆ 17 ಪುರುಷರು ಅತ್ಯಾಚಾರ ಎಸಗಿದ್ದಾರೆ. ಆರೋಪಿಗಳು ಕುಡಿದಿದ್ದರು ಎಂದು ಮಹಿಳೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಬೆಂಗಳೂರು: ದೇವಸ್ಥಾನದಲ್ಲಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಅರ್ಚಕ

ಈ ಪ್ರಕರಣದಲ್ಲಿ NCW ಕಳವಳ ವ್ಯಕ್ತಪಡಿಸಿದ್ದು, ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಎರಡು ತಿಂಗಳಲ್ಲಿ ತನಿಖೆ ಪೂರ್ಣಗೊಳಿಸುವ ಗೃಹ ಸಚಿವಾಲಯದ ಮಾರ್ಗಸೂಚಿಗಳನ್ನು ಪಾಲಿಸಬೇಕೆಂದು ಅಧ್ಯಕ್ಷೆ ರೇಖಾ ಶರ್ಮಾ ಜಾರ್ಖಂಡ್ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ.

ಈ ಬಗ್ಗೆ ಪೊಲೀಸರು ಕೈಗೊಂಡ ಕ್ರಮದ ವಿವರವಾದ ವರದಿಯನ್ನು ಕೋರಿದೆ ಎಂದು ಆಯೋಗ ತಿಳಿಸಿದೆ.


ಇದನ್ನೂ ಓದಿ: ಬಾಂಗ್ಲಾದೇಶ: ಅತ್ಯಾಚಾರಿಗಳಿಗೆ ಮರಣದಂಡನೆ ನೀಡಲು ಮುಂದಾದ ಸರ್ಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...