Homeಮುಖಪುಟಅಡ್ಡಗೋಡೆ ಮೇಲೆ ದೀಪವಿಟ್ಟ ಸುಪ್ರೀಂ: ಸ್ಪೀಕರ್‌ ಆದೇಶದಂತೆ 17 ಜನ ಶಾಸಕರು ಅನರ್ಹರು, ಆದರೆ ಚುನಾವಣೆಯಲ್ಲಿ...

ಅಡ್ಡಗೋಡೆ ಮೇಲೆ ದೀಪವಿಟ್ಟ ಸುಪ್ರೀಂ: ಸ್ಪೀಕರ್‌ ಆದೇಶದಂತೆ 17 ಜನ ಶಾಸಕರು ಅನರ್ಹರು, ಆದರೆ ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಹರು!

ಅನರ್ಹ ಶಾಸಕರಿಗೆ ಅರ್ಧ ಸಮಾಧಾನ: ಮಾಜಿ ಸ್ವೀಕರ್‌ ರಮೇಶ್‌ ಕುಮಾರ್‌ರವರ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

- Advertisement -
- Advertisement -

ಭಾರೀ ಕುತೂಹಲ ಸೃಷ್ಟಿಸಿದ್ದ ಅನರ್ಹ ಶಾಸಕರ ಪ್ರಕರಣದ ಕುರಿತು ಕೊನೆಗೂ ಸುಪ್ರೀಂ ಕೋರ್ಟು ತೀರ್ಪು ನೀಡಿದ್ದು, ಸ್ವೀಕರ್‌ ರಮೇಶ್‌ ಕುಮಾರ್‌ರವರ ಆದೇಶವನ್ನು ಎತ್ತಿ ಹಿಡಿದಿದೆ. ಅದೆ ಸಮಯದಲ್ಲಿ ಅನರ್ಹ ಶಾಸಕರು ಉಪಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂದು ಸ್ಪೀಕರ್ ಹೇಳಿದ್ದನ್ನು ತಳ್ಳಿಹಾಕಿರುವ ನ್ಯಾಯಾಲಯ ಅನರ್ಹ ಶಾಸಕರು ಡಿಸೆಂಬರ್‌ 5ರಂದು ನಡೆಯುವ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಗ್ರೀನ್ ಸಿಗ್ನಲ್‌ ನೀಡಿದೆ.

17 ಜನ ಶಾಸಕರನ್ನು ಅನರ್ಹಗೊಳಿಸಿದ್ದನ್ನು ನ್ಯಾಯಾಲಯವು ಒಪ್ಪಿದೆ. ಜೊತೆಗೆ ಪ್ರಜಾಪ್ರಭುತ್ವದಲ್ಲಿ ಕುದುರೆ ವ್ಯಾಪಾರ ಮಾರಕ ಎಂದು ಕೋರ್ಟ್‌ ಅಭಿಪ್ರಾಯಪಟ್ಟಿದೆ. ಸಂಸದೀಯ ವ್ಯವಸ್ಥೆಯಲ್ಲಿ ವಿರೋಧ ಪಕ್ಷ ಮತ್ತು ಆಡಳಿತ ಪಕ್ಷ ಎರಡರಲ್ಲಿಯೂ ನೈತಿಕತೆ ಮುಖ್ಯ ಎಂದ ನ್ಯಾಯಾಲಯ ಹೈಕೋರ್ಟ್‌‌ಗೆ ಹೋಗದೇ ನೇರವಾಗಿ ಸುಪ್ರೀಂ ಕೋರ್ಟ್‌‌ಗೆ ಬಂದ ಶಾಸಕರ ನಡೆಯನ್ನು ಪ್ರೋತ್ಸಾಹಿಸಲು ಸಾಧ್ಯವಿಲ್ಲ ಎಂದೂ ಹೇಳಿದೆ. ಆದರೆ ಅನರ್ಹ ಶಾಸಕರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ನೀಡಿರುವುದು ತೀವ್ರ ಚರ್ಚೆಗೆ ಕಾರಣವಾಗಿದೆ.

ಇಂದು ಬೆಳಿಗ್ಗೆ 10:30ಕ್ಕೆ ನ್ಯಾಯಮೂರ್ತಿ ಎನ್‌.ವಿ ರಮಣರವರು ತೀರ್ಪಿನ ಪ್ರತಿಯನ್ನು ಓದಿ ತಮ್ಮ ತೀರ್ಪನ್ನು ಪ್ರಕಟಿಸಿದರು.

ತೀರ್ಪು ಕುರಿತು ಪ್ರತಿಕ್ರಿಯಿಸಿದ ಮಾಜಿ ಸ್ಪೀಕರ್‌ ರಮೇಶ್‌ಕುಮಾರ್‌, ಸುಪ್ರೀಂ ಕೋರ್ಟ್‌ನ ತೀರ್ಪಿನ ಸ್ವಾಗತಿಸುತ್ತೇವೆ. ನಾವು ನ್ಯಾಯದ ಮಾರ್ಗದಲ್ಲಿ ನಡೆದಿದ್ದೇವೆ ಎನ್ನವುದನ್ನು ತೀರ್ಪು ತಿಳಿಸಿದೆ. ಜನರ ಭಾವನೆಗಳನ್ನು ಅರಿತು ನಾವು ತೀರ್ಪು ನೀಡಿದ್ದಕ್ಕೆ ಸುಪ್ರೀಂ ಕೋರ್ಟ್‌ ಪುರಸ್ಕರಿಸಿದೆ ಎಂದಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2ಜಿ ತರಂಗಾಂತರ ತೀರ್ಪಿನ ಸ್ಪಷ್ಟನೆ ಕೋರಿದ್ದ ಕೇಂದ್ರದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ ರಿಜಿಸ್ಟ್ರಿ

0
2ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ 2012ರಲ್ಲಿ ನೀಡಿರುವ ತೀರ್ಪಿನ ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸ್ವೀಕರಿಸಲು ಸುಪ್ರೀಂ ಕೋರ್ಟ್‌ನ ರಿಜಿಸ್ಟ್ರಾರ್ ನಿರಾಕರಿಸಿದ್ದಾರೆ. ಕೆಲ ಸಂದರ್ಭಗಳಲ್ಲಿ ಸಾರ್ವಜನಿಕ ಹರಾಜು ಹೊರತುಪಡಿಸಿ...