Homeಮುಖಪುಟಮುಂಬೈನಲ್ಲಿ ಬಾರ್‌ ಮೇಲೆ ದಾಳಿ: 17 ಮಹಿಳೆಯರ ರಕ್ಷಣೆ

ಮುಂಬೈನಲ್ಲಿ ಬಾರ್‌ ಮೇಲೆ ದಾಳಿ: 17 ಮಹಿಳೆಯರ ರಕ್ಷಣೆ

- Advertisement -
- Advertisement -

ಮುಂಬೈನ ಅಂಧೇರಿಯಲ್ಲಿರುವ ಡ್ಯಾನ್ಸ್ ಬಾರ್‌ ಮೇಲೆ ದಾಳಿ ನಡೆಸಿ 17 ಮಹಿಳೆಯರನ್ನು ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇಕಪ್ ಕೋಣೆಗೆ ಸಂಪರ್ಕ ಹೊಂದಿದ್ದ ರಹಸ್ಯ ನೆಲಮಾಳಿಗೆಯೊಳಗೆ ಮಹಿಳೆಯರನ್ನು ಅಡಗಿಸಿಡಲಾಗಿತ್ತು. ಬಾರ್‌ನ ಆವರಣದಲ್ಲಿ ಇರಿಸಲಾದ ಸುಧಾರಿತ ಎಲೆಕ್ಟ್ರಾನಿಕ್ ಸಿಸ್ಟಮ್ ಸಹಾಯದಿಂದ ದಾಳಿಯ ಬಗ್ಗೆ ಬಾರ್‌ ಸಿಬ್ಬಂದಿ ಅಲರ್ಟ್ ಆಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಅಂಧೇರಿಯಲ್ಲಿರುವ ದೀಪಾ ಬಾರ್‌ನಲ್ಲಿ ಗ್ರಾಹಕರ ಮುಂದೆ ಮಹಿಳೆಯರಿಂದ ನೃತ್ಯ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಶನಿವಾರ ದಾಳಿ ನಡೆಸಲಾಯಿತು. ಆದಾಗ್ಯೂ ಪೊಲೀಸರ ತಂಡಕ್ಕೆ ತಕ್ಷಣವೇ ಯಾವ ಮಹಿಳೆಯರನ್ನು ಪತ್ತೆ ಹಚ್ಚಲು ಸಾಧ್ಯವಾಗಿರಲಿಲ್ಲ.

ಬಾತ್‌ ರೂಮ್‌, ಸ್ಟೋರ್‌ ರೂಮ್‌ ಮತ್ತು ಅಡುಗೆಮನೆಯಂತಹ ಅಡಗು ತಾಣಗಳಲ್ಲಿಯೂ ಮಹಿಳೆಯರು ಪತ್ತೆಯಾಗಲಿಲ್ಲ. ಬಾರ್ ಮ್ಯಾನೇಜರ್, ಕ್ಯಾಷಿಯರ್ ಮತ್ತು ಸಪ್ಲೈಯರ್‌ಗಳನ್ನು ಪದೇಪದೇ ಪ್ರಶ್ನಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಬಾರ್‌ನಲ್ಲಿ ನೃತ್ಯ ಮಾಡಲು ಮಹಿಳೆಯರನ್ನು ಬಳಸಿಕೊಳ್ಳಲಾಗಿದೆ ಎಂಬುದನ್ನು ಬಾರ್‌ ಸಿಬ್ಬಂದಿ ನಿರಾಕರಿಸುತ್ತಲೇ ಇದ್ದರು.

ಆದರೆ, ಮೇಕಪ್ ಕೊಠಡಿಯಲ್ಲಿದ್ದ ದೊಡ್ಡ ಕನ್ನಡಿ ಪೊಲೀಸ್‌ ಅಧಿಕಾರಿಗಳ ಗಮನ ಸೆಳೆಯಿತು. ಕನ್ನಡಿಯನ್ನು ಗೋಡೆಯಿಂದ ತೆಗೆಯುವ ಪ್ರಯತ್ನ ವಿಫಲವಾಯಿತು. ಯಾಕೆಂದರೆ ಕನ್ನಡಿಯನ್ನು ಬಹಳ ವ್ಯವಸ್ಥಿತವಾಗಿ ಜೋಡಿಸಲಾಗಿತ್ತು.

ಕನ್ನಡಿಯನ್ನು ಸುತ್ತಿಗೆಯಿಂದ ಒಡೆದಾಗ ನೆಲಮಾಳಿಗೆ ಇರುವ ಸುರಂಗಮಾರ್ಗ ಪತ್ತೆಯಾಯಿತು. ಈ ಅಡಗುತಾಣದಲ್ಲಿ ಹದಿನೇಳು ಮಹಿಳೆಯರು ಕಂಡುಬಂದರು. ನೆಲಮಾಳಿಗೆಯಲ್ಲಿ ಎಸಿ, ಬೆಡ್‌ಗಳಂತಹ ಎಲ್ಲಾ ಸೌಲಭ್ಯಗಳಿದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬಾರ್‌ನ ಮ್ಯಾನೇಜರ್, ಕ್ಯಾಷಿಯರ್ ಸೇರಿದಂತೆ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ.


ಇದನ್ನೂ ಓದಿರಿ: ಮನುಷ್ಯ ವಿರೋಧಿಗಳೊಂದಿಗೆ ಹೋಗದಿರಿ: ನಿರ್ಮಲಾನಂದನಾಥ ಶ್ರೀಗಳಿಗೆ ಬಹಿರಂಗ ಪತ್ರ


ತುಮಕೂರಿನಲ್ಲಿ ಬೆಳಕಿಗೆ ಬಂದಿತ್ತು ಇಂತಹದ್ದೇ ಪ್ರಕರಣ

ತುಮಕೂರು ಜಿಲ್ಲೆ ಕ್ಯಾತ್ಸಂದ್ರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ಸೆಪ್ಟೆಂಬರ್‌ನಲ್ಲಿ ಇಂತಹದ್ದೇ ಪ್ರಕರಣ ಬೆಳಕಿಗೆ ಬಂದಿತ್ತು.

ಕ್ಯಾತ್ಸಂದ್ರದ ನಂದಿ ಡಿಲೆಕ್ಸ್ ಲಾಡ್ಜ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದು ತಿಳಿದುಬಂದಿತ್ತು. ಸಾಮಾಜಿಕ ಕಾರ್ಯಕರ್ತರು ಮತ್ತು ಒಡನಾಡಿ ಸಂಸ್ಥೆಯ ಮುಖ್ಯಸ್ಥರಾದ ಸ್ಟ್ಯಾನ್ಲಿ ಅವರ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿ, ಐವರು ಪಿಂಪ್‌ಗಳನ್ನು ಬಂಧಿಸಿ, ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದರು.

“ಇಲ್ಲಿ ನಡೆಯುತ್ತಿರುವ ವೇಶ್ಯಾವಾಟಿಕೆ ಹೊಸದಲ್ಲ. ತುಂಬಾ ವರ್ಷಗಳಿಂದಲೂ ನಡೆಯುತ್ತಿದೆ. ಇವೆಲ್ಲ ಸಂಘಟಿತ ಅಪರಾಧಗಳು. ತಮ್ಮ ಸುತ್ತಮುತ್ತ ಇಂತಹ ದಂಧೆ ನಡೆಯುತ್ತಿದೆ ಎಂದು ತಿಳಿಯದ ಅಮಾಯಕ ಸಮಾಜ ಇದಲ್ಲ. ಮಾಧ್ಯಮ, ಪೊಲೀಸರು, ಸಂಘಟನೆ ನಡೆಸುವವರು, ಲಾಯರ್‌ಗಳು ಎಲ್ಲರೂ ಇದರೊಳಗೆ ಇರ್ತಾರೆ” ಎಂದು ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಹೇಳಿದ್ದರು.

“ಕ್ಯಾತ್ಸಂದ್ರ-ಬಟವಾಡಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದ ಕಾಂಡೋಮ್ ಪ್ರಕರಣದಿಂದ ಇಲ್ಲಿನ ವೇಶ್ಯಾವಾಟಿಕೆ ಬಗ್ಗೆ ಸುಳಿವು ದೊರೆಯಿತು. ಇದೇ ಗುಮಾನಿಯಲ್ಲಿ ತಳ ಮಟ್ಟದಲ್ಲಿ ತನಿಖೆ ನಡೆಸಿದೆವು. ಇಲ್ಲಿಗೆ 2-3 ಬಾರಿ ಬಂದು ಪರೀಕ್ಷಿಸಿದೆವು. ಖಚಿತ ಮಾಹಿತಿ  ಮೇರೆಗೆ ಪೊಲೀಸರೊಂದಿಗೆ ದಾಳಿ ನಡೆಸಿದೆವು” ಎಂದು ಸ್ಟ್ಯಾನ್ಲಿ ಅವರು ಮಾಹಿತಿ ನೀಡಿದ್ದರು.

“ತುಮಕೂರು ರಾಷ್ಟ್ರೀಯ ಹೆದ್ದಾರಿಯು ಬೆಂಗಳೂರು, ಮಂಗಳೂರು ಮತ್ತು ಉತ್ತರ ಕರ್ನಾಟಕವನ್ನು ಲಿಂಕ್ ಮಾಡುವ ಜಾಗ. ಹೇವಿ ಟ್ರಕ್‌ಗಳು ಇಲ್ಲಿ ಸಂಚರಿಸುತ್ತವೆ. ರಾಷ್ಟ್ರೀಯ ಹೆದ್ದಾರಿ ಬೇರೆ. ಹೀಗಾಗಿ ಇಲ್ಲಿ ಹೆಣ್ಣು ಮಕ್ಕಳನ್ನು ಇಟ್ಟುಕೊಂಡು, ಶೋಷಿಸಿ ವ್ಯಾಪಾರ ಮಾಡುತ್ತಾರೆ. ಹಲವು ವರ್ಷಗಳಿಂದ ಇದು ಇದೆ. ಇದೊಂದು ದೊಡ್ಡ ದಂಧೆ ಇದು” ಎಂದು ತಿಳಿಸಿದ್ದರು.


ಇದನ್ನೂ ಓದಿರಿ: ಮೋದಿ, ಯೋಗಿ ಆದಿತ್ಯನಾಥರೇ ನೀವು ಚರಿತ್ರೆ ಮುಚ್ಚಿಹಾಕಲು ಹೊರಟಿದ್ದೀರಿ: ವಿಶ್ವನಾಥ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...